ಕೀರ್ತನೆಗಳು 139 : 1 (KNV)
ಕರ್ತನೇ, ನನ್ನನ್ನು ಪರಿಶೋಧಿಸಿ ತಿಳುಕೊಂಡಿದ್ದೀ;
ಕೀರ್ತನೆಗಳು 139 : 2 (KNV)
ನಾನು ಕೂತು ಕೊಳ್ಳುವದನ್ನೂ ಏಳುವದನ್ನೂ ನೀನು ತಿಳುಕೊಂಡಿದ್ದೀ; ನನ್ನ ಆಲೋಚನೆಯನ್ನು ದೂರದಿಂದ ಗ್ರಹಿಸಿ ಕೊಂಡ್ಡಿದ್ದೀ;
ಕೀರ್ತನೆಗಳು 139 : 3 (KNV)
ನಾನು ನಡೆಯುವದನ್ನೂ ಮಲಗುವದನ್ನೂ ನೀನು ಶೋಧಿಸಿದ್ದೀ; ನನ್ನ ಮಾರ್ಗಗಳೆಲ್ಲಾ ನಿನಗೆ ಗೊತ್ತಾಗಿವೆ.
ಕೀರ್ತನೆಗಳು 139 : 4 (KNV)
ಇಗೋ, ಓ ಕರ್ತನೇ, ನನ್ನ ನಾಲಿಗೆಯಲ್ಲಿ ನಿನಗೆ ತಿಳಿಯದ ಮಾತು ಒಂದಾದರೂ ಇಲ್ಲ.
ಕೀರ್ತನೆಗಳು 139 : 5 (KNV)
ನೀನು ಹಿಂದೆಯೂ ಮುಂದೆಯೂ ನನ್ನನ್ನು ಸುತ್ತಿಕೊಂಡು ನಿನ್ನ ಕೈಯನ್ನು ನನ್ನ ಮೇಲೆ ಇಟ್ಟಿದ್ದೀ.
ಕೀರ್ತನೆಗಳು 139 : 6 (KNV)
ಇಂಥ ತಿಳುವಳಿಕೆಯು ನನಗೆ ಅತಿ ಅದ್ಭುತವಾಗಿದೆ; ಅದು ನನಗೆ ನಿಲುಕದಷ್ಟು ಉನ್ನತವಾಗಿದೆ.
ಕೀರ್ತನೆಗಳು 139 : 7 (KNV)
ನಾನು ನಿನ್ನ ಆತ್ಮಕ್ಕೆ ತಪ್ಪಿಸಿಕೊಂಡು ಎಲ್ಲಿಗೆ ಹೋಗಲಿ? ನಿನ್ನ ಸನ್ನಿಧಿಯಿಂದ ತಪ್ಪಿಸಿಕೊಂಡು ಎಲ್ಲಿಗೆ ಓಡಲಿ?
ಕೀರ್ತನೆಗಳು 139 : 8 (KNV)
ನಾನು ಆಕಾಶಕ್ಕೆ ಏರಿಹೋದರೆ ನೀನು ಅಲ್ಲಿ ಇದ್ದೀ; ಪಾತಾಳದಲ್ಲಿ ನನ್ನ ಹಾಸಿಗೆಯನ್ನು ಮಾಡಿಕೊಂಡರೆ ಅಗೋ, ನೀನು ಅಲ್ಲಿ ಇದ್ದೀ.
ಕೀರ್ತನೆಗಳು 139 : 9 (KNV)
ಉದಯದ ರೆಕ್ಕೆಗಳನ್ನು ಕಟ್ಟಿಕೊಂಡು ಸಮುದ್ರದ ಕಟ್ಟಕಡೆಯಲ್ಲಿ ವಾಸಮಾಡಿದರೆ
ಕೀರ್ತನೆಗಳು 139 : 10 (KNV)
ಅಲ್ಲಿಯೂ ನಿನ್ನ ಕೈ ನನ್ನನ್ನು ನಡಿಸಿ ನಿನ್ನ ಬಲಗೈ ನನ್ನನ್ನು ಹಿಡಿಯುವದು.
ಕೀರ್ತನೆಗಳು 139 : 11 (KNV)
ನಿಶ್ಚಯವಾಗಿ ಕತ್ತಲೆಯು ನನ್ನನ್ನು ಕವಿದು ಕೊಳ್ಳುವದೆಂದು ನಾನು ಹೇಳಿದರೆ ರಾತ್ರಿಯು ನನ್ನ ಸುತ್ತಲೂ ಬೆಳಕಾಗಿರುವದು.
ಕೀರ್ತನೆಗಳು 139 : 12 (KNV)
ಕರ್ತನೇ, ಕತ್ತಲೆಯು ನಿನಗೆ ಕಾಣದಂತೆ ಮುಚ್ಚುವದಿಲ್ಲ; ರಾತ್ರಿಯು ಹಗಲಿನ ಹಾಗೆ ಬೆಳಗುವದು; ಕತ್ತಲೂ ಬೆಳಕೂ ನಿನಗೆ ಒಂದೇ ಆಗಿವೆ.
ಕೀರ್ತನೆಗಳು 139 : 13 (KNV)
ನೀನು ನನ್ನ ಅಂತರಿಂದ್ರಿಯಗಳನ್ನು ರೂಪಿಸಿದ್ದೀ; ನನ್ನ ತಾಯಿಯ ಗರ್ಭದಲ್ಲಿ ನೀನು ನನ್ನನ್ನು ಮುಚ್ಚಿದ್ದೀ.
ಕೀರ್ತನೆಗಳು 139 : 14 (KNV)
ನಾನು ಭಯಭರಿತನಾಗಿಯೂ ಅದ್ಭುತ ವಾಗಿಯೂ ಮಾಡಲ್ಪಟ್ಟದ್ದರಿಂದ ನಿನ್ನನ್ನು ಕೊಂಡಾ ಡುತ್ತೇನೆ; ನಿನ್ನ ಕೆಲಸಗಳು ಅದ್ಭುತಗಳಾಗಿವೆ ಎಂದು ನನ್ನ ಮನಸ್ಸಿಗೆ ಚೆನ್ನಾಗಿ ತಿಳಿದಿದೆ;
ಕೀರ್ತನೆಗಳು 139 : 15 (KNV)
ನಾನು ಮರೆ ಯಲ್ಲಿ ಮಾಡಲ್ಪಟ್ಟಾಗಲೂ ಭೂಮಿಯ ಅಧೋ ಭಾಗಗಳಲ್ಲಿ ವಿಚಿತ್ರವಾಗಿ ಮಾಡಲ್ಪಟ್ಟಾಗಲೂ ನನ್ನ ಅಸ್ತಿತ್ವವು ನಿನಗೆ ಮರೆಯಾಗಿರಲಿಲ್ಲ.
ಕೀರ್ತನೆಗಳು 139 : 16 (KNV)
ಅದು ಇನ್ನೂ ಪೂರ್ಣವಾಗದಿರುವಾಗ ನನ್ನ ಅಸ್ತಿತ್ವವನ್ನು ನಿನ್ನ ಕಣ್ಣುಗಳು ನೋಡಿದವು; ನನ್ನ ಅಂಗಗಳೆಲ್ಲಾ ನಿನ್ನ ಪುಸ್ತಕದಲ್ಲಿ ಬರೆಯಲ್ಪಟ್ಟವು; ಅವುಗಳಲ್ಲಿ ಒಂದಾ ದರೂ ಇಲ್ಲದಿದ್ದಾಗ ಅವುಗಳು ರೂಪಿಸಲ್ಪಟ್ಟವು.
ಕೀರ್ತನೆಗಳು 139 : 17 (KNV)
ಓ ದೇವರೇ, ನಿನ್ನ ಆಲೋಚನೆಗಳು ನನಗೆ ಎಷ್ಟೋ ಪ್ರಿಯವಾಗಿವೆ! ಅವುಗಳ ಸಂಖ್ಯೆ ಎಷ್ಟೋ ದೊಡ್ಡ ದಾಗಿದೆ.
ಕೀರ್ತನೆಗಳು 139 : 18 (KNV)
ಅವುಗಳನ್ನು ಲೆಕ್ಕಿಸಿದರೆ ಮರಳು ಗಿಂತ ಹೆಚ್ಚಾಗಿವೆ; ನಾನು ಎಚ್ಚರವಾದಾಗ ಇನ್ನೂ ನಿನ್ನ ಬಳಿಯಲ್ಲಿಯೇ ಇದ್ದೇನೆ.
ಕೀರ್ತನೆಗಳು 139 : 19 (KNV)
ಓ ದೇವರೇ, ನಿಶ್ಚಯವಾಗಿ ನೀನು ದುಷ್ಟನನ್ನು ಕೊಂದುಹಾಕುವಿ; ರಕ್ತ ಪ್ರಿಯರೇ, ನನ್ನಿಂದ ತೊಲ ಗಿರಿ.
ಕೀರ್ತನೆಗಳು 139 : 20 (KNV)
ಅವರು ನಿನಗೆ ವಿರೋಧವಾಗಿ ಕೆಟ್ಟತನದಿಂದ ಮಾತನಾಡುತ್ತಾರೆ; ನಿನ್ನ ವೈರಿಗಳು ನಿನ್ನ ಹೆಸರನ್ನು ವ್ಯರ್ಥವಾಗಿ ಎತ್ತುತ್ತಾರೆ.
ಕೀರ್ತನೆಗಳು 139 : 21 (KNV)
ಓ ಕರ್ತನೇ, ನಾನು ನಿನ್ನನ್ನು ದ್ವೇಷಿಸುವವರನ್ನು ಹಗೆಮಾಡುವದಿಲ್ಲವೋ? ನಿನ್ನ ವಿರೋಧಿಗಳಿಗೆ ನಾನು ಬೇಸರಗೊಳ್ಳುವ ದಿಲ್ಲವೋ?
ಕೀರ್ತನೆಗಳು 139 : 22 (KNV)
ಪೂರ್ಣ ದ್ವೇಷದಿಂದ ಅವರನ್ನು ನಾನು ಹಗೆಮಾಡುತ್ತೇನೆ; ಅವರು ನನ್ನ ಶತ್ರುಗಳೆಂದು ನಾನು ಎಣಿಸುತ್ತೇನೆ.
ಕೀರ್ತನೆಗಳು 139 : 23 (KNV)
ದೇವರೇ, ನನ್ನನ್ನು ಶೋಧಿಸಿ ನನ್ನ ಹೃದಯವನ್ನು ತಿಳಿದುಕೋ; ನನ್ನನ್ನು ಪರೀಕ್ಷಿಸಿ ನನ್ನ ಆಲೋಚನೆಗಳನ್ನು ತಿಳಿದುಕೋ.ನನ್ನಲ್ಲಿ ದುಷ್ಟತ ನದ ಮಾರ್ಗ ಉಂಟೇನೋ ನೋಡಿ ನಿತ್ಯವಾದ ಮಾರ್ಗದಲ್ಲಿ ನನ್ನನ್ನು ನಡಿಸು.
ಕೀರ್ತನೆಗಳು 139 : 24 (KNV)
ನನ್ನಲ್ಲಿ ದುಷ್ಟತ ನದ ಮಾರ್ಗ ಉಂಟೇನೋ ನೋಡಿ ನಿತ್ಯವಾದ ಮಾರ್ಗದಲ್ಲಿ ನನ್ನನ್ನು ನಡಿಸು.

1 2 3 4 5 6 7 8 9 10 11 12 13 14 15 16 17 18 19 20 21 22 23 24

BG:

Opacity:

Color:


Size:


Font: