ಕೀರ್ತನೆಗಳು 89 : 1 (KNV)
ಕರ್ತನ ಕರುಣೆಗಳನ್ನು ಯುಗಯುಗಕ್ಕೂ ಹಾಡುವೆನು; ತಲತಲಾಂತರಕ್ಕೂ ನಿನ್ನ ನಂಬಿಗಸ್ತಿಕೆಯನ್ನು ನನ್ನ ಬಾಯಿಂದ ತಿಳಿಯಪಡಿ ಸುವೆನು.
ಕೀರ್ತನೆಗಳು 89 : 2 (KNV)
ಎಂದೆಂದಿಗೂ ಕರುಣೆಯು ಸ್ಥಾಪಿಸಲ್ಪಡು ವದು; ಆಕಾಶಗಳಲ್ಲಿಯೂ ನಿನ್ನ ನಂಬಿಗಸ್ತಿಕೆಯನ್ನು ಸ್ಥಿರಪಡಿಸುವಿ ಎಂದು ಹೇಳಿದ್ದೇನೆ.
ಕೀರ್ತನೆಗಳು 89 : 3 (KNV)
ನಾನು ಆದು ಕೊಂಡವನೊಂದಿಗೆ ಒಡಂಬಡಿಕೆ ಮಾಡಿದ್ದೇನೆ; ನನ್ನ ಸೇವಕನಾದ ದಾವೀದನಿಗೆ ಆಣೆ ಇಟ್ಟು ಹೇಳಿದ್ದೇ ನಂದರೆ--
ಕೀರ್ತನೆಗಳು 89 : 4 (KNV)
ಎಂದೆಂದಿಗೂ ನಿನ್ನ ಸಂತತಿಯನ್ನು ಸ್ಥಿರ ಪಡಿಸುವೆನು; ತಲತಲಾಂತರಕ್ಕೂ ನಿನ್ನ ಸಿಂಹಾಸನವನ್ನು ಕಟ್ಟುವೆನು ಸೆಲಾ.
ಕೀರ್ತನೆಗಳು 89 : 5 (KNV)
ಇದಲ್ಲದೆ, ಆಕಾಶಗಳು ಓ ಕರ್ತನೇ, ನಿನ್ನ ಅದ್ಭುತಗಳನ್ನು ಪರಿಶುದ್ಧರ ಸಭೆಯಲ್ಲಿ ನಿನ್ನ ನಂಬಿಗಸ್ತಿಕೆಯನ್ನು ಸಹ ಕೊಂಡಾಡುವವು.
ಕೀರ್ತನೆಗಳು 89 : 6 (KNV)
ಪರ ಲೋಕದಲ್ಲಿ ಕರ್ತನಿಗೆ ಸಮಾನವಾದವನು ಯಾರು? ಪರಾಕ್ರಮಶಾಲಿಗಳ ಮಕ್ಕಳಲ್ಲಿ ಕರ್ತನಿಗೆ ಸಮಾನನಾದವನು ಯಾರು?
ಕೀರ್ತನೆಗಳು 89 : 7 (KNV)
ದೇವರು ಪರಿಶುದ್ಧರ ಸಭೆಯಲ್ಲಿ ಬಹಳ ಭೀಕರನೂ ತನ್ನ ಸುತ್ತಲಿರುವವರೆಲ್ಲರಿಗೆ ಭಯಂ ಕರನೂ ಆಗಿದ್ದಾನೆ.
ಕೀರ್ತನೆಗಳು 89 : 8 (KNV)
ಸೈನ್ಯಗಳ ದೇವರಾದ ಕರ್ತನೇ, ನಿನ್ನ ಹಾಗೆ ಶಕ್ತನಾದ ಕರ್ತನು ಯಾರು? ಇಲ್ಲವೆ ನಿನ್ನ ನಂಬಿಗಸ್ತಿಕೆಯು ನಿನ್ನ ಸುತ್ತಲೂ ಅದೆ.
ಕೀರ್ತನೆಗಳು 89 : 9 (KNV)
ನೀನು ಸಮುದ್ರದ ಉಬ್ಬರವನ್ನು ಆಳುತ್ತೀ; ಅದರ ತೆರೆಗಳು ಏಳುವಾಗ ಅವುಗಳನ್ನು ಸುಮ್ಮನಿರಿಸುತ್ತೀ.
ಕೀರ್ತನೆಗಳು 89 : 10 (KNV)
ಕೊಲ್ಲ ಲ್ಪಟ್ಟ ಒಬ್ಬನಂತೆ ನೀನು ರಾಹಬನ್ನು ತುಂಡಾಗುವಂತೆ ಒಡೆದಿದ್ದೀ. ನಿನ್ನ ಬಲದ ತೋಳಿನಿಂದ ನಿನ್ನ ಶತ್ರು ಗಳನ್ನು ಚದರಿಸಿ ಬಿಟ್ಟಿದ್ದೀ.
ಕೀರ್ತನೆಗಳು 89 : 11 (KNV)
ಆಕಾಶಗಳು ನಿನ್ನವು; ಭೂಮಿಯು ಸಹ ನಿನ್ನದು; ಲೋಕವನ್ನೂ ಅದರ ಪೂರ್ಣತೆಯನ್ನೂ ನೀನು ಉಂಟುಮಾಡಿದ್ದೀ.
ಕೀರ್ತನೆಗಳು 89 : 12 (KNV)
ಉತ್ತರವನ್ನೂ ದಕ್ಷಿಣವನ್ನೂ ನೀನೇ ನಿರ್ಮಿಸಿದ್ದೀ; ತಾಬೋರೂ ಹೆರ್ಮೋನೂ ನಿನ್ನ ಹೆಸರಿನಲ್ಲಿ ಉತ್ಸಾಹ ಧ್ವನಿಗೈಯುತ್ತವೆ.
ಕೀರ್ತನೆಗಳು 89 : 13 (KNV)
ನಿನಗೆ ಪರಾಕ್ರಮವುಳ್ಳ ತೋಳು ಉಂಟು; ಕೈ ಬಲವುಳ್ಳದ್ದು. ನಿನ್ನ ಬಲಗೈ ಉನ್ನತವಾ ದದ್ದು.
ಕೀರ್ತನೆಗಳು 89 : 14 (KNV)
ನೀತಿಯೂ ನ್ಯಾಯವೂ ನಿನ್ನ ಸಿಂಹಾಸನದ ಸ್ಥಳವಾಗಿದೆ ಕೃಪೆಯೂ ಸತ್ಯವೂ ನಿನ್ನ ಮುಂದೆ ಹೋಗುತ್ತವೆ;
ಕೀರ್ತನೆಗಳು 89 : 15 (KNV)
ಉತ್ಸಾಹ ಧ್ವನಿಯನ್ನು ತಿಳಿದ ಜನರು ಧನ್ಯರು; ಕರ್ತನೇ, ನಿನ್ನ ಮುಖದ ಬೆಳಕಿನಲ್ಲಿ ಅವರು ನಡೆದುಕೊಳ್ಳುವರು.
ಕೀರ್ತನೆಗಳು 89 : 16 (KNV)
ನಿನ್ನ ಹೆಸರಿನಿಂದ ದಿನವೆಲ್ಲಾ ಉಲ್ಲಾಸಪಟ್ಟು ನಿನ್ನ ನೀತಿಯಲ್ಲಿ ಅವರು ಉನ್ನತಕ್ಕೇರು ವರು.
ಕೀರ್ತನೆಗಳು 89 : 17 (KNV)
ಅವರ ಬಲದ ಮಹಿಮೆಯು ನೀನೇ ಮತ್ತು ನಿನ್ನ ಕಟಾಕ್ಷದಿಂದ ನಮ್ಮ ಕೊಂಬು ಉನ್ನತವಾಗುವದು.
ಕೀರ್ತನೆಗಳು 89 : 18 (KNV)
ನಮ್ಮ ಗುರಾಣಿಯು ಕರ್ತನೇ; ನಮ್ಮ ಅರಸನು ಇಸ್ರಾಯೇಲಿನ ಪರಿಶುದ್ಧನೇ.
ಕೀರ್ತನೆಗಳು 89 : 19 (KNV)
ಆಗ ದರ್ಶನದಲ್ಲಿ ನಿನ್ನ ಪರಿಶುದ್ಧನ ಸಂಗಡ ಮಾತಾಡಿ ಹೇಳಿದ್ದೇನಂದರೆ --ಪರಾಕ್ರಮಶಾಲಿಯ ಮೇಲೆ ಸಹಾಯವನ್ನು ಇಟ್ಟಿ ದ್ದೇನೆ. ಆಯಲ್ಪಟ್ಟವನನ್ನು ಜನರೊಳಗಿಂದ ಉನ್ನತಕ್ಕೇರಿ ಸಿದ್ದೇನೆ.
ಕೀರ್ತನೆಗಳು 89 : 20 (KNV)
ನನ್ನ ಸೇವಕನಾದ ದಾವೀದನನ್ನು ಕಂಡು ಕೊಂಡಿದ್ದೇನೆ; ನನ್ನ ಪರಿಶುದ್ಧ ಎಣ್ಣೆಯಿಂದ ಅವನನ್ನು ಅಭಿಷೇಕಿಸಿದ್ದೇನೆ.
ಕೀರ್ತನೆಗಳು 89 : 21 (KNV)
ಅವನ ಸಂಗಡಲೇ ನನ್ನ ಕೈ ಸ್ಥಿರವಾಗಿರುವದು; ನನ್ನ ತೋಳು ಅವನನ್ನು ಬಲಪಡಿಸು ವುದು.
ಕೀರ್ತನೆಗಳು 89 : 22 (KNV)
ಶತ್ರುವು ಅವನನ್ನು ಬಲಾತ್ಕಾರ ಮಾಡನು; ಯಾವ ದುಷ್ಟನೂ ಅವನನ್ನು ಹಿಂಸೆ ಪಡಿಸನು.
ಕೀರ್ತನೆಗಳು 89 : 23 (KNV)
ಇದ ಲ್ಲದೆ ಅವನ ಮುಂದೆ ವೈರಿಗಳನ್ನು ಹೊಡೆದು ಬಿಡು ವೆನು; ಅವನ ಹಗೆಯವರನ್ನು ಸಂಕಟಪಡಿಸುವೆನು.
ಕೀರ್ತನೆಗಳು 89 : 24 (KNV)
ಆದರೆ ನನ್ನ ನಂಬಿಗಸ್ತಿಕೆಯೂ ಕರುಣೆಯೂ ಅವನ ಸಂಗಡ ಇರುವವು. ನನ್ನ ಹೆಸರಿನಲ್ಲಿ ಅವನ ಕೊಂಬು ಉನ್ನತವಾಗುವದು.
ಕೀರ್ತನೆಗಳು 89 : 25 (KNV)
ಸಮುದ್ರದಲ್ಲಿ ಅವನ ಕೈ ಯನ್ನೂ ನದಿಗಳಲ್ಲಿ ಅವನ ಬಲಗೈಯನ್ನೂ ಇರಿಸು ವೆನು.
ಕೀರ್ತನೆಗಳು 89 : 26 (KNV)
ಅವನು--ನೀನು ನನ್ನ ತಂದೆಯೂ ದೇವರೂ ರಕ್ಷಣೆಯ ಬಂಡೆಯೂ ಎಂದು ನನಗೆ ಮೊರೆಯಿಡು ವನು.
ಕೀರ್ತನೆಗಳು 89 : 27 (KNV)
ನಾನು ಅವನನ್ನು ನನ್ನ ಚೊಚ್ಚಲ ಮಗನ ನ್ನಾಗಿಯೂ ಭೂಮಿಯ ಅರಸರಿಗಿಂತ ಉನ್ನತನನ್ನಾ ಗಿಯೂ ಮಾಡುವೆನು.
ಕೀರ್ತನೆಗಳು 89 : 28 (KNV)
ಎಂದೆಂದಿಗೂ ಅವನಿಗೋ ಸ್ಕರ ನನ್ನ ಕರುಣೆಯನ್ನು ಕಾದಿಡುವೆನು. ನನ್ನ ಒಡಂಬಡಿಕೆಯು ಅವನೊಂದಿಗೆ ದೃಢವಾಗಿರುವದು.
ಕೀರ್ತನೆಗಳು 89 : 29 (KNV)
ಅವನ ಸಂತತಿ ಯನ್ನು ಸಹ ಎಂದೆಂದಿಗೂ ಅವನ ಸಿಂಹಾಸನವನ್ನು ಆಕಾಶದ ದಿವಸಗಳ ಹಾಗೆಯೂ ಮಾಡುವೆನು.
ಕೀರ್ತನೆಗಳು 89 : 30 (KNV)
ಅವನ ಮಕ್ಕಳು ನನ್ನ ನ್ಯಾಯ ಪ್ರಮಾಣವನ್ನು ಬಿಟ್ಟು, ನನ್ನ ನ್ಯಾಯಗಳಲ್ಲಿ ನಡೆಯದೇ ಹೋದರೆ,
ಕೀರ್ತನೆಗಳು 89 : 31 (KNV)
ಅವರು ನನ್ನ ನೇಮಕಗಳನ್ನು ಮುರಿದು ನನ್ನ ಆಜ್ಞೆಗಳನ್ನು ಕೈಕೊಳ್ಳದೇ ಹೋದರೆ,
ಕೀರ್ತನೆಗಳು 89 : 32 (KNV)
ಕೋಲಿ ನಿಂದ ಅವರ ದ್ರೋಹವನ್ನೂ ಪೆಟ್ಟುಗಳಿಂದ ಅವರ ಅಕ್ರಮವನ್ನೂ ದಂಡಿಸುವೆನು.
ಕೀರ್ತನೆಗಳು 89 : 33 (KNV)
ಆದಾಗ್ಯೂ ನನ್ನ ಪ್ರೀತಿ ಕರುಣೆಯನ್ನು ಅವನಿಂದ ಸಂಪೂರ್ಣವಾಗಿ ತೊಲಗಿಸೆನು; ಇಲ್ಲವೇ ನನ್ನ ನಂಬಿಗಸ್ತಿಕೆಯನ್ನು ವ್ಯರ್ಥ ಮಾಡೆನು.
ಕೀರ್ತನೆಗಳು 89 : 34 (KNV)
ನನ್ನ ಒಡಂಬಡಿಕೆಯನ್ನು ನಾನು ಮುರಿ ಯೆನು; ಇಲ್ಲವೆ ನನ್ನ ತುಟಿಗಳಿಂದ ಹೊರಟದ್ದನ್ನು ಬದಲಾಯಿಸೆನು.
ಕೀರ್ತನೆಗಳು 89 : 35 (KNV)
ಒಂದು ಸಾರಿ ನನ್ನ ಪರಿಶುದ್ಧತ್ವ ದಿಂದ ಆಣೆಯಿಟ್ಟು ಹೇಳಿದ್ದೇನೆ; ದಾವೀದನಿಗೆ ಸುಳ್ಳಾ ಡೆನು.
ಕೀರ್ತನೆಗಳು 89 : 36 (KNV)
ಅವನ ಸಂತತಿಯು ಯುಗ ಯುಗಕ್ಕೂ ಅವನ ಸಿಂಹಾಸನವು ನನ್ನ ಮುಂದೆ ಸೂರ್ಯನ ಹಾಗೆಯೂ ಇರುವದು.
ಕೀರ್ತನೆಗಳು 89 : 37 (KNV)
ಚಂದ್ರನ ಹಾಗೆ ಅದು ಯುಗಯುಗಕ್ಕೂ, ಸ್ಥಿರವಾಗಿರುವದು; ಪರಲೋಕದಲ್ಲಿ ರುವ ಸಾಕ್ಷಿಯ ಹಾಗೆ ನಂಬಿಕೆ ಯುಳ್ಳದ್ದಾಗಿರುವದು ಸೆಲಾ.
ಕೀರ್ತನೆಗಳು 89 : 38 (KNV)
ಆದರೆ ನೀನು ಅಸಹ್ಯಿಸಿಬಿಟ್ಟು ತಿರಸ್ಕರಿಸಿ ನಿನ್ನ ಅಭಿಷಕ್ತನ ಮೇಲೆ ಉಗ್ರನಾದಿ;
ಕೀರ್ತನೆಗಳು 89 : 39 (KNV)
ನಿನ್ನ ಸೇವಕನ ಒಡಂಬಡಿಕೆಯನ್ನು ಅಸಡ್ಡೆಮಾಡಿ, ಅವನ ಕಿರೀಟವನ್ನು ನೆಲಕ್ಕೆ ಹಾಕಿ ಹೊಲೆ ಮಾಡಿದ್ದೀ.
ಕೀರ್ತನೆಗಳು 89 : 40 (KNV)
ಅವನ ಬೇಲಿಗಳ ನ್ನೆಲ್ಲಾ ಮುರಿದು ಅವನ ಕೋಟೆಗಳನ್ನು ಹಾಳು ಮಾಡಿದ್ದೀ.
ಕೀರ್ತನೆಗಳು 89 : 41 (KNV)
ಮಾರ್ಗಸ್ಥರೆಲ್ಲರು ಅವನನ್ನು ಕೊಳ್ಳೇ ಹೊಡೆಯುತ್ತಾರೆ; ತನ್ನ ನೆರೆಯವರಿಗೆ ಅವನು ನಿಂದೆ ಯಾಗಿದ್ದಾನೆ.
ಕೀರ್ತನೆಗಳು 89 : 42 (KNV)
ಅವನ ವೈರಿಗಳ ಬಲಗೈಯನ್ನು ಉನ್ನತ ಮಾಡಿದ್ದೀ; ಶತ್ರುಗಳೆಲ್ಲರನ್ನು ಸಂತೋಷಪಡಿಸಿದ್ದೀ.
ಕೀರ್ತನೆಗಳು 89 : 43 (KNV)
ಅವನ ಕತ್ತಿಯ ಬಾಯನ್ನು ಹಿಂದಿರುಗಿಸಿ, ಯುದ್ಧ ದಲ್ಲಿ ಅವನನ್ನು ನಿಲ್ಲುವಂತೆ ಮಾಡಲಿಲ್ಲ.
ಕೀರ್ತನೆಗಳು 89 : 44 (KNV)
ಅವನ ಪ್ರಭೆಯನ್ನು ತಡೆದಿ; ಅವನ ಸಿಂಹಾಸನವನ್ನು ನೆಲಕ್ಕೆ ಹಾಕಿದ್ದೀ.
ಕೀರ್ತನೆಗಳು 89 : 45 (KNV)
ಅವನ ಯೌವನದ ದಿವಸಗಳನ್ನು ಕಡಿಮೆಮಾಡಿ, ನಾಚಿಕೆಯಿಂದ ಅವನನ್ನು ಮುಚ್ಚಿದ್ದೀ ಸೆಲಾ.
ಕೀರ್ತನೆಗಳು 89 : 46 (KNV)
ಕರ್ತನೇ, ಎಷ್ಟರ ವರೆಗೆ? ಸದಾಕಾಲಕ್ಕೆ ನೀನು ಮರೆಯಾಗಿರುವಿ? ನಿನ್ನ ಸಿಟ್ಟು ಬೆಂಕಿಯ ಹಾಗೆ ಉರಿಯುವದೋ?
ಕೀರ್ತನೆಗಳು 89 : 47 (KNV)
ನನ್ನ ಆಯುಸ್ಸು ಎಷ್ಟು ಕಡಿಮೆ ಯೆಂದು ಜ್ಞಾಪಕಮಾಡಿಕೋ; ಎಲ್ಲಾ ಮನುಷ್ಯರನ್ನು ಯಾಕೆ ವ್ಯರ್ಥವಾಗಿ ನಿರ್ಮಿಸಿದ್ದೀ?
ಕೀರ್ತನೆಗಳು 89 : 48 (KNV)
ಮರಣವನ್ನು ನೋಡದೆ ಬದುಕುವಂಥ, ಸಮಾಧಿಯ ವಶದಿಂದ ತನ್ನ ಪ್ರಾಣವನ್ನು ತಪ್ಪಿಸಿಕೊಳ್ಳುವಂಥ, ಪುರುಷನು ಯಾರು ಸೆಲಾ.
ಕೀರ್ತನೆಗಳು 89 : 49 (KNV)
ಕರ್ತನೇ, ನಿನ್ನ ಸತ್ಯದಲ್ಲಿ ನೀನು ದಾವೀದನಿಗೆ ಆಣೆ ಇಟ್ಟ ನಿನ್ನ ಮುಂಚಿನ ಪ್ರೀತಿ ಕರುಣೆಯು ಎಲ್ಲಿ?
ಕೀರ್ತನೆಗಳು 89 : 50 (KNV)
ಕರ್ತನೇ, ನಿನ್ನ ಸೇವಕರ ನಿಂದೆ ಯನ್ನು, ಎಲ್ಲಾ ಪರಾಕ್ರಮಿಗಳ ನಿಂದೆಯನ್ನು ನಾನು ಹೇಗೆ ನನ್ನ ಎದೆಯಲ್ಲಿ ಹೊತ್ತೆನೆಂದೂ ಜ್ಞಾಪಕ ಮಾಡಿಕೋ.
ಕೀರ್ತನೆಗಳು 89 : 51 (KNV)
ಕರ್ತನೇ, ನಿನ್ನ ಶತ್ರುಗಳು ನಿಂದಿಸುತ್ತಾ ರಲ್ಲಾ? ನಿನ್ನ ಅಭಿಷಿಕ್ತನ ಹೆಜ್ಜೆಗಳನ್ನು ನಿಂದಿಸುತ್ತಾ ರಲ್ಲಾ?
ಕೀರ್ತನೆಗಳು 89 : 52 (KNV)
ಕರ್ತನಿಗೆ ಯುಗಯುಗಕ್ಕೂ ಸ್ತುತಿಯಾಗಲಿ. ಆಮೆನ್, ಅಮೆನ್.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42 43 44 45 46 47 48 49 50 51 52