ಪರಮ ಗೀತ 1 : 1 (KNV)
ಸೊಲೊಮೋನನ ಗೀತಗಳ ಗೀತ.
ಪರಮ ಗೀತ 1 : 2 (KNV)
ತನ್ನ ಬಾಯಿಯ ಮುದ್ದುಗಳಿಂದ ನನಗೆ ಮುದ್ದಿ ಡಲಿ; ನಿನ್ನ ಪ್ರೀತಿಯು ದ್ರಾಕ್ಷಾರಸಕ್ಕಿಂತ ಉತ್ತಮ.
ಪರಮ ಗೀತ 1 : 3 (KNV)
ನಿನ್ನ ಒಳ್ಳೇ ತೈಲಗಳ ಪರಿಮಳದಂತೆ ನಿನ್ನ ಹೆಸರು ಹೊಯ್ಯಲ್ಪಟ್ಟ ತೈಲವಾಗಿದೆ; ಆದದರಿಂದ ಕನ್ನಿಕೆಯರು ನಿನ್ನನ್ನು ಪ್ರೀತಿಮಾಡುತ್ತಾರೆ.
ಪರಮ ಗೀತ 1 : 4 (KNV)
ನನ್ನನ್ನು ಎಳಕೋ, ನಾವು ನಿನ್ನ ಹಿಂದೆ ಓಡುವೆವು; ಅರಸನು ನನ್ನನ್ನು ತನ್ನ ಕೊಠಡಿಗಳಿಗೆ ಕರಕೊಂಡು ಬಂದಿದ್ದಾನೆ. ನಾವು ನಿನ್ನಲ್ಲಿ ಉಲ್ಲಾಸಪಟ್ಟು ಸಂತೋಷಪಡುತ್ತೇವೆ; ದ್ರಾಕ್ಷಾರಸ ಕ್ಕಿಂತ ನಿನ್ನ ಪ್ರೀತಿಯನ್ನು ಜ್ಞಾಪಕಮಾಡುತ್ತೇವೆ; ಯಥಾ ರ್ಥರು ನಿನ್ನನ್ನು ಪ್ರೀತಿಮಾಡುತ್ತಾರೆ.
ಪರಮ ಗೀತ 1 : 5 (KNV)
ನಾನು ಕಪ್ಪಾದವಳು; ಆದರೂ ಓ ಯೆರೂಸ ಲೇಮಿನ ಕುಮಾರ್ತೆಯರೇ, ಕೆದಾರಿನ ಗುಡಾರಗಳ ಹಾಗೆಯೂ ಸೊಲೊಮೋನನ ತೆರೆಗಳ ಹಾಗೆಯೂ ಸುಂದರಿಯಾಗಿದ್ದೇನೆ.
ಪರಮ ಗೀತ 1 : 6 (KNV)
ನನ್ನನ್ನು ನೋಡಬೇಡಿರಿ; ನಾನು ಸೂರ್ಯನ ದೃಷ್ಟಿಗೆ ಬಿದ್ದು ಕಪ್ಪಾಗಿದ್ದೇನೆ; ನನ್ನ ತಾಯಿಯ ಮಕ್ಕಳು ನನ್ನ ಮೇಲೆ ಕೋಪಗೊಂಡು ದ್ರಾಕ್ಷೇ ತೋಟಗಳನ್ನು ಕಾಯಲು ನನ್ನನ್ನು ನೇಮಿಸಿದರು. ನನ್ನ ಸ್ವಂತ ದ್ರಾಕ್ಷೇ ತೋಟವನ್ನು ನಾನು ಕಾಯಲಿಲ್ಲ.
ಪರಮ ಗೀತ 1 : 7 (KNV)
ನನ್ನ ಪ್ರಾಣ ಪ್ರಿಯನೇ, ನೀನು ನಿನ್ನ ಮಂದೆಯನ್ನು ಮೇಯಿಸಿ ಮಧ್ಯಾಹ್ನದಲ್ಲಿ ವಿಶ್ರಮಿಸಿಕೊಳ್ಳುವ ಸ್ಥಳ ಎಲ್ಲಿ ಎಂದು ನನಗೆ ತಿಳಿಸು. ನಾನು ನಿನ್ನ ಜೊತೆಗಾ ರರ ಮಂದೆಗಳ ಬಳಿಯಲ್ಲಿ ಪರಕೀಯಳ ಹಾಗೆ ಇರುವದೇಕೆ?
ಪರಮ ಗೀತ 1 : 8 (KNV)
ಓ ಸ್ತ್ರೀಯರಲ್ಲಿ ಸೌಂದರ್ಯವಂತಳೇ, ನೀನು ತಿಳಿಯದೆ ಇದ್ದರೆ ನೀನು ಮಂದೆಯ ಜಾಡೆಯನ್ನು ಹಿಡಿದು ಹೊರಟುಹೋಗಿ ಕುರುಬರ ಗುಡಾರಗಳ ಬಳಿಯಲ್ಲಿ ನಿನ್ನ ಮೇಕೆಯ ಮರಿಗಳನ್ನು ಮೇಯಿಸು.
ಪರಮ ಗೀತ 1 : 9 (KNV)
ಓ ನನ್ನ ಪ್ರಿಯಳೇ, ಫರೋಹನ ರಥಗಳಲ್ಲಿರುವ ಕುದುರೆಗಳ ಗುಂಪಿಗೆ ನಿನ್ನನ್ನು ಹೋಲಿಸಿದ್ದೇನೆ.
ಪರಮ ಗೀತ 1 : 10 (KNV)
ನಿನ್ನ ಕೆನ್ನೆಗಳು ಆಭರಣಗಳ ಸಾಲಿನಿಂದಲೂ ಕೊರಳು ಕಂಠಮಾಲೆಗಳಿಂದಲೂ ರಮ್ಯವಾಗಿವೆ.
ಪರಮ ಗೀತ 1 : 11 (KNV)
ನಾವು ನಿನ ಗೋಸ್ಕರ ಬಂಗಾರದ ಅಂಚುಗಳನ್ನು ಬೆಳ್ಳಿಯ ಕುಚ್ಚುಗಳೊಂದಿಗೆ ಮಾಡುವೆವು.
ಪರಮ ಗೀತ 1 : 12 (KNV)
ಅರಸನು ಮೇಜಿನ ಬಳಿಯಲ್ಲಿ ಕೂತಿದ್ದಾಗ ನನ್ನ ಜಟಾಮಾಂಸಿಯು ಅದರ ವಾಸನೆಯನ್ನು ಬಿಡುತ್ತದೆ.
ಪರಮ ಗೀತ 1 : 13 (KNV)
ನನ್ನ ಅತಿಪ್ರಿಯನು ನನಗೆ ಬೋಳದ ಗಡ್ಡೆಯ ಹಾಗೆ ಇರುವನು; ರಾತ್ರಿಯೆಲ್ಲಾ ನನ್ನ ಸ್ತನಗಳ ಮಧ್ಯದಲ್ಲಿ ಮಲಗುವನು.
ಪರಮ ಗೀತ 1 : 14 (KNV)
ಏನ್ಗೆದಿಯ ದ್ರಾಕ್ಷೇ ತೋಟ ಗಳಲ್ಲಿರುವ ಗೋರಂಟೆಯ ಪೂಗೊಂಚಲಿನಂತೆ ನನ್ನ ಪ್ರಿಯನು ನನಗೆ ಇರುವನು.
ಪರಮ ಗೀತ 1 : 15 (KNV)
ಇಗೋ, ನನ್ನ ಪ್ರಿಯಳೇ, ನೀನು ಸೌಂದರ್ಯ ವಂತೆಯು, ಇಗೋ, ನೀನು ಸೌಂದರ್ಯವಂತೆಯು ನಿನಗೆ ಪಾರಿವಾಳದ ಕಣ್ಣುಗಳಿವೆ.
ಪರಮ ಗೀತ 1 : 16 (KNV)
ನನ್ನ ಪ್ರಿಯನೇ, ಇಗೋ, ನೀನು ಸೌಂದರ್ಯ ವಂತನು; ಹೌದು, ರಮ್ಯವಾದವನು; ನಮ್ಮ ಹಾಸಿಗೆ ಹಸುರಾಗಿದೆ.
ಪರಮ ಗೀತ 1 : 17 (KNV)
ನಮ್ಮ ಮನೆಯ ತೊಲೆಗಳು ದೇವದಾರು ಮರಗಳು, ನಮ್ಮ ಜಂತೆಗಳು ತುರಾಯಿ ಗಿಡಗಳು.

1 2 3 4 5 6 7 8 9 10 11 12 13 14 15 16 17

BG:

Opacity:

Color:


Size:


Font: