ರೋಮಾಪುರದವರಿಗೆ 16 : 1 (KNV)
ನಾನು ನಿಮಗೆ ಒಪ್ಪಿಸುವ ನಮ್ಮ ಸಹೋದರಿಯಾದ ಫೊಯಿಬೆಯನ್ನು ಪ್ರೀತಿಯಿಂದ ಅಂಗೀಕರಿಸಿರಿ. ಆಕೆಯು ಕೆಂಕ್ರೆಯ ಲ್ಲಿರುವ ಸಭೆಯ ಸೇವಕಳಾಗಿದ್ದಾಳೆ.
ರೋಮಾಪುರದವರಿಗೆ 16 : 2 (KNV)
ನೀವು ಆಕೆಯನ್ನು ಪರಿಶುದ್ಧರಿಗೆ ತಕ್ಕಂತೆ ಕರ್ತನಲ್ಲಿ ಅಂಗೀಕರಿಸಿ ಆಕೆಯ ಕೆಲಸದಲ್ಲಿ ಆಕೆಗೆ ಅವಶ್ಯವಾದ ಸಹಾಯವನ್ನು ಮಾಡಿರಿ; ಆಕೆಯು ನನಗೂ ಅನೇಕರಿಗೂ ಸಹಾಯ ಮಾಡಿದವಳಾಗಿದ್ದಾಳೆ.
ರೋಮಾಪುರದವರಿಗೆ 16 : 3 (KNV)
ಕ್ರಿಸ್ತ ಯೇಸುವಿನಲ್ಲಿ ನನ್ನ ಸಹಾಯಕರಾದ ಪ್ರಿಸ್ಕಿಲ್ಲಳಿಗೂ ಅಕ್ವಿಲನಿಗೂ ನನ್ನ ವಂದನೆಗಳನ್ನು ತಿಳಿಸಿರಿ.
ರೋಮಾಪುರದವರಿಗೆ 16 : 4 (KNV)
ಅವರು ನನ್ನ ಪ್ರಾಣಕ್ಕಾಗಿ ತಮ್ಮ ಕುತ್ತಿಗೆಗಳನ್ನೇ ಒಡ್ಡಿದರು. ನಾನು ಮಾತ್ರವೇ ಅಲ್ಲ, ಅನ್ಯಜನರ ಸಭೆಗಳವರೆಲ್ಲರೂ ಅವರನ್ನು ವಂದಿಸುತ್ತಾರೆ.
ರೋಮಾಪುರದವರಿಗೆ 16 : 5 (KNV)
ಅದರಂತೆಯೇ ಅವರ ಮನೆಯಲ್ಲಿರುವ ಸಭೆಗೂ ವಂದನೆ ಹೇಳಿರಿ; ಅಖಾಯದಲ್ಲಿ ಕ್ರಿಸ್ತನಿಗೆ ಪ್ರಥಮ ಫಲವಾಗಿರುವ ನನ್ನ ಪ್ರಿಯನಾದ ಎಪೈನೆತನಿಗೂ ವಂದನೆ.
ರೋಮಾಪುರದವರಿಗೆ 16 : 6 (KNV)
ನಮಗೋಸ್ಕರ ಬಹು ಶ್ರಮೆಪಟ್ಟ ಮರಿಯಳಿಗೆ ವಂದನೆ.
ರೋಮಾಪುರದವರಿಗೆ 16 : 7 (KNV)
ನನಗಿಂತ ಮೊದಲು ಕ್ರಿಸ್ತ ನಲ್ಲಿದ್ದು ಅಪೊಸ್ತಲರಲ್ಲಿ ಪ್ರಖ್ಯಾತಿಗೊಂಡ ನನ್ನ ಬಂಧುಗಳೂ ನನ್ನ ಜೊತೆ ಸೆರೆಯವರೂ ಆಗಿರುವ ಅಂದ್ರೋನಿಕನಿಗೂ ಯೂನ್ಯನಿಗೂ ವಂದನೆಗಳು.
ರೋಮಾಪುರದವರಿಗೆ 16 : 8 (KNV)
ಕರ್ತನಲ್ಲಿ ನನ್ನ ಪ್ರಿಯನಾಗಿರುವ ಅಂಪ್ಲಿಯಾತನಿಗೆ ವಂದನೆ.
ರೋಮಾಪುರದವರಿಗೆ 16 : 9 (KNV)
ಕ್ರಿಸ್ತನಲ್ಲಿ ನಮ್ಮ ಸಹಾಯಕನಾದ ಉರ್ಬಾನನಿಗೂ ನನ್ನ ಪ್ರಿಯನಾದ ಸ್ತಾಖುನಿಗೂ ವಂದನೆಗಳು.
ರೋಮಾಪುರದವರಿಗೆ 16 : 10 (KNV)
ಕ್ರಿಸ್ತನಲ್ಲಿ ಮೆಚ್ಚಿಕೆ ಹೊಂದಿದ ಅಪೆಲ್ಲ ನಿಗೆ ವಂದನೆ; ಅರಿಸ್ತೊಬೂಲನ ಮನೆಯವರಿಗೆ ವಂದನೆಗಳು.
ರೋಮಾಪುರದವರಿಗೆ 16 : 11 (KNV)
ನನ್ನ ಬಂಧುವಾದ ಹೆರೊಡಿಯೋ ನನಿಗೆ ವಂದನೆ. ಕರ್ತನಲ್ಲಿರುವ ನಾರ್ಕಿಸ್ಸನ ಮನೆ ಯವರಿಗೆ ವಂದನೆಗಳು.
ರೋಮಾಪುರದವರಿಗೆ 16 : 12 (KNV)
ಕರ್ತನಲ್ಲಿ ಪ್ರಯಾಸಪ ಡುವ ತ್ರುಫೈನಳಿಗೂ ತ್ರುಫೋಸಳಿಗೂ ವಂದನೆಗಳು. ಕರ್ತನಲ್ಲಿ ಹೆಚ್ಚಾಗಿ ಪ್ರಯಾಸಪಟ್ಟಿರುವ ಪ್ರಿಯ ಪೆರ್ಸೀ ಸಳಿಗೆ ವಂದನೆ.
ರೋಮಾಪುರದವರಿಗೆ 16 : 13 (KNV)
ಕರ್ತನಲ್ಲಿ ಆರಿಸಲ್ಪಟ್ಟ ರೂಫನಿಗೂ ನನಗೆ ತಾಯಿಯಂತಿರುವ ಅವನ ತಾಯಿಗೂ ವಂದನೆ ಗಳು.
ರೋಮಾಪುರದವರಿಗೆ 16 : 14 (KNV)
ಅಸುಂಕ್ರಿತನಿಗೂ ಪ್ಲೆಗೋನನಿಗೂ ಹೆರ್ಮೇ ಯನಿಗೂ ಪತ್ರೋಬನಿಗೂ ಹೆರ್ಮಾನನಿಗೂ ಅವ ರೊಂದಿಗಿರುವ ಸಹೋದರರಿಗೂ ವಂದನೆಗಳು.
ರೋಮಾಪುರದವರಿಗೆ 16 : 15 (KNV)
ಫಿಲೊಲೊಗನಿಗೂ ಯೂಲ್ಯಳಿಗೂ ನೇರ್ಯನಿಗೂ ಅವನ ಸಹೋದರರಿಗೂ ಒಲುಂಪನಿಗೂ ಅವರೊಂದಿ ಗಿರುವ ಪರಿಶುದ್ಧರೆಲ್ಲರಿಗೂ ವಂದನೆಗಳು.
ರೋಮಾಪುರದವರಿಗೆ 16 : 16 (KNV)
ಪವಿತ್ರ ವಾದ ಮುದ್ದಿನಿಂದ ಒಬ್ಬರನ್ನೊಬ್ಬರು ವಂದಿಸಿರಿ. ಕ್ರಿಸ್ತನ ಸಭೆಗಳು ನಿಮ್ಮನ್ನು ವಂದಿಸುತ್ತವೆ.
ರೋಮಾಪುರದವರಿಗೆ 16 : 17 (KNV)
ಸಹೋದರರೇ, ನೀವು ಹೊಂದಿದ ಉಪದೇಶಕ್ಕೆ ವಿರುದ್ಧವಾಗಿ ಭೇದಗಳನ್ನೂ ವಿಘ್ನಗಳನ್ನೂ ನಿಮ್ಮಲ್ಲಿ ಉಂಟು ಮಾಡುವವರನ್ನು ಗುರುತಿಟ್ಟು ಅವರನ್ನು ಬಿಟ್ಟು ತೊಲಗಿಹೋಗಿರಿ ಎಂದು ನಾನು ನಿಮ್ಮನ್ನು ಬೇಡಿ ಕೊಳ್ಳುತ್ತೇನೆ.
ರೋಮಾಪುರದವರಿಗೆ 16 : 18 (KNV)
ಅಂಥವರು ನಮ್ಮ ಕರ್ತನಾದ ಯೇಸು ಕ್ರಿಸ್ತನ ಸೇವೆಯನ್ನು ಮಾಡದೆ ತಮ್ಮ ಹೊಟ್ಟೆಯ ಸೇವೆಯನ್ನೇ ಮಾಡುವವರಾಗಿ ನಯದ ನುಡಿ ಗಳಿಂದಲೂ ಹೊಗಳಿಕೆಯ ಮಾತುಗಳಿಂದಲೂ ನಿಷ್ಕಪ ಟಿಗಳ ಹೃದಯಗಳನ್ನು ಮೋಸಗೊಳಿಸುತ್ತಾರೆ.
ರೋಮಾಪುರದವರಿಗೆ 16 : 19 (KNV)
ನಿಮ್ಮ ವಿಧೇಯತ್ವವು ಎಲ್ಲರಿಗೂ ಪ್ರಸಿದ್ಧವಾಗಿದ್ದದರಿಂದ ನಿಮ್ಮ ವಿಷಯದಲ್ಲಿ ನಾನು ಆನಂದಪಡುತ್ತೇನೆ. ಆದಾಗ್ಯೂ ನೀವು ಒಳ್ಳೇತನದ ವಿಷಯದಲ್ಲಿ ಜಾಣರೂ ಕೆಟ್ಟತನದ ವಿಷಯದಲ್ಲಿ ಕಳಂಕವಿಲ್ಲದವರೂ ಆಗಿರಬೇಕೆಂದು ಅಪೇಕ್ಷಿಸುತ್ತೇನೆ.
ರೋಮಾಪುರದವರಿಗೆ 16 : 20 (KNV)
ಶಾಂತಿದಾಯಕನಾದ ದೇವರು ಶೀಘ್ರವಾಗಿ ಸೈತಾನನನ್ನು ನಿಮ್ಮ ಪಾದಗಳ ಕೆಳಗೆ ತುಳಿದುಬಿಡುವನು. ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೊಂದಿಗಿರಲಿ. ಆಮೆನ್‌.
ರೋಮಾಪುರದವರಿಗೆ 16 : 21 (KNV)
ನನ್ನ ಜೊತೆ ಕೆಲಸದವನಾದ ತಿಮೊಥೆಯನೂ ನನ್ನ ಬಂಧುಗಳಾದ ಲೂಕ್ಯನೂ ಯಾಸೋನನೂ ಸೋಸಿಪತ್ರನೂ ನಿಮಗೆ ವಂದನೆಗಳನ್ನು ಹೇಳುತ್ತಾರೆ.
ರೋಮಾಪುರದವರಿಗೆ 16 : 22 (KNV)
ಈ ಪತ್ರಿಕೆಯನ್ನು ಬರೆದ ತೆರ್ತ್ಯನೆಂಬ ನಾನು ನಿಮ್ಮನ್ನು ಕರ್ತನಲ್ಲಿ ವಂದಿಸುತ್ತೇನೆ.
ರೋಮಾಪುರದವರಿಗೆ 16 : 23 (KNV)
ನನಗೂ ಸಮಸ್ತ ಸಭೆಗೂ ಅತಿಥಿಸತ್ಕಾರವನ್ನು ಮಾಡುತ್ತಿರುವ ಗಾಯನು ನಿಮ್ಮನ್ನು ವಂದಿಸುತ್ತಾನೆ. ಈ ಪಟ್ಟಣದ ಖಜಾನೆಯ ಮೇಲ್ವಿಚಾರಕ ನಾಗಿರುವ ಎರಸ್ತನೂ ಸಹೋದರನಾದ ಕ್ವರ್ತನೂ ನಿಮಗೆ ವಂದನೆಗಳನ್ನು ಹೇಳುತ್ತಾರೆ.
ರೋಮಾಪುರದವರಿಗೆ 16 : 24 (KNV)
ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೆಲ್ಲರೊಂದಿಗಿರಲಿ. ಆಮೆನ್‌.
ರೋಮಾಪುರದವರಿಗೆ 16 : 25 (KNV)
ಪ್ರಕಟನೆಯಾದ ಈ ಮರ್ಮಕ್ಕೆ ಅನುಸಾರ ಅಂದರೆ ಯೇಸು ಕ್ರಿಸ್ತನ ವಿಷಯವಾದಂಥ ನಾನು ಸಾರುವಂಥ ಸುವಾರ್ತೆಗನುಸಾರ ನಿಮ್ಮನ್ನು ಸ್ಥಿರಪಡಿ ಸುವದಕ್ಕೆ ಶಕ್ತನಾಗಿರುವಾತನಿಂದ
ರೋಮಾಪುರದವರಿಗೆ 16 : 26 (KNV)
ಅನಾದಿಯಿಂದ ಗುಪ್ತವಾಗಿದ್ದ ಮರ್ಮವು ಈಗ ಪ್ರಕಾಶಕ್ಕೆ ಬಂದು ನಿತ್ಯನಾದ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಗಳ ಗ್ರಂಥಗಳ ಮೂಲಕ ಅನ್ಯಜನರೆಲ್ಲರಿಗೆ ನಂಬಿಕೆಯೆಂಬ ವಿಧೇಯತ್ವವನ್ನು ಉಂಟುಮಾಡುವದಕ್ಕೋಸ್ಕರ ತಿಳಿಸ ಲ್ಪಟ್ಟಿದೆ.ಜ್ಞಾನಿಯಾದ ಒಬ್ಬನೇ ದೇವರಿಗೆ ಯೇಸು ಕ್ರಿಸ್ತನ ಮೂಲಕ ಎಂದೆಂದಿಗೂ ಮಹಿಮೆ ಉಂಟಾಗಲಿ. ಆಮೆನ್‌.
ರೋಮಾಪುರದವರಿಗೆ 16 : 27 (KNV)
ಜ್ಞಾನಿಯಾದ ಒಬ್ಬನೇ ದೇವರಿಗೆ ಯೇಸು ಕ್ರಿಸ್ತನ ಮೂಲಕ ಎಂದೆಂದಿಗೂ ಮಹಿಮೆ ಉಂಟಾಗಲಿ. ಆಮೆನ್‌.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27

BG:

Opacity:

Color:


Size:


Font: