ಕೀರ್ತನೆಗಳು 74 : 1 (KNV)
ಓ ದೇವರೇ, ಸದಾಕಾಲಕ್ಕೆ ತಳ್ಳಿಬಿಟ್ಟದ್ದೇಕೆ? ನಿನ್ನ ಮೇವಿನ ಕುರಿಮಂದೆಗೆ ವಿರೋಧವಾಗಿ ನಿನ್ನ ಕೋಪವು ಹೊಗೆಯಾಡುವದು ಯಾಕೆ?
ಕೀರ್ತನೆಗಳು 74 : 2 (KNV)
ಪೂರ್ವದಲ್ಲಿ ನೀನು ಕೊಂಡುಕೊಂಡ ಸಭೆಯನ್ನೂ ವಿಮೋಚಿಸಿದ ಬಾಧ್ಯತೆಯ ಕೋಲನ್ನೂ ನೀನು ವಾಸಮಾಡಿದ ಈ ಚೀಯೋನ್ ಪರ್ವತವನ್ನೂ ಜ್ಞಾಪಕಮಾಡಿಕೋ.
ಕೀರ್ತನೆಗಳು 74 : 3 (KNV)
ನಿನ್ನ ಪಾದಗಳನ್ನು ಸದಾಕಾಲದ ನಾಶನಗಳಿಗೆ, ಅಂದರೆ ಶತ್ರುವು ಪರಿಶುದ್ಧ ಸ್ಥಳದಲ್ಲಿ ಎಲ್ಲವನ್ನು ಕೆಟ್ಟತನದಿಂದ ಮಾಡಿದ್ದಕ್ಕೆ ತಿರುಗಿಸು.
ಕೀರ್ತನೆಗಳು 74 : 4 (KNV)
ನಿನ್ನ ವೈರಿಗಳು ನಿನ್ನ ಸಭೆಗಳ ಮಧ್ಯದಲ್ಲಿ ಗರ್ಜಿಸುತ್ತಾರೆ; ತಮ್ಮ ಧ್ವಜಗಳನ್ನು ಗುರುತುಗಳಾಗಿ ಇಟ್ಟಿದ್ದಾರೆ.
ಕೀರ್ತನೆಗಳು 74 : 5 (KNV)
ದಟ್ಟವಾದ ಮರಗಳಲ್ಲಿ ಕೊಡಲಿ ಎತ್ತುವವನ ಹಾಗೆ ಮನುಷ್ಯನು ಪ್ರಸಿದ್ಧನಾಗಿದ್ದಾನೆ;
ಕೀರ್ತನೆಗಳು 74 : 6 (KNV)
ಆದರೆ ಈಗ ಕೆತ್ತನೆ ಕೆಲಸವನ್ನು ತಕ್ಷಣ ಕೊಡಲಿಯಿಂದಲೂ ಸುತ್ತಿಗೆ ಯಿಂದಲೂ ಅವರು ಹೊಡೆದು ಬಿಡುತ್ತಾರೆ.
ಕೀರ್ತನೆಗಳು 74 : 7 (KNV)
ನಿನ್ನ ಪರಿಶುದ್ಧ ಆಲಯದಲ್ಲಿ ಬೆಂಕಿ ಹಚ್ಚುತ್ತಾರೆ; ನಿನ್ನ ಹೆಸರಿನ ನಿವಾಸವನ್ನು ಭೂಮಿಗೆ ಕೆಡವಿ ಹೊಲೆ ಮಾಡುತ್ತಾರೆ.
ಕೀರ್ತನೆಗಳು 74 : 8 (KNV)
ಅವುಗಳನ್ನು ಒಟ್ಟಾಗಿ ಕೆಡವಿ ಬಿಡೋಣ ಎಂದು ತಮ್ಮ ಹೃದಯದಲ್ಲಿ ಹೇಳಿಕೊಳ್ಳುತ್ತಾರೆ; ದೇಶದಲ್ಲಿರುವ ದೇವರ ಸಭಾಸ್ಥಾನಗಳನ್ನೆಲ್ಲಾ ಸುಟ್ಟುಬಿಡು ತ್ತಾರೆ.
ಕೀರ್ತನೆಗಳು 74 : 9 (KNV)
ನಮ್ಮ ಗುರುತುಗಳನ್ನು ನೋಡದೆ ಇದ್ದೇವೆ; ಇನ್ನು ಮೇಲೆ ಯಾವ ಪ್ರವಾದಿಯೂ ಇರುವದಿಲ್ಲ ಇಲ್ಲವೆ ಇದು ಎಷ್ಟರವರೆಗೆ ಎಂದು ತಿಳಿದವನು ನಮ್ಮಲ್ಲಿ ಯಾರೂ ಇಲ್ಲ.
ಕೀರ್ತನೆಗಳು 74 : 10 (KNV)
ಓ ದೇವರೇ, ವೈರಿಯು ನಿಂದಿಸುವದು ಎಷ್ಟರ ವರೆಗೆ? ಶತ್ರುವು ನಿನ್ನ ಹೆಸರನ್ನು ಎಂದೆಂದಿಗೂ ದೂಷಿ ಸುವನೋ?
ಕೀರ್ತನೆಗಳು 74 : 11 (KNV)
ಯಾಕೆ ನಿನ್ನ ಕೈಯನ್ನು, ನಿನ್ನ ಬಲಗೈ ಯನ್ನು ಸಹ ಹಿಂದೆಳಿಯುತ್ತೀ? ನಿನ್ನ ಎದೆಯೊಳಗಿಂದ ಅದನ್ನು ಹೊರತೆಗೆ.
ಕೀರ್ತನೆಗಳು 74 : 12 (KNV)
ದೇವರು ಪೂರ್ವದಿಂದಲೂ ನನ್ನ ಅರಸನೂ ಭೂಮಿಯ ಮಧ್ಯದಲ್ಲಿ ರಕ್ಷಣೆಯನ್ನು ಮಾಡುವಾತನೂ ಆಗಿದ್ದಾನೆ.
ಕೀರ್ತನೆಗಳು 74 : 13 (KNV)
ನೀನು ನಿನ್ನ ಬಲದಿಂದ ಸಮುದ್ರವನ್ನು ಭೇದಿಸಿದಿ; ತಿಮಿಂಗಿಲಗಳ ತಲೆಗಳನ್ನು ನೀರುಗಳಲ್ಲಿ ಜಜ್ಜಿಬಿಟ್ಟಿ.
ಕೀರ್ತನೆಗಳು 74 : 14 (KNV)
ನೀನು ಲಿವ್ಯಾತಾನದ ತಲೆ ಗಳನ್ನು ಒಡೆದು ತುಂಡು ತುಂಡುಮಾಡಿದಿ. ಅದನ್ನು ಅರಣ್ಯದ ಜನರಿಗೆ ಆಹಾರವಾಗಿ ಕೊಟ್ಟಿ.
ಕೀರ್ತನೆಗಳು 74 : 15 (KNV)
ನೀನು ಬುಗ್ಗೆಯನ್ನೂ ಪ್ರವಾಹವನ್ನೂ ವಿಭಾಗಮಾಡಿದಿ; ಮಹಾ ನದಿಗಳನ್ನು ಒಣಗಿಸಿದಿ.
ಕೀರ್ತನೆಗಳು 74 : 16 (KNV)
ಹಗಲು ನಿನ್ನದು; ರಾತ್ರಿಯು ಸಹ ನಿನ್ನದು; ನೀನು ಬೆಳಕನ್ನೂ ಸೂರ್ಯ ನನ್ನೂ ಸಿದ್ಧಮಾಡಿದ್ದೀ.
ಕೀರ್ತನೆಗಳು 74 : 17 (KNV)
ನೀನು ಭೂಮಿಯ ಮೇರೆ ಗಳನ್ನೆಲ್ಲಾ ನಿರ್ಣಯಿಸಿದ್ದೀ; ಬೇಸಿಗೆ ಮತ್ತು ಚಳಿ ಗಾಲವನ್ನು ನಿರ್ಮಿಸಿದ್ದೀ.
ಕೀರ್ತನೆಗಳು 74 : 18 (KNV)
ಓ ಕರ್ತನೇ, ವೈರಿಯು ನಿಂದಿಸಿ ಮೂರ್ಖರು ನಿನ್ನ ನಾಮವನ್ನು ದೂಷಿಸಿದ್ದನ್ನು ಜ್ಞಾಪಿಸಿಕೋ.
ಕೀರ್ತನೆಗಳು 74 : 19 (KNV)
ನಿನ್ನ ಬೆಳವಕ್ಕಿಯ ಪ್ರಾಣವನ್ನು ದುಷ್ಟರ ಸಮೂ ಹಕ್ಕೆ ಒಪ್ಪಿಸ ಬೇಡ; ನಿನ್ನ ದೀನರ ಸಭೆಯನ್ನು ಸದಾ ಕಾಲಕ್ಕೆ ಮರೆತುಬಿಡಬೇಡ.
ಕೀರ್ತನೆಗಳು 74 : 20 (KNV)
ಒಡಂಬಡಿಕೆಗೆ ಗೌರ ವವನ್ನು ಕೊಡು; ಭೂಮಿಯ ಕತ್ತಲಿನ ಸ್ಥಳಗಳು ಕ್ರೂರತನದ ನಿವಾಸಗಳಿಂದ ತುಂಬಿಯವೆ.
ಕೀರ್ತನೆಗಳು 74 : 21 (KNV)
ಕುಗ್ಗಿ ದವನು ಅವಮಾನಕ್ಕೆ ತಿರಿಗಿಕೊಳ್ಳದೆ ಇರಲಿ; ದೀನನೂ ಬಡವನೂ ನಿನ್ನ ಹೆಸರನ್ನು ಸ್ತುತಿಸಲಿ.
ಕೀರ್ತನೆಗಳು 74 : 22 (KNV)
ಓ ದೇವರೇ, ಏಳು; ನಿನ್ನ ಸ್ವಂತ ವ್ಯಾಜ್ಯವನ್ನು ವಿವಾದಿಸು; ದಿನವೆಲ್ಲಾ ಮೂರ್ಖನು ನಿನ್ನನ್ನು ಹೇಗೆ ನಿಂದಿಸುತ್ತಾನೆಂದು ಜ್ಞಾಪ ಕಮಾಡಿಕೋ.
ಕೀರ್ತನೆಗಳು 74 : 23 (KNV)
ನಿನ್ನ ವೈರಿಗಳ ಸ್ವರವನ್ನು ಮರೆತು ಬಿಡಬೇಡ; ನಿನ್ನ ವಿರೋಧಿಗಳ ಘೋಷವು ಯಾವಾ ಗಲೂ ಏಳುತ್ತದೆ.

1 2 3 4 5 6 7 8 9 10 11 12 13 14 15 16 17 18 19 20 21 22 23