ಕೀರ್ತನೆಗಳು 93 : 1 (KNV)
ಕರ್ತನು ಆಳುತ್ತಾನೆ, ಆತನು ಘನತೆಯನ್ನು ಹೊದ್ದುಕೊಂಡಿದ್ದಾನೆ; ಕರ್ತನು ಬಲ ದಿಂದ ಹೊದ್ದುಕೊಂಡಿದ್ದಾನೆ, ಅದರಿಂದ ತನ್ನ ನಡು ವನ್ನು ಕಟ್ಟಿಕೊಂಡಿದ್ದಾನೆ; ಲೋಕವು ಸಹ ಸ್ಥಿರವಾಗಿದೆ; ಕದಲುವದಿಲ್ಲ.
ಕೀರ್ತನೆಗಳು 93 : 2 (KNV)
ನಿನ್ನ ಸಿಂಹಾಸನವು ಪೂರ್ವಕಾಲ ದಿಂದ ಸ್ಥಿರವಾಗಿದೆ; ಯುಗಯುಗದಿಂದ ನೀನು ಇದ್ದೀ.
ಕೀರ್ತನೆಗಳು 93 : 3 (KNV)
ಕರ್ತನೇ, ಪ್ರವಾಹಗಳು ಎತ್ತಲ್ಪಟ್ಟಿವೆ; ಪ್ರವಾಹಗಳು ತಮ್ಮ ಶಬ್ದವನ್ನು ಎತ್ತಿವೆ; ಪ್ರವಾಹ ಗಳು ತಮ್ಮ ತೆರೆಗಳನ್ನು ಎತ್ತುತ್ತವೆ.
ಕೀರ್ತನೆಗಳು 93 : 4 (KNV)
ಬಹಳ ನೀರುಗಳ ಶಬ್ದಕ್ಕಿಂತಲೂ ಹೌದು, ಸಮುದ್ರದ ಬಲವಾದ ಅಲೆ ಗಳಿಗಿಂತಲೂ ಉನ್ನತದಲ್ಲಿ ಕರ್ತನು ಬಲಿಷ್ಠನಾಗಿ ದ್ದಾನೆ.ನಿನ್ನ ಸಾಕ್ಷಿಗಳು ಬಹಳ ನಿಶ್ಚಯವಾದವುಗಳು; ಓ ಕರ್ತನೇ, ಸದಾ ನಿನ್ನ ಮನೆಗೆ ಯೋಗ್ಯವಾದದ್ದು ಪರಿಶುದ್ಧತ್ವವೇ.
ಕೀರ್ತನೆಗಳು 93 : 5 (KNV)
ನಿನ್ನ ಸಾಕ್ಷಿಗಳು ಬಹಳ ನಿಶ್ಚಯವಾದವುಗಳು; ಓ ಕರ್ತನೇ, ಸದಾ ನಿನ್ನ ಮನೆಗೆ ಯೋಗ್ಯವಾದದ್ದು ಪರಿಶುದ್ಧತ್ವವೇ.

1 2 3 4 5

BG:

Opacity:

Color:


Size:


Font: