ರೋಮಾಪುರದವರಿಗೆ 12 : 1 (KNV)
ಆದದರಿಂದ ಸಹೋದರರೇ, ನೀವು ನಿಮ್ಮ ದೇಹಗಳನ್ನು ಪರಿಶುದ್ಧವೂ ದೇವರಿಗೆ ಮೆಚ್ಚಿಕೆಯೂ ಆಗಿರುವ ಸಜೀವಯಜ್ಞವಾಗಿ ಸಮರ್ಪಿಸ ಬೇಕೆಂದು ದೇವರ ಕರುಣೆಯಿಂದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ಇದೇ ನಿಮ್ಮ ಯೋಗ್ಯವಾದ ಸೇವೆ ಯಾಗಿದೆ.
ರೋಮಾಪುರದವರಿಗೆ 12 : 2 (KNV)
ಇಹಲೋಕವನ್ನು ಅನುಸರಿಸದೆ ಉತ್ತಮ ವಾದದ್ದೂ ಮೆಚ್ಚಿಕೆಯಾದದ್ದೂ ಪರಿಪೂರ್ಣ ವಾದದ್ದೂ ಆಗಿರುವ ದೇವರ ಚಿತ್ತವೇನೆಂದು ನೀವು ವಿವೇಚಿಸಿ ತಿಳಿದುಕೊಳ್ಳುವಂತೆ ನೂತನ ಮನಸ್ಸನ್ನು ಹೊಂದಿಕೊಂಡು ರೂಪಾಂತರಗೊಂಡವರಾಗಿರ್ರಿ.
ರೋಮಾಪುರದವರಿಗೆ 12 : 3 (KNV)
ನಿಮ್ಮೊಳಗೆ ಪ್ರತಿಯೊಬ್ಬನು ತನ್ನ ಯೋಗ್ಯತೆಗೆ ವಿಾರಿ ಭಾವಿಸಿಕೊಳ್ಳದೆ ದೇವರು ಪ್ರತಿಯೊಬ್ಬನಿಗೆ ಅವನವನ ವಿಶ್ವಾಸದ ಪ್ರಮಾಣಕ್ಕನುಸಾರವಾಗಿ ಕೊಟ್ಟಂತೆ ತನ್ನನ್ನು ಮಿತವಾಗಿ ತಿಳಿದುಕೊಳ್ಳಬೇಕೆಂದು ನನಗೆ ಕೊಡಲ್ಪಟ್ಟ ಕೃಪೆಗನುಸಾರವಾಗಿ ನಾನು ಹೇಳುತ್ತೇನೆ.
ರೋಮಾಪುರದವರಿಗೆ 12 : 4 (KNV)
ನಮಗೆ ಒಂದೇ ದೇಹದಲ್ಲಿ ಬಹಳ ಅಂಗಗಳಿರಲಾಗಿ ಆ ಎಲ್ಲಾ ಅಂಗಗಳಿಗೆ ಹೇಗೆ ಒಂದೇ ಕೆಲಸವಿರುವದಿಲ್ಲವೋ
ರೋಮಾಪುರದವರಿಗೆ 12 : 5 (KNV)
ಹಾಗೆಯೇ ಅನೇಕರಾದ ನಾವು ಕ್ರಿಸ್ತನಲ್ಲಿ ಒಂದೇ ದೇಹವಾಗಿದ್ದು ಒಬ್ಬರಿ ಗೊಬ್ಬರು ಪರಸ್ಪರ ಅಂಗಗಳಾಗಿದ್ದೇವೆ.
ರೋಮಾಪುರದವರಿಗೆ 12 : 6 (KNV)
ಹೀಗೆ ಕೃಪೆಗನುಸಾರವಾಗಿ ನಮಗೆ ವಿಧವಿಧವಾದ ವರಗಳು ಕೊಡಲ್ಪಟ್ಟಿರಲು ಅವುಗಳಲ್ಲಿ ಅದು ಪ್ರವಾದನೆ ಯಾಗಿದ್ದರೆ ನಂಬಿಕೆಯ ಪ್ರಮಾಣಕ್ಕೆ ತಕ್ಕಂತೆ ಪ್ರವಾದಿಸೋಣ.
ರೋಮಾಪುರದವರಿಗೆ 12 : 7 (KNV)
ಇಲ್ಲವೆ ಸೇವೆಯಾಗಿದ್ದರೆ ನಮ್ಮ ಸೇವೆಯಲ್ಲಿ ನಿರತರಾಗಿರೋಣ. ಬೋಧಿಸುವವನು ಬೋಧಿಸುವದರಲ್ಲಿ ನಿರತನಾಗಿರಲಿ.
ರೋಮಾಪುರದವರಿಗೆ 12 : 8 (KNV)
ಇಲ್ಲವೆ ಎಚ್ಚರಿಸುವವನು ಎಚ್ಚರಿಸುವದರಲ್ಲಿ ನಿರತನಾಗಿರಲಿ ಮತ್ತು ಕೊಡುವವನು ಯಥಾರ್ಥವಾಗಿ ಕೊಡಲಿ. ಆಳುವವನು ಶ್ರದ್ಧೆಯಿಂದ ಆಳಲಿ, ಕರುಣೆಯನ್ನು ತೋರಿಸುವವನು ಸಂತೋಷಪೂರ್ವಕವಾಗಿ ತೋರಿಸಲಿ.
ರೋಮಾಪುರದವರಿಗೆ 12 : 9 (KNV)
ಪ್ರೀತಿಯು ನಿಷ್ಕಪಟವಾಗಿರಲಿ ಕೆಟ್ಟತನವನ್ನು ಹೇಸಿ ಕೊಂಡು ಒಳ್ಳೆಯದಕ್ಕೆ ಅಂಟಿಕೊಳ್ಳಿರಿ.
ರೋಮಾಪುರದವರಿಗೆ 12 : 10 (KNV)
ಸಹೋದರ ಪ್ರೀತಿಯಿಂದ ಒಬ್ಬರಿಗೊಬ್ಬರು ಕರುಣಾ ವಾತ್ಸಲ್ಯವುಳ್ಳ ವರಾಗಿರ್ರಿ; ಸನ್ಮಾನಿಸುವದರಲ್ಲಿ ಒಬ್ಬರಿಗಿಂತ ಒಬ್ಬರು ಮುಂದಾಗಿರ್ರಿ.
ರೋಮಾಪುರದವರಿಗೆ 12 : 11 (KNV)
ಸೇವೆಯಲ್ಲಿ ಅಲಸ್ಯವಾಗಿರಬೇಡಿರಿ, ಆತ್ಮದಲ್ಲಿ ಆಸಕ್ತರಾಗಿದ್ದು ಕರ್ತನನ್ನು ಸೇವಿಸುವವ ರಾಗಿರ್ರಿ.
ರೋಮಾಪುರದವರಿಗೆ 12 : 12 (KNV)
ನಿರೀಕ್ಷೆಯಲ್ಲಿ ಸಂತೋಷಿಸುತ್ತಾ ಸಂಕಟದಲ್ಲಿ ತಾಳ್ಮೆಯುಳ್ಳವರಾಗಿದ್ದು ಆಸಕ್ತಿಯುಳ್ಳವರಾಗಿ ಪ್ರಾರ್ಥನೆ ಯಲ್ಲಿ ನಿರತರಾಗಿರ್ರಿ.
ರೋಮಾಪುರದವರಿಗೆ 12 : 13 (KNV)
ಪರಿಶುದ್ಧರ ಕೊರತೆಯ ಪ್ರಕಾರ ಹಂಚಿರಿ; ಅತಿಥಿಸತ್ಕಾರವನ್ನು ಮಾಡಿರಿ.
ರೋಮಾಪುರದವರಿಗೆ 12 : 14 (KNV)
ನಿಮ್ಮನ್ನು ಹಿಂಸಿಸುವವರನ್ನು ಆಶೀರ್ವದಿಸಿರಿ; ಶಪಿಸದೆ ಆಶೀ ರ್ವದಿಸಿರಿ.
ರೋಮಾಪುರದವರಿಗೆ 12 : 15 (KNV)
ಸಂತೋಷಪಡುವವರ ಸಂಗಡ ಸಂತೋಷಪಡಿರಿ; ಅಳುವವರ ಸಂಗಡ ಅಳಿರಿ.
ರೋಮಾಪುರದವರಿಗೆ 12 : 16 (KNV)
ಒಬ್ಬರಿಗೊಬ್ಬರು ಒಂದೇ ಮನಸ್ಸುಳ್ಳುವರಾಗಿರ್ರಿ; ದೊಡ್ಡಸ್ತಿಕೆಗಳ ಮೇಲೆ ಮನಸ್ಸಿಡದೆ ದೀನರ ಸಂಗಡ ಬಳಿಕೆಯಾಗಿರ್ರಿ. ನಿಮ್ಮನ್ನು ನೀವೇ ಬುದ್ಧಿವಂತರೆಂದು ಭಾವಿಸಿಕೊಳ್ಳಬೇಡಿರಿ.
ರೋಮಾಪುರದವರಿಗೆ 12 : 17 (KNV)
ಯಾರಿಗೂ ಕೆಟ್ಟದ್ದಕ್ಕೆ ಪ್ರತಿಯಾಗಿ ಕೆಟ್ಟದ್ದನ್ನು ಮಾಡಬೇಡಿರಿ. ಎಲ್ಲರ ದೃಷ್ಟಿಯಲ್ಲಿ ಯಾವದು ಗೌರವ ವಾದದ್ದೋ ಅದನ್ನೇ ಮಾಡುವವರಾಗಿರ್ರಿ.
ರೋಮಾಪುರದವರಿಗೆ 12 : 18 (KNV)
ಸಾಧ್ಯ ವಾದರೆ ನಿಮ್ಮಿಂದಾಗುವ ಮಟ್ಟಿಗೆ ಎಲ್ಲರ ಸಂಗಡ ಸಮಾಧಾನವಾಗಿರ್ರಿ.
ರೋಮಾಪುರದವರಿಗೆ 12 : 19 (KNV)
ಅತಿ ಪ್ರಿಯರೇ, ನೀವೇ ಮುಯ್ಯಿಗೆ ಮುಯ್ಯಿ ತೀರಿಸದೆ ಶಿಕ್ಷಿಸುವದನ್ನು ದೇವರಿಗೆ ಬಿಡಿರಿ. ಯಾಕಂದರೆ--ಮುಯ್ಯಿಗೆ ಮುಯ್ಯಿ ತೀರಿಸು ವದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನು ಎಂದು ಕರ್ತನು ಹೇಳುತ್ತಾನೆ ಎಂಬದಾಗಿ ಬರೆದದೆ.
ರೋಮಾಪುರದವರಿಗೆ 12 : 20 (KNV)
ಹಾಗಾದರೆ ನಿನ್ನ ವೈರಿಯು ಹಸಿದಿದ್ದರೆ ಅವನಿಗೆ ಊಟಕ್ಕೆ ಬಡಿಸು; ಬಾಯಾರಿದ್ದರೆ ಕುಡಿಯುವದಕ್ಕೆ ಕೊಡು. ಹೀಗೆ ಮಾಡುವದರಿಂದ ಅವನ ತಲೆಯ ಮೇಲೆ ಕೆಂಡಗಳನ್ನು ಕೂಡಿಸಿಟ್ಟಂತಾಗುವದು.
ರೋಮಾಪುರದವರಿಗೆ 12 : 21 (KNV)
ಕೆಟ್ಟತನಕ್ಕೆ ಸೋತುಹೋಗದೆ ಒಳ್ಳೇತನದಿಂದ ಕೆಟ್ಟತನವನ್ನು ಸೋಲಿಸು.

1 2 3 4 5 6 7 8 9 10 11 12 13 14 15 16 17 18 19 20 21