ರೋಮಾಪುರದವರಿಗೆ 15 : 1 (KNV)
ಆದದರಿಂದ ಬಲವುಳ್ಳವರಾದ ನಾವು ನಮ್ಮನ್ನೇ ಸಂತೋಷಪಡಿಸಿಕೊಳ್ಳದೆ ದುರ್ಬಲರ ಬಲಹೀನತೆಗಳನ್ನು ಸಹಿಸಿಕೊಳ್ಳತಕ್ಕದ್ದು.
ರೋಮಾಪುರದವರಿಗೆ 15 : 2 (KNV)
ನಮ್ಮಲ್ಲಿ ಪ್ರತಿಯೊಬ್ಬನು ತನ್ನ ನೆರೆಯವನ ಭಕ್ತಿ ವೃದ್ಧಿಯ ಹಿತಕ್ಕಾಗಿ ಅವನನ್ನು ಸಂತೋಷಪಡಿಸಲಿ.
ರೋಮಾಪುರದವರಿಗೆ 15 : 3 (KNV)
ಆದರೆ--ನಿನ್ನನ್ನು ದೂಷಿಸುವವರ ದೂಷಣೆಗಳು ನನ್ನ ಮೇಲೆ ಬಿದ್ದವು ಎಂಬದಾಗಿ ಬರೆಯಲ್ಪಟ್ಟಂತೆ ಕ್ರಿಸ್ತ ನಾದರೋ ತನ್ನನ್ನು ತಾನು ಸಂತೋಷಪಡಿಸಿಕೊಳ್ಳಲಿಲ್ಲ.
ರೋಮಾಪುರದವರಿಗೆ 15 : 4 (KNV)
ನಾವು ತಾಳ್ಮೆಯ ಮತ್ತು ಬರಹಗಳ ಆದರಣೆಯ ಮೂಲಕ ನಿರೀಕ್ಷೆ ಹೊಂದುವಂತೆ ಪೂರ್ವಕಾಲದಲ್ಲಿ ಬರೆಯಲ್ಪಟ್ಟವುಗಳೆಲ್ಲಾ ನಮಗೆ ಉಪದೇಶಿಸುವ ದಕ್ಕಾಗಿಯೇ ಬರೆಯಲ್ಪಟ್ಟವು.
ರೋಮಾಪುರದವರಿಗೆ 15 : 5 (KNV)
ನೀವು ಕ್ರಿಸ್ತ ಯೇಸು ವನ್ನು ಅನುಸರಿಸಿ ಒಂದೇ ಮನಸ್ಸುಳ್ಳವರಾಗಿರುವಂತೆ ತಾಳ್ಮೆಯೂ ಆದರಣೆಯೂ ಉಳ್ಳ ದೇವರು ನಿಮಗೆ ಅನುಗ್ರಹಿಸಲಿ.
ರೋಮಾಪುರದವರಿಗೆ 15 : 6 (KNV)
ಹೀಗೆ ನೀವು ಏಕ ಮನಸ್ಸಿನಿಂದಲೂ ಒಂದೇ ಬಾಯಿಂದಲೂ ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯಾದ ದೇವರನ್ನು ಮಹಿಮೆಪಡಿಸುವಿರಿ.
ರೋಮಾಪುರದವರಿಗೆ 15 : 7 (KNV)
ಆದದರಿಂದ ಕ್ರಿಸ್ತನು ಸಹ ನಿಮ್ಮನ್ನು ದೇವರ ಮಹಿಮೆಗಾಗಿ ಸೇರಿಸಿಕೊಂಡಂತೆ ನೀವೂ ಒಬ್ಬರ ನ್ನೊಬ್ಬರು ಸೇರಿಸಿಕೊಳ್ಳಿರಿ.
ರೋಮಾಪುರದವರಿಗೆ 15 : 8 (KNV)
ಹೀಗಿರುವದರಿಂದ ಪಿತೃ ಗಳಿಗೆ ಮಾಡಿದ ವಾಗ್ದಾನಗಳನ್ನು ದೃಢಪಡಿಸುವದಕ್ಕೆ ದೇವರ ಸತ್ಯಕ್ಕಾಗಿ ಯೇಸು ಕ್ರಿಸ್ತನು ಸುನ್ನತಿಯವರಿಗೆ ಸೇವಕನಾಗಿದ್ದನೆಂದು ನಾನು ಹೇಳುತ್ತೇನೆ.
ರೋಮಾಪುರದವರಿಗೆ 15 : 9 (KNV)
ಈ ಕಾರಣದಿಂದ ನಾನು ಅನ್ಯಜನಗಳ ಮಧ್ಯದಲ್ಲಿ ನಿನ್ನನು ಅರಿಕೆ ಮಾಡಿ ನಿನ್ನ ನಾಮವನ್ನು ಸಂಕೀರ್ತಿಸುವೆನು ಎಂದು ಬರೆದಿರುವ ಪ್ರಕಾರ ಅನ್ಯಜನಗಳು ದೇವರ ಕರುಣೆಗಾಗಿ ಆತನನ್ನು ಮಹಿಮೆಪಡಿಸುವರು.
ರೋಮಾಪುರದವರಿಗೆ 15 : 10 (KNV)
ಆತನು ತಿರಿಗಿ--ಅನ್ಯಜನರೇ, ಆತನ ಜನರೊಂದಿಗೆ ಸಂತೋಷಿಸಿರಿ ಎಂದು ಹೇಳುತ್ತಾನೆ.
ರೋಮಾಪುರದವರಿಗೆ 15 : 11 (KNV)
ತಿರಿಗಿ--ಎಲ್ಲಾ ಅನ್ಯಜನರೇ, ಕರ್ತನನ್ನು ಸ್ತುತಿಸಿರಿ; ಎಲ್ಲಾ ಜನರೇ, ಆತನನ್ನು ಕೊಂಡಾಡಿರಿ ಅನ್ನುತ್ತಾನೆ.
ರೋಮಾಪುರದವರಿಗೆ 15 : 12 (KNV)
ತಿರಿಗಿ ಯೆಶಾಯನು--ಇಷಯನ ಅಂಕುರದವನು ಎದ್ದು ಅನ್ಯ ಜನಾಂಗಗಳ ಮೇಲೆ ಆಡಳಿತ ಮಾಡುವನು; ಅನ್ಯ ಜನರು ಆತನಲ್ಲಿ ನಂಬಿಕೆಯಿಡುವರು ಅಂದನು.
ರೋಮಾಪುರದವರಿಗೆ 15 : 13 (KNV)
ನಿರೀಕ್ಷೆಗೆ ಆಧಾರನಾದ ದೇವರು ಪವಿತ್ರಾತ್ಮನ ಬಲದಿಂದ ನೀವು ನಿರೀಕ್ಷೆಯಲ್ಲಿ ಅಭಿವೃದ್ಧಿ ಹೊಂದು ವಂತೆ ನಂಬಿಕೆಯಿಂದುಂಟಾದ ಸಂತೋಷ ಸಮಾಧಾನಗಳಿಂದ ನಿಮ್ಮನ್ನು ತುಂಬಿಸಲಿ.
ರೋಮಾಪುರದವರಿಗೆ 15 : 14 (KNV)
ನನ್ನ ಸಹೋದರರೇ, ನೀವಂತೂ ಒಳ್ಳೇತನ ದಿಂದಲೂ ಸಕಲ ಜ್ಞಾನದಿಂದಲೂ ತುಂಬಿದವರಾಗಿ ಒಬ್ಬರಿಗೊಬ್ಬರು ಬುದ್ಧಿ ಹೇಳುವದಕ್ಕೆ ಶಕ್ತರಾಗಿದ್ದೀರೆಂದು ನಿಮ್ಮ ವಿಷಯದಲ್ಲಿ ನನಗೂ ನಿಶ್ಚಯವುಂಟು.
ರೋಮಾಪುರದವರಿಗೆ 15 : 15 (KNV)
ಆದಾಗ್ಯೂ ಸಹೋದರರೇ, ದೇವರು ನನಗೆ ಕೊಟ್ಟ ಕೃಪೆಯಿಂದ ಇವುಗಳನ್ನು ನಿಮ್ಮ ಜ್ಞಾಪಕಕ್ಕೆ ತರುವ ಹಾಗೆ ನಾನು ಒಂದು ವಿಧದಲ್ಲಿ ಹೆಚ್ಚು ಧೈರ್ಯದಿಂದ ನಿಮಗೆ ಬರೆದಿದ್ದೇನೆ;
ರೋಮಾಪುರದವರಿಗೆ 15 : 16 (KNV)
ಹೀಗೆ ಅನ್ಯಜನಗಳೆಂಬ ಅರ್ಪಣೆಯು ಪವಿತ್ರಾತ್ಮನ ಮೂಲಕ ಶುದ್ಧೀಕರಿಸಲ್ಪಟ್ಟು ಆತನಿಂದ ಅಂಗೀಕಾರವಾಗುವಂತೆ ನಾನು ದೇವರ ಸುವಾರ್ತಾ ಸೇವೆಯನ್ನು ನಡಿಸುತ್ತಾ ಅನ್ಯಜನರಿಗೆ ಯೇಸು ಕ್ರಿಸ್ತನ ಸೇವಕನಾಗಿರುವೆನು.
ರೋಮಾಪುರದವರಿಗೆ 15 : 17 (KNV)
ಆದದರಿಂದ ದೇವರಿಗೆ ಸಂಬಂಧಪಟ್ಟವುಗಳಲ್ಲಿ ಯೇಸು ಕ್ರಿಸ್ತನ ಮೂಲಕ ನಾನು ಹೆಚ್ಚಳಪಡುತ್ತೇನೆ.
ರೋಮಾಪುರದವರಿಗೆ 15 : 18 (KNV)
ಮಾತಿ ನಿಂದಲೂ ಕ್ರಿಯೆಯಿಂದಲೂ ಬಲವಾದ ಸೂಚಕ ಕಾರ್ಯಗಳಿಂದಲೂ ಅದ್ಭುತಕಾರ್ಯಗಳಿಂದಲೂ ದೇವರಾತ್ಮನ ಬಲದಿಂದಲೂ ಅನ್ಯಜನಗಳವರು ವಿಧೇಯರಾಗುವಂತೆ ಕ್ರಿಸ್ತನು ನನ್ನ ಮೂಲಕ ಮಾಡ ದಿರುವವುಗಳನ್ನು ಮಾತನಾಡಲು ನಾನು ಧೈರ್ಯ ಪಡುವದಿಲ್ಲ.
ರೋಮಾಪುರದವರಿಗೆ 15 : 19 (KNV)
ಹೀಗೆ ಯೆರೂಸಲೇಮ್‌ ಮೊದಲು ಗೊಂಡು ಇಲ್ಲುರಿಕದ ಸುತ್ತಲೂ ನಾನು ಕ್ರಿಸ್ತನ ಸುವಾರ್ತೆಯನ್ನು ಪೂರ್ಣವಾಗಿ ಸಾರಿದ್ದೇನೆ.
ರೋಮಾಪುರದವರಿಗೆ 15 : 20 (KNV)
ಹೌದು, ಬೇರೆಯವನ ಅಸ್ತಿವಾರದ ಮೇಲೆ ನಾನು ಕಟ್ಟದಂತೆ ಕ್ರಿಸ್ತನ ಹೆಸರು ತಿಳಿಸದಿರುವ ಕಡೆಯಲ್ಲಿ ನಾನು ಸುವಾರ್ತೆಯನ್ನು ಸಾರುವದಕ್ಕೆ ಪ್ರಯಾಸ ಪಟ್ಟಿದ್ದೇನೆ.
ರೋಮಾಪುರದವರಿಗೆ 15 : 21 (KNV)
ಆದರೆ ಬರೆಯಲ್ಪಟ್ಟಂತೆ--ಯಾರಿಗೆ ಆತನ ವಿಷಯವಾಗಿ ಹೇಳಲಿಲ್ಲವೋ ಅವರು ನೋಡುವರು; ಯಾರು ಕೇಳಲಿಲ್ಲವೋ ಅವರು ಗ್ರಹಿಸುವರು ಎಂಬದೇ.
ರೋಮಾಪುರದವರಿಗೆ 15 : 22 (KNV)
ಈ ಕಾರಣದಿಂದ ನಿಮ್ಮ ಬಳಿಗೆ ಬರುವದಕ್ಕೆ ನನಗೆ ಬಹಳ ಅಭ್ಯಂತರವಾಯಿತು.
ರೋಮಾಪುರದವರಿಗೆ 15 : 23 (KNV)
ಆದರೆ ಈ ಪ್ರದೇಶಗಳಲ್ಲಿ ಸೇವೆಗೆ ಇನ್ನೂ ಸ್ಥಳವಿಲ್ಲದ ಕಾರಣ ನಿಮ್ಮ ಬಳಿಗೆ ಬರಬೇಕೆಂದು ಅನೇಕ ವರುಷಗಳಿಂದ ನನಗೆ ಬಹಳ ಅಭಿಲಾಷೆಯಿರುವದರಿಂದ
ರೋಮಾಪುರದವರಿಗೆ 15 : 24 (KNV)
ನಾನು ಸ್ಪೇನ್‌ ದೇಶಕ್ಕೆ ಯಾವ ಸಮಯದಲ್ಲಿಯಾದರೂ ಪ್ರಯಾಣ ಕೈಕೊಂಡರೆ ನಿಮ್ಮ ಬಳಿಗೆ ಬರುವೆನು; ಯಾಕಂದರೆ ನನ್ನ ಪ್ರಯಾಣದಲ್ಲಿ ನಾನು ನಿಮ್ಮನ್ನು ನೋಡುವೆನೆಂದು ಭರವಸವುಂಟು. ಇದಲ್ಲದೆ ಮೊದಲು ನಿಮ್ಮ ಅನ್ಯೋನ್ಯತೆಯಲ್ಲಿ ಸಂತೃಪ್ತನಾಗಿ ಮುಂದೆ ನನ್ನ ಮಾರ್ಗದಲ್ಲಿ ನಿಮ್ಮಿಂದ ಸಾಗಕ
ರೋಮಾಪುರದವರಿಗೆ 15 : 25 (KNV)
ಆದರೆ ಈಗ ಪರಿಶುದ್ಧರಿಗೆ ಸೇವೆಮಾಡುವದಕ್ಕೋಸ್ಕರ ನಾನು ಯೆರೂಸಲೇಮಿಗೆ ಹೋಗುತ್ತೇನೆ.
ರೋಮಾಪುರದವರಿಗೆ 15 : 26 (KNV)
ಯೆರೂಸಲೇಮಿನಲ್ಲಿರುವ ಬಡವ ರಾದ ಪರಿಶುದ್ಧರಿಗೆ ಸ್ವಲ್ಪ ಸಹಾಯಮಾಡಲು ಮಕೆದೋನ್ಯ ಮತ್ತು ಅಖಾಯದವರು ಇಷ್ಟಪಟ್ಟಿದ್ದಾರೆ.
ರೋಮಾಪುರದವರಿಗೆ 15 : 27 (KNV)
ಇದನ್ನು ಮಾಡುವದಕ್ಕೆ ಋಣಸ್ಥರಾಗಿರುವದರಿಂದ ಅವರು ನಿಜವಾಗಿಯೂ ಇಷ್ಟಪಟ್ಟಿದ್ದಾರೆ. ಹೇಗಂದರೆ ಅನ್ಯಜನರು ಅವರ ಆತ್ಮಸಂಬಂಧವಾದವುಗಳಲ್ಲಿ ಪಾಲುಗಾರರಾದ ಮೇಲೆ ಶರೀರಸಂಬಂಧವಾದ ವುಗಳಲ್ಲಿಯೂ ಅವರಿಗೆ ಸೇವೆ ಮಾಡುವದು ಮಾತ್ರ ವಲ್ಲದೆ ಅದು ಅವರ ಕರ್ತವ್ಯವೂ ಆಗಿದೆ.
ರೋಮಾಪುರದವರಿಗೆ 15 : 28 (KNV)
ನಾನು ಈ ಕೆಲಸವನ್ನು ತೀರಿಸಿಕೊಂಡು ಈ ಫಲವನ್ನು ಭದ್ರವಾಗಿ ಅಲ್ಲಿಯವರ ವಶಕ್ಕೆ ಕೊಟ್ಟಮೇಲೆ ನಿಮ್ಮ ಮಾರ್ಗವಾಗಿ ಸ್ಪೇನಿಗೆ ಬರುವೆನು.
ರೋಮಾಪುರದವರಿಗೆ 15 : 29 (KNV)
ಹೀಗೆ ನಾನು ನಿಮ್ಮ ಬಳಿಗೆ ಬಂದಾಗ ಕ್ರಿಸ್ತನ ಸುವಾರ್ತೆಯ ಆಶೀ ರ್ವಾದದ ಪರಿಪೂರ್ಣತೆಯಿಂದ ಬರುವೆನೆಂದು ನನಗೆ ನಿಶ್ಚಯವುಂಟು.
ರೋಮಾಪುರದವರಿಗೆ 15 : 30 (KNV)
ಸಹೋದರರೇ, ನೀವು ನನಗೋಸ್ಕರ ದೇವರ ಮುಂದೆ ಮಾಡುವ ಪ್ರಾರ್ಥನೆಗಳಲ್ಲಿ ನನ್ನೊಂದಿಗೆ ಹೋರಾಟದಿಂದ ವಿಜ್ಞಾಪಿಸಿಕೊಳ್ಳಬೇಕೆಂದು ಕರ್ತ ನಾದ ಯೇಸು ಕ್ರಿಸ್ತನ ನಿಮಿತ್ತವಾಗಿಯೂ ಪವಿತ್ರಾತ್ಮನ ಪ್ರೀತಿಯ ನಿಮಿತ್ತವಾಗಿಯೂ ನಿಮ್ಮನ್ನು ಬೇಡಿ ಕೊಳ್ಳುತ್ತೇನೆ.
ರೋಮಾಪುರದವರಿಗೆ 15 : 31 (KNV)
ಯೂದಾಯದಲ್ಲಿ ನಂಬದವರಿಂದ ನನ್ನನ್ನು ತಪ್ಪಿಸಬೇಕೆಂತಲೂ ಯೆರೂಸಲೇಮಿಗೋಸ್ಕರ ನನ್ನ ಸೇವೆಯು ಆ ಪರಿಶುದ್ಧರಿಗೆ ಹಿತಕರವಾಗಿ ತೋರಬೇಕೆಂತಲೂ
ರೋಮಾಪುರದವರಿಗೆ 15 : 32 (KNV)
ಹೀಗೆ ನಾನು ದೇವರ ಚಿತ್ತಾ ನುಸಾರ ಆನಂದವುಳ್ಳವನಾಗಿ ನಿಮ್ಮಲ್ಲಿಗೆ ಬಂದು ನಿಮ್ಮ ಸಂಗಡ ವಿಶ್ರಾಂತಿ ಹೊಂದುವಂತೆಯೂ ಪ್ರಾರ್ಥಿಸಿರಿ.ಶಾಂತಿದಾಯಕನಾದ ದೇವರು ನಿಮ್ಮೆಲ್ಲರೊಂದಿಗಿ ರಲಿ. ಆಮೆನ್‌.
ರೋಮಾಪುರದವರಿಗೆ 15 : 33 (KNV)
ಶಾಂತಿದಾಯಕನಾದ ದೇವರು ನಿಮ್ಮೆಲ್ಲರೊಂದಿಗಿ ರಲಿ. ಆಮೆನ್‌.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33

BG:

Opacity:

Color:


Size:


Font: