ರೋಮಾಪುರದವರಿಗೆ 8 : 1 (KNV)
ಆದದರಿಂದ ಕ್ರಿಸ್ತ ಯೇಸುವಿನಲ್ಲಿ ರುವವರಿಗೆ ಅಪರಾಧ ನಿರ್ಣಯವು ಈಗ ಇಲ್ಲವೇ ಇಲ್ಲ; ಇವರು ಶರೀರಕ್ಕನುಸಾರವಾಗಿ ಅಲ್ಲ, ಆತ್ಮನಿಗನುಸಾರವಾಗಿಯೇ ನಡೆಯುವವರಾಗಿದ್ದಾರೆ.
ರೋಮಾಪುರದವರಿಗೆ 8 : 2 (KNV)
ಜೀವವನ್ನುಂಟು ಮಾಡುವ ಆತ್ಮನ ನಿಯಮವು ಕ್ರಿಸ್ತ ಯೇಸುವಿನಲ್ಲಿ ನನ್ನನ್ನು ಪಾಪ ಮರಣಗಳ ನಿಯಮ ದಿಂದ ಬಿಡಿಸಿತು.
ರೋಮಾಪುರದವರಿಗೆ 8 : 3 (KNV)
ನ್ಯಾಯಪ್ರಮಾಣವು ಶರೀರದ ಮೂಲಕ ನಿರ್ಬಲವಾಗಿ ಯಾವದನ್ನು ಮಾಡಲಾರದೆ ಇತ್ತೋ ಅದನ್ನು ದೇವರೇ ಮಾಡಿದನು; ಹೇಗಂದರೆ ಆತನು ತನ್ನ ಸ್ವಂತ ಮಗನನ್ನು ಪಾಪಶರೀರದ ಹೋಲಿಕೆ ಯಲ್ಲಿ ಕಳುಹಿಸಿ ಪಾಪಕ್ಕಾಗಿ ಆ ಶರೀರದಲ್ಲಿಯೇ ಪಾಪವನ್ನು ದಂಡಿಸಿದನು.
ರೋಮಾಪುರದವರಿಗೆ 8 : 4 (KNV)
ಹೀಗೆ ಶರೀರಕ್ಕನುಸಾರ ವಾಗಿ ನಡೆಯದೆ ಆತ್ಮನಿಗನುಸಾರವಾಗಿ ನಡೆಯುವವ ರಾದ ನಮ್ಮಲ್ಲಿ ನ್ಯಾಯಪ್ರಮಾಣದ ನೀತಿಯು ನೆರ ವೇರುವದು.
ರೋಮಾಪುರದವರಿಗೆ 8 : 5 (KNV)
ಶರೀರವನ್ನು ಅನುಸರಿಸುವವರು ಅದಕ್ಕೆ ಸಂಬಂಧ ಪಟ್ಟವುಗಳ ಮೇಲೆ ಮನಸ್ಸಿಡುತ್ತಾರೆ; ಆತ್ಮನನ್ನನುಸರಿ ಸುವವರಾದರೋ ಆತ್ಮನಿಗೆ ಸಂಬಂಧಪಟ್ಟವುಗಳ ಮೇಲೆ ಮನಸ್ಸಿಡುತ್ತಾರೆ.
ರೋಮಾಪುರದವರಿಗೆ 8 : 6 (KNV)
ಶರೀರಕ್ಕನುಸಾರವಾದ ಮನಸ್ಸು ಮರಣ: ಆತ್ಮೀಕವಾದ ಮನಸ್ಸುಜೀವವೂ ಸಮಾಧಾನವೂ ಆಗಿದೆ.
ರೋಮಾಪುರದವರಿಗೆ 8 : 7 (KNV)
ಶರೀರ ಸಂಬಂಧವಾದ ಮನಸ್ಸು ದೇವರಿಗೆ ಶತ್ರುತ್ವವು; ಕಾರಣವೇನಂದರೆ ಅಂಥ ಮನಸ್ಸು ದೇವರ ನಿಯಮಕ್ಕೆ ಒಳಪಡುವದಿಲ್ಲ, ಒಳಪಡುವದಕ್ಕಾಗುವದೂ ಇಲ್ಲ.
ರೋಮಾಪುರದವರಿಗೆ 8 : 8 (KNV)
ಹೀಗಿರಲಾಗಿ ಶರೀರಾಧೀನರು ದೇವರನ್ನು ಮೆಚ್ಚಿಸಲಾರರು.
ರೋಮಾಪುರದವರಿಗೆ 8 : 9 (KNV)
ನೀವಾ ದರೋ ನಿಮ್ಮಲ್ಲಿ ದೇವರಾತ್ಮನು ವಾಸವಾಗಿರುವದಾದರೆ ಶರೀರಾಧೀನರಲ್ಲ, ಆತ್ಮನಿಗೆ ಅಧೀನರಾಗಿದ್ದೀರಿ. ಯಾವ ನಿಗಾದರೂ ಕ್ರಿಸ್ತನ ಆತ್ಮನು ಇಲ್ಲದಿದ್ದರೆ ಅವನು ಕ್ರಿಸ್ತನವ ನಲ್ಲ.
ರೋಮಾಪುರದವರಿಗೆ 8 : 10 (KNV)
ಆದರೆ ಕ್ರಿಸ್ತನು ನಿಮ್ಮಲ್ಲಿದ್ದರೆ ದೇಹವು ಪಾಪದ ದೆಸೆಯಿಂದ ಸತ್ತದ್ದಾಗಿದ್ದರೂ ಆತ್ಮವು ನೀತಿಯ ದೆಸೆ ಯಿಂದ ಜೀವವುಳ್ಳದ್ದಾಗಿದೆ.
ರೋಮಾಪುರದವರಿಗೆ 8 : 11 (KNV)
ಯೇಸುವನ್ನು ಸತ್ತವ ರೊಳಗಿಂದ ಎಬ್ಬಿಸಿದಾತನ ಆತ್ಮನು ನಿಮ್ಮಲ್ಲಿ ವಾಸವಾಗಿ ದ್ದರೆ ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದಾತನು ನಿಮ್ಮಲ್ಲಿ ವಾಸವಾಗಿರುವ ತನ್ನ ಆತ್ಮನ ಮೂಲಕ ನಿಮ್ಮ ಮರ್ತ್ಯ ದೇಹಗಳನ್ನು ಸಹ ಬದುಕಿಸುವನು.
ರೋಮಾಪುರದವರಿಗೆ 8 : 12 (KNV)
ಹೀಗಿರಲಾಗಿ ಸಹೋದರರೇ, ಶರೀರಕ್ಕನುಸಾರ ವಾಗಿ ಜೀವಿಸುವದಕ್ಕೆ ನಾವು ಶರೀರಕ್ಕೆ ಋಣಸ್ಥರಲ್ಲ.
ರೋಮಾಪುರದವರಿಗೆ 8 : 13 (KNV)
ನೀವು ಶರೀರಭಾವವನ್ನು ಅನುಸರಿಸಿದರೆ ಸಾಯುವಿರಿ; ಆದರೆ ನೀವು ಆತ್ಮನಿಂದ ದೇಹದ ಕ್ರಿಯೆಗಳನ್ನು ಸಾಯಿಸುವದಾದರೆ ಜೀವಿಸುವಿರಿ.
ರೋಮಾಪುರದವರಿಗೆ 8 : 14 (KNV)
ಯಾಕಂದರೆ ಯಾರಾರು ದೇವರ ಆತ್ಮನಿಂದ ನಡಿಸಲ್ಪಡುತ್ತಾರೋ ಅವರು ದೇವರ ಪುತ್ರರಾಗಿದ್ದಾರೆ.
ರೋಮಾಪುರದವರಿಗೆ 8 : 15 (KNV)
ನೀವು ತಿರಿಗಿ ಭಯವುಳ್ಳವರಾಗಿರುವಂತೆ ದಾಸನ ಭಾವವನ್ನು ಹೊಂದಿದವರಲ್ಲ; ಆದರೆ ದತ್ತುಪುತ್ರ ಸ್ವೀಕಾರದ ಆತ್ಮನನ್ನು ಹೊಂದಿರುವದರಿಂದ ದೇವರನ್ನು ನಾವು ಅಪ್ಪಾ, ತಂದೆಯೇ ಎಂದು ಕೂಗುತ್ತೇವೆ.
ರೋಮಾಪುರದವರಿಗೆ 8 : 16 (KNV)
ನಾವು ದೇವರ ಮಕ್ಕಳಾಗಿದ್ದೇವೆಂದು ಆತ್ಮನು ತಾನೇ ನಮ್ಮ ಆತ್ಮದೊಂದಿಗೆ ಸಾಕ್ಷಿ ಹೇಳುತ್ತಾನೆ.
ರೋಮಾಪುರದವರಿಗೆ 8 : 17 (KNV)
ಮಕ್ಕಳಾ ಗಿದ್ದರೆ ಬಾಧ್ಯರಾಗಿದ್ದೇವೆ; ದೇವರಿಗೆ ಬಾಧ್ಯರು, ಕ್ರಿಸ್ತ ನೊಂದಿಗೆ ಸಹ ಬಾಧ್ಯರು; ಆತನೊಂದಿಗೆ ಶ್ರಮೆ ಯನ್ನನುಭವಿಸುವದಾದರೆ ಒಟ್ಟಾಗಿ ನಾವು ಸಹ ಮಹಿಮೆಯನ್ನು ಹೊಂದುವೆವು.
ರೋಮಾಪುರದವರಿಗೆ 8 : 18 (KNV)
ನಮ್ಮಲ್ಲಿ ಪ್ರತ್ಯಕ್ಷವಾಗಲಿರುವ ಮಹಿಮೆಯೊಂದಿಗೆ ಈಗಿನ ಕಾಲದ ಶ್ರಮೆಗಳನ್ನು ಹೋಲಿಸುವದು ಯೋಗ್ಯ ವಲ್ಲವೆಂದು ನಾನು ಎಣಿಸುತ್ತೇನೆ.
ರೋಮಾಪುರದವರಿಗೆ 8 : 19 (KNV)
ದೇವಪುತ್ರರ ಪ್ರತ್ಯಕ್ಷತೆಯನ್ನು ಸೃಷ್ಟಿಯು ಲವಲವಿಕೆಯಿಂದ ಎದುರು ನೋಡುತ್ತಾ ಇದೆ.
ರೋಮಾಪುರದವರಿಗೆ 8 : 20 (KNV)
ಸೃಷ್ಟಿಯು ವ್ಯರ್ಥತ್ವಕ್ಕೆ ಒಳಗಾದದ್ದು ಸ್ವೇಚ್ಛೆಯಿಂದಲ್ಲ, ಅದನ್ನು ಒಳಪಡಿಸಿದಾತನ ಮುಖಾಂ ತರ ನಿರೀಕ್ಷೆಯಲ್ಲಿಯೇ.
ರೋಮಾಪುರದವರಿಗೆ 8 : 21 (KNV)
ಸೃಷ್ಟಿಯು ತಾನೇ ದೇವರ ಮಕ್ಕಳ ಮಹಿಮೆಯ ಸ್ವಾತಂತ್ರ್ಯತೆಯಲ್ಲಿ ಸೇರುವಂತೆ ನಾಶನದ ದಾಸತ್ವದಿಂದ ಬಿಡುಗಡೆ ಹೊಂದುವದು.
ರೋಮಾಪುರದವರಿಗೆ 8 : 22 (KNV)
ಹಿಗೆ ಸರ್ವಸೃಷ್ಟಿಯು ಇಂದಿನ ವರೆಗೂ ನರಳುತ್ತಾ ಪ್ರಸವವೇದನೆ ಪಡುತ್ತದೆಯೆಂದು ನಾವು ಬಲ್ಲೆವು.
ರೋಮಾಪುರದವರಿಗೆ 8 : 23 (KNV)
ಇದು ಮಾತ್ರವಲ್ಲದೆ ಆತ್ಮನ ಪ್ರಥಮ ಫಲವನ್ನು ಹೊಂದಿದ ನಾವು ಸಹ ದತ್ತುಪುತ್ರ ಸ್ವೀಕಾರವನ್ನು ಅಂದರೆ ದೇಹಕ್ಕೆ ಬರಬೇಕಾದ ವಿಮೋಚನೆಯನ್ನು ಎದುರುನೊಡುತ್ತಾ ನಮ್ಮೊಳಗೆ ನಾವೇ ಮೂಲ್ಗುತ್ತೇವೆ.
ರೋಮಾಪುರದವರಿಗೆ 8 : 24 (KNV)
ನಾವು ನಿರೀಕ್ಷೆಯಿಂದ ರಕ್ಷಣೆಯನ್ನು ಹೊಂದುವವ ರಾಗಿದ್ದೇವೆ; ಕಾಣುವಂಥ ನಿರೀಕ್ಷೆಯು ನಿರೀಕ್ಷೆಯಲ್ಲ; ಒಬ್ಬನು ಎದುರು ನೋಡುವದು ಪ್ರತ್ಯಕ್ಷವಾಗಿದ್ದರೆ ಇನ್ನು ನಿರೀಕ್ಷಿಸುವದು ಯಾಕೆ?
ರೋಮಾಪುರದವರಿಗೆ 8 : 25 (KNV)
ಕಾಣದಿರುವದನ್ನು ನಾವು ನಿರೀಕ್ಷಿಸುವದಾಗಿದ್ದರೆ ಅದಕ್ಕಾಗಿ ನಾವು ತಾಳ್ಮೆ ಯಿಂದ ಕಾದುಕೊಂಡಿರುತ್ತೇವೆ.
ರೋಮಾಪುರದವರಿಗೆ 8 : 26 (KNV)
ಹಾಗೆಯೇ ಆತ್ಮನು ಸಹ ನಮ್ಮ ಬಲಹೀನತೆ ಗಳಿಗೆ ಸಹಾಯಮಾಡುತ್ತಾನೆ; ಹೇಗಂದರೆ ನಾವು ತಕ್ಕ ಪ್ರಕಾರ ಏನು ಬೇಡಿಕೊಳ್ಳಬೇಕೋ ನಮಗೆ ಗೊತ್ತಿಲ್ಲವಾದ್ದರಿಂದ ಆತ್ಮನು ತಾನೇ ಉಚ್ಚರಿಸಲಾಗ ದಂಥ ನರಳಾಟದಿಂದ ನಮಗೋಸ್ಕರ ವಿಜ್ಞಾಪನೆ ಮಾಡುತ್ತಾನೆ.
ರೋಮಾಪುರದವರಿಗೆ 8 : 27 (KNV)
ಆದರೆ ಹೃದಯಗಳನ್ನು ಶೋಧಿಸು ವಾತನಿಗೆ ಆತ್ಮನ ಮನೊಭಾವವು ಏನೆಂದು ತಿಳಿದದೆ; ಆ ಆತ್ಮನು ದೇವರ ಚಿತ್ತಾನುಸಾರವಾಗಿ ಪರಿಶುದ್ಧರಿ ಗೋಸ್ಕರ ವಿಜ್ಞಾಪನೆ ಮಾಡುತ್ತಾನೆ.
ರೋಮಾಪುರದವರಿಗೆ 8 : 28 (KNV)
ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯ ಲ್ಪಟ್ಟು ಆತನನ್ನು ಪ್ರಿತಿಸುವವರ ಒಳ್ಳೇದಕ್ಕಾಗಿ ಎಲ್ಲವು ಗಳು ಒಟ್ಟಾಗಿ ಸಂಭವಿಸುತ್ತವೆಯೆಂದು ನಾವು ಬಲ್ಲೆವು.
ರೋಮಾಪುರದವರಿಗೆ 8 : 29 (KNV)
ಆತನು ಅನೇಕ ಸಹೋದರರಲ್ಲಿ ತನ್ನ ಮಗನು ಜ್ಯೇಷ್ಠಪುತ್ರನಾಗಿರಬೇಕೆಂದು ತಾನು ಯಾರನ್ನು ಮೊದಲು ತಿಳುಕೊಂಡನೋ ಅವರನ್ನು ತನ್ನ ಮಗನ ಸಾರೂಪ್ಯವುಳ್ಳವರಾಗುವಂತೆ ಮೊದಲೇ ನೇಮಿಸಿ ದನು.
ರೋಮಾಪುರದವರಿಗೆ 8 : 30 (KNV)
ಇದಲ್ಲದೆ ಯಾರನ್ನು ಮೊದಲು ನೇಮಿಸಿ ದನೋ ಅವರನ್ನು ಕರೆದನು; ಯಾರನ್ನು ಕರೆದನೋ ಅವರನ್ನು ನೀತಿವಂತರೆಂದು ನಿರ್ಣಯಿಸಿದನು; ಯಾರನ್ನು ನೀತಿವಂತರೆಂದು ನಿರ್ಣಯಿಸಿದನೋ ಅವರನ್ನು ಮಹಿಮೆಪಡಿಸಿದನು.
ರೋಮಾಪುರದವರಿಗೆ 8 : 31 (KNV)
ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಕಡೆ ಇದ್ದರೆ ನಮ್ಮನ್ನು ಎದುರಿಸುವವರು ಯಾರು?
ರೋಮಾಪುರದವರಿಗೆ 8 : 32 (KNV)
ದೇವರು ತನ್ನ ಸ್ವಂತ ಮಗನನ್ನು ಉಳಿಸಿಕೊಳ್ಳದೆ ಆತನನ್ನು ನಮ್ಮೆಲ್ಲರಿಗೊಸ್ಕರ ಒಪ್ಪಿಸಿಕೊಟ್ಟ ಮೇಲೆ ಆತನೊಂದಿಗೆ ಎಲ್ಲವುಗಳನ್ನು ಉಚಿತವಾಗಿ ನಮಗೆ ಕೊಡದೆ ಇರುವನೇ?
ರೋಮಾಪುರದವರಿಗೆ 8 : 33 (KNV)
ದೇವರಾದುಕೊಂಡವರ ಮೇಲೆ ಯಾರು ತಪ್ಪು ಹೊರಿಸಾರು? ದೇವರೇ ನಮ್ಮನ್ನು ನೀತಿವಂತರೆಂದು ನಿರ್ಣಯಿಸುವವನಾಗಿದ್ದಾನೆ.
ರೋಮಾಪುರದವರಿಗೆ 8 : 34 (KNV)
ಅಪರಾಧಿಗಳೆಂದು ನಿರ್ಣಯಿಸುವವರು ಯಾರು? ಕ್ರಿಸ್ತನು ಮರಣವನ್ನು ಹೊಂದಿದ್ದಲ್ಲದೆ (ಜೀವಿತನಾಗಿ) ಎದ್ದು ದೇವರ ಬಲಗಡೆಯಲ್ಲಿ ನಮಗೋಸ್ಕರ ವಿಜ್ಞಾಪನೆ ಮಾಡು ವಾತನಾಗಿದ್ದಾನೆ;
ರೋಮಾಪುರದವರಿಗೆ 8 : 35 (KNV)
ಕ್ರಿಸ್ತನ ಪ್ರೀತಿಯಿಂದ ನಮ್ಮನ್ನು ಅಗಲಿಸುವವರು ಯಾರು? ಕಷ್ಟವೋ ಸಂಕಟವೋ ಹಿಂಸೆಯೋ ಬರಗಾಲವೋ ವಸ್ತ್ರವಿಲ್ಲದಿರುವದೋ ಗಂಡಾಂತರವೋ ಖಡ್ಗವೋ?
ರೋಮಾಪುರದವರಿಗೆ 8 : 36 (KNV)
ನಾವು ನಿನ್ನ ನಿಮಿತ್ತ ದಿನವೆಲ್ಲಾ ಕೊಲೆಗೆ ಗುರಿಯಾಗಿದ್ದೇವೆ; ನಾವು ಕೊಯ್ಗುರಿಗಳಂತೆ ಎಣಿಸಲ್ಪಡುತ್ತಿದ್ದೇವೆ ಎಂದು ಬರೆಯಲ್ಪಟ್ಟಿದೆ.
ರೋಮಾಪುರದವರಿಗೆ 8 : 37 (KNV)
ಹೌದು, ನಮ್ಮನ್ನು ಪ್ರಿತಿಸಿದಾತನ ಮೂಲಕವಾಗಿ ನಾವು ಈ ಎಲ್ಲವುಗಳಲ್ಲಿ ಜಯಶಾಲಿ ಗಳಿಗಿಂತಲೂ ಹೆಚ್ಚಿನವರಾಗಿದ್ದೇವೆ.
ರೋಮಾಪುರದವರಿಗೆ 8 : 38 (KNV)
ಹೇಗಂದರೆ ಮರಣವಾಗಲಿ ಜೀವವಾಗಲಿ ದೂತರಾಗಲಿ ರಾಜತ್ವಗಳಾಗಲಿ ಅಧಿಕಾರಗಳಾಗಲಿ ಈಗಿನವುಗಳಾ ಗಲಿ ಮುಂಬರುವವುಗಳಾಗಲಿ
ರೋಮಾಪುರದವರಿಗೆ 8 : 39 (KNV)
ಉನ್ನತವಾಗಲಿ ಅಗಾಧವಾಗಲಿ ಬೇರೆ ಯಾವ ಸೃಷ್ಟಿಯಾಗಲಿ ನಮ್ಮನ್ನು ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಲ್ಲಿರುವ ದೇವರ ಪ್ರೀತಿಯಿಂದ ಅಗಲಿಸಲಾರವೆಂದು ನನಗೆ ನಿಶ್ಚಯ ಉಂಟು.
❮
❯