ಕೀರ್ತನೆಗಳು 120 : 1 (KNV)
ನನ್ನ ಇಕ್ಕಟ್ಟಿನಲ್ಲಿ ನಾನು ಕರ್ತನಿಗೆ ಕೂಗಿದೆನು; ಆತನು ನನಗೆ ಉತ್ತರ ಕೊಟ್ಟನು.
ಕೀರ್ತನೆಗಳು 120 : 2 (KNV)
ಓ ಕರ್ತನೇ, ನನ್ನ ಪ್ರಾಣವನ್ನು ಸುಳ್ಳು ತುಟಿಯಿಂದಲೂ ಮೋಸದ ನಾಲಿಗೆಯಿಂದಲೂ ಬಿಡಿಸು.
ಕೀರ್ತನೆಗಳು 120 : 3 (KNV)
ಸುಳ್ಳಿನ ನಾಲಿಗೆಯೇ, ದೇವರು ನಿನಗೇನು ಮಾಡ ಬೇಕು? ಆತನು ನಿನಗೇನು ಕೊಡಬೇಕು?
ಕೀರ್ತನೆಗಳು 120 : 4 (KNV)
ಪರಾ ಕ್ರಮಶಾಲಿಯ ಹದವಾದ ಬಾಣಗಳು ಮತ್ತು ಜಾಲಿ ಮರದ ಕೆಂಡಗಳು ನಿನಗೆ ಕೊಡಲ್ಪಡಲಿ.
ಕೀರ್ತನೆಗಳು 120 : 5 (KNV)
ಕೇದಾರಿನ ಗುಡಾರಗಳ ಬಳಿಯಲ್ಲಿ ವಾಸ ಮಾಡಿ ಮೇಷೆಕಿನಲ್ಲಿ ಪ್ರವಾಸಿಯಾಗಿರುವದರಿಂದ ನನಗೆ ಅಯ್ಯೋ!
ಕೀರ್ತನೆಗಳು 120 : 6 (KNV)
ನನ್ನ ಪ್ರಾಣವು ಸಮಾಧಾನವನ್ನು ಹಗೆ ಮಾಡುವವರ ಸಂಗಡ ವಾಸಮಾಡಿ ಸಾಕಾಯಿತು.ನಾನು ಸಮಾಧಾನವಾಗಿದ್ದೇನೆ; ಆದರೆ ನಾನು ಮಾತಾಡಲು ಅವರು ಯುದ್ಧಮಾಡು ವದಕ್ಕಿದ್ದಾರೆ.
ಕೀರ್ತನೆಗಳು 120 : 7 (KNV)
ನಾನು ಸಮಾಧಾನವಾಗಿದ್ದೇನೆ; ಆದರೆ ನಾನು ಮಾತಾಡಲು ಅವರು ಯುದ್ಧಮಾಡು ವದಕ್ಕಿದ್ದಾರೆ.

1 2 3 4 5 6 7

BG:

Opacity:

Color:


Size:


Font: