ಕೀರ್ತನೆಗಳು 70 : 1 (KNV)
ಓ ದೇವರೇ, ನನ್ನನ್ನು ಬಿಡಿಸುವದಕ್ಕೂ ಕರ್ತನೇ, ನನ್ನ ಸಹಾಯಕ್ಕೂ ತ್ವರೆಪಡು.
ಕೀರ್ತನೆಗಳು 70 : 2 (KNV)
ನನ್ನ ಪ್ರಾಣವನ್ನು ಹುಡುಕುವವರು ನಾಚಿಕೊಂಡು ಲಜ್ಜೆಪಡಲಿ; ನನ್ನ ಕೇಡಿನಲ್ಲಿ ಸಂತೋಷಿಸುವವರು ಹಿಂದಿರುಗಿ ಗಲಿಬಿಲಿಯಾಗಲಿ.
ಕೀರ್ತನೆಗಳು 70 : 3 (KNV)
ಆಹಾ, ಆಹಾ ಎಂದು ಹೇಳುವವರು ತಮ್ಮ ನಾಚಿಕೆಯ ಫಲಕ್ಕಾಗಿ ತಿರುಗಲಿ.
ಕೀರ್ತನೆಗಳು 70 : 4 (KNV)
ನಿನ್ನನ್ನು ಹುಡುಕುವವರೆಲ್ಲರು ನಿನ್ನಲ್ಲಿ ಆನಂದಪಟ್ಟು ಸಂತೋಷಿಸಲಿ; ನಿನ್ನ ರಕ್ಷಣೆಯನ್ನು ಪ್ರೀತಿಮಾಡು ವವರು--ದೇವರು ಮಹಿಮೆಪಡಲಿ ಎಂದು ಯಾವಾ ಗಲೂ ಹೇಳಲಿ.
ಕೀರ್ತನೆಗಳು 70 : 5 (KNV)
ಆದರೆ ನಾನು ದೀನನೂ ಬಡವನೂ ಆಗಿದ್ದೇನೆ; ಓ ದೇವರೇ ನನಗೋಸ್ಕರ ತ್ವರೆಪಡು; ನನ್ನ ಸಹಾಯವೂ ನನ್ನನ್ನು ತಪ್ಪಿಸುವವನೂ ನೀನೇ. ಓ ಕರ್ತನೇ, ತಡ ಮಾಡಬೇಡ.
❮
❯