ಕೀರ್ತನೆಗಳು 49 : 1 (KNV)
ಎಲ್ಲಾ ಜನರೇ, ಇದನ್ನು ಕೇಳಿರಿ; ಭೂಲೋಕದ ನಿವಾಸಿಗಳಿರಾ, ಕೇಳಿರಿ;
ಕೀರ್ತನೆಗಳು 49 : 2 (KNV)
ಭೂಲೋಕದ ಜನರೇ, ಉಚ್ಚ ನೀಚ ಬಡವ ಬಲ್ಲಿದರೇ, ಕೇಳಿರಿ.
ಕೀರ್ತನೆಗಳು 49 : 3 (KNV)
ನನ್ನ ಬಾಯಿ ಜ್ಞಾನವನ್ನು ನುಡಿಯುವದು, ನನ್ನ ಹೃದಯದ ಧ್ಯಾನವು ವಿವೇಕವುಳ್ಳದ್ದಾಗಿರುವದು.
ಕೀರ್ತನೆಗಳು 49 : 4 (KNV)
ನಾನು ಸಾಮ್ಯವನ್ನು ಕಿವಿಗೊಟ್ಟು ಕೇಳಿ ಕಿನ್ನರಿಯನ್ನು ಬಾರಿಸುತ್ತಾ ಅದರ ಗೂಢಾರ್ಥವನ್ನು ಪ್ರಕಟಿಸುವೆನು.
ಕೀರ್ತನೆಗಳು 49 : 5 (KNV)
ನನ್ನ ದ್ರೋಹವು ನನ್ನನ್ನು ಸುತ್ತಿಕೊಳ್ಳುವಾಗ ಕೇಡಿನ ದಿನಗಳಲ್ಲಿ ನಾನು ಯಾಕೆ ಭಯಪಡಬೇಕು?
ಕೀರ್ತನೆಗಳು 49 : 6 (KNV)
ಅವರು ತಮ್ಮ ಸಂಪತ್ತಿನಲ್ಲಿ ಭರವಸವಿಟ್ಟು ಅಧಿಕ ಐಶ್ವರ್ಯಗಳಲ್ಲಿ ಹೆಚ್ಚಳಪಡುವರು.
ಕೀರ್ತನೆಗಳು 49 : 7 (KNV)
ಆದರೆ ಸದಾ ಕಾಲಕ್ಕೂ ಬದುಕಿರುವಂತೆ ಮಾಡಿ ಕೊಳೆಯುವಿಕೆಯನ್ನು ನೋಡದ ಹಾಗೆ ತನ್ನ ಸಹೋದರನನ್ನು ಯಾವ ಮನುಷ್ಯನೂ
ಕೀರ್ತನೆಗಳು 49 : 8 (KNV)
ಅವನು ದೇವರಿಗೆ ಹಣವನ್ನು (ಈಡು) ಕೊಟ್ಟು ಅದರಿಂದ ವಿಮೋಚಿಸಲಾರನು.
ಕೀರ್ತನೆಗಳು 49 : 9 (KNV)
ಅವರ ಪ್ರಾಣದ ವಿಮೋಚನೆಯು ಅಮೂಲ್ಯ ವಾಗಿದೆ; ಅದು ಯುಗಯುಗಕ್ಕೂ ನಿಲ್ಲುವದು.
ಕೀರ್ತನೆಗಳು 49 : 10 (KNV)
ಜ್ಞಾನಿಗಳು ಸಾಯುವರು; ಹುಚ್ಚನು ಪಶುಪ್ರಾಯನು ಕೂಡ ನಾಶವಾಗಿ ಬೇರೆಯವರಿಗೆ ತಮ್ಮ ಆಸ್ತಿಯನ್ನು ಬಿಡುವದನ್ನು ಅವನು ನೋಡುತ್ತಾನೆ.
ಕೀರ್ತನೆಗಳು 49 : 11 (KNV)
ತಮ್ಮ ಮನೆಗಳು ಯುಗಯುಗಕ್ಕೂ ತಮ್ಮ ನಿವಾಸಗಳು ತಲತಲಾಂತರಕ್ಕೂ ಇರಬೇಕೆಂದು ಅಂತರ್ಯದಲ್ಲಿ ಯೋಚಿಸಿ ಭೂಮಿಗಳಿಗೆ ತಮ್ಮ ಹೆಸರುಗಳನ್ನು ಇಡು ತ್ತಾರೆ.
ಕೀರ್ತನೆಗಳು 49 : 12 (KNV)
ಮನುಷ್ಯನು ಘನವುಳ್ಳವನಾದರೂ ಸ್ಥಿರವಿಲ್ಲ; ಅವನು ನಾಶವಾಗುವ ಪಶುಗಳ ಹಾಗೆ ಇದ್ದಾನೆ.
ಕೀರ್ತನೆಗಳು 49 : 13 (KNV)
ಅವರ ಈ ಮಾರ್ಗವು ಅವರ ಹುಚ್ಚುತನ ವಾಗಿದೆ; ಆದರೆ ಅವರ ಸಂತಾನದವರು ಅವರ ಮಾತುಗಳನ್ನು ಮೆಚ್ಚುತ್ತಾರೆ. ಸೆಲಾ.
ಕೀರ್ತನೆಗಳು 49 : 14 (KNV)
ಅವರು ಕುರಿ ಗಳಂತೆ ಸಮಾಧಿಯಲ್ಲಿ ಹಾಕಲ್ಪಡುತ್ತಾರೆ; ಮರಣವು ಅವರನ್ನು ತಿನ್ನುತ್ತದೆ; ಯಥಾರ್ಥರು ಬೆಳಿಗ್ಗೆ ಅವರ ಮೇಲೆ ಆಳುವರು; ಅವರಿಗೆ ನಿವಾಸವಿರದ ಹಾಗೆ ಸಮಾಧಿಯಲ್ಲಿ ಅವರ ರೂಪವು ಕ್ಷಯಿಸುವದು.
ಕೀರ್ತನೆಗಳು 49 : 15 (KNV)
ಆದರೆ ದೇವರು ನನ್ನ ಪ್ರಾಣವನ್ನು ಸಮಾಧಿಯ ಬಲದಿಂದ ವಿಮೋಚನೆ ಮಾಡುವನು, ಆತನು ನನ್ನನ್ನು ಅಂಗೀಕರಿಸುವನು. ಸೆಲಾ.
ಕೀರ್ತನೆಗಳು 49 : 16 (KNV)
ಒಬ್ಬನು ಐಶ್ವರ್ಯವಂತ ನಾದರೆ ಮತ್ತು ಅವನ ಮನೆಯ ಘನವು ದೊಡ್ಡದಾ ದರೆ ಭಯಪಡಬೇಡ.
ಕೀರ್ತನೆಗಳು 49 : 17 (KNV)
ಅವನು ಸಾಯುವಾಗ ಏನೂ ತೆಗೆದುಕೊಂಡು ಹೋಗನು; ಅವನ ಘನವು ಅವನ ಹಿಂದೆ ಇಳಿದು ಹೋಗದು.
ಕೀರ್ತನೆಗಳು 49 : 18 (KNV)
ಅವನು ಬದುಕಿದ್ದಾಗ ತನ್ನ ಪ್ರಾಣವನ್ನು ಸ್ತುತಿಸಿಕೊಂಡಾಗ್ಯೂ ನೀನು ನಿನಗೆ ಒಳ್ಳೇದನ್ನು ಮಾಡಿಕೊಂಡರೆ ಜನರು ನಿನ್ನನ್ನು ಕೊಂಡಾ ಡುವರು.
ಕೀರ್ತನೆಗಳು 49 : 19 (KNV)
ಅವನು ತನ್ನ ತಂದೆಗಳ ವಂಶದ ಬಳಿಗೆ ಹೋಗುವನು; ಅವರು ಬೆಳಕನ್ನು ಎಂದಿಗೂ ನೋಡು ವದಿಲ್ಲ.
ಕೀರ್ತನೆಗಳು 49 : 20 (KNV)
ಮನುಷ್ಯನು ಘನತೆಯಲ್ಲಿದ್ದು ವಿವೇಕ ವಿಲ್ಲದವನಾದರೆ ಮಡಿದು ಹೋಗುವ ಪಶುಗಳಿಗೆ ಸಮಾನನಾಗಿದ್ದಾನೆ.

1 2 3 4 5 6 7 8 9 10 11 12 13 14 15 16 17 18 19 20