ಕೀರ್ತನೆಗಳು 147 : 1 (KNV)
ಕರ್ತನನ್ನು ಸ್ತುತಿಸಿರಿ; ನಮ್ಮ ದೇವರನ್ನು ಕೀರ್ತಿಸುವದು ಒಳ್ಳೇದು; ಸ್ತೋತ್ರವು ರಮ್ಯವೂ ಯೋಗ್ಯವೂ ಆಗಿದೆ.
ಕೀರ್ತನೆಗಳು 147 : 2 (KNV)
ಕರ್ತನು ಯೆರೂಸಲೇಮನ್ನು ಕಟ್ಟುತ್ತಾನೆ; ಚದರಿಹೋದ ಇಸ್ರಾಯೇಲ್ಯರನ್ನು ಕೂಡಿಸುತ್ತಾನೆ.
ಕೀರ್ತನೆಗಳು 147 : 3 (KNV)
ಆತನು ಮುರಿದ ಹೃದಯದವರನ್ನು ಸ್ವಸ್ಥಮಾಡಿ ಅವರ ಗಾಯಗಳನ್ನು ಕಟ್ಟುತ್ತಾನೆ.
ಕೀರ್ತನೆಗಳು 147 : 4 (KNV)
ಆತನು ನಕ್ಷತ್ರಗಳ ಸಂಖ್ಯೆಯನ್ನು ಹೇಳು ತ್ತಾನೆ; ಅವೆಲ್ಲವುಗಳನ್ನು ಅವುಗಳ ಹೆಸರಿನಿಂದ ಕರೆ ಯುತ್ತಾನೆ.
ಕೀರ್ತನೆಗಳು 147 : 5 (KNV)
ನಮ್ಮ ಕರ್ತನು ದೊಡ್ಡವನೂ, ಪರಾ ಕ್ರಮಿಯೂ, ವಿವೇಕಕ್ಕೆ ಎಣೆಯಿಲ್ಲ.
ಕೀರ್ತನೆಗಳು 147 : 6 (KNV)
ಕರ್ತನು ಸಾತ್ವಿಕರನ್ನು ಎತ್ತುತ್ತಾನೆ. ದುಷ್ಟರನ್ನು ನೆಲಕ್ಕೆ ಹಾಕುತ್ತಾನೆ.
ಕೀರ್ತನೆಗಳು 147 : 7 (KNV)
ಕರ್ತನಿಗೆ ಸ್ತೋತ್ರದಿಂದ ಹಾಡಿರಿ; ನಮ್ಮ ದೇವ ರನ್ನು ಕಿನ್ನರಿಯಿಂದ ಕೀರ್ತಿಸಿರಿ.
ಕೀರ್ತನೆಗಳು 147 : 8 (KNV)
ಆತನು ಆಕಾಶವನ್ನು ಮೋಡಗಳಿಂದ ಮುಚ್ಚುತ್ತಾನೆ; ಭೂಮಿಗೆ ಮಳೆ ಯನ್ನು ಸಿದ್ಧಮಾಡುತ್ತಾನೆ, ಬೆಟ್ಟಗಳಲ್ಲಿ ಹುಲ್ಲನ್ನು ಬೆಳೆಸುತ್ತಾನೆ.
ಕೀರ್ತನೆಗಳು 147 : 9 (KNV)
ಆತನು ಪಶುಗಳಿಗೂ ಕೂಗುವ ಕಾಗೆ ಮರಿಗಳಿಗೂ ಆಹಾರ ಕೊಡುತ್ತಾನೆ.
ಕೀರ್ತನೆಗಳು 147 : 10 (KNV)
ಆತನು ಕುದು ರೆಯ ಶಕ್ತಿಯಲ್ಲಿ ಸಂತೋಷಿಸುವದಿಲ್ಲ; ಮನುಷ್ಯನ ತೊಡೆಯಬಲವನ್ನು ಮೆಚ್ಚುವದಿಲ್ಲ.
ಕೀರ್ತನೆಗಳು 147 : 11 (KNV)
ಕರ್ತನು ತನಗೆ ಭಯಪಡುವವರಲ್ಲಿಯೂ ತನ್ನ ಕರುಣೆಗೆ ಎದುರು ನೋಡುವವರಲ್ಲಿಯೂ ಇಷ್ಟಪಡುತ್ತಾನೆ.
ಕೀರ್ತನೆಗಳು 147 : 12 (KNV)
ಓ ಯೆರೂ ಸಲೇಮೇ, ಕರ್ತನನ್ನು ಸ್ತುತಿಸು; ಓ ಚೀಯೋನೇ, ನಿನ್ನ ದೇವರನ್ನು ಸ್ತುತಿಸು.
ಕೀರ್ತನೆಗಳು 147 : 13 (KNV)
ನಿನ್ನ ಬಾಗಲುಗಳ ಅಗುಳಿ ಗಳನ್ನು ಬಲಮಾಡಿ ಆತನು ನಿನ್ನ ಮಕ್ಕಳನ್ನು ನಿನ್ನ ಮಧ್ಯದಲ್ಲಿ ಆಶೀರ್ವದಿಸುತ್ತಾನೆ.
ಕೀರ್ತನೆಗಳು 147 : 14 (KNV)
ಆತನು ನಿನ್ನ ಮೇರೆಗಳನ್ನು ಸಮಾಧಾನಪಡಿಸುತ್ತಾನೆ. ಶ್ರೇಷ್ಠವಾದ ಗೋಧಿಯಿಂದ ನಿನ್ನನ್ನು ತೃಪ್ತಿಪಡಿಸುತ್ತಾನೆ.
ಕೀರ್ತನೆಗಳು 147 : 15 (KNV)
ಆತನು ತನ್ನ ಆಜ್ಞೆಯನ್ನು ಭೂಮಿಗೆ ಕಳುಹಿಸುತ್ತಾನೆ; ಅತಿ ತೀವ್ರವಾಗಿ ಆತನ ವಾಕ್ಯವು ಓಡುತ್ತದೆ;
ಕೀರ್ತನೆಗಳು 147 : 16 (KNV)
ಆತನು ಹಿಮವನ್ನು ಉಣ್ಣೆಯ ಹಾಗೆ ಕೊಡುತ್ತಾನೆ; ಮಂಜನ್ನು ಬೂದಿಯ ಹಾಗೆ ಚದರಿಸುತ್ತಾನೆ.
ಕೀರ್ತನೆಗಳು 147 : 17 (KNV)
ತನ್ನ ನೀರುಗಡ್ಡೆ ಯನ್ನು ತುಂಡುಗಳ ಹಾಗೆ ಹಾಕುತ್ತಾನೆ; ಆತನ ಚಳಿಯ ಮುಂದೆ ಯಾರು ನಿಲ್ಲುವರು?
ಕೀರ್ತನೆಗಳು 147 : 18 (KNV)
ಆತನು ತನ್ನ ವಾಕ್ಯವನ್ನು ಕಳುಹಿಸಿ ಅವುಗಳನ್ನು ಕರಗಿಸುತ್ತಾನೆ; ತನ್ನ ಗಾಳಿಯನ್ನು ಬೀಸಮಾಡುತ್ತಾನೆ; ನೀರು ಹರಿಯುತ್ತದೆ.
ಕೀರ್ತನೆಗಳು 147 : 19 (KNV)
ಆತನು ಯಾಕೋಬರಿಗೆ ತನ್ನ ವಾಕ್ಯವನ್ನೂ ಇಸ್ರಾಯೇಲಿಗೆ ನಿಯಮಗಳನ್ನೂ ನ್ಯಾಯವಿಧಿಗಳನ್ನೂ ತಿಳಿಸುತ್ತಾನೆ.ಯಾವ ಜನಾಂಗಕ್ಕಾದರೂ ಆತನು ಹೀಗೆ ಮಾಡ ಲಿಲ್ಲ; ನ್ಯಾಯವಿಧಿಗಳನ್ನು ಅವರು ತಿಳುಕೊಳ್ಳುವದಿಲ್ಲ. ನೀವು ಕರ್ತನನ್ನು ಸ್ತುತಿಸಿರಿ.
ಕೀರ್ತನೆಗಳು 147 : 20 (KNV)
ಯಾವ ಜನಾಂಗಕ್ಕಾದರೂ ಆತನು ಹೀಗೆ ಮಾಡ ಲಿಲ್ಲ; ನ್ಯಾಯವಿಧಿಗಳನ್ನು ಅವರು ತಿಳುಕೊಳ್ಳುವದಿಲ್ಲ. ನೀವು ಕರ್ತನನ್ನು ಸ್ತುತಿಸಿರಿ.

1 2 3 4 5 6 7 8 9 10 11 12 13 14 15 16 17 18 19 20

BG:

Opacity:

Color:


Size:


Font: