ಕೀರ್ತನೆಗಳು 37 : 1 (KNV)
ದುರ್ಮಾರ್ಗಿಗಳಿಗೋಸ್ಕರ ಕೋಪಿಸಿ ಕೊಳ್ಳಬೇಡ; ಇಲ್ಲವೆ ನೀನು ಅಕ್ರಮ ಮಾಡುವವರಿಗೆ ವಿರೋಧವಾಗಿ ಹೊಟ್ಟೇಕಿಚ್ಚು ಪಡ ಬೇಡ.
ಕೀರ್ತನೆಗಳು 37 : 2 (KNV)
ಅವರು ಹುಲ್ಲಿನ ಹಾಗೆ ಬೇಗ ಕೊಯ್ಯಲ್ಪಟ್ಟು ಹಸುರಾದ ಸೊಪ್ಪಿನ ಹಾಗೆ ಬಾಡಿಹೋಗುವರು.
ಕೀರ್ತನೆಗಳು 37 : 3 (KNV)
ಕರ್ತನಲ್ಲಿ ಭರವಸವಿಟ್ಟು ಒಳ್ಳೆಯದನ್ನು ಮಾಡು; ಆಗ ದೇಶದಲ್ಲಿ ವಾಸಮಾಡಿ ನಿಜವಾಗಿ ತೃಪ್ತಿ ಹೊಂದು ವಿ.
ಕೀರ್ತನೆಗಳು 37 : 4 (KNV)
ಕರ್ತನಲ್ಲಿ ಆನಂದವಾಗಿರು; ಆಗ ಆತನು ನಿನ್ನ ಹೃದಯದ ಅಪೇಕ್ಷೆಗಳನ್ನು ನಿನಗೆ ಕೊಡುವನು.
ಕೀರ್ತನೆಗಳು 37 : 5 (KNV)
ನಿನ್ನ ಮಾರ್ಗವನ್ನು ಕರ್ತನಿಗೆ ಒಪ್ಪಿಸು; ಆತನಲ್ಲಿ ಭರವಸ ವಿಡು; ಆತನು ಅದನ್ನು ನೆರವೇರಿಸುವನು.
ಕೀರ್ತನೆಗಳು 37 : 6 (KNV)
ನಿನ್ನ ನೀತಿಯನ್ನು ಬೆಳಕಿನ ಹಾಗೆಯೂ ನಿನ್ನ ನ್ಯಾಯಗಳನ್ನು ಮಧ್ಯಾಹ್ನದ ಹಾಗೆಯೂ ಆತನು ಹೊರಗೆ ಬರ ಮಾಡುವನು.
ಕೀರ್ತನೆಗಳು 37 : 7 (KNV)
ಕರ್ತನಲ್ಲಿ ಶಾಂತವಾಗಿರು; ಮೌನವಾಗಿದ್ದು ಆತನಿಗಾಗಿ ಎದುರುನೋಡು; ತನ್ನ ಮಾರ್ಗದಲ್ಲಿ ಸಫಲ ವಾಗುವವನಿಗೋಸ್ಕರವೂ ಯುಕ್ತಿಗಳನ್ನು ನಡಿಸುವ ಮನುಷ್ಯರಿಗೋಸ್ಕರವೂ ಕೋಪಮಾಡಿಕೊಳ್ಳಬೇಡ.
ಕೀರ್ತನೆಗಳು 37 : 8 (KNV)
ಕೋಪವನ್ನು ನಿಲ್ಲಿಸು; ಉರಿಯನ್ನು ಬಿಟ್ಟುಬಿಡು; ಹೇಗಾದರೂ ಕೇಡುಮಾಡದ ಹಾಗೆ ಕೋಪಿಸಿಕೊಳ್ಳ ಬೇಡ.
ಕೀರ್ತನೆಗಳು 37 : 9 (KNV)
ದುರ್ಮಾರ್ಗಿಗಳು ಕಡಿದು ಹಾಕಲ್ಪಡುವರು; ಕರ್ತನನ್ನು ನಿರೀಕ್ಷಿಸುವವರೇ ಭೂಮಿಯನ್ನು ಸ್ವಾಧೀನ ಮಾಡಿಕೊಳ್ಳುವರು.
ಕೀರ್ತನೆಗಳು 37 : 10 (KNV)
ಇನ್ನು ಸ್ಪಲ್ಪ ಸಮಯದಲ್ಲಿ ದುಷ್ಟನು ಇರನು; ಹೌದು, ಅವನ ಸ್ಥಳವನ್ನು ನೀನು ಜಾಗ್ರತೆಯಾಗಿ ವಿಚಾರಿಸಿದರೂ ಇಗೋ, ಅದು ಇರು ವದಿಲ್ಲ.
ಕೀರ್ತನೆಗಳು 37 : 11 (KNV)
ಆದರೆ ಸಾತ್ವಿಕರು ಭೂಮಿಯನ್ನು ಸ್ವಾಧೀನ ಮಾಡಿಕೊಂಡು ಬಹಳ ಸಮಾಧಾನದಲ್ಲಿ ಆನಂದ ಪಡುವರು.
ಕೀರ್ತನೆಗಳು 37 : 12 (KNV)
ದುಷ್ಟನು ನೀತಿವಂತನಿಗಾಗಿ ಹೊಂಚುಹಾಕು ವನು, ಅವನ ಮೇಲೆ ತನ್ನ ಹಲ್ಲುಗಳನ್ನು ಕಡಿಯುತ್ತಾನೆ.
ಕೀರ್ತನೆಗಳು 37 : 13 (KNV)
ಕರ್ತನು ಅವನ ದಿನ ಬರುತ್ತದೆಂದು ನೋಡಿ ನಗುತ್ತಾನೆ.
ಕೀರ್ತನೆಗಳು 37 : 14 (KNV)
ದುಷ್ಟರು ಬಡವನನ್ನು ಮತ್ತು ದೀನ ನನ್ನು ಕೆಡವಿಬಿಡುವದಕ್ಕೂ ಸನ್ಮಾರ್ಗದವರನ್ನು ಕೊಲ್ಲು ವದಕ್ಕೂ ಕತ್ತಿಯನ್ನು ಹಿರಿದಿದ್ದಾರೆ ಮತ್ತು ತಮ್ಮ ಬಿಲ್ಲು ಗಳನ್ನು ಬೊಗ್ಗಿಸಿದ್ದಾರೆ.
ಕೀರ್ತನೆಗಳು 37 : 15 (KNV)
ಅವರ ಕತ್ತಿಯು ಅವರ ಹೃದಯವನ್ನೇ ಇರಿಯುವದು; ಅವರ ಬಿಲ್ಲುಗಳು ಮುರಿದುಹೋಗುವವು.
ಕೀರ್ತನೆಗಳು 37 : 16 (KNV)
ನೀತಿವಂತನಿಗಿರುವ ಸ್ವಲ್ಪ ವಾದದ್ದು ಅನೇಕ ದುಷ್ಟರ ಐಶ್ವರ್ಯಕ್ಕಿಂತಲೂ ಶ್ರೇಷ್ಠ ವಾಗಿದೆ.
ಕೀರ್ತನೆಗಳು 37 : 17 (KNV)
ದುಷ್ಟರ ತೋಳುಗಳು ಮುರಿದು ಹೋಗು ವವು; ಆದರೆ ನೀತಿವಂತರನ್ನು ಕರ್ತನು ಉದ್ಧಾರ ಮಾಡುತ್ತಾನೆ.
ಕೀರ್ತನೆಗಳು 37 : 18 (KNV)
ಕರ್ತನು ಯಥಾರ್ಥರ ದಿನಗಳನ್ನು ಅರಿತಿದ್ದಾನೆ; ಅವರ ಬಾಧ್ಯತೆಯು ಯುಗಯುಗಕ್ಕೂ ಇರುವದು.
ಕೀರ್ತನೆಗಳು 37 : 19 (KNV)
ವಿಪತ್ಕಾಲದಲ್ಲಿ ಅವರು ಆಶಾಭಂಗ ಪಡುವದಿಲ್ಲ; ಕ್ಷಾಮದ ದಿವಸಗಳಲ್ಲಿ ತೃಪ್ತಿಪಡುವರು.
ಕೀರ್ತನೆಗಳು 37 : 20 (KNV)
ದುಷ್ಟರು ನಾಶವಾಗುವರು; ಕರ್ತನ ಶತ್ರುಗಳು ಕುರಿಮರಿಗಳ ಕೊಬ್ಬಿನ ಹಾಗೆ ಇದ್ದು ಕರಗಿಹೋಗು ವರು; ಹೊಗೆಯಲ್ಲಿ ಕರಗಿಹೋಗುವರು.
ಕೀರ್ತನೆಗಳು 37 : 21 (KNV)
ದುಷ್ಟನು ಸಾಲಮಾಡಿ ತಿರಿಗಿ ಸಲ್ಲಿಸುವದಿಲ್ಲ; ನೀತಿವಂತನು ದಯಾಳುವಾಗಿ ಕೊಡುತ್ತಾನೆ.
ಕೀರ್ತನೆಗಳು 37 : 22 (KNV)
ಆತನು ಆಶೀರ್ವದಿಸಿದವರು ಭೂಮಿಯನ್ನು ಸ್ವತಂತ್ರಿಸಿ ಕೊಳ್ಳುವರು; ಆತನು ಶಪಿಸಿದವರು ಕಡಿದು ಹಾಕಲ್ಪಡವರು.
ಕೀರ್ತನೆಗಳು 37 : 23 (KNV)
ಒಳ್ಳೇ ಮನುಷ್ಯನ ಹೆಜ್ಜೆಗಳು ಕರ್ತನಿಂದ ದೃಢ ವಾಗುತ್ತವೆ; ಆತನು ಅವನ ಮಾರ್ಗದಲ್ಲಿ ಸಂತೋಷ ಪಡುತ್ತಾನೆ.
ಕೀರ್ತನೆಗಳು 37 : 24 (KNV)
ಅವನು ಬಿದ್ದು ಹೋದಾಗ್ಯೂ ಪೂರ್ಣ ವಾಗಿ ಕೆಡವಲ್ಪಡುವದಿಲ್ಲ. ಯಾಕಂದರೆ ಕರ್ತನು ತನ್ನ ಕೈಯಿಂದ ಅವನನ್ನು ಮೇಲೆ ಎತ್ತುತ್ತಾನೆ.
ಕೀರ್ತನೆಗಳು 37 : 25 (KNV)
ನಾನು ಬಾಲಕನಾಗಿದ್ದೆನು, ಈಗ ಮುದುಕನಾಗಿದ್ದೇನೆ; ಆದರೆ ನೀತಿವಂತನು ಕೈಬಿಡಲ್ಪಟ್ಟದ್ದನ್ನೂ ಅವನ ಸಂತತಿಯು ರೊಟ್ಟಿಗಾಗಿ ಭಿಕ್ಷೆಬೇಡುವದನ್ನೂ ನಾನು ನೋಡಲಿಲ್ಲ.
ಕೀರ್ತನೆಗಳು 37 : 26 (KNV)
ಅವನು ಯಾವಾಗಲೂ ದಯಾಳುವಾಗಿ ಸಾಲ ಕೊಡುತ್ತಾನೆ; ಅವನ ಸಂತತಿಯು ಆಶೀರ್ವಾದ ಹೊಂದುವದು.
ಕೀರ್ತನೆಗಳು 37 : 27 (KNV)
ಕೇಡಿನಿಂದ ತೊಲಗಿ ಒಳ್ಳೇದನ್ನು ಮಾಡು, ಆಗ ಯುಗಯುಗಕ್ಕೂ ವಾಸಮಾಡುವಿ.
ಕೀರ್ತನೆಗಳು 37 : 28 (KNV)
ಕರ್ತನು ನ್ಯಾಯವನ್ನು ಪ್ರೀತಿಮಾಡುತ್ತಾನೆ; ತನ್ನ ಪರಿಶುದ್ಧರನ್ನು ತೊರೆದುಬಿಡನು; ಅವರು ಯುಗ ಯುಗಕ್ಕೂ ಕಾಪಾಡಲ್ಪಡುವರು; ಆದರೆ ದುಷ್ಟರ ಸಂತತಿಯು ಕಡಿದುಹಾಕಲ್ಪಡುವದು.
ಕೀರ್ತನೆಗಳು 37 : 29 (KNV)
ನೀತಿವಂತರು ಭೂಮಿಯನ್ನು ಸ್ವಾಧೀನಮಾಡಿಕೊಂಡು ಎಂದೆಂದಿಗೂ ಅದರಲ್ಲಿ ವಾಸವಾಗಿರುವರು.
ಕೀರ್ತನೆಗಳು 37 : 30 (KNV)
ನೀತಿವಂತನ ಬಾಯಿ ಜ್ಞಾನವನ್ನು ಉಚ್ಚರಿಸುವದು; ಅವನ ನಾಲಿಗೆ ನ್ಯಾಯ ವನ್ನು ನುಡಿಯುವದು.
ಕೀರ್ತನೆಗಳು 37 : 31 (KNV)
ದೇವರ ನ್ಯಾಯ ಪ್ರಮಾ ಣವು ಅವನ ಹೃದಯದಲ್ಲಿ ಅದೆ; ಅವನ ಹೆಜ್ಜೆಗಳು ಕದಲುವದಿಲ್ಲ.
ಕೀರ್ತನೆಗಳು 37 : 32 (KNV)
ದುಷ್ಟನು ನೀತಿವಂತನಿಗಾಗಿ ಹೊಂಚು ಹಾಕು ತ್ತಾನೆ. ಅವನನ್ನು ಕೊಲ್ಲಲು ಹುಡುಕುತ್ತಾನೆ.
ಕೀರ್ತನೆಗಳು 37 : 33 (KNV)
ಕರ್ತನು ಅವನನ್ನು ದುಷ್ಟನ ಕೈಯಲ್ಲಿ ಬಿಡುವದಿಲ್ಲ; ಇಲ್ಲವೆ ನ್ಯಾಯವಿಚಾರಣೆಯಲ್ಲಿ ಅವನು ದುಷ್ಟನೆಂದು ತೀರ್ಪು ಹೊಂದುವದಿಲ್ಲ.
ಕೀರ್ತನೆಗಳು 37 : 34 (KNV)
ಕರ್ತನನ್ನು ನಿರೀಕ್ಷಿಸು, ಆತನ ಮಾರ್ಗವನ್ನು ಕೈಕೊಳ್ಳು; ಆಗ ಭೂಮಿಯನ್ನು ಸ್ವಾಧೀ ನಮಾಡಿಕೊಳ್ಳುವ ಹಾಗೆ ನಿನ್ನನ್ನು ಆತನು ಎತ್ತು ವನು; ದುಷ್ಟರು ಕಡಿದುಹಾಕಲ್ಪಟ್ಟಾಗ ನೀನು ಅದನ್ನು ನೋಡುವಿ.
ಕೀರ್ತನೆಗಳು 37 : 35 (KNV)
ದುಷ್ಟನು ದೊಡ್ಡ ಅಧಿಕಾರದಲ್ಲಿರು ವದನ್ನು ನಾನು ನೋಡಿದೆನು; ಅವನು ಹಸುರಾಗಿ ವಿಸ್ತರಿಸಿಕೊಂಡ ಮರದ ಹಾಗೆ ಇದ್ದನು.
ಕೀರ್ತನೆಗಳು 37 : 36 (KNV)
ಆದರೆ ಅವನು ಅಳಿದು ಹೋದನು; ಇಗೋ, ಅವನು ಇಲ್ಲವಾದನು; ಹೌದು, ಅವನನ್ನು ನಾನು ಹುಡು ಕಿದೆನು; ಆದರೆ ಅವನು ಸಿಕ್ಕಲಿಲ್ಲ.
ಕೀರ್ತನೆಗಳು 37 : 37 (KNV)
ಸಂಪೂರ್ಣನನ್ನು ಗಮನಿಸು, ಯಥಾರ್ಥನನ್ನು ನೋಡು; ಆ ಮನುಷ್ಯನ ಅಂತ್ಯವು ಸಮಾಧಾನವಾಗಿದೆ.
ಕೀರ್ತನೆಗಳು 37 : 38 (KNV)
ಅಪರಾಧಿಗಳು ಏಕ ವಾಗಿ ನಾಶವಾಗುವರು; ದುಷ್ಟರ ಅಂತ್ಯವು ತೆಗೆದು ಹಾಕಲ್ಪಡುವದು.
ಕೀರ್ತನೆಗಳು 37 : 39 (KNV)
ನೀತಿವಂತರ ರಕ್ಷಣೆಯು ಕರ್ತ ನಿಂದಲೇ; ಇಕ್ಕಟ್ಟಿನ ಕಾಲದಲ್ಲಿ ಅವರ ಬಲವು ಆತನೇ.
ಕೀರ್ತನೆಗಳು 37 : 40 (KNV)
ಕರ್ತನು ಅವರಿಗೆ ಸಹಾಯಮಾಡಿ ಅವರನ್ನು ತಪ್ಪಿಸುವನು; ದುಷ್ಟರಿಂದ ಅವರನ್ನು ತಪ್ಪಿಸಿ ರಕ್ಷಿಸುವನು; ಅವರು ಆತನಲ್ಲಿ ಭರವಸವಿಟ್ಟಿದ್ದಾರೆ.
❮
❯