ರೋಮಾಪುರದವರಿಗೆ 7 : 1 (KNV)
ಸಹೋದರರೇ, (ನ್ಯಾಯಪ್ರಮಾಣವನ್ನು ತಿಳಿದವರಿಗೆ ನಾನು ಹೇಳುವದೇ ನಂದರೆ,) ಒಬ್ಬ ಮನುಷ್ಯನು ಜೀವದಿಂದಿರುವ ತನಕ ಅವನ ಮೇಲೆ ನ್ಯಾಯಪ್ರಮಾಣವು ಪ್ರಭುತ್ವ ಮಾಡುತ್ತ ದೆಂಬದು ನಿಮಗೆ ಗೊತ್ತಿಲ್ಲವೇ?
ರೋಮಾಪುರದವರಿಗೆ 7 : 2 (KNV)
ಗಂಡನಿರುವ ಸ್ತ್ರೀಯು ಅವನು ಬದುಕಿರುವ ತನಕ ನ್ಯಾಯಪ್ರಮಾಣದಿಂದ ಅವನಿಗೆ ಕಟ್ಟಲ್ಪಟ್ಟಿದ್ದಾಳೆ; ಗಂಡನು ಸತ್ತರೆ ಆಕೆಯು ಅವನ ನ್ಯಾಯಪ್ರಮಾಣದಿಂದ ಬಿಡುಗಡೆಯಾಗಿ ದ್ದಾಳೆ.
ರೋಮಾಪುರದವರಿಗೆ 7 : 3 (KNV)
ಹೀಗಿರಲಾಗಿ ಗಂಡನು ಜೀವದಿಂದಿರುವಾಗ ಆಕೆ ಬೇರೊಬ್ಬನನ್ನು ಮದುವೆ ಮಾಡಿಕೊಂಡರೆ ವ್ಯಭಿ ಚಾರಿಣಿ ಎಂದು ಕರೆಯಲ್ಪಡುವಳು; ಗಂಡನು ಸತ್ತರೆ ಆ ನ್ಯಾಯಪ್ರಮಾಣದಿಂದ ಆಕೆಯು ಬಿಡುಗಡೆಯಾಗಿ ದ್ದಾಳೆ. ಹೀಗೆ ಆಕೆ ಮತ್ತೊಬ್ಬನನ್ನು ಮದುವೆ ಮಾಡಿ ಕೊಂಡರೂ ವ್ಯಭಿಚಾರಿಣಿಯಲ್ಲ.
ರೋಮಾಪುರದವರಿಗೆ 7 : 4 (KNV)
ಹಾಗೆಯೇ ನನ್ನ ಸಹೋದರರೇ, ನೀವು ಸಹ ಕ್ರಿಸ್ತನ ದೇಹದ ಮೂಲಕವಾಗಿ ನ್ಯಾಯಪ್ರಮಾಣದ ಪಾಲಿಗೆ ಸತ್ತಿರಿ. ದೇವರಿಗೆ ಫಲಫಲಿಸುವದಕ್ಕಾಗಿ ಮತ್ತೊಬ್ಬನನ್ನು ಅಂದರೆ ಸತ್ತುಜೀವಿತನಾಗಿ ಎದ್ದಾತನನ್ನು ಸೇರಿಕೊಂಡಿರಿ.
ರೋಮಾಪುರದವರಿಗೆ 7 : 5 (KNV)
ನಾವು ಶರೀರದಲ್ಲಿದ್ದಾಗ ಪಾಪಗಳ ಇಚ್ಛೆಗಳು ನ್ಯಾಯಪ್ರಮಾಣದಿಂದಲೇ ಮರಣಕ್ಕೆ ಫಲಫಲಿಸುವ ದಕ್ಕಾಗಿ ನಮ್ಮ ಅಂಗಗಳಲ್ಲಿ ಯತ್ನಿಸುತ್ತಿದ್ದವು.
ರೋಮಾಪುರದವರಿಗೆ 7 : 6 (KNV)
ಈಗಲಾದರೋ ನಮ್ಮನ್ನು ಹಿಡುಕೊಂಡಿದ್ದ ನ್ಯಾಯಪ್ರಮಾಣದ ಪಾಲಿಗೆ ನಾವು ಸತ್ತಕಾರಣ ಅದರಿಂದ ವಿಮುಕ್ತರಾಗಿದ್ದೇವೆ; ಹೀಗೆ ನಾವು ಅಕ್ಷರದ ಹಳೇ ರೀತಿಯಲ್ಲಿ ಆತನನ್ನು ಸೇವಿಸದೆ ಆತ್ಮನಿಂದ ಹೊಸ ರೀತಿಯಲ್ಲಿಯೇ ಸೇವಿಸುತ್ತೇವೆ.
ರೋಮಾಪುರದವರಿಗೆ 7 : 7 (KNV)
ಹಾಗಾದರೆ ನಾವು ಏನು ಹೇಳೋಣ? ನ್ಯಾಯ ಪ್ರಮಾಣವು ಪಾಪವೋ? ಹಾಗೆ ಎಂದಿಗೂ ಅಲ್ಲ; ನ್ಯಾಯಪ್ರಮಾಣದಿಂದಲೇ ಹೊರತು ಪಾಪವೆಂಬದು ಏನೋ ನನಗೆ ಗೊತ್ತಿರಲಿಲ್ಲ. ಯಾಕಂದರೆ--ನೀನು ಆಶಿಸಬಾರದು ಎಂದು ನ್ಯಾಯಪ್ರಮಾಣವು ಹೇಳ ದಿದ್ದರೆ ದುರಾಶೆಯೆಂದರೆ ಏನೋ ನನಗೆ ತಿಳಿಯು ತ್ತಿರಲಿಲ್ಲ.
ರೋಮಾಪುರದವರಿಗೆ 7 : 8 (KNV)
ಆದರೆ ಪಾಪವು ಈ ಆಜ್ಞೆಯಿಂದ ಅನುಕೂಲ ಹೊಂದಿ ಸಕಲ ವಿಧವಾದ ದುರಾಶೆಯನ್ನು ನನ್ನಲ್ಲಿ ಹುಟ್ಟಿಸಿತು. ನ್ಯಾಯಪ್ರಮಾಣವು ಇಲ್ಲದಿರು ವಾಗ ಪಾಪವು ಸತ್ತದ್ದಾಗಿದೆ.
ರೋಮಾಪುರದವರಿಗೆ 7 : 9 (KNV)
ಮೊದಲು ನಾನು ನ್ಯಾಯಪ್ರಮಾಣವಿಲ್ಲದವನಾಗಿದ್ದು ಜೀವದಿಂದಿದ್ದೆನು. ಆಜ್ಞೆಯು ಬಂದಾಗ ಪಾಪವು ಪುನರ್ಜೀವವಾಗಿ ನಾನು ಸತ್ತೆನು.
ರೋಮಾಪುರದವರಿಗೆ 7 : 10 (KNV)
ಜೀವಿಸುವದಕ್ಕಾಗಿರುವ ಆಜ್ಞೆಯೇ ಮರಣಕ್ಕಾಯಿತೆಂದು ನಾನು ಕಂಡುಕೊಂಡೆನು.
ರೋಮಾಪುರದವರಿಗೆ 7 : 11 (KNV)
ಹೇಗಂದರೆ ಪಾಪವು ಆಜ್ಞೆಯಿಂದ ಅನುಕೂಲ ಹೊಂದಿ ನನ್ನನ್ನು ವಂಚಿಸಿ ಅದರ ಮೂಲಕವೇ ನನ್ನನು ಕೊಂದಿತು;
ರೋಮಾಪುರದವರಿಗೆ 7 : 12 (KNV)
ಹೀಗಿರಲಾಗಿ ನ್ಯಾಯಪ್ರಮಾಣವು ಪರಿ ಶುದ್ಧವಾದದ್ದು. ಆಜ್ಞೆಯು ಪರಿಶುದ್ಧವೂ ನ್ಯಾಯವೂ ಹಿತವೂ ಆಗಿರುವಂಥದ್ದು ಸರಿ.
ರೋಮಾಪುರದವರಿಗೆ 7 : 13 (KNV)
ಹಾಗಾದರೆ ಹಿತವಾದದ್ದು ನನಗೆ ಮರಣಕ್ಕೆ ಕಾರಣವಾಯಿತೋ? ಹಾಗೆ ಎಂದಿಗೂ ಅಲ್ಲ; ಆದರೆ ಪಾಪವು ಹಿತವಾದದ್ದರ ಮೂಲಕ ನನ್ನಲ್ಲಿ ಮರಣವನ್ನು ಉಂಟುಮಾಡಿದ್ದರಿಂದ ಅದು ಪಾಪವೇ ಎಂದು ಕಾಣಿಸಿಕೊಂಡಿತು. ಹೀಗೆ ಆಜ್ಞೆಯ ಮೂಲಕ ಪಾಪವು ಅತ್ಯಧಿಕವಾದ ಪಾಪವಾಗಿ ತೋರಿಬಂತು.
ರೋಮಾಪುರದವರಿಗೆ 7 : 14 (KNV)
ನ್ಯಾಯ ಪ್ರಮಾಣವು ಆತ್ಮೀಕವಾದದ್ದೆಂದು ನಾವು ಬಲ್ಲೆವು; ಆದರೆ ನಾನು ಶರೀರಾಧೀನನೂ ಪಾಪದ ಅಧೀನದಲ್ಲಿ ರುವದಕ್ಕೆ ಮಾರಲ್ಪಟ್ಟವನೂ ಆಗಿದ್ದೇನೆ.
ರೋಮಾಪುರದವರಿಗೆ 7 : 15 (KNV)
ಹೇಗಂದರೆ ನಾನು ಮಾಡುವದನ್ನು ನಾನೇ ಒಪ್ಪುವದಿಲ್ಲ; ಯಾವದನ್ನು ಮಾಡಬೇಕೆಂದು ನಾನು ಇಚ್ಛಿಸುತ್ತೇನೋ ಅದನ್ನು ಮಾಡದೆ ನಾನು ವಿರೋಧಿಸುವದನ್ನು ಮಾಡುತ್ತೇನೆ.
ರೋಮಾಪುರದವರಿಗೆ 7 : 16 (KNV)
ಆದರೆ ನನಗೆ ಮನಸ್ಸಿಲ್ಲದ್ದನ್ನು ಮಾಡಿ ದರೆ ನ್ಯಾಯಪ್ರಮಾಣವು ಉತ್ತಮವಾದದ್ದೆಂದು ಒಪ್ಪಿ ಕೊಂಡ ಹಾಗಾಯಿತು.
ರೋಮಾಪುರದವರಿಗೆ 7 : 17 (KNV)
ಹೀಗಿರಲಾಗಿ ವಿರೋಧ ವಾದದ್ದನ್ನು ಮಾಡುವವನು ಇನ್ನು ನಾನಲ್ಲ; ನನ್ನಲ್ಲಿ ನೆಲೆಗೊಂಡಿರುವ ಪಾಪವೇ ಅದನ್ನು ಮಾಡುತ್ತದೆ.
ರೋಮಾಪುರದವರಿಗೆ 7 : 18 (KNV)
ಯಾಕಂದರೆ ನನ್ನಲ್ಲಿ ಅಂದರೆ ನನ್ನ ಶರೀರದಲ್ಲಿ ಒಳ್ಳೆಯದೇನೂ ವಾಸವಾಗಿಲ್ಲವೆಂದು ನನಗೆ ತಿಳಿದದೆ; ಒಳ್ಳೇದನ್ನು ಮಾಡುವದಕ್ಕೆ ನನಗೇನೋ ಮನಸ್ಸುಂಟು; ಆದರೆ ಅದನ್ನು ಮಾಡುವದು ನನ್ನಿಂದಾಗದು.
ರೋಮಾಪುರದವರಿಗೆ 7 : 19 (KNV)
ನಾನು ಇಚ್ಛಿಸುವ ಒಳ್ಳೇದನ್ನು ಮಾಡದೆ ಇಚ್ಛಿಸದಿರುವ ಕೆಟ್ಟ ದ್ದನ್ನೇ ಮಾಡುವವನಾಗಿದ್ದೇನೆ.
ರೋಮಾಪುರದವರಿಗೆ 7 : 20 (KNV)
ಇಚ್ಛಿಸದಿರುವದನ್ನು ನಾನು ಮಾಡಿದರೆ ಅದನ್ನು ಮಾಡಿದವನು ಇನ್ನು ನಾನಲ್ಲ. ನನ್ನಲ್ಲಿ ನೆಲೆಗೊಂಡಿರುವ ಪಾಪವೇ ಅದನ್ನು ಮಾಡಿತು.
ರೋಮಾಪುರದವರಿಗೆ 7 : 21 (KNV)
ಹೀಗಿರಲಾಗಿ ಒಳ್ಳೆಯದನ್ನು ಮಾಡ ಲಿಚ್ಛಿಸುವ ನನಗೆ ಕೆಟ್ಟದ್ದಾಗಿರುವ ನಿಯಮವು ನನ್ನಲ್ಲಿ ಕಾಣಬರುತ್ತದೆ.
ರೋಮಾಪುರದವರಿಗೆ 7 : 22 (KNV)
ಹೀಗಿದ್ದಾಗ್ಯೂ ಒಳಮನುಷ್ಯನಿಗನು ಗುಣವಾಗಿ ದೇವರ ನಿಯಮದಲ್ಲಿ ಆನಂದಪಡುವವ ನಾಗಿದ್ದೇನೆ.
ರೋಮಾಪುರದವರಿಗೆ 7 : 23 (KNV)
ಆದರೆ ನನ್ನ ಅಂಗಗಳಲ್ಲಿ ಬೇರೊಂದು ನಿಯಮವುಂಟೆಂದು ನಾನು ನೋಡುತ್ತೇನೆ; ಅದು ನನ್ನ ಮನಸ್ಸಿನಲ್ಲಿರುವ ನಿಯಮಕ್ಕೆ ವಿರೋಧವಾಗಿ ಕಾದಾಡಿ ನನ್ನನ್ನು ಸೆರೆ ಹಿಡಿದು ನನ್ನ ಅಂಗಗಳಲ್ಲಿರುವ ಪಾಪದ ನಿಯಮಕ್ಕೆ ವಶಮಾಡುವಂಥದ್ದಾಗಿದೆ.
ರೋಮಾಪುರದವರಿಗೆ 7 : 24 (KNV)
ಅಯ್ಯೋ, ನಾನು ಎಂಥ ನಿರ್ಗತಿಕನಾದ ಮನುಷ್ಯನು! ಇಂಥ ಮರಣಕ್ಕೆ ಒಳಗಾದ ಈ ದೇಹ ದಿಂದ ನನ್ನನ್ನು ಬಿಡಿಸುವವನು ಯಾರು?
ರೋಮಾಪುರದವರಿಗೆ 7 : 25 (KNV)
ನಾನು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಮಾಡುತ್ತೇನೆ; ಹೀಗೆ ನನ್ನಷ್ಟಕ್ಕೆ ನಾನೇ ಮನಸ್ಸಿನಿಂದ ದೇವರ ನಿಯಮಕ್ಕೂ ಶರೀರದಿಂದ ಪಾಪವೆಂಬ ನಿಯಮಕ್ಕೂ ಆಳಾಗಿದ್ದೇನೆ.
❮
❯