ಕೀರ್ತನೆಗಳು 48 : 1 (KNV)
ನಮ್ಮ ದೇವರ ಪಟ್ಟಣದಲ್ಲಿ ಆತನ ಪರಿಶುದ್ಧ ಪರ್ವತದಲ್ಲಿ ಕರ್ತನು ದೊಡ್ಡ ವನೂ ಬಹಳವಾಗಿ ಸ್ತುತಿಸಲ್ಪಡುವಾತನೂ ಆಗಿದ್ದಾನೆ.
ಕೀರ್ತನೆಗಳು 48 : 2 (KNV)
ಉತ್ತರದ ಪಾರ್ಶ್ವಗಳಲ್ಲಿ ದೊಡ್ಡ ಅರಸನ ಪಟ್ಟಣವಾದ ಚೀಯೋನ್ ಪರ್ವತವು ರಮಣೀಯವಾ ದದ್ದೂ ಎಲ್ಲಾ ಭೂಮಿಗೆ ಸಂತೋಷಕರವಾದದ್ದೂ ಆಗಿದೆ.
ಕೀರ್ತನೆಗಳು 48 : 3 (KNV)
ದೇವರು ಅದರ ಅರಮನೆಗಳಲ್ಲಿ ಆಶ್ರಯ ವೆಂದು ಗೊತ್ತಾಗಿದೆ.
ಕೀರ್ತನೆಗಳು 48 : 4 (KNV)
ಇಗೋ, ಅರಸರುಗಳು ಕೂಡಿಕೊಂಡು ಒಟ್ಟಾಗಿ ಹಾದುಹೋದರು;
ಕೀರ್ತನೆಗಳು 48 : 5 (KNV)
ಅವರು ಅದನ್ನು ನೋಡಿ ಆಶ್ಚ ರ್ಯಪಟ್ಟರು; ಅವರು ಕಳವಳಪಟ್ಟು ಓಡಿ ಹೋದರು.
ಕೀರ್ತನೆಗಳು 48 : 6 (KNV)
ಭೀತಿಯೂ ಹೆರುವವಳ ಹಾಗೆ ನೋವೂ ಅಲ್ಲಿ ಅವರನ್ನು ಹಿಡಿಯಿತು.
ಕೀರ್ತನೆಗಳು 48 : 7 (KNV)
ಮೂಡಣ ಗಾಳಿಯಿಂದ ತಾರ್ಷಿಷ್ ಹಡಗುಗಳನ್ನು ನೀನು ಒಡೆಯುತ್ತೀ.
ಕೀರ್ತನೆಗಳು 48 : 8 (KNV)
ನಾವು ಹೇಗೆ ಕೇಳಿದೆವೋ ಹಾಗೆಯೇ ಸೈನ್ಯಗಳ ಕರ್ತನ ಪಟ್ಟಣದಲ್ಲಿ, ಅಂದರೆ ನಮ್ಮ ದೇವರ ಪಟ್ಟಣದಲ್ಲಿಯೇ ನೋಡಿದೆವು; ದೇವರು ಅದನ್ನು ಎಂದೆಂದಿಗೂ ಸ್ಥಿರಪಡಿಸುವನು. ಸೆಲಾ.
ಕೀರ್ತನೆಗಳು 48 : 9 (KNV)
ಓ ದೇವರೇ, ನಿನ್ನ ಪ್ರೀತಿ ಕರುಣೆಯನ್ನು ನಿನ್ನ ಮಂದಿರದ ಮಧ್ಯದಲ್ಲಿ ನಾವು ಸ್ಮರಿಸಿದ್ದೇವೆ.
ಕೀರ್ತನೆಗಳು 48 : 10 (KNV)
ಓ ದೇವರೇ, ನಿನ್ನ ಹೆಸರಿಗೆ ತಕ್ಕಂತಯೇ ನಿನ್ನ ಸ್ತೋತ್ರವು ಭೂಮಿಯ ಅಂತ್ಯಗಳ ವರೆಗೂ ಅದೆ. ನಿನ್ನ ಬಲಗೈ ನೀತಿಯಿಂದ ತುಂಬಿ ಅದೆ.
ಕೀರ್ತನೆಗಳು 48 : 11 (KNV)
ನಿನ್ನ ನ್ಯಾಯತೀರ್ವಿಕೆಗಳ ನಿಮಿತ್ತ ಚೀಯೋನ್ ಪರ್ವತವು ಸಂತೋಷಪಡಲಿ; ಯೆಹೂದದ ಕುಮಾರ್ತೆಯರು ಉಲ್ಲಾಸಪಡಲಿ.
ಕೀರ್ತನೆಗಳು 48 : 12 (KNV)
ಚೀಯೋನನ್ನು ಸುತ್ತಿ ಅವಳ ಸುತ್ತಲು ತಿರುಗಿ ಅದರ ಬುರುಜುಗಳನ್ನು ಲೆಕ್ಕಿಸಿರಿ.
ಕೀರ್ತನೆಗಳು 48 : 13 (KNV)
ಮುಂದಿನ ತಲಾಂತರಕ್ಕೆ ತಿಳಿಸುವದಕ್ಕೋಸ್ಕರ ಅದರ ಬುರುಜುಗಳ ಮೇಲೆ ಮನಸ್ಸಿಟ್ಟು ಆಕೆಯ ಅರಮನೆಗಳನ್ನು ಲಕ್ಷಿಸಿರಿ.
ಕೀರ್ತನೆಗಳು 48 : 14 (KNV)
ಈ ದೇವರು ಯುಗಯುಗಾಂತರಗಳಿಗೂ ನಮ್ಮ ದೇವ ರಾಗಿದ್ದಾನೆ. ಆತನು ಮರಣದ ವರೆಗೂ ನಮ್ಮನ್ನು ನಡಿಸುವನು.

1 2 3 4 5 6 7 8 9 10 11 12 13 14