ಕೀರ್ತನೆಗಳು 92 : 1 (KNV)
ಕರ್ತನನ್ನು ಕೊಂಡಾಡುವದೂ; ಮಹೋನ್ನತನೇ, ನಿನ್ನ ಹೆಸರನ್ನು ಕೀರ್ತಿಸುವದೂ
ಕೀರ್ತನೆಗಳು 92 : 2 (KNV)
ಬೆಳಿಗ್ಗೆ ನಿನ್ನ ಪ್ರೀತಿ ಕರುಣೆಯನ್ನೂ ಪ್ರತಿ ರಾತ್ರಿ ಯಲ್ಲಿ ನಿನ್ನ ನಂಬಿಗಸ್ತಿಕೆಯನ್ನೂ
ಕೀರ್ತನೆಗಳು 92 : 3 (KNV)
ಹತ್ತು ತಂತಿ ವೀಣೆ ಯಿಂದಲೂ ವಾದ್ಯದಿಂದಲೂ ಕಿನ್ನರಿಯ ಘನ ಸ್ವರ ದಿಂದಲೂ ತಿಳಿಸುವದು ಒಳ್ಳೇದು.
ಕೀರ್ತನೆಗಳು 92 : 4 (KNV)
ಕರ್ತನೇ, ನಿನ್ನ ಕ್ರಿಯೆಯಿಂದ ನನ್ನನ್ನು ಸಂತೋಷ ಪಡಿಸಿದ್ದೀ. ನಿನ್ನ ಕೈಕೆಲಸಗಳಲ್ಲಿ ನಾನು ಜಯ ಧ್ವನಿಗೈಯುತ್ತೇನೆ.
ಕೀರ್ತನೆಗಳು 92 : 5 (KNV)
ಕರ್ತನೇ, ನಿನ್ನ ಕೆಲಸಗಳು ಎಷ್ಟೋ ದೊಡ್ಡವು! ನಿನ್ನ ಯೋಚನೆಗಳು ಬಹಳ ಆಳವಾಗಿವೆ.
ಕೀರ್ತನೆಗಳು 92 : 6 (KNV)
ಇದನ್ನು ಪಶುಪ್ರಾಯದವನಾದ ಮೂರ್ಖನು ಅರಿಯನು. ಇಲ್ಲವೆ ಹುಚ್ಚನು ತಿಳಿಯನು.
ಕೀರ್ತನೆಗಳು 92 : 7 (KNV)
ದುಷ್ಟರು ಚಿಗುರುವದು ಮತ್ತು ಅಕ್ರಮಗಾರರು ವೃದ್ಧಿಯಾಗು ವದು ಅವರು ಎಂದೆಂದಿಗೂ ನಿರ್ಮೂಲವಾಗುವದ ಕ್ಕಾಗಿಯೇ.
ಕೀರ್ತನೆಗಳು 92 : 8 (KNV)
ಆದರೆ ಕರ್ತನೇ, ಎಂದೆಂದಿಗೂ ನೀನು ಉನ್ನತನಾಗಿದ್ದೀ;
ಕೀರ್ತನೆಗಳು 92 : 9 (KNV)
ಇಗೋ, ಓ ಕರ್ತನೇ, ನಿನ್ನ ಶತ್ರು ಗಳು, ಓ ಕರ್ತನೇ, ಇಗೋ, ನಿನ್ನ ಶತ್ರುಗಳು ನಾಶವಾಗುವರು; ಅಕ್ರಮ ಮಾಡುವವರೆಲ್ಲರು ಚದರಿ ಹೋಗುವರು.
ಕೀರ್ತನೆಗಳು 92 : 10 (KNV)
ಆದರೆ ನೀನು ನನ್ನ ಕೊಂಬನ್ನು ಕಾಡುಕೋಣದ ಕೊಂಬಿನಹಾಗೆ ಎತ್ತುವಿ; ಹೊಸ ಎಣ್ಣೆಯಿಂದ ಅಭಿಷಿಕ್ತ ನಾಗುವೆನು.
ಕೀರ್ತನೆಗಳು 92 : 11 (KNV)
ನನ್ನ ಕಣ್ಣು ಸಹ ನನ್ನ ವಿರೋಧಿಗಳ ಮೇಲೆ ದೃಷ್ಟಿಸುವದು; ನನಗೆ ವಿರೋಧವಾಗಿ ಏಳುವ ದುರ್ಮಾರ್ಗಿಗಳನ್ನು ಕುರಿತು ನನ್ನ ಇಷ್ಟದಂತೆ ನನ್ನ ಕಿವಿಗಳು ಕೇಳುವವು.
ಕೀರ್ತನೆಗಳು 92 : 12 (KNV)
ನೀತಿವಂತನು ಖರ್ಜೂರ ಮರದ ಹಾಗೆ ಚಿಗುರುವನು; ಲೆಬನೋನಿ ನಲ್ಲಿರುವ ದೇವದಾರಿನ ಹಾಗೆ ಬೆಳೆಯುವನು.
ಕೀರ್ತನೆಗಳು 92 : 13 (KNV)
ಅವರು ಕರ್ತನ ಆಲಯದಲ್ಲಿ ನೆಡಲ್ಪಟ್ಟು ನಮ್ಮ ದೇವರ ಅಂಗಳಗಳಲ್ಲಿ ವೃದ್ಧಿಯಾಗುವರು.
ಕೀರ್ತನೆಗಳು 92 : 14 (KNV)
ಮುದಿ ಪ್ರಾಯದಲ್ಲಿಯೂ ಫಲ ಫಲಿಸುವರು. ಅವರು ಪುಷ್ಟಿಯಾಗಿ ವೃದ್ಧಿಯಾಗುವರು.
ಕೀರ್ತನೆಗಳು 92 : 15 (KNV)
ಕರ್ತನು ಯಥಾರ್ಥನೂ ನನ್ನ ಬಂಡೆಯೂ ಆಗಿದ್ದಾನೆ; ಆತನಲ್ಲಿ ಅನೀತಿ ಇರುವದಿಲ್ಲ.

1 2 3 4 5 6 7 8 9 10 11 12 13 14 15

BG:

Opacity:

Color:


Size:


Font: