ಕೀರ್ತನೆಗಳು 7 : 1 (KNV)
ನನ್ನ ದೇವರಾದ ಓ ಕರ್ತನೇ, ನಿನ್ನಲ್ಲಿ ಭರವಸವಿಟ್ಟಿದ್ದೇನೆ. ನನ್ನನ್ನು ಹಿಂಸಿಸುವ ವರಿಂದ ತಪ್ಪಿಸಿ ಕಾಪಾಡು;
ಕೀರ್ತನೆಗಳು 7 : 2 (KNV)
ಇಲ್ಲವಾದರೆ ಅವನು ನನ್ನ ಪ್ರಾಣವನ್ನು ಸಿಂಹದಂತೆ ಹರಿದು ತುಂಡು ತುಂಡು ಮಾಡುವನು.
ಕೀರ್ತನೆಗಳು 7 : 3 (KNV)
ನನ್ನ ದೇವರಾದ ಓ ಕರ್ತನೇ, ನಾನು ಇದನ್ನು ಮಾಡಿದರೆ, ಅಂದರೆ ನನ್ನ ಕೈಗಳಲ್ಲಿ ಅಪರಾ ಧವಿದ್ದರೆ,
ಕೀರ್ತನೆಗಳು 7 : 4 (KNV)
ಹೌದು, ನನ್ನೊಂದಿಗೆ ಸಮಾಧಾನದಿಂದ ಇದ್ದವನಿಗೆ ನಾನು ಕೇಡು ಮಾಡಿದ್ದರೆ, ಯಾವ ಕಾರಣವಿಲ್ಲದೆ ನನಗೆ ವೈರಿಯಾಗಿರುವವನನ್ನು ನಾನು ಶತ್ರುವಿಗೆ ತಪ್ಪಿಸಿಬಿಟ್ಟೆನಲ್ಲಾ,
ಕೀರ್ತನೆಗಳು 7 : 5 (KNV)
ವೈರಿಯು ನನ್ನ ಪ್ರಾಣ ವನ್ನು ಹಿಡಿದು ಹಿಂಸಿಸಿ ನನ್ನ ಜೀವವನ್ನು ಭೂಮಿಗೆ ತುಳಿದು ನನ್ನ ಗೌರವವನ್ನು ಧೂಳಿನೊಳಗೆ ಹಾಕಿ ಬಿಡಲಿ--ಸೆಲಾ.
ಕೀರ್ತನೆಗಳು 7 : 6 (KNV)
ಓ ಕರ್ತನೇ, ನಿನ್ನ ಕೋಪದಿಂದ ಏಳು; ನನ್ನ ವೈರಿಗಳ ಉಗ್ರತೆಗಾಗಿ ಎದ್ದೇಳು; ನನ್ನ ನಿಮಿತ್ತ ಎಚ್ಚರಗೊಳ್ಳು; ನೀನು ನ್ಯಾಯತೀರ್ವಿಕೆಯನ್ನು ಆಜ್ಞಾ ಪಿಸಿದ್ದೀಯಲ್ಲಾ.
ಕೀರ್ತನೆಗಳು 7 : 7 (KNV)
ಹೀಗೆ ಪ್ರಜೆಗಳ ಸಭೆಯು ನಿನ್ನನ್ನು ಸುತ್ತಿಕೊಳ್ಳುವದು. ಆದದರಿಂದ ಅವರ ನಿಮಿತ್ತ ನೀನು ಉನ್ನತಕ್ಕೆ ತಿರುಗಿಕೋ.
ಕೀರ್ತನೆಗಳು 7 : 8 (KNV)
ಕರ್ತನು ಜನಗಳಿಗೆ ನ್ಯಾಯ ತೀರಿಸುವನು. ಓ ಕರ್ತನೇ, ನನ್ನಲ್ಲಿರುವ ನನ್ನ ನೀತಿಯ ಪ್ರಕಾರವೂ ಯಥಾರ್ಥತೆಯ ಪ್ರಕಾರವೂ ನನಗೆ ನ್ಯಾಯತೀರಿಸು.
ಕೀರ್ತನೆಗಳು 7 : 9 (KNV)
ದುಷ್ಟರ ದುಷ್ಟತನವು ಮುಗಿದು ಹೋಗಲಿ, ಆದರೆ ನೀತಿವಂತನನ್ನು ದೃಢಪಡಿಸು. ನೀತಿಯುಳ್ಳ ದೇವರು ಹೃದಯವನ್ನೂ ಅಂತರಿಂದ್ರಿ ಯಗಳನ್ನೂ ಶೋಧಿಸುತ್ತಾನಲ್ಲಾ.
ಕೀರ್ತನೆಗಳು 7 : 10 (KNV)
ಯಥಾರ್ಥ ಹೃದ ಯವುಳ್ಳವನನ್ನು ರಕ್ಷಿಸುವ ದೇವರಲ್ಲಿ ನನ್ನ ರಕ್ಷಣೆ ಉಂಟು.
ಕೀರ್ತನೆಗಳು 7 : 11 (KNV)
ದೇವರು ನೀತಿವಂತರಿಗೆ ನ್ಯಾಯತೀರಿಸುತ್ತಾನೆ. ದೇವರು ಪ್ರತಿದಿನ ದುಷ್ಟರ ಮೇಲೆ ರೋಷವುಳ್ಳ ವನಾಗಿದ್ದಾನೆ.
ಕೀರ್ತನೆಗಳು 7 : 12 (KNV)
ಅವನು ತಿರಿಗಿಕೊಳ್ಳದಿದ್ದರೆ ಆತನು ತನ್ನ ಕತ್ತಿ ಮಸೆಯುವನು: ತನ್ನ ಬಿಲ್ಲು ಬಗ್ಗಿಸಿ ಅದನ್ನು ಸಿದ್ಧಮಾಡಿದ್ದಾನೆ.
ಕೀರ್ತನೆಗಳು 7 : 13 (KNV)
ಅವನಿಗೆ ಮರಣಾಯುಧಗಳನ್ನು ಸಹ ಸಿದ್ಧಮಾಡಿ, ಹಿಂಸಿಸುವವರಿಗೋಸ್ಕರ ತನ್ನ ಬಾಣಗಳನ್ನು ಸಿದ್ಧಮಾಡುತ್ತಾನೆ.
ಕೀರ್ತನೆಗಳು 7 : 14 (KNV)
ಇಗೋ, ಅವನು ದುಷ್ಟತನದಿಂದ ಪ್ರಸವವೇದನೆ ಪಡುತ್ತಾನೆ. ಕೇಡನ್ನು ಗರ್ಭಧರಿಸಿಕೊಂಡು ಸುಳ್ಳನ್ನು ಹೆರುವನು.
ಕೀರ್ತನೆಗಳು 7 : 15 (KNV)
ಅವನು ಕುಣಿಯನ್ನು ಅಗೆದಿದ್ದಾನೆ. ಆದರೆ ತಾನು ಅಗೆದ ಕುಣಿಯೊಳಗೆ ತಾನೇ ಬಿದ್ದಿದ್ದಾನೆ.
ಕೀರ್ತನೆಗಳು 7 : 16 (KNV)
ಅವನ ಕೇಡು ಅವನ ಸ್ವಂತ ತಲೆಯ ಮೇಲೆ ತಿರುಗುವದು; ಅವನ ನೆತ್ತಿಯ ಮೇಲೆ ಅವನ ಬಲಾತ್ಕಾರವು ಇಳಿಯುವದು;
ಕೀರ್ತನೆಗಳು 7 : 17 (KNV)
ಕರ್ತನನ್ನು ಆತನ ನೀತಿಯ ಪ್ರಕಾರ ನಾನು ಕೊಂಡಾಡುವೆನು; ಮಹೋನ್ನತನಾದ ಕರ್ತನ ನಾಮ ವನ್ನು ಕೀರ್ತಿಸುವೆನು.

1 2 3 4 5 6 7 8 9 10 11 12 13 14 15 16 17