ಕೀರ್ತನೆಗಳು 46 : 1 (KNV)
ನಮ್ಮ ಆಶ್ರಯವೂ ಬಲವೂ ಆಗಿರುವ ದೇವರು ಇಕ್ಕಟ್ಟಿನಲ್ಲಿ ನಮಗೆ ವಿಶೇಷ ಸಹಾಯಕನು.
ಕೀರ್ತನೆಗಳು 46 : 2 (KNV)
ಆದದರಿಂದ ಭೂಮಿಯು ತೆಗೆದು ಹಾಕಲ್ಪಟ್ಟರೂ ಬೆಟ್ಟಗಳು ಸಮುದ್ರದ ಮಧ್ಯಕ್ಕೆ ಒಯ್ಯ ಲ್ಪಟ್ಟರೂ
ಕೀರ್ತನೆಗಳು 46 : 3 (KNV)
ಅದರ ನೀರುಗಳು ಘೋಷಿಸಿ ಕದಲಿದರೂ ಅದರ ಉಬ್ಬರದಿಂದ ಬೆಟ್ಟಗಳು ಅಲ್ಲಾಡಿದರೂ ನಾವು ಭಯಪಡೆವು. ಸೆಲಾ.
ಕೀರ್ತನೆಗಳು 46 : 4 (KNV)
ಒಂದು ನದಿ ಅದೆ; ಅದರ ಕಾಲುವೆಗಳು ದೇವರ ಪಟ್ಟಣವನ್ನೂ ಮಹೋನ್ನತನ ಗುಡಾರಗಳ ಪರಿಶುದ್ಧ ಸ್ಥಳವನ್ನೂ ಸಂತೋಷಪಡಿಸುತ್ತವೆ.
ಕೀರ್ತನೆಗಳು 46 : 5 (KNV)
ದೇವರು ಅದರ ಮಧ್ಯದಲ್ಲಿ ಇದ್ದಾನೆ; ಅದು ಕದಲದು; ದೇವರು ಹೊತ್ತಾರೆಯಲ್ಲಿ ಅದಕ್ಕೆ ಸಹಾಯ ಮಾಡುವನು.
ಕೀರ್ತನೆಗಳು 46 : 6 (KNV)
ಅನ್ಯ ಜನಾಂಗವು ಘೋಷಿಸಿತು, ರಾಜ್ಯಗಳು ಕದಲಿದವು; ಆತನು ತನ್ನ ಧ್ವನಿಯನ್ನೆತ್ತಿ ಕೂಗಿದಾಗ ಭೂಮಿಯು ಕರಗಿತು.
ಕೀರ್ತನೆಗಳು 46 : 7 (KNV)
ಸೈನ್ಯಗಳ ಕರ್ತನು ನಮ್ಮ ಸಂಗಡ ಇದ್ದಾನೆ; ಯಾಕೋಬನ ದೇವರು ನಮಗೆ ಆಶ್ರಯವಾಗಿದ್ದಾನೆ. ಸೆಲಾ.
ಕೀರ್ತನೆಗಳು 46 : 8 (KNV)
ಬನ್ನಿರಿ, ಕರ್ತನ ಕಾರ್ಯಗಳನ್ನು ದೃಷ್ಟಿಸಿರಿ. ಆತನು ಭೂಮಿಯಲ್ಲಿ ಎಂಥಾ ನಾಶನಗಳನ್ನು ನಡಿಸಿದ್ದಾನೆ;
ಕೀರ್ತನೆಗಳು 46 : 9 (KNV)
ಯುದ್ಧಗಳನ್ನು ಭೂಮಿಯ ಅಂತ್ಯದ ವರೆಗೆ ನಿಲ್ಲಿಸಿ ಬಿಲ್ಲನ್ನು ಮುರಿದು ಭಲ್ಲೆಯನ್ನು ಕಡಿದು ತುಂಡುಮಾಡಿ ರಥಗಳನ್ನು ಬೆಂಕಿಯಿಂದ ಸುಡುತ್ತಾನೆ.
ಕೀರ್ತನೆಗಳು 46 : 10 (KNV)
ಶಾಂತ ವಾಗಿರ್ರಿ, ನಾನೇ ದೇವರಾಗಿದ್ದೇನೆಂದು ತಿಳುಕೊಳ್ಳಿರಿ; ಜನಾಂಗಗಳಲ್ಲಿ ಉನ್ನತನಾಗಿರುವೆನು; ಭೂಮಿಯಲ್ಲಿ ನಾನು ಹೆಚ್ಚಿಸಲ್ಪಡುವೆನು.
ಕೀರ್ತನೆಗಳು 46 : 11 (KNV)
ಸೈನ್ಯಗಳ ಕರ್ತನು ನಮ್ಮ ಸಂಗಡ ಇದ್ದಾನೆ; ಯಾಕೋಬನ ದೇವರು ನಮಗೆ ಆಶ್ರಯವಾಗಿದ್ದಾನೆ. ಸೆಲಾ.

1 2 3 4 5 6 7 8 9 10 11

BG:

Opacity:

Color:


Size:


Font: