ಕೀರ್ತನೆಗಳು 4 : 1 (KNV)
ನನ್ನ ನೀತಿಯಾದ ಓ ದೇವರೇ, ನಾನು ಮೊರೆಯಿಡಲು ನನಗೆ ಕಿವಿಗೊಡು, ಇಕ್ಕಟ್ಟಿನಲ್ಲಿ ನನಗೆ ವಿಶಾಲಮಾಡಿದಿ. ನನ್ನ ಮೇಲೆ ಕರುಣೆಯಿಟ್ಟು ನನ್ನ ಪ್ರಾರ್ಥನೆಯನ್ನು ಕೇಳು.
ಕೀರ್ತನೆಗಳು 4 : 2 (KNV)
ಓ ಮನುಷ್ಯರ ಪುತ್ರರೇ, ನನ್ನ ಘನವನ್ನು ಅವ ಮಾನಕ್ಕೆ ತಿರುಗಿಸುವದು ಎಷ್ಟರ ವರೆಗೆ? ನೀವು ವ್ಯರ್ಥವಾದದ್ದನ್ನು ಪ್ರೀತಿಮಾಡಿ ಸುಳ್ಳನ್ನು ಹುಡುಕು ವದು ಎಷ್ಟರ ವರೆಗೆ? ಸೆಲಾ.
ಕೀರ್ತನೆಗಳು 4 : 3 (KNV)
ಕರ್ತನು ತನ್ನ ಭಕ್ತನನ್ನು ತನಗಾಗಿ ಪ್ರತ್ಯೇಕಿಸಿದ್ದಾನೆಂದು ತಿಳಿದು ಕೊಳ್ಳಿರಿ. ನಾನು ಕರ್ತನನ್ನು ಮೊರೆಯಿಡಲು ಆತನು ಕೇಳುವನು.
ಕೀರ್ತನೆಗಳು 4 : 4 (KNV)
ಭಯಭಕ್ತಿಯಿಂದಿರ್ರಿ; ಪಾಪಮಾಡಬೇಡಿರಿ; ಹಾಸಿಗೆ ಗಳ ಮೇಲೆ ನಿಮ್ಮ ಸ್ವಂತ ಹೃದಯದಲ್ಲಿ ಮಾತನಾಡಿ ಮೌನವಾಗಿರ್ರಿ. ಸೆಲಾ.
ಕೀರ್ತನೆಗಳು 4 : 5 (KNV)
ನೀತಿಯ ಬಲಿಗಳನ್ನು ಅರ್ಪಿ ಸಿರಿ; ಕರ್ತನಲ್ಲಿ ನಿಮ್ಮ ಭರವಸವಿಡಿರಿ.
ಕೀರ್ತನೆಗಳು 4 : 6 (KNV)
ನಮಗೆ ಒಳ್ಳೇದನ್ನು ಮಾಡುವವರು ಯಾರೆಂದು ಹೇಳುವವರು ಅನೇಕರು. ಕರ್ತನೇ, ನಿನ್ನ ಮುಖದ ಬೆಳಕನ್ನು ನಮ್ಮ ಮೇಲೆ ಪ್ರಕಾಶಗೊಳಿಸು.
ಕೀರ್ತನೆಗಳು 4 : 7 (KNV)
ಅವರ ಧಾನ್ಯವೂ ದ್ರಾಕ್ಷಾರಸವೂ ಹೆಚ್ಚಿದ ಕಾಲಕ್ಕಿಂತ ಅಧಿಕ ವಾಗಿ ನನ್ನ ಹೃದಯದಲ್ಲಿ ಸಂತೋಷವನ್ನು ಇಟ್ಟಿದ್ದೀ.
ಕೀರ್ತನೆಗಳು 4 : 8 (KNV)
ಸಮಾಧಾನವಾಗಿ ಮಲಗಿ ನಿದ್ರೆ ಸಹ ಮಾಡುವೆನು; ಯಾಕಂದರೆ ಕರ್ತನೇ, ನೀನೋಬ್ಬನೇ ನನ್ನನ್ನು ಸುರ ಕ್ಷಿತವಾಗಿ ವಾಸಿಸುವಂತೆ ಮಾಡುತ್ತೀ. 5

1 2 3 4 5 6 7 8

BG:

Opacity:

Color:


Size:


Font: