ಕೀರ್ತನೆಗಳು 55 : 1 (KNV)
ಓ ದೇವರೇ, ನನ್ನ ಪ್ರಾರ್ಥನೆಗೆ ಕಿವಿಗೊಡು; ನನ್ನ ವಿಜ್ಞಾಪನೆಗೆ ನಿನ್ನನ್ನು ಮರೆಮಾಡಿಕೊಳ್ಳಬೇಡ.
ಕೀರ್ತನೆಗಳು 55 : 2 (KNV)
ನನ್ನನ್ನು ಆಲೈಸಿ ನನಗೆ ಕಿವಿಗೊಡು; ನನ್ನ ಚಿಂತೆಯಲ್ಲಿ ನಾನು ದುಃಖಿಸುತ್ತಾ
ಕೀರ್ತನೆಗಳು 55 : 3 (KNV)
ಶತ್ರುವಿನ ಶಬ್ದಕ್ಕೋಸ್ಕರವೂ ದುಷ್ಟನ ಉಪದ್ರವದ ನಿಮಿತ್ತವೂ ನರಳುತ್ತೇನೆ; ಅವರು ನನ್ನ ಮೇಲೆ ಅಪರಾಧವನ್ನು ಬೀಳಮಾಡಿ ಕೋಪದಿಂದ ನನ್ನನ್ನು ಹಗೆಮಾಡುತ್ತಾರೆ.
ಕೀರ್ತನೆಗಳು 55 : 4 (KNV)
ನನ್ನ ಹೃದಯವು ನನ್ನ ಅಂತ ರಂಗದಲ್ಲಿ ನೊಂದುಕೊಳ್ಳುತ್ತದೆ; ಮರಣದ ಬೆದರಿಕೆ ಗಳು ನನ್ನ ಮೇಲೆ ಬಿದ್ದವೆ.
ಕೀರ್ತನೆಗಳು 55 : 5 (KNV)
ಭಯವೂ ನಡುಗೂ ನನಗೆ ಬಂದವೆ; ಭೀತಿಯು ನನ್ನನ್ನು ಮುಚ್ಚಿಯದೆ.
ಕೀರ್ತನೆಗಳು 55 : 6 (KNV)
ನನಗೆ ಪಾರಿವಾಳದಂತೆ ರೆಕ್ಕೆಗಳಿರುತ್ತಿದ್ದರೆ ಹಾರಿ ಹೋಗಿ ವಿಶ್ರಾಂತಿಯನ್ನು ತೆಗೆದುಕೊಳ್ಳುತ್ತಿದ್ದೆನು ಎಂದು ಅಂದುಕೊಂಡೆನು.
ಕೀರ್ತನೆಗಳು 55 : 7 (KNV)
ಇಗೋ, ದೂರದ ಅರ ಣ್ಯಕ್ಕೆ ಅಲೆದಾಡುತ್ತಾ ಹೋಗಿ ತಂಗುವೆನು. ಸೆಲಾ.
ಕೀರ್ತನೆಗಳು 55 : 8 (KNV)
ಗಾಳಿಯ ತುಫಾನಿಗೂ ಬಿರುಗಾಳಿಗೂ ತಪ್ಪಿಸಿಕೊಳ್ಳಲು ತ್ವರೆಪಡುವೆನು.
ಕೀರ್ತನೆಗಳು 55 : 9 (KNV)
ಓ ಕರ್ತನೇ, (ಅವರನ್ನು) ನಾಶಮಾಡು. ಅವರ ನಾಲಿಗೆಗಳನ್ನು ಭೇದಿಸು; ಯಾಕಂದರೆ ಬಲಾತ್ಕಾರ ವನ್ನೂ ವಿವಾದವನ್ನೂ ಪಟ್ಟಣದಲ್ಲಿ ನಾನು ನೋಡಿ ದ್ದೇನೆ;
ಕೀರ್ತನೆಗಳು 55 : 10 (KNV)
ಹಗಲು ಇರುಳು ಅದರ ಗೋಡೆಗಳ ಮೇಲೆ ಅವರು ಸುತ್ತುತ್ತಾರೆ; ಕೇಡೂ ದುಃಖವೂ ಅವರ ಮಧ್ಯದಲ್ಲಿದೆ;
ಕೀರ್ತನೆಗಳು 55 : 11 (KNV)
ದುಷ್ಟತನವು ಅದರ ಮಧ್ಯ ದಲ್ಲಿದೆ; ಅದರ ಬೀದಿಗಳೊಳಗಿಂದ ಮೋಸವೂ ವಂಚನೆಯೂ ತೊಲಗುವದಿಲ್ಲ.
ಕೀರ್ತನೆಗಳು 55 : 12 (KNV)
ನನ್ನನ್ನು ನಿಂದಿಸಿದವನು ಶತ್ರುವಲ್ಲ; ಶತ್ರುವಾದರೆ ತಾಳಿಕೊಳ್ಳುತ್ತಿದ್ದೆನು; ನಿನಗೆ ವಿರೋಧವಾಗಿ ಹೆಚ್ಚಿಸಿ ಕೊಳ್ಳುವವನು ನನ್ನ ಹಗೆಯವನಲ್ಲ; ಹಗೆಯವನಾದರೆ ಅವನಿಗೆ ಅಡಗಿಕೊಳ್ಳುತ್ತಿದ್ದೆನು.
ಕೀರ್ತನೆಗಳು 55 : 13 (KNV)
ಆದರೆ ನೀನು ನನ್ನ ಜೊತಗಾರನೂ ನಡಿಸುವವನೂ ನನ್ನ ಪರಿಚಿತನೂ ಆಗಿದ್ದೀ.
ಕೀರ್ತನೆಗಳು 55 : 14 (KNV)
ನಾವು ಒಟ್ಟಾಗಿ ಇಂಪಾದ ಸಂಭಾಷಣೆ ಮಾಡಿದೆವು; ದೇವರ ಆಲಯಕ್ಕೆ ಗುಂಪಿನೊಂದಿಗೆ ನಡೆದುಹೋದೆವು.
ಕೀರ್ತನೆಗಳು 55 : 15 (KNV)
ಮರಣವು ಅವರನ್ನು ಹಿಡಿ ಯಲಿ; ತ್ವರಿತವಾಗಿ ನರಕಕ್ಕೆ ಅವರು ಇಳಿದುಹೋಗಲಿ; ಅವರ ವಾಸಸ್ಥಳದಲ್ಲಿಯೂ ಮಧ್ಯದಲ್ಲಿಯೂ ದುಷ್ಟತನ ಇದೆ.
ಕೀರ್ತನೆಗಳು 55 : 16 (KNV)
ನಾನಾದರೋ ದೇವರನ್ನು ಕರೆಯುವೆನು; ಕರ್ತ ನು ನನ್ನನ್ನು ರಕ್ಷಿಸುವನು.
ಕೀರ್ತನೆಗಳು 55 : 17 (KNV)
ಸಂಜೆಯಲ್ಲಿ ಮುಂಜಾನೆ ಯಲ್ಲಿ ಮಧ್ಯಾಹ್ನದಲ್ಲಿ ಪ್ರಾರ್ಥಿಸಿ ಕೂಗುವೆನು;ಆತನು ನನ್ನ ಸ್ವರವನ್ನು ಕೇಳುವನು.
ಕೀರ್ತನೆಗಳು 55 : 18 (KNV)
ನನಗೆ ವಿರೋಧ ವಾಗಿದ್ದ ಕಾಳಗದಿಂದ ಆತನು ನನ್ನ ಪ್ರಾಣವನ್ನು ಸಮಾಧಾನದಲ್ಲಿ ವಿಮೋಚಿಸಿದ್ದಾನೆ; ಹೇಗಂದರೆ ಅನೇಕರು ನನ್ನ ಸಂಗಡ ಇದ್ದರು.
ಕೀರ್ತನೆಗಳು 55 : 19 (KNV)
ಅನಾದಿಯಿಂದ ಇರುವ ದೇವರು ಲಕ್ಷ್ಯವಿಟ್ಟು ಅವರನ್ನು ಕುಗ್ಗಿಸುವನು. ಸೆಲಾ. ಅವರಲ್ಲಿ ಮಾರ್ಪಾಡುವಿಕೆಗಳು ಇಲ್ಲ; ಆದಕಾರಣ ದೇವರಿಗೆ ಅವರು ಭಯಪಡುವದಿಲ್ಲ.
ಕೀರ್ತನೆಗಳು 55 : 20 (KNV)
ಅವನು ತನ್ನ ಸಂಗಡ ಸಮಾಧಾನವುಳ್ಳವರಿಗೆ ವಿರೋಧವಾಗಿ ತನ್ನ ಕೈಗಳನ್ನು ಹಾಕಿದ್ದಾನೆ; ತನ್ನ ಒಡಂಬಡಿಕೆಯನ್ನು ಮುರಿದಿದ್ದಾನೆ.
ಕೀರ್ತನೆಗಳು 55 : 21 (KNV)
ಅವನ ಬಾಯಿ ಮಾತುಗಳು ಬೆಣ್ಣೆಗಿಂತ ನುಣುಪಾಗಿವೆ; ಅವನ ಹೃದ ಯವೋ ಕಲಹಮಯವೇ. ಅವನ ಮಾತುಗಳು ಎಣ್ಣೆ ಗಿಂತ ನಯವಾಗಿವೆ; ಆದರೆ ಅವು ಬಿಚ್ಚು ಕತ್ತಿಗಳಾಗಿವೆ.
ಕೀರ್ತನೆಗಳು 55 : 22 (KNV)
ನಿನ್ನ ಭಾರವನ್ನು ಕರ್ತನ ಮೇಲೆ ಹಾಕು; ಆತನು ನಿನಗೆ ಆಧಾರವಾಗಿರುವನು. ಆತನು ಎಂದೆಂದಿಗೂ ನೀತಿವಂತನನ್ನು ಕದಲಗೊಡಿಸನು.
ಕೀರ್ತನೆಗಳು 55 : 23 (KNV)
ಓ ದೇವರೇ, ನೀನು ಅವರನ್ನು ನಾಶನದ ಕುಣಿಯಲ್ಲಿ ಇಳಿಯ ಮಾಡುವಿ. ಕೊಲೆಪಾತಕರೂ ಮೋಸಗಾರರೂ ತಮ್ಮ ಆಯುಷ್ಯದ ದಿವಸಗಳಲ್ಲಿ ಅರ್ದದಷ್ಟಾದರೂ ಜೀವಿ ಸುವದಿಲ್ಲ; ನಾನು ನಿನ್ನಲ್ಲಿ ಭರವಸವಿಡುತ್ತೇನೆ.
❮
❯