ಕೀರ್ತನೆಗಳು 19 : 1 (KNV)
ಆಕಾಶಗಳು ದೇವರ ಮಹಿಮೆಯನ್ನು ಸಾರುತ್ತವೆ; ಅಂತರಿಕ್ಷವು ಆತನ ಕೈ ಕೆಲಸ ವನ್ನು ತೋರಿಸುತ್ತದೆ.
ಕೀರ್ತನೆಗಳು 19 : 2 (KNV)
ದಿನವು ದಿನಕ್ಕೆ ಮಾತನ್ನು ಉಚ್ಚರಿಸುತ್ತದೆ; ರಾತ್ರಿಯು ರಾತ್ರಿಗೆ ತಿಳುವಳಿಕೆಯನ್ನು ಅರುಹುತ್ತದೆ.
ಕೀರ್ತನೆಗಳು 19 : 3 (KNV)
ಮಾತಿಲ್ಲ, ಭಾಷೆಯೂ ಇಲ್ಲ; ಅವುಗಳ ಶಬ್ದವು ಕೇಳುವದಿಲ್ಲ.
ಕೀರ್ತನೆಗಳು 19 : 4 (KNV)
ಭೂಮಿಯ ಮೇಲೆಲ್ಲಾ ಅವು ಗಳ ಪ್ರಭುತ್ವವೂ ಭೂಲೋಕದ ಅಂತ್ಯದ ವರೆಗೆ ಅವುಗಳ ನುಡಿಗಳೂ ಹರಡಿವೆ; ಅವುಗಳಲ್ಲಿ ಆತನು ಸೂರ್ಯನಿಗೆ ಗುಡಾರವನ್ನು ಹಾಕಿದ್ದಾನೆ.
ಕೀರ್ತನೆಗಳು 19 : 5 (KNV)
ಅವನು ಮದಲಿಂಗನ ಹಾಗೆ ತನ್ನ ಕೊಠಡಿಯಿಂದ ಹೊರಟುಬಂದು ಪರಾಕ್ರಮಶಾಲಿಯ ಹಾಗೆ ಓಡಲು ಸಂತೋಷಿಸುತ್ತಾನೆ.
ಕೀರ್ತನೆಗಳು 19 : 6 (KNV)
ಆಕಾಶದ ಅಂತ್ಯದಿಂದ ಹೊರಟು ಅದರ ಅಂತ್ಯಗಳ ವರೆಗೆ ಸುತ್ತುತ್ತಾನೆ; ಅವನ ಬಿಸಿಲಿಗೆ ಮರೆಯಾದದ್ದು ಒಂದೂ ಇಲ್ಲ.
ಕೀರ್ತನೆಗಳು 19 : 7 (KNV)
ಕರ್ತನ ನ್ಯಾಯಪ್ರಮಾಣವು ಸಂಪೂರ್ಣವಾಗಿದ್ದು ಪ್ರಾಣಕ್ಕೆ ಜೀವಕರವಾಗಿದೆ: ಕರ್ತನ ಸಾಕ್ಷಿಯು ಮೂರ್ಖರನ್ನು ಜ್ಞಾನಿಗಳನ್ನಾಗಿ ಮಾಡುತ್ತದೆ.
ಕೀರ್ತನೆಗಳು 19 : 8 (KNV)
ಕರ್ತನ ಕಟ್ಟಳೆಗಳು ನ್ಯಾಯವಾದವುಗಳಾಗಿದ್ದು ಹೃದಯಕ್ಕೆ ಸಂತೋಷಕರವಾಗಿವೆ; ಕರ್ತನ ಆಜ್ಞೆಯು ಶುದ್ಧವಾ ದದ್ದು; ಕಣ್ಣುಗಳನ್ನು ಬೆಳಗಿಸುತ್ತದೆ.
ಕೀರ್ತನೆಗಳು 19 : 9 (KNV)
ಕರ್ತನ ಭಯವು ಪವಿತ್ರವಾಗಿದ್ದು ಎಂದೆಂದಿಗೂ ನೆಲೆಯಾಗಿದೆ. ಕರ್ತನ ನ್ಯಾಯಗಳು ಸತ್ಯವಾಗಿದ್ದು ಒಟ್ಟಾಗಿ ನೀತಿಯುಳ್ಳವುಗ ಳಾಗಿವೆ.
ಕೀರ್ತನೆಗಳು 19 : 10 (KNV)
ಅವು ಬಂಗಾರಕ್ಕಿಂತಲೂ ಬಹಳ ಅಪರಂಜಿ ಗಿಂತಲೂ ಅಪೇಕ್ಷಿಸತಕ್ಕವುಗಳು; ಜೇನಿಗಿಂತಲೂ ಶೋಧಿಸಿದ ಜೇನು ತುಪ್ಪಕ್ಕಿಂತಲೂ ಸಿಹಿಯಾದವು ಗಳು.
ಕೀರ್ತನೆಗಳು 19 : 11 (KNV)
ನಿನ್ನ ಸೇವಕನು ಅವುಗಳಿಂದ ಎಚ್ಚರಿಸಲ್ಪಡು ತ್ತಾನೆ; ಅವುಗಳನ್ನು ಕೈಕೊಳ್ಳುವದರಲ್ಲಿ ದೊಡ್ಡ ಪ್ರತಿ ಫಲ ಉಂಟು.
ಕೀರ್ತನೆಗಳು 19 : 12 (KNV)
ತನ್ನ ತಪ್ಪುಗಳನ್ನು ತಿಳಿದುಕೊಳ್ಳುವವನಾರು? ಗುಪ್ತವಾದ ಪಾಪಗಳಿಂದ ನನ್ನನ್ನು ನಿರ್ಮಲಮಾಡು.
ಕೀರ್ತನೆಗಳು 19 : 13 (KNV)
ಗರ್ವದ ಪಾಪಗಳಿಂದ ನಿನ್ನ ಸೇವಕನನ್ನು ದೂರ ಮಾಡು. ಅವು ನನ್ನನ್ನು ಆಳದೆ ಇರಲಿ; ಆಗ ನಾನು ಸಂಪೂರ್ಣನಾಗಿದ್ದು ಮಹಾದ್ರೋಹದಿಂದ ನಿರಪರಾ ಧಿಯಾಗುವೆನು.
ಕೀರ್ತನೆಗಳು 19 : 14 (KNV)
ನನ್ನ ಬಲವೂ ನನ್ನ ವಿಮೋಚ ಕನೂ ಆಗಿರುವ ಕರ್ತನೇ, ನನ್ನ ಬಾಯಿಯ ಮಾತು ಗಳೂ ನನ್ನ ಹೃದಯದ ಧ್ಯಾನವೂ ನಿನ್ನ ಮುಂದೆ ಮೆಚ್ಚಿಕೆಯಾಗಿರಲಿ.

1 2 3 4 5 6 7 8 9 10 11 12 13 14