ಕೀರ್ತನೆಗಳು 75 : 1 (KNV)
ನಿನ್ನನ್ನು ಕೊಂಡಾಡುತ್ತೇವೆ; ಓ ದೇವರೇ, ನಿನ್ನನ್ನು ಕೊಂಡಾಡುತ್ತೇವೆ; ಪ್ರಕಟ ವಾಗುವ ನಿನ್ನ ಅದ್ಭುತ ಕಾರ್ಯಗಳಿಗೆ ನಿನ್ನ ನಾಮವು ಸವಿಾಪವಾಗಿದೆ.
ಕೀರ್ತನೆಗಳು 75 : 2 (KNV)
ನಾನು ಸಭೆಯನ್ನು ಅಂಗೀಕರಿಸು ವಾಗ ಸರಿಯಾಗಿ ನ್ಯಾಯತೀರಿಸುವೆನು;
ಕೀರ್ತನೆಗಳು 75 : 3 (KNV)
ಭೂಮಿಯೂ ಅದರ ನಿವಾಸಿಗಳೆಲ್ಲರೂ ಕರಗಿದ್ದಾರೆ; ನಾನು ಅದರ ಸ್ಥಂಭಗಳನ್ನು ನಿಲ್ಲಿಸುತ್ತೇನೆ ಸೆಲಾ.
ಕೀರ್ತನೆಗಳು 75 : 4 (KNV)
ಮೂರ್ಖತನದಿಂದ ವರ್ತಿಸಬೇಡಿರಿ ಎಂದು ಮೂರ್ಖರಿಗೆ ಹೇಳುತ್ತೇನೆ. ಕೊಂಬು ಎತ್ತಬೇಡಿರಿ ಎಂದು ದುಷ್ಟರಿಗೆ ಹೇಳಿದೆನು.
ಕೀರ್ತನೆಗಳು 75 : 5 (KNV)
ನಿಮ್ಮ ಕೊಂಬನ್ನು ಉನ್ನತಕ್ಕೆ ಎತ್ತಬೇಡಿರಿ; ಬೊಗ್ಗದ ಕುತ್ತಿಗೆಯಿಂದ ಮಾತಾಡಬೇಡಿರಿ.
ಕೀರ್ತನೆಗಳು 75 : 6 (KNV)
ಉದ್ಧಾರವು ಮೂಡಣದಿಂದಲೂ ಪಡುವಣದಿಂದಲೂ ಅಲ್ಲ; ಇಲ್ಲವೆ ದಕ್ಷಿಣದಿಂದಲೂ ಬರುವದಿಲ್ಲ.
ಕೀರ್ತನೆಗಳು 75 : 7 (KNV)
ಆದರೆ ದೇವರು ನ್ಯಾಯತೀರಿಸುವಾ ತನಾಗಿದ್ದಾನೆ; ಒಬ್ಬನನ್ನು ತಗ್ಗಿಸುತ್ತಾನೆ; ಇನ್ನೊಬ್ಬನನ್ನು ಎತ್ತುತ್ತಾನೆ.
ಕೀರ್ತನೆಗಳು 75 : 8 (KNV)
ಕರ್ತನ ಕೈಯಲ್ಲಿ ಪಾತ್ರೆಯು ಉಂಟು; ದ್ರಾಕ್ಷಾರಸವು ಕೆಂಪಾಗಿದೆ. ಕಲಬೆರಿಕೆಯಿಂದ ತುಂಬಿ ಅದೆ; ಅದರಿಂದ ಆತನು ಹೊಯ್ಯುತ್ತಾನೆ; ಅದರ ಮಡ್ಡಿಯನ್ನು ಭೂಮಿಯ ದುಷ್ಟರೆಲ್ಲರೂ ಹೀರಿಕೊಂಡು ಕುಡಿಯುವರು.
ಕೀರ್ತನೆಗಳು 75 : 9 (KNV)
ಆದರೆ ನಾನು ಎಂದೆಂದಿಗೂ ಪ್ರಕಟಿಸುವೆನು, ಯಾಕೋಬನ ದೇವರ ಸ್ತುತಿಗಳನ್ನು ಹಾಡುವೆನು;
ಕೀರ್ತನೆಗಳು 75 : 10 (KNV)
ದುಷ್ಟರ ಕೊಂಬುಗಳನ್ನೆಲ್ಲಾ ಕಡಿದುಬಿಡುವೆನು; ಆದರೆ ನೀತಿವಂತರ ಕೊಂಬುಗಳು ಎತ್ತಲ್ಪಡುವವು.

1 2 3 4 5 6 7 8 9 10