ಪ್ರಕಟನೆ 19 : 1 (KNV)
ಇವುಗಳಾದ ಮೇಲೆ ಪರಲೋಕದಲ್ಲಿ ಬಹಳ ಜನರ ಮಹಾ ಶಬ್ದವನ್ನು ನಾನು ಕೇಳಿದೆನು; ಅವರು--ಹಲ್ಲೆಲೂಯಾ; ನಮ್ಮ ದೇವ ರಾದ ಕರ್ತನಿಗೆ ರಕ್ಷಣೆಯೂ ಮಹಿಮೆಯೂ ಘನವೂ ಅಧಿಕಾರವೂ ಉಂಟಾದವು.
ಪ್ರಕಟನೆ 19 : 2 (KNV)
ಆತನ ನ್ಯಾಯತೀರ್ಪು ಗಳು ಸತ್ಯವೂ ನೀತಿಯುಳ್ಳವುಗಳೂ ಆಗಿವೆ; ಯಾಕಂ ದರೆ ಜಾರತ್ವದಿಂದ ಭೂಲೋಕವನ್ನು ಕೆಡಿಸುತ್ತಿದ್ದ ಆ ಮಹಾಜಾರಸ್ತ್ರೀಗೆ ಆತನು ನ್ಯಾಯತೀರಿಸಿ ಆತನ ಸೇವಕರ ರಕ್ತಕ್ಕಾಗಿ ಅವಳಿಗೆ ಪ್ರತಿ ದಂಡನೆಯನ್ನು ಮಾಡಿದ್ದಾನೆ ಎಂದು ಹೇಳಿದರು.
ಪ್ರಕಟನೆ 19 : 3 (KNV)
ತಿರಿಗಿ ಅವರು --ಹಲ್ಲೆಲೂಯಾ ಅಂದರು. ಅವಳ ಹೊಗೆಯು ಯುಗಯುಗಾಂತರಗಳಲ್ಲಿಯೂ ಏರಿ ಹೋಗುತ್ತದೆ.
ಪ್ರಕಟನೆ 19 : 4 (KNV)
ಆಗ ಇಪ್ಪತ್ತನಾಲ್ಕು ಮಂದಿ ಹಿರಿಯರೂ ಆ ನಾಲ್ಕು ಜೀವಿಗಳೂ--ಆಮೆನ್. ಹಲ್ಲೆಲೂಯಾ ಎಂದು ಹೇಳುತ್ತಾ ಸಿಂಹಾಸನದ ಮೇಲೆ ಕೂತಿದ್ದ ದೇವರ ಮುಂದೆ ಅಡ್ಡಬಿದ್ದು ಆರಾಧಿಸಿದರು.
ಪ್ರಕಟನೆ 19 : 5 (KNV)
ಆಮೇಲೆ ಸಿಂಹಾಸನದ ಕಡೆಯಿಂದ ಬಂದ ಒಂದು ಶಬ್ದವು--ದೇವರ ಸೇವಕರೆಲ್ಲರೇ, ಆತನಿಗೆ ಭಯ ಪಡುವ ಹಿರಿಕಿರಿಯರೇ, ನಮ್ಮ ದೇವರನ್ನು ಕೊಂಡಾಡಿರಿ ಎಂದು ಹೇಳಿತು.
ಪ್ರಕಟನೆ 19 : 6 (KNV)
ತರುವಾಯ ಜನರ ದೊಡ್ಡ ಗುಂಪಿನ ಶಬ್ದದಂತೆಯೂ ಬಹಳ ನೀರುಗಳ ಘೋಷದಂತೆಯೂ ಗಟ್ಟಿಯಾದ ಗುಡುಗುಗಳ ಶಬ್ದದಂತೆಯೂ ಇದ್ದ ಒಂದು ಶಬ್ದವನ್ನು ನಾನು ಕೇಳಿದೆನು; ಅದು--ಹಲ್ಲೆಲೂಯಾ, ಸರ್ವಶಕ್ತನಾಗಿರುವ ದೇವರಾದ ಕರ್ತನು ಆಳುತ್ತಾನೆ.
ಪ್ರಕಟನೆ 19 : 7 (KNV)
ಸಂತೋಷಪಡೋಣ, ಹರ್ಷಗೊಳ್ಳೋಣ, ಆತ ನನ್ನು ಘನಪಡಿಸೋಣ; ಯಾಕಂದರೆ ಕುರಿಮರಿಯಾದಾ ತನ ವಿವಾಹವು ಬಂತು; ಆತನಿಗೆ ವಿವಾಹವಾಗುವ ಕನ್ಯೆಯು ತನ್ನನ್ನು ಸಿದ್ಧಮಾಡಿಕೊಂಡಿದ್ದಾಳೆ ಎಂದು ಹೇಳಿತು.
ಪ್ರಕಟನೆ 19 : 8 (KNV)
ನಿರ್ಮಲವಾದ ಬಿಳೀ ನಯವಾದ ನಾರು ಮಡಿಯನ್ನು ಧರಿಸಿಕೊಳ್ಳುವದಕ್ಕೆ ಆಕೆಗೆ ಅನುಗ್ರಹಿ ಸೋಣವಾಗಿತ್ತು; ಯಾಕಂದರೆ ಆ ನಾರುಮಡಿಯು ಪರಿಶುದ್ಧರ ನೀತಿಯೇ.
ಪ್ರಕಟನೆ 19 : 9 (KNV)
ಇದಲ್ಲದೆ ಅವನು--ಕುರಿಮರಿ ಯಾದಾತನ ವಿವಾಹದ ಔತಣಕ್ಕೆ ಕರೆಯಲ್ಪಟ್ಟವರು ಧನ್ಯರು ಎಂಬದಾಗಿ ಬರೆ ಎಂದು ನನಗೆ ಹೇಳಿದನು. ಇದಲ್ಲದೆ ಅವನು--ಇವುಗಳು ದೇವರ ನಿಜವಾದ ಮಾತುಗಳಾಗಿವೆ ಎಂದು ನನಗೆ ಹೇಳಿದನು.
ಪ್ರಕಟನೆ 19 : 10 (KNV)
ಆಗ ನಾನು ಅವನಿಗೆ ಆರಾಧನೆ ಮಾಡಬೇಕೆಂದು ಅವನ ಪಾದಗಳ ಮುಂದೆ ಬೀಳಲು ಅವನು--ನೀನು ಹಾಗೆ ಮಾಡಬೇಡ ನೋಡು, ನಾನು ನಿನಗೂ ಯೇಸುವಿನ ವಿಷಯವಾದ ಸಾಕ್ಷಿಯನ್ನು ಹೊಂದಿದ ನಿನ್ನ ಸಹೋದರ ರಿಗೂ ಜೊತೆಯ ದಾಸನಾಗಿದ್ದೇನೆ; ದೇವರಿಗೆ ಆರಾಧನೆ ಮಾಡು. ಯಾಕಂದರೆ ಯೇಸುವಿನ ವಿಷಯ
ಪ್ರಕಟನೆ 19 : 11 (KNV)
ಪರಲೋಕವು ತೆರೆದಿರುವದನ್ನು ನಾನು ಕಂಡೆನು. ಆಗ ಬಿಳೀ ಕುದುರೆಯು ಕಾಣಿಸಿತು; ಅದರ ಮೇಲೆ ಕೂತಿದ್ದಾತನು ನಂಬಿಗಸ್ತನೂ ಸತ್ಯವಂತನೂ ಎಂದು ಕರೆಯಲ್ಪಟ್ಟನು. ಆತನು ನೀತಿಯಿಂದ ನ್ಯಾಯವಿಚಾರಣೆ ಮಾಡಿ ಯುದ್ಧ ಮಾಡುತ್ತಾನೆ;
ಪ್ರಕಟನೆ 19 : 12 (KNV)
ಆತನ ಕಣ್ಣುಗಳು ಬೆಂಕಿಯ ಉರಿಯಂತಿದ್ದವು; ಆತನ ತಲೆಯ ಮೇಲೆ ಅನೇಕ ಕಿರೀಟಗಳು ಇದ್ದವು. ಬರೆಯಲ್ಪಟ್ಟ ಹೆಸರು ಆತನಿಗೆ ಇತ್ತು. ಅದು ಆತನಿಗೇ ಹೊರತು ಮತ್ತಾರಿಗೂ ತಿಳಿದಿರಲಿಲ್ಲ.
ಪ್ರಕಟನೆ 19 : 13 (KNV)
ಆತನು ರಕ್ತದಲ್ಲಿ ಅದ್ದಿದ ವಸ್ತ್ರವನ್ನು ಧರಿಸಿ ಕೊಂಡಿದ್ದನು. ಆತನ ಹೆಸರು ದೇವರವಾಕ್ಯ ವೆಂದು ಕರೆಯಲ್ಪಡುತ್ತದೆ.
ಪ್ರಕಟನೆ 19 : 14 (KNV)
ಪರಲೋಕದಲ್ಲಿರುವ ಸೈನ್ಯಗಳು ಶುಭ್ರವಾಗಿಯೂ ನಿರ್ಮಲವಾಗಿಯೂ ಇರುವ ನಯವಾದ ನಾರುಮಡಿಯನ್ನು ಧರಿಸಿಕೊಂಡು ಬಿಳೀ ಕುದುರೆಗಳ ಮೇಲೆ ಆತನ ಹಿಂದೆ ಬರುತ್ತಿದ್ದವು.
ಪ್ರಕಟನೆ 19 : 15 (KNV)
ಜನಾಂಗಗಳನ್ನು ಹೊಡೆಯುವದಕ್ಕಾಗಿ ಹದವಾದ ಕತ್ತಿಯು ಆತನ ಬಾಯಿಂದ ಹೊರಡುತ್ತದೆ. ಆತನು ಅವರನ್ನು ಕಬ್ಬಿಣದ ಕೋಲಿನಿಂದ ಆಳುವನು. ಆತನು ಸರ್ವಶಕ್ತನಾದ ದೇವರ ಉಗ್ರಕೋಪವೆಂಬ ದ್ರಾಕ್ಷೆಯ ತೊಟ್ಟಿಯಲ್ಲಿರುವದನ್ನು ತುಳಿಯುತ್ತಾನೆ.
ಪ್ರಕಟನೆ 19 : 16 (KNV)
ಆತನ ತೊಡೆಯ ಮೇಲೆಯೂ ವಸ್ತ್ರದ ಮೇಲೆಯೂ--ರಾಜಾ ಧಿರಾಜನೂ ಕರ್ತರ ಕರ್ತನೂ ಎಂಬ ಹೆಸರು ಬರೆದದೆ.
ಪ್ರಕಟನೆ 19 : 17 (KNV)
ಆಮೇಲೆ ಒಬ್ಬ ದೂತನು ಸೂರ್ಯನಲ್ಲಿ ನಿಂತಿರುವದನ್ನು ನಾನು ಕಂಡೆನು. ಅವನು ಮಹಾ ಶಬ್ದದಿಂದ ಕೂಗುತ್ತಾ ಆಕಾಶದಲ್ಲಿ ಹಾರಾಡುವ ಎಲ್ಲಾ ಪಕ್ಷಿಗಳಿಗೆ--ಬನ್ನಿರಿ, ಮಹಾ ದೇವರ ಭೋಜನಕ್ಕೆ ಕೂಡಿಕೊಳ್ಳಿರಿ,
ಪ್ರಕಟನೆ 19 : 18 (KNV)
ರಾಜರ ಮಾಂಸವನ್ನೂ ಸೈನ್ಯಾಧಿಪತಿ ಗಳ ಮಾಂಸವನ್ನೂ ಪರಾಕ್ರಮಶಾಲಿಗಳ ಮಾಂಸವನ್ನೂ ಕುದುರೆಗಳ ಮಾಂಸವನ್ನೂ ಅವುಗಳ ಮೇಲೆ ಕೂತವರ ಮಾಂಸವನ್ನೂ ಮತ್ತು ಸ್ವತಂತ್ರರೂ ದಾಸರೂ ಚಿಕ್ಕವರೂ ದೊಡ್ಡವರೂ ಇವರೆಲ್ಲರ ಮಾಂಸವನ್ನೂ ತಿನ್ನುವದಕ್ಕೆ ಬನ್ನಿರಿ ಎಂದು ಹೇಳಿದನು.
ಪ್ರಕಟನೆ 19 : 19 (KNV)
ತರುವಾಯ ಆ ಮೃಗವೂ ಭೂರಾಜರೂ ಅವರ ಸೈನ್ಯಗಳೂ ಆ ಕುದುರೆಯ ಮೇಲೆ ಕೂತಿದ್ದಾತನ ಮೇಲೆಯೂ ಆತನ ಸೈನ್ಯದ ಮೇಲೆಯೂ ಯುದ್ಧ ಮಾಡುವದಕ್ಕಾಗಿ ಕೂಡಿಬಂದಿರುವದನ್ನು ನಾನು ಕಂಡೆನು.
ಪ್ರಕಟನೆ 19 : 20 (KNV)
ಆಗ ಮೃಗವು ಸೆರೆಸಿಕ್ಕಿತು; ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹವನ್ನು ಆರಾಧಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳು ಪ್ರವಾದಿಯೂ ಆದರ ಜೊತೆಯಲ್ಲಿ ಸೆರೆ ಸಿಕ್ಕಿದನು. ಇವರಿಬ್ಬರೂ ಜೀವಸಹಿತವಾಗಿ ಗಂಧಕ ದಿಂದ
ಪ್ರಕಟನೆ 19 : 21 (KNV)
ಮಿಕ್ಕಾದವರು ಆ ಕುದುರೆಯ ಮೇಲೆ ಕೂತಿದ್ದಾತನ ಕತ್ತಿಯಿಂದ ಅಂದರೆ ಆತನ ಬಾಯಿಂದ ಬಂದ ಕತ್ತಿ ಯಿಂದ ಹತರಾದರು; ಹಕ್ಕಿಗಳೆಲ್ಲಾ ಅವರ ಮಾಂಸವನು ಹೊಟ್ಟೆತುಂಬಾ ತಿಂದವು.
❮
❯