ಪ್ರಕಟನೆ 20 : 1 (KNV)
ಆಗ ಒಬ್ಬ ದೂತನು ತಳವಿಲ್ಲದ ತಗ್ಗಿನ ಬೀಗದ ಕೈಯನ್ನೂ ದೊಡ್ಡ ಸರಪಣಿ ಯನ್ನೂ ತನ್ನ ಕೈಯಲ್ಲಿ ಹಿಡಿದುಕೊಂಡು ಪರಲೋಕ ದಿಂದ ಇಳಿದು ಬರುವದನ್ನು ನಾನು ಕಂಡೆನು.
ಪ್ರಕಟನೆ 20 : 2 (KNV)
ಅವನು ಪಿಶಾಚನೂ ಸೈತಾನನೂ ಆಗಿರುವ ಪುರಾತನ ಸರ್ಪ ನೆಂಬ ಘಟಸರ್ಪನನ್ನು ಹಿಡಿದು ಸಾವಿರ ವರುಷ ಬಂಧಿಸಿದನು.
ಪ್ರಕಟನೆ 20 : 3 (KNV)
ಆ ಸಾವಿರ ವರುಷ ತೀರುವ ತನಕ ಅವನು ಇನ್ನು ಎಂದಿಗೂ ಜನಾಂಗಗಳನ್ನು ಮರುಳು ಗೊಳಿಸದ ಹಾಗೆ ದೂತನು ಅವನನ್ನು ತಳವಿಲ್ಲದ ತಗ್ಗಿನಲ್ಲಿ ದೊಬ್ಬಿ ಅವನನ್ನು ಮುಚ್ಚಿ ಅದರ ಮೇಲೆ ಮುದ್ರೆ ಹಾಕಿದನು. ಆ ಸಾವಿರ ವರುಷಗಳಾದ ಮೇಲೆ ಅವನಿಗೆ ಸ್ವಲ್ಪ ಕಾಲ ಬಿಡುಗಡೆಯಾಗತಕ್ಕದ್ದು.
ಪ್ರಕಟನೆ 20 : 4 (KNV)
ತರುವಾಯ ಸಿಂಹಾಸನಗಳನ್ನು ಕಂಡೆನು. ಅವುಗಳ ಮೇಲೆ ಕೂತಿದ್ದವರಿಗೆ ನ್ಯಾಯತೀರಿಸುವ ಅಧಿಕಾರವು ಕೊಡಲ್ಪಟ್ಟಿತು. ಇದಲ್ಲದೆ ಯೇಸುವಿನ ವಿಷಯವಾದ ಸಾಕ್ಷಿಯ ನಿಮಿತ್ತವಾಗಿಯೂ ದೇವರ ವಾಕ್ಯದ ನಿಮಿತ್ತವಾಗಿಯೂ ತಲೆಹೊಯಿಸಿಕೊಂಡವರ ಆತ್ಮಗಳನ್ನೂ ಮೃಗಕ್ಕೂ ಅದರ ವಿಗ್ರಹಕ್ಕೂ
ಪ್ರಕಟನೆ 20 : 5 (KNV)
ಮಿಕ್ಕ ಸತ್ತವರು ಆ ಸಾವಿರ ವರುಷ ತೀರುವತನಕ ತಿರಿಗಿ ಬದುಕಲಿಲ್ಲ; ಇದೇ ಪ್ರಥಮ ಪುನರುತ್ಥಾನವು.
ಪ್ರಕಟನೆ 20 : 6 (KNV)
ಪ್ರಥಮ ಪುನರುತ್ಥಾ ನದಲ್ಲಿ ಸೇರಿರುವವನು ಧನ್ಯನೂ ಪರಿಶುದ್ಧನೂ ಆಗಿ ದ್ದಾನೆ. ಇಂಥವರ ಮೇಲೆ ಎರಡನೆಯ ಮರಣಕ್ಕೆ ಅಧಿಕಾರವಿಲ್ಲ; ಆದರೆ ಅವರು ದೇವರಿಗೂ ಕ್ರಿಸ್ತನಿಗೂ ಯಾಜಕರಾಗಿ ಕ್ರಿಸ್ತನೊಂದಿಗೆ ಸಾವಿರ ವರುಷ ಆಳುವರು.
ಪ್ರಕಟನೆ 20 : 7 (KNV)
ಆ ಸಾವಿರ ವರುಷಗಳು ತೀರಿದ ಮೇಲೆ ಸೈತಾನನಿಗೆ ಅವನ ಸೆರೆಯಿಂದ ಬಿಡುಗಡೆಯಾಗುವದು.
ಪ್ರಕಟನೆ 20 : 8 (KNV)
ಅವನು ಹೊರಗೆ ಬಂದು ಭೂಮಿಯ ನಾಲ್ಕು ದಿಕ್ಕುಗಳಲ್ಲಿರುವ ಗೋಗ್ ಮಾಗೋಗ್ ಎಂಬ ಜನಾಂಗಗಳನ್ನು ಮರುಳುಗೊಳಿಸಿ ಅವರನ್ನು ಯುದ್ಧಕ್ಕೆ ಕೂಡಿಸುವನು; ಅವರ ಸಂಖ್ಯೆಯು ಸಮುದ್ರದ ಮರಳಿನಷ್ಟಿರುವದು.
ಪ್ರಕಟನೆ 20 : 9 (KNV)
ಅವರು ಭೂಮಿಯಲ್ಲೆಲ್ಲಾ ಹರಡಿಕೊಂಡು ಪರಿಶುದ್ಧರ ದಂಡಿಗೂ ಆ ಪ್ರಿಯ ಪಟ್ಟಣಕ್ಕೂ ಮುತ್ತಿಗೆ ಹಾಕಿದರು. ಆಗ ದೇವರ ಬಳಿಯಿಂದ ಬೆಂಕಿಯು ಪರಲೋಕ ದೊಳಗಿಂದ ಇಳಿದು ಬಂದು ಅವರನ್ನು ನುಂಗಿಬಿಟ್ಟಿತು.
ಪ್ರಕಟನೆ 20 : 10 (KNV)
ಇದಲ್ಲದೆ ಅವರನ್ನು ಮರುಳುಗೊಳಿಸಿದ ಸೈತಾನನು ಬೆಂಕಿ ಗಂಧಕಗಳುರಿಯುವ ಕೆರೆಯಲ್ಲಿ ದೊಬ್ಬಲ್ಪಟ್ಟನು; ಅಲ್ಲಿ ಮೃಗವೂ ಸುಳ್ಳು ಪ್ರವಾದಿಯೂ ಕೂಡ ಇದ್ದಾರೆ; ಅವರು ಹಗಲಿರುಳು ಯುಗಯುಗಾಂತರಗಳಲ್ಲಿಯೂ ಯಾತನೆಪಡುತ್ತಿರುವರು.
ಪ್ರಕಟನೆ 20 : 11 (KNV)
ಆಮೇಲೆ ಬೆಳ್ಳಗಿರುವ ಮಹಾಸಿಂಹಾಸನವನ್ನೂ ಅದರ ಮೇಲೆ ಕೂತಿದ್ದಾತನನ್ನೂ ನಾನು ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋಗಿ ಅವುಗಳಿಗೆ ಸ್ಥಳವಿಲ್ಲದಂತಾಯಿತು.
ಪ್ರಕಟನೆ 20 : 12 (KNV)
ಇದಲ್ಲದೆ ಸತ್ತವರಾದ ಚಿಕ್ಕವರೂ ದೊಡ್ಡವರೂ ದೇವರ ಮುಂದೆ ನಿಂತಿರುವದನ್ನು ನಾನು ಕಂಡೆನು. ಆಗ ಪುಸ್ತಕಗಳು ತೆರೆಯಲ್ಪಟ್ಟವು; ಜೀವಗ್ರಂಥವೆಂಬ ಇನ್ನೊಂದು ಪುಸ್ತಕವು ತೆರೆಯಲ್ಪಟ್ಟಿತು; ಆ ಪುಸ್ತಕಗಳಲ್ಲಿ ಬರೆದ ಪ್ರಕಾರ ಅವರವರ ಕೃತ್ಯಗಳಿಗೆ ತಕ್ಕಂತೆ ಸತ್ತವರಿಗೆ
ಪ್ರಕಟನೆ 20 : 13 (KNV)
ಸಮುದ್ರವು ತನ್ನೊಳಗಿದ್ದ ಸತ್ತವರನ್ನು ಒಪ್ಪಿಸಿತು; ಮೃತ್ಯುವೂ ಪಾತಾಳವೂ ತಮ್ಮ ವಶದಲ್ಲಿದ್ದ ಸತ್ತವರನ್ನು ಒಪ್ಪಿಸಿದವು; ಅವರಲ್ಲಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳ ಪ್ರಕಾರ ನ್ಯಾಯತೀರ್ಪಾಯಿತು.
ಪ್ರಕಟನೆ 20 : 14 (KNV)
ಆಮೇಲೆ ಮೃತ್ಯುವೂ ನರಕವೂ ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟವು; ಇದೇ ಎರಡನೆಯ ಮರಣವು.
ಪ್ರಕಟನೆ 20 : 15 (KNV)
ಯಾವನ ಹೆಸರು ಜೀವಗ್ರಂಥದಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವನು ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟನು.
❮
❯
1
2
3
4
5
6
7
8
9
10
11
12
13
14
15