ಕೀರ್ತನೆಗಳು 81 : 1 (KNV)
ನಮ್ಮ ಬಲವಾಗಿರುವ ದೇವರಿಗೆ ಗಟ್ಟಿಯಾದ ಧ್ವನಿಯಿಂದ ಹಾಡಿರಿ; ಯಾಕೋಬನ ದೇವರಿಗೆ ಜಯಧ್ವನಿಗೈಯಿರಿ.
ಕೀರ್ತನೆಗಳು 81 : 2 (KNV)
ಕೀರ್ತನೆಯನ್ನು ಎತ್ತಿರಿ; ದಮ್ಮಡಿಯನ್ನೂ ರಮ್ಯವಾದ ಕಿನ್ನರಿಯನ್ನೂ ವೀಣೆಯ ಸಂಗಡ ತನ್ನಿರಿ.
ಕೀರ್ತನೆಗಳು 81 : 3 (KNV)
ಅಮಾವಾಸ್ಯೆಯಲ್ಲಿಯೂ ನೇಮಕವಾದ ಪರಿಶುದ್ಧ ಹಬ್ಬದ ದಿವಸದಲ್ಲಿಯೂ ತುತೂರಿಯನ್ನು ಊದಿರಿ.
ಕೀರ್ತನೆಗಳು 81 : 4 (KNV)
ಅದು ಇಸ್ರಾಯೇಲಿಗೆ ಕಟ್ಟಳೆಯೇ; ಯಾಕೋಬನ ದೇವರ ನ್ಯಾಯಪ್ರಮಾಣವೇ;
ಕೀರ್ತನೆಗಳು 81 : 5 (KNV)
ನಾನು ತಿಳಿಯದ ಭಾಷೆಯನ್ನು ಕೇಳಿದ ಐಗುಪ್ತದೇಶದಲ್ಲೆಲ್ಲಾ ಆತನು ಹೊರಟಾಗ ಅದನ್ನು ಯೋಸೇಫನಲ್ಲಿ ಸಾಕ್ಷಿಯಾಗಿ ನೇಮಿಸಿದನು.
ಕೀರ್ತನೆಗಳು 81 : 6 (KNV)
ಅವನ ಹೆಗಲಿನಿಂದ ಹೊರೆಯನ್ನು ತೊಲಗಿಸಿದನು; ಅವನ ಕೈಗಳು ಪುಟ್ಟಿಗಳಿಂದ ಬಿಡುಗಡೆ ಹೊಂದಿದವು.
ಕೀರ್ತನೆಗಳು 81 : 7 (KNV)
ಇಕ್ಕಟ್ಟಿನಲ್ಲಿ ಕರೆದಿ; ಆಗ ನಾನು ನಿನ್ನನ್ನು ತಪ್ಪಿಸಿಬಿಟ್ಟೆನು; ಗುಡುಗಿನ ಮರೆಯಲ್ಲಿ ನಿನಗೆ ಉತ್ತರಕೊಟ್ಟು ಮೆರಿಬಾ ನೀರುಗಳ ಬಳಿಯಲ್ಲಿ ನಿನ್ನನ್ನು ಶೋಧಿಸಿದೆನು ಸೆಲಾ.
ಕೀರ್ತನೆಗಳು 81 : 8 (KNV)
ಓ ನನ್ನ ಜನರೇ, ಕೇಳಿರಿ; ಓ ಇಸ್ರಾಯೇಲೇ, ನೀನು ನನ್ನನ್ನು ಕೇಳಿದರೆ ನಾನು ನಿನಗೆ ಸಾಕ್ಷಿ ಕೊಡು ವೆನು.
ಕೀರ್ತನೆಗಳು 81 : 9 (KNV)
ನಿನ್ನಲ್ಲಿ ಅನ್ಯದೇವರು ಇರಬಾರದು; ಪರ ದೇವರಿಗೆ ಅಡ್ಡಬೀಳಬಾರದು.
ಕೀರ್ತನೆಗಳು 81 : 10 (KNV)
ಐಗುಪ್ತದೇಶದಿಂದ ನಿನ್ನನ್ನು ಹೊರಗೆ ತಂದ ನಿನ್ನ ದೇವರಾದ ಕರ್ತನು ನಾನೇ; ನಿನ್ನ ಬಾಯನ್ನು ಅಗಲವಾಗಿ ತೆರೆ; ಆಗ ನಾನು ಅದನ್ನು ತುಂಬಿಸುವೆನು.
ಕೀರ್ತನೆಗಳು 81 : 11 (KNV)
ಆದರೆ ನನ್ನ ಜನರು ನನ್ನ ಸ್ವರವನ್ನು ಕೇಳಲಿಲ್ಲ; ಇಸ್ರಾಯೇಲು ನನ್ನ ಮೇಲೆ ಮನಸ್ಸಿಡಲಿಲ್ಲ.
ಕೀರ್ತನೆಗಳು 81 : 12 (KNV)
ಆದದರಿಂದ ಅವರ ಹೃದಯದ ದುರಾಶೆಗೆ ಅವರನ್ನು ನಾನು ಒಪ್ಪಿಸಿದೆನು; ಅವರು ತಮ್ಮ ಆಲೋಚನೆಗಳಲ್ಲಿ ನಡೆದುಕೊಂಡರು.
ಕೀರ್ತನೆಗಳು 81 : 13 (KNV)
ಹಾ, ನನ್ನ ಜನರು ನನ್ನ ಮಾತನ್ನು ಕೇಳಿ, ಇಸ್ರಾಯೇಲು ನನ್ನ ಮಾರ್ಗದಲ್ಲಿ ನಡೆದುಕೊಂಡರೆ,
ಕೀರ್ತನೆಗಳು 81 : 14 (KNV)
ತೀವ್ರವಾಗಿ ಅವರ ಶತ್ರುಗಳನ್ನು ಅಣಗಿಸುವೆನು; ಅವರ ವೈರಿಗಳ ಮೇಲೆ ನನ್ನ ಕೈಯನ್ನು ತಿರುಗಿಸುವೆನು.
ಕೀರ್ತನೆಗಳು 81 : 15 (KNV)
ಕರ್ತನನ್ನು ಹಗೆಮಾಡುವವರು ಆತನಿಗೆ ತಮ್ಮನ್ನು ತಾವೇ ಒಪ್ಪಿಸಿಕೊಟ್ಟಿದ್ದರೆ ಅವರ ಕಾಲವು ಎಂದೆಂದಿಗೂ ಇರುತ್ತಿತ್ತು.ಇದಲ್ಲದೆ ಆತನು ಉತ್ತಮವಾದ ಗೋಧಿ ಯಿಂದ ಅವರಿಗೆ ಊಟಕ್ಕೆ ಕೊಟ್ಟು ಬಂಡೆಯೊಳಗಿನ ಜೇನಿನಿಂದ ತೃಪ್ತಿಪಡಿಸುವನು.
ಕೀರ್ತನೆಗಳು 81 : 16 (KNV)
ಇದಲ್ಲದೆ ಆತನು ಉತ್ತಮವಾದ ಗೋಧಿ ಯಿಂದ ಅವರಿಗೆ ಊಟಕ್ಕೆ ಕೊಟ್ಟು ಬಂಡೆಯೊಳಗಿನ ಜೇನಿನಿಂದ ತೃಪ್ತಿಪಡಿಸುವನು.

1 2 3 4 5 6 7 8 9 10 11 12 13 14 15 16

BG:

Opacity:

Color:


Size:


Font: