ಕೀರ್ತನೆಗಳು 16 : 1 (KNV)
ಓ ದೇವರೇ, ನನ್ನನ್ನು ಕಾಪಾಡು; ನಿನ್ನಲ್ಲಿ ಭರವಸವಿಟ್ಟಿದ್ದೇನೆ.
ಕೀರ್ತನೆಗಳು 16 : 2 (KNV)
ನೀನೇ ನನ್ನ ಕರ್ತನು; ನನ್ನ ಒಳ್ಳೇತನ ನಿನಗೆ ಮಾತ್ರವಲ್ಲದೆ
ಕೀರ್ತನೆಗಳು 16 : 3 (KNV)
ಭೂಮಿಯಲ್ಲಿರುವ ಪರಿಶುದ್ಧರಿಗೂ ನನ್ನ ಸಂತೋಷ ವಾಗಿರುವ ಮುಖ್ಯಸ್ಥರಿಗೂ ಸೇರುತ್ತದೆಂದು ಓ ನನ್ನ ಆತ್ಮವೇ, ನೀನು ಕರ್ತನಿಗೆ ಹೇಳಿದ್ದೀ.
ಕೀರ್ತನೆಗಳು 16 : 4 (KNV)
ಬೇರೆ ದೇವ ರಗಳ ಹಿಂದೆ ತ್ವರೆಪಡುವವರ ವ್ಯಥೆಗಳು ಹೆಚ್ಚಾಗು ವವು. ಅವರ ರಕ್ತದ ಅರ್ಪಣೆಗಳನ್ನು ನಾನು ಅರ್ಪಿ ಸುವದಿಲ್ಲ, ಅವರ ಹೆಸರುಗಳನ್ನೂ ನನ್ನ ತುಟಿಗಳಲ್ಲಿ ಎತ್ತೆನು.
ಕೀರ್ತನೆಗಳು 16 : 5 (KNV)
ಕರ್ತನು ನನ್ನ ಪಾಲಿನ ಮತ್ತು ನನ್ನ ಪಾತ್ರೆಯ ಭಾಗವಾಗಿದ್ದಾನೆ; ನೀನು ನನ್ನ ಸ್ವಾಸ್ತ್ಯವನ್ನು ಸ್ಥಿರವಾಗಿ ಕಾಪಾಡುತ್ತೀ.
ಕೀರ್ತನೆಗಳು 16 : 6 (KNV)
ರಮ್ಯ ಸ್ಥಳಗಳಲ್ಲಿ ನನಗೆ ಪಾಲು ಸಿಕ್ಕಿತು, ಹೌದು, ರಮಣೀಯವಾದ ಬಾಧ್ಯತೆ ನನಗೆ ಅದೆ.
ಕೀರ್ತನೆಗಳು 16 : 7 (KNV)
ನನಗೆ ಆಲೋಚನೆ ಹೇಳಿದ ಕರ್ತನನ್ನು ನಾನು ಸ್ತುತಿಸುವೆನು, ರಾತ್ರಿಯಲ್ಲಿಯೂ ನನ್ನ ಅಂತರಿಂದ್ರಿ ಯಗಳು ನನಗೆ ಬೋಧಿಸುತ್ತವೆ.
ಕೀರ್ತನೆಗಳು 16 : 8 (KNV)
ನಾನು ಕರ್ತನನ್ನು ಯಾವಾಗಲೂ ನನ್ನ ಮುಂದೆ ಇಟ್ಟುಕೊಂಡಿದ್ದೇನೆ. ಆತನು ನನ್ನ ಬಲಗಡೆಯಲ್ಲಿ ಇರುವದರಿಂದ ನಾನು ಕದಲೆನು.
ಕೀರ್ತನೆಗಳು 16 : 9 (KNV)
ಆದದರಿಂದ ನನ್ನ ಹೃದಯವು ಸಂತೋಷಿಸಿ ನನ್ನ ಹೆಮ್ಮೆಯು ಉಲ್ಲಾಸಪಡುತ್ತದೆ; ನನ್ನ ಶರೀರವು ಸಹ ನಿರೀಕ್ಷೆಯಿಂದ ವಿಶ್ರಾಂತಿಸುವದು.
ಕೀರ್ತನೆಗಳು 16 : 10 (KNV)
ಯಾಕಂದರೆ ನೀನು ನನ್ನ ಆತ್ಮವನ್ನು ನರಕದಲ್ಲಿ ಬಿಟ್ಟುಬಿಡುವದಿಲ್ಲ; ನಿನ್ನ ಪರಿಶುದ್ಧನ ಕೊಳೆಯುವಿಕೆಯನ್ನು ನೋಡ ಗೊಡಿಸುವದಿಲ್ಲ.ಜೀವದ ಮಾರ್ಗವನ್ನು ನನಗೆ ತಿಳಿಸುವಿ; ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷ ವೂ ನಿನ್ನ ಬಲಗಡೆಯಲ್ಲಿ ಶಾಶ್ವತ ಭಾಗ್ಯವೂ ಇರುತ್ತವೆ.
ಕೀರ್ತನೆಗಳು 16 : 11 (KNV)
ಜೀವದ ಮಾರ್ಗವನ್ನು ನನಗೆ ತಿಳಿಸುವಿ; ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷ ವೂ ನಿನ್ನ ಬಲಗಡೆಯಲ್ಲಿ ಶಾಶ್ವತ ಭಾಗ್ಯವೂ ಇರುತ್ತವೆ.

1 2 3 4 5 6 7 8 9 10 11

BG:

Opacity:

Color:


Size:


Font: