ರೂತಳು 4 : 1 (KNV)
ಬೋವಜನು ಪಟ್ಟಣದ ಬಾಗಲಲ್ಲಿ ಹೋಗಿ ಕುಳಿತಿರುವಾಗ ಇಗೋ, ಬೋವಜನು ಹೇಳಿದ್ದ ಆ ಸಂಬಂಧಿಕನು ಹಾದು ಹೋಗುತ್ತಿದ್ದನು. ಆಗ ಅವನು ಓ ಮನುಷ್ಯನೇ, ಈ ಕಡೆಗೆ ಬಂದು ಇಲ್ಲಿ ಕೂತುಕೋ ಅಂದನು. ಅವನು ಬಂದು ಕೂತುಕೊಂಡನು.
ರೂತಳು 4 : 2 (KNV)
ಆಗ ಬೋವಜನು ಪಟ್ಟಣದ ಹಿರಿಯರಲ್ಲಿ ಹತ್ತು ಮಂದಿ ಯನ್ನು ಕರೆದು ಅವರಿಗೆ ಇಲ್ಲಿ ಕುಳಿತುಕೊಳ್ಳಿರಿ ಅಂದನು. ಅವರು ಕುಳಿತರು.
ರೂತಳು 4 : 3 (KNV)
ಆಗ ಅವನು ಆ ಬಂಧುವಿಗೆ ಹೇಳಿದ್ದೇನಂದರೆ ಮೋವಾಬ್ ಸೀಮೆ ಯಿಂದ ತಿರಿಗಿ ಬಂದ ನೊವೊಮಿಯು ನಮ್ಮ ಸಹೋದರನಾದ ಎಲೀಮೆಲೆಕನಿಗೆ ಇದ್ದ ಹೊಲದ ಪಾಲನ್ನು ಮಾರಿ ಬಿಡಬೇಕೆಂದಿರುತ್ತಾಳೆ.
ರೂತಳು 4 : 4 (KNV)
ನಾನು ನಿನಗೆ ಹೇಳಬೇಕೆಂದಿದ್ದೇನಂದರೆ -- ನಿವಾಸಿಗಳ ಮುಂದೆಯೂ ನನ್ನ ಜನರಾದ ಹಿರಿಯರ ಮುಂದೆಯೂ ಅದನ್ನು ಕೊಂಡುಕೊಂಡು ಬಿಡಿಸಿಕೊಂಡರೆ ಬಿಡಿಸಿಕೋ ಬಿಡಿಸಿಕೊಳ್ಳದಿದ್ದರೆ ನಾನು ತಿಳುಕೊಳ್ಳುವ ಹಾಗೆ ನನಗೆ ಹೇಳು; ಯಾಕಂದರೆ ನೀನೂ ನಿನ್ನ ತರುವಾಯ ನಾನೂ ಅಲ್ಲದೆ ಬಿಡಿಸಿಕೊಳ್ಳುವವನು ಯಾರೂ ಇಲ್ಲ ಅಂದನು.
ರೂತಳು 4 : 5 (KNV)
ಅದಕ್ಕೆ ಅವನು ನಾನು ಬಿಡಿಸಿಕೊಳ್ಳುವೆನು ಅಂದನು. ಆಗ ಬೋವಜನು ನೀನು ನೊವೊಮಿಯಿಂದ ಆ ಹೊಲವನ್ನು ಕೊಂಡು ಕೊಳ್ಳುವ ದಿವಸದಲ್ಲಿ ಸತ್ತವನ ಬಾಧ್ಯತೆಯಲ್ಲಿ ಅವನ ಹೆಸರನ್ನು ಸ್ಥಿರಮಾಡುವ ಹಾಗೆ ಅವನ ಹೆಂಡತಿಯಾಗಿರುವ ಮೋವಾಬ್ಯಳಾದ ರೂತ ಳಿಂದಲೂ ಅದನ್ನು ಕೊಂಡುಕೊಳ್ಳಬೇಕು ಅಂದನು.
ರೂತಳು 4 : 6 (KNV)
ಅದಕ್ಕೆ ಬಂಧುವು ನಾನು ನನ್ನ ಬಾಧ್ಯತೆಯನ್ನು ಕೆಡಿಸಿಕೊಳ್ಳದ ಹಾಗೆ ಅದನ್ನು ಬಿಡಿಸಿಕೊಳ್ಳಲಾರೆನು; ನಾನು ಬಿಡಿಸಿಕೊಳ್ಳತಕ್ಕದ್ದನ್ನು ನೀನು ಬಿಡಿಸಿಕೋ;
ರೂತಳು 4 : 7 (KNV)
ನಾನು ಬಿಡಿಸಿಕೊಳ್ಳಲಾರೆನು ಅಂದನು. ಬಿಡಿಸಿಕೊಳ್ಳು ವದರಲ್ಲಿಯೂ ಬದಲು ಮಾಡುವದರಲ್ಲಿಯೂ ಸಕಲ ಕಾರ್ಯಗಳೂ ದೃಢವಾಗುವ ಹಾಗೆ ಇಸ್ರಾಯೇಲಿನಲ್ಲಿ ಪೂರ್ವದವಾಡಿಕೆ ಏನಂದರೆ, ಒಬ್ಬನು ತನ್ನ ಕೆರವನ್ನು ತೆಗೆದು ತನ್ನ ನೆರೆಯವನಿಗೆ ಕೊಡುವನು. ಇದು ಇಸ್ರಾಯೇಲಿನಲ್ಲಿ ಸಾಕ್ಷಿಗಾದದ್ದು.
ರೂತಳು 4 : 8 (KNV)
ಹಾಗೆಯೇ ಆ ಬಂಧುವು ಬೋವಜನಿಗೆ--ನೀನು ನಿನಗೋಸ್ಕರ ಅದನ್ನು ಕೊಂಡುಕೋ ಎಂದು ತನ್ನ ಕೆರವನ್ನು ತೆಗೆದು ಹಾಕಿದನು.
ರೂತಳು 4 : 9 (KNV)
ಆಗ ಬೋವಜನು ಹಿರಿಯರಿಗೂ ಸಮಸ್ತ ಜನ ರಿಗೂ ನಾನು ಎಲೀಮೆಲೆಕನಿಗೆ ಇದ್ದ ಎಲ್ಲವನ್ನೂ ಕಿಲ್ಯೋನನಿಗೂ ಮಹ್ಲೋನನಿಗೂ ಇದ್ದ ಎಲ್ಲವನ್ನೂ ನೊವೊಮಿಯ ಕೈಯಿಂದ ಕೊಂಡುಕೊಂಡೆನು ಎಂಬ ದಕ್ಕೆ ಈ ಹೊತ್ತು ನೀವು ಸಾಕ್ಷಿಗಳಾಗಿದ್ದೀರಿ ಅಂದನು.
ರೂತಳು 4 : 10 (KNV)
ಇದಲ್ಲದೆ ಸತ್ತವನ ಸಹೋದರರಿಂದಲೂ ಅವನ ಸ್ಥಳದ ಬಾಗಲದಿಂದಲೂ ಅವನ ಹೆಸರು ಕಡಿದು ಹಾಕಲ್ಪಡದ ಹಾಗೆ ಸತ್ತವನ ಬಾಧ್ಯತೆಯಲ್ಲಿ ಅವನ ಹೆಸರನ್ನು ಸ್ಥಿರಮಾಡಲು ನಾನು ಮಹ್ಲೋನನ ಹೆಂಡತಿಯಾಗಿದ್ದ ಮೋವಾಬ್ಯಳಾದ ರೂತಳನ್ನು ನನಗೆ ಹೆಂಡತಿಯಾಗಿ ಕೊಂಡುಕೊಂಡೆನು.
ರೂತಳು 4 : 11 (KNV)
ಇದಕ್ಕೆ ಈ ಹೊತ್ತು ನೀವು ಸಾಕ್ಷಿಗಳಾಗಿದ್ದೀರಿ ಅಂದನು. ಆಗ ಬಾಗಲಲ್ಲಿರುವ ಸಮಸ್ತ ಜನರೂ ಹಿರಿಯರೂ ಹೇಳಿದ್ದೇನಂದರೆ--ನಾವು ಸಾಕ್ಷಿಗಳೇ; ನಿನ್ನ ಮನೆಯಲ್ಲಿ ಬಂದ ಸ್ತ್ರೀಯನ್ನು ಕರ್ತನು ಇಸ್ರಾಯೇಲ್ ಮನೆಯನ್ನು ಕಟ್ಟಿದ ಇಬ್ಬರಾದ ರಾಹೇಲಳ ಹಾಗೆಯೂ ಲೇಯಳ ಹಾಗೆಯೂ ಮಾಡುವ ವನಾಗಲಿ; ಎಫ್ರಾತದಲ್ಲಿ ಯೋಗ್ಯ ಕಾರ್ಯ ಮಾಡು, ಬೇತ್ಲೆಹೇಮಿನಲ್ಲಿ ಹೆಸರುಗೊಂಡವನಾಗಿರು.
ರೂತಳು 4 : 12 (KNV)
ಈ ಹುಡುಗಿಯಿಂದ ಕರ್ತನು ನಿನಗೆ ಕೊಡುವ ಸಂತಾನದಿಂದ ನಿನ್ನ ಮನೆಯೂ ತಾಮರಳು ಯೂದ ನಿಗೆ ಹೆತ್ತ ಪೆರೆಚನ ಮನೆಯ ಹಾಗೆಯೇ ಆಗಲಿ ಅಂದರು.
ರೂತಳು 4 : 13 (KNV)
ಬೋವಜನು ರೂತಳನ್ನು ತೆಗೆದುಕೊಂಡನು; ಅವಳು ಅವನಿಗೆ ಹೆಂಡತಿಯಾದಳು. ಅವನು ಅವಳನ್ನು ಕೂಡಿದಾಗ ಕರ್ತನು ಅವಳಿಗೆ ಗರ್ಭ ತೆರೆದದ್ದರಿಂದ ಅವಳು ಮಗನನ್ನು ಹೆತ್ತಳು.
ರೂತಳು 4 : 14 (KNV)
ಆಗ ಸ್ತ್ರೀಯರು ನೊವೊಮಿಗೆ ಹೇಳಿದ್ದೇನಂದರೆ--ಇಸ್ರಾಯೇಲಿನಲ್ಲಿ ಹೆಸರುಗೊಳ್ಳುವ ಸಂಬಂಧಿಕನು ನಿನಗೆ ಒಬ್ಬನಿಲ್ಲದ ಹಾಗೆ ಮಾಡದೆ ಇರುವ ಕರ್ತನು ಆಶೀರ್ವದಿಸಲ್ಪಡಲಿ.
ರೂತಳು 4 : 15 (KNV)
ಅವನು ನಿನಗೆ ಪ್ರಾಣವನ್ನು ಪುನರ್ಜೀವಿಸುವವ ನಾಗಿಯೂ ನಿನ್ನ ವೃದ್ಧ ವಯಸ್ಸಿನಲ್ಲಿ ಸಂರಕ್ಷಿಸುವವ ನಾಗಿಯೂ ಇರುವನು. ಯಾಕಂದರೆ ನಿನ್ನನ್ನು ಪ್ರೀತಿ ಮಾಡುವ ಏಳು ಮಂದಿ ಮಕ್ಕಳಿಗಿಂತ ನಿನಗೆ ಉತ್ತಮ ಳಾಗಿರುವ ನಿನ್ನ ಸೊಸೆಯು ಅವನನ್ನು ಹೆತ್ತಳು ಅಂದರು.
ರೂತಳು 4 : 16 (KNV)
ನೊವೊಮಿಯು ಆ ಮಗುವನ್ನು ಎತ್ತಿ ತನ್ನ ಉಡಿಲಲ್ಲಿ ಇಟ್ಟುಕೊಂಡು ಅದಕ್ಕೆ ದಾದಿಯಾದಳು.
ರೂತಳು 4 : 17 (KNV)
ಆಗ ನೆರೆಮನೆಯ ಸ್ತ್ರೀಯರು--ನೊವೊಮಿಗೆ ಒಬ್ಬ ಮಗನು ಹುಟ್ಟಿದ್ದಾನೆಂದು ಹೇಳಿ ಅವನಿಗೆ ಓಬೇದನೆಂದು ಹೆಸರಿಟ್ಟರು. ಇವನೇ ದಾವೀದನ ತಂದೆಯಾದ ಇಷಯನಿಗೆ ತಂದೆ ಯಾದವನು.
ರೂತಳು 4 : 18 (KNV)
ಪೆರೆಚನ ಸಂತತಿ ಯಾವದಂದರೆ--ಪೆರೆಚನು, ಹೆಚ್ರೋನನನ್ನು ಪಡೆದನು; ಹೆಚ್ರೋನನು ರಾಮ ನನ್ನು ಪಡೆದನು;
ರೂತಳು 4 : 19 (KNV)
ರಾಮನು ಅವ್ಮೆಾನಾದಾಬನನ್ನು ಪಡೆದನು;
ರೂತಳು 4 : 20 (KNV)
ಅವ್ಮೆಾನಾದಾಬನು ನಹಶೋನನನ್ನು ಪಡೆದನು;
ರೂತಳು 4 : 21 (KNV)
ನಹಶೋನನು ಸಲ್ಮೋನನನ್ನು ಪಡೆ ದನು; ಸಲ್ಮೋನನು ಬೋವಜನನ್ನು ಪಡೆದನು;
ರೂತಳು 4 : 22 (KNV)
ಬೋವಜನು ಓಬೇದನನ್ನು ಪಡೆದನು; ಓಬೇದನು ಇಷಯನನ್ನು ಪಡೆದನು; ಇಷಯನು ದಾವೀದನನ್ನು ಪಡೆದನು.
❮
❯