ಕೀರ್ತನೆಗಳು 13 : 1 (KNV)
ಓ ಕರ್ತನೇ, ಎಷ್ಟರ ವರೆಗೆ ನನ್ನನ್ನು ಮರೆಯುವಿ? ಎಂದೆಂದಿಗೂ ಮರೆಯು ವಿಯೋ? ಎಷ್ಟರ ವರೆಗೆ ನಿನ್ನ ಮುಖವನ್ನು ನನ್ನಿಂದ ಮರೆಮಾಡುವಿ?
ಕೀರ್ತನೆಗಳು 13 : 2 (KNV)
ಎಷ್ಟರ ವರೆಗೆ ನನ್ನ ಪ್ರಾಣದಲ್ಲಿ ಆಲೋಚನೆಗಳನ್ನೂ ಪ್ರತಿದಿನ ನನ್ನ ಹೃದಯದಲ್ಲಿ ದುಃಖವನ್ನೂ ಇಟ್ಟುಕೊಳ್ಳಬೇಕು? ಎಷ್ಟರ ವರೆಗೆ ನನ್ನ ಶತ್ರುವು ನನ್ನ ಮೇಲೆ ಹೆಚ್ಚಿಸಿಕೊಳ್ಳುವನು?
ಕೀರ್ತನೆಗಳು 13 : 3 (KNV)
ನನ್ನ ದೇವರಾದ ಓ ಕರ್ತನೇ, ದೃಷ್ಟಿಸಿ ನನಗೆ ಉತ್ತರಕೊಡು; ನಾನು ಮರಣದ ನಿದ್ದೆಮಾಡದ ಹಾಗೆಯೂ
ಕೀರ್ತನೆಗಳು 13 : 4 (KNV)
ನನ್ನ ಶತ್ರುವು--ಅವನನ್ನು ಗೆದ್ದೆನೆಂದು ಹೇಳದ ಹಾಗೆಯೂ ನಾನು ಕದಲುವಾಗ ನನ್ನನ್ನು ಹಿಂಸಿಸುವವರು ಉಲ್ಲಾಸಪಡದ ಹಾಗೆಯೂ ನನ್ನ ಕಣ್ಣುಗಳನ್ನು ಬೆಳಗುವ ಹಾಗೆ ಮಾಡು.
ಕೀರ್ತನೆಗಳು 13 : 5 (KNV)
ನಾನಾದರೋ ನಿನ್ನ ಕರುಣೆಯಲ್ಲಿ ಭರವಸವಿ ಟ್ಟಿದ್ದೇನೆ; ನಿನ್ನ ರಕ್ಷಣೆಯಲ್ಲಿ ನನ್ನ ಹೃದಯವು ಉಲ್ಲಾ ಸಪಡುವದು.ನಾನು ಕರ್ತನಿಗೆ ಹಾಡುವೆನು; ಆತನು ನನಗೆ ಮೇಲು ಮಾಡಿದ್ದಾನೆ.
ಕೀರ್ತನೆಗಳು 13 : 6 (KNV)
ನಾನು ಕರ್ತನಿಗೆ ಹಾಡುವೆನು; ಆತನು ನನಗೆ ಮೇಲು ಮಾಡಿದ್ದಾನೆ.

1 2 3 4 5 6

BG:

Opacity:

Color:


Size:


Font: