ಕೀರ್ತನೆಗಳು 76 : 1 (KNV)
ದೇವರು ಯೆಹೂದದಲ್ಲಿ ಪ್ರಸಿದ್ಧವಾಗಿದ್ದಾನೆ; ಇಸ್ರಾಯೇಲಿನಲ್ಲಿ ಆತನ ಹೆಸರು ದೊಡ್ಡದಾಗಿದೆ.
ಕೀರ್ತನೆಗಳು 76 : 2 (KNV)
ಸಾಲೇಮಿನಲ್ಲಿ ಆತನ ಗುಡಾರವೂ ಚೀಯೋನಿನಲ್ಲಿ ಆತನ ವಾಸಸ್ಥಾನವೂ ಉಂಟು.
ಕೀರ್ತನೆಗಳು 76 : 3 (KNV)
ಅಲ್ಲಿಯೇ ಬಿಲ್ಲಿನ ಬಾಣಗಳನ್ನೂ ಗುರಾಣಿಯನ್ನೂ ಕತ್ತಿಯನ್ನೂ ಯುದ್ಧವನ್ನೂ ಮುರಿದುಬಿಟ್ಟನು. ಸೆಲಾ.
ಕೀರ್ತನೆಗಳು 76 : 4 (KNV)
ಬೇಟೆಗಳಿರುವ ಬೆಟ್ಟಗಳಿಗಿಂತ ನೀನು ಪ್ರಕಾಶವು ಳ್ಳವನೂ ಶ್ರೇಷ್ಠನೂ ಆಗಿದ್ದೀ.
ಕೀರ್ತನೆಗಳು 76 : 5 (KNV)
ಬಲವಾದ ಹೃದಯ ದವರು ಕೊಳ್ಳೆ ಮಾಡಲ್ಪಟ್ಟಿದ್ದಾರೆ, ತೂಕಡಿಸಿ ನಿದ್ರೆ ಹೋಗಿದ್ದಾರೆ; ಪರಾಕ್ರಮಿಗಳಲ್ಲಿ ಒಬ್ಬನೂ ತನ್ನ ಕೈಗ ಳನ್ನು ಕಂಡುಕೊಳ್ಳಲಿಲ್ಲ.
ಕೀರ್ತನೆಗಳು 76 : 6 (KNV)
ಓ ಯಾಕೋಬನ ದೇವರೇ, ನಿನ್ನ ಗದರಿಕೆಯಿಂದ ರಥವೂ ಕುದುರೆಯೂ ಗಾಢ ನಿದ್ರೆಯಲ್ಲಿ ಬಿದ್ದಿವೆ.
ಕೀರ್ತನೆಗಳು 76 : 7 (KNV)
ನೀನು, ನೀನೇ, ಭಯಹುಟ್ಟಿಸುತ್ತೀ; ನೀನು ಒಂದು ಸಾರಿ ಕೋಪಿಸಿಕೊಂಡರೆ ನಿನ್ನ ಮುಂದೆ ನಿಲ್ಲುವವನಾರು?
ಕೀರ್ತನೆಗಳು 76 : 8 (KNV)
ಆಕಾಶದಿಂದ ನ್ಯಾಯತೀರ್ವಿಕೆಯನ್ನು ಕೇಳಮಾಡಿದಿ.
ಕೀರ್ತನೆಗಳು 76 : 9 (KNV)
ದೇವರು ನ್ಯಾಯತೀರಿಸುವದಕ್ಕೂ ಭೂಮಿಯ ದೀನರೆಲ್ಲರನ್ನು ರಕ್ಷಿಸುವದಕ್ಕೂ ಏಳುವಾಗ ಭೂಮಿಯ ನಿವಾಸಿಗಳು ಭಯಪಟ್ಟು ಸ್ತಬ್ಧ ರಾದರು. ಸೆಲಾ.
ಕೀರ್ತನೆಗಳು 76 : 10 (KNV)
ನಿಶ್ಚಯವಾಗಿ ಮನುಷ್ಯನ ಕೋಪವು ನಿನ್ನನ್ನು ಕೊಂಡಾಡುವದು; ಕೋಪಶೇಷವನ್ನು ನೀನು ಬಿಗಿ ಹಿಡಿದು ಕೊಳ್ಳುವಿ.
ಕೀರ್ತನೆಗಳು 76 : 11 (KNV)
ನಿಮ್ಮ ದೇವರಾದ ಕರ್ತನಿಗೆ ಪ್ರಮಾಣಮಾಡಿ ಸಲ್ಲಿಸಿರಿ; ಆತನ ಸುತ್ತಲಿರುವವ ರೆಲ್ಲರು ಭಯಪಡಿಸುವಾತನಿಗೆ ಕಾಣಿಕೆಗಳನ್ನು ತರಲಿ.
ಕೀರ್ತನೆಗಳು 76 : 12 (KNV)
ಆತನು ಪ್ರಧಾನರ ಪ್ರಾಣವನ್ನು ತೆಗೆದು ಹಾಕು ತ್ತಾನೆ; ಭೂಮಿಯ ಅರಸುಗಳಿಗೆ ಭಯಂಕರ ನಾಗಿದ್ದಾನೆ.
❮
❯
1
2
3
4
5
6
7
8
9
10
11
12