ಕೀರ್ತನೆಗಳು 97 : 1 (KNV)
ಕರ್ತನು ಆಳುತ್ತಾನೆ; ಭೂಮಿಯು ಉಲ್ಲಾಸಪಡಲಿ; ದ್ವೀಪಗಳ ಸಮೂಹವು ಸಂತೋ ಷಿಸಲಿ.
ಕೀರ್ತನೆಗಳು 97 : 2 (KNV)
ಮೇಘಗಳೂ ಕಾರ್ಗತ್ತಲೂ ಆತನ ಸುತ್ತಲು ಅವೆ; ನೀತಿಯೂ ನ್ಯಾಯವೂ ಆತನ ಸಿಂಹಾಸನದ ಸ್ಥಳವಾಗಿದೆ.
ಕೀರ್ತನೆಗಳು 97 : 3 (KNV)
ಬೆಂಕಿಯು ಆತನ ಮುಂದೆ ಹೋಗಿ ಆತನ ವೈರಿಗಳನ್ನು ಸುತ್ತಲೂ ದಹಿಸುವದು.
ಕೀರ್ತನೆಗಳು 97 : 4 (KNV)
ಆತನ ಮಿಂಚುಗಳು ಲೋಕವನ್ನು ಬೆಳಗಿಸುತ್ತವೆ; ಭೂಮಿಯು ನೋಡಿ, ನಡುಗುತ್ತದೆ.
ಕೀರ್ತನೆಗಳು 97 : 5 (KNV)
ಕರ್ತನ ಸನ್ನಿಧಿಯಲ್ಲಿ ಸಮಸ್ತ ಭೂಮಿಯು ಕರ್ತನ ಮುಂದೆ ಬೆಟ್ಟಗಳು ಮೇಣದ ಹಾಗೆ ಕರಗುತ್ತವೆ.
ಕೀರ್ತನೆಗಳು 97 : 6 (KNV)
ಆಕಾಶಗಳು ಆತನ ನೀತಿಯನ್ನು ತಿಳಿಸುತ್ತವೆ; ಎಲ್ಲಾ ಜನಗಳು ಆತನ ಘನವನ್ನು ನೋಡುತ್ತಾರೆ.
ಕೀರ್ತನೆಗಳು 97 : 7 (KNV)
ಕೆತ್ತಿದ ವಿಗ್ರಹಗಳನ್ನು ಸೇವಿಸಿ, ವಿಗ್ರಹಗಳಲ್ಲಿ ಹೆಮ್ಮೆಪಡುವ ವರೆಲ್ಲರು ನಾಚಿಕೆಪಡಲಿ; ಎಲ್ಲಾ ದೇವರುಗಳೇ, ಆತನನ್ನು ಆರಾಧಿಸಿರಿ.
ಕೀರ್ತನೆಗಳು 97 : 8 (KNV)
ಚೀಯೋನ್ ಇದನ್ನು ಕೇಳಿ ಸಂತೋಷಿಸಿತು. ಓ ಕರ್ತನೇ, ನಿನ್ನ ನ್ಯಾಯಗಳ ನಿಮಿತ್ತ ಯೆಹೂದದ ಕುಮಾರ್ತೆಗಳು ಉಲ್ಲಾಸಿಸುತ್ತಾರೆ.
ಕೀರ್ತನೆಗಳು 97 : 9 (KNV)
ಕರ್ತನೇ, ನೀನು ಸಮಸ್ತ ಭೂಮಿಯ ಮೇಲೆ ಮಹೋನ್ನತನಾಗಿದ್ದೀ; ಎಲ್ಲಾ ದೇವರುಗಳ ಮೇಲೆ ಬಹಳವಾಗಿ ಹೆಚ್ಚಿಸಲ್ಪಟ್ಟಿದ್ದೀ.
ಕೀರ್ತನೆಗಳು 97 : 10 (KNV)
ಕರ್ತನನ್ನು ಪ್ರೀತಿಮಾಡುವವರು ಕೆಟ್ಟದ್ದನ್ನು ಹಗೆ ಮಾಡುವರು; ಆತನು ತನ್ನ ಪರಿಶುದ್ಧರ ಪ್ರಾಣ ಗಳನ್ನು ಕಾಪಾಡಿ ದುಷ್ಟರ ಕೈಯೊಳಗಿಂದ ಅವರನ್ನು ಬಿಡಿಸುವನು.
ಕೀರ್ತನೆಗಳು 97 : 11 (KNV)
ಬೆಳಕು ನೀತಿವಂತನಿಗೋಸ್ಕರವೂ ಸಂತೋಷವು ಯಥಾರ್ಥ ಹೃದಯದವರಿಗೋಸ್ಕರವೂ ಬಿತ್ತಲ್ಪಟ್ಟಿವೆ.
ಕೀರ್ತನೆಗಳು 97 : 12 (KNV)
ನೀತಿವಂತರೇ, ಕರ್ತನಲ್ಲಿ ಸಂತೋ ಷಿಸಿರಿ; ಆತನ ಪರಿಶುದ್ಧತ್ವವನ್ನು ಜ್ಞಾಪಕಮಾಡಿ ಕೊಂಡಾಡಿರಿ.

1 2 3 4 5 6 7 8 9 10 11 12

BG:

Opacity:

Color:


Size:


Font: