ಕೀರ್ತನೆಗಳು 129 : 1 (KNV)
ನನ್ನ ಯೌವನದಿಂದ ನನಗೆ ಅವರು ಬಹಳ ಬಾಧಿಸಿದ್ದಾರೆಂದು ಇಸ್ರಾ ಯೇಲು ಈಗ ಹೇಳಬಹುದು.
ಕೀರ್ತನೆಗಳು 129 : 2 (KNV)
ನನ್ನ ಯೌವನ ದಿಂದ ಅವರು ನನ್ನನ್ನು ಬಹಳ ಬಾಧಿಸಿದರು; ಆದರೆ ಅವರು ನನ್ನನ್ನು ಗೆಲ್ಲಲಿಲ್ಲ.
ಕೀರ್ತನೆಗಳು 129 : 3 (KNV)
ಉಳುವವರು ನನ್ನ ಬೆನ್ನಿನ ಮೇಲೆ ಉತ್ತು ತಮ್ಮ ಸಾಲುಗಳನ್ನು ಉದ್ದ ಮಾಡಿದ್ದಾರೆ.
ಕೀರ್ತನೆಗಳು 129 : 4 (KNV)
ಕರ್ತನು ನೀತಿವಂತನು; ದುಷ್ಟರ ಹಗ್ಗಗಳನ್ನು ಕೊಯಿದುಬಿಟ್ಟಿದ್ದಾನೆ.
ಕೀರ್ತನೆಗಳು 129 : 5 (KNV)
ಚೀಯೋನನ್ನು ಹಗೆಮಾಡುವವರೆಲ್ಲರು ನಾಚಿಕೆಪಟ್ಟು ಹಿಂದಿರುಗಲಿ.
ಕೀರ್ತನೆಗಳು 129 : 6 (KNV)
ಕೀಳುವದಕ್ಕಿಂತ ಮುಂಚೆ ಒಣಗಿ ಹೋಗುವ ಮಾಳಿಗೇ ಹುಲ್ಲಿನ ಹಾಗೆ ಅವರು ಇರಲಿ.
ಕೀರ್ತನೆಗಳು 129 : 7 (KNV)
ಅದನ್ನು ಕೊಯ್ಯುವವನು ತನ್ನ ಕೈಯನ್ನೂ ಸಿವುಡು ಕಟ್ಟುವವನು ತನ್ನ ಉಡಿಲನ್ನೂ ತುಂಬಿಸನು.
ಕೀರ್ತನೆಗಳು 129 : 8 (KNV)
ಹಾದು ಹೋಗು ವವರು -- ಕರ್ತನ ಆಶೀರ್ವಾದವು ನಿಮ್ಮ ಮೇಲೆ ಇರಲಿ, ಕರ್ತನ ಹೆಸರಿನಲ್ಲಿ ನಿಮ್ಮನ್ನು ಆಶೀರ್ವ ದಿಸುತ್ತೇವೆ ಎಂದು ಹೇಳುವುದಿಲ್ಲ.

1 2 3 4 5 6 7 8