ಕೀರ್ತನೆಗಳು 149 : 1 (KNV)
ಕರ್ತನನ್ನು ಸ್ತುತಿಸಿರಿ. ಕರ್ತನಿಗೆ ಹೊಸ ಹಾಡನ್ನೂ ಪರಿಶುದ್ಧರ ಸಭೆ ಯಲ್ಲಿ ಆತನ ಸ್ತೋತ್ರವನ್ನೂ ಹಾಡಿರಿ.
ಕೀರ್ತನೆಗಳು 149 : 2 (KNV)
ಇಸ್ರಾಯೇಲು ತನ್ನನ್ನು ಉಂಟುಮಾಡಿದಾತನಲ್ಲಿ ಸಂತೋಷಿಸಲಿ; ಚೀಯೋನಿನ ಮಕ್ಕಳು ತಮ್ಮ ಅರಸನಲ್ಲಿ ಉಲ್ಲಾಸಿಸಲಿ.
ಕೀರ್ತನೆಗಳು 149 : 3 (KNV)
ಆತನ ಹೆಸರನ್ನು ಕುಣಿಯುತ್ತಾ ಸ್ತುತಿಸಲಿ; ದಮ್ಮಡಿ ಯಿಂದಲೂ ಕಿನ್ನರಿಯಿಂದಲೂ ಆತನನ್ನು ಕೀರ್ತಿಸಲಿ.
ಕೀರ್ತನೆಗಳು 149 : 4 (KNV)
ಕರ್ತನು ತನ್ನ ಜನರಲ್ಲಿ ಇಷ್ಟಪಡುತ್ತಾನೆ; ದೀನರನ್ನು ರಕ್ಷಣೆಯಿಂದ ಅಲಂಕರಿಸುತ್ತಾನೆ.
ಕೀರ್ತನೆಗಳು 149 : 5 (KNV)
ಪರಿಶುದ್ಧರು ಘನತೆಯಿಂದ ಉತ್ಸಾಹಪಡಲಿ; ತಮ್ಮ ಹಾಸಿಗೆಗಳ ಮೇಲೆ ಉತ್ಸಾಹಧ್ವನಿಮಾಡಲಿ.
ಕೀರ್ತನೆಗಳು 149 : 6 (KNV)
ಉನ್ನತ ದೇವರ ಸ್ತೋತ್ರಗಳು ಅವರ ಬಾಯಿಯ ಲ್ಲಿಯೂ ಇಬ್ಬಾಯಿ ಕತ್ತಿಯು ಅವರ ಕೈಯಲ್ಲಿಯೂ ಇರಲಿ.
ಕೀರ್ತನೆಗಳು 149 : 7 (KNV)
ಜನಾಂಗಗಳಲ್ಲಿ ಮುಯ್ಯಿಗೆಮುಯ್ಯನ್ನೂ ಪ್ರಜೆ ಗಳಲ್ಲಿ ಶಿಕ್ಷೆಗಳನ್ನೂ ಮಾಡಲಿ.
ಕೀರ್ತನೆಗಳು 149 : 8 (KNV)
ಅವರ ಅರಸುಗಳನ್ನು ಸಂಕೋಲೆಗಳಿಂದಲೂ ಅವರ ಘನವುಳ್ಳವರನ್ನು ಕಬ್ಬಿ ಣದ ಬೇಡಿಗಳಿಂದಲೂ ಬಂಧಿಸಲಿ;
ಕೀರ್ತನೆಗಳು 149 : 9 (KNV)
ಬರೆಯಲ್ಪಟ್ಟ ನ್ಯಾಯವಿಧಿಯನ್ನು ಅವರಿಗೆ ವಿಧಿಸಲಿ. ಆತನ ಪರಿಶುದ್ಧ ರೆಲ್ಲರಿಗೆ ಈ ಘನವಿರುತ್ತದೆ. ನೀವು ಕರ್ತನನ್ನು ಸ್ತುತಿಸಿರಿ.

1 2 3 4 5 6 7 8 9

BG:

Opacity:

Color:


Size:


Font: