ಪರಮ ಗೀತ 2 : 1 (KNV)
ಶಾರೋನಿನ ಗುಲಾಬಿ ಹೂವೂ, ತಗ್ಗುಗಳ ತಾವರೆಯೂ ನಾನೇ.
ಪರಮ ಗೀತ 2 : 2 (KNV)
ಮುಳ್ಳುಗಳಲ್ಲಿ ತಾವರೆಯು ಹೇಗೋ ನನ್ನ ಪ್ರಿಯಳು ಕುಮಾರ್ತೆ ಗಳಲ್ಲಿ ಹಾಗೆಯೇ ಇದ್ದಾಳೆ.
ಪರಮ ಗೀತ 2 : 3 (KNV)
ಅಡವಿಯ ಗಿಡಗಳಲ್ಲಿ ಸೇಬು ಮರ ಹೇಗೋ ಕುಮಾರರಲ್ಲಿ ನನ್ನ ಪ್ರಿಯನು ಹಾಗೆಯೇ. ನಾನು ಅವನ ನೆರಳಿನಲ್ಲಿ ಬಹು ಆನಂದವಾಗಿ ಕುಳಿತು ಕೊಂಡೆನು; ಅವನ ಫಲವು ನನ್ನ ರುಚಿಗೆ ಮಧುರ ವಾಗಿತ್ತು.
ಪರಮ ಗೀತ 2 : 4 (KNV)
ಔತಣದ ಮನೆಗೆ ನನ್ನನ್ನು ಕರಕೊಂಡು ಬಂದನು; ನನ್ನ ಮೇಲೆ ಅವನ ಧ್ವಜ ಪ್ರೀತಿಯೇ.
ಪರಮ ಗೀತ 2 : 5 (KNV)
ದ್ರಾಕ್ಷೆಯ ಉಂಡಿಗಳಿಂದ ನನ್ನನ್ನು ಹಿಡಿದಿರು; ಸೇಬು ಹಣ್ಣುಗಳಿಂದ ನನ್ನನ್ನು ಆದರಿಸು; ಪ್ರೀತಿಯ ದೆಸೆಯಿಂದ ಅಸ್ವಸ್ಥಳಾಗಿದ್ದೇನೆ.
ಪರಮ ಗೀತ 2 : 6 (KNV)
ಅವನ ಎಡಗೈ ನನ್ನ ತಲೆಯ ಕೆಳಗದೆ; ಅವನ ಬಲಗೈ ನನ್ನನ್ನು ಅಪ್ಪಿ ಕೊಳ್ಳುತ್ತದೆ.
ಪರಮ ಗೀತ 2 : 7 (KNV)
ಓ ಯೆರೂಸಲೇಮಿನ ಕುಮಾರ್ತೆಯರೇ, ನನ್ನ ಪ್ರಿಯನು ಮೆಚ್ಚುವ ವರೆಗೆ ನೀವು ಎಬ್ಬಿಸಬೇಡಿರಿ, ಇಲ್ಲವೆ ನನ್ನ ಪ್ರಿಯನನ್ನು ಎಚ್ಚರಿಸಬೇಡಿರಿ ಎಂದು ದುಪ್ಪಿಗಳಿಂದಲೂ ಅಡವಿಯ ಜಿಂಕೆಗಳಿಂದಲೂ ನಿಮಗೆ ಆಜ್ಞಾಪಿಸುತ್ತೇನೆ.
ಪರಮ ಗೀತ 2 : 8 (KNV)
ನನ್ನ ಪ್ರಿಯನ ಸ್ವರವು! ಇಗೋ, ಅವನು ಪರ್ವತಗಳ ಮೇಲೆ ಹಾರುತ್ತಾ ಗುಡ್ಡಗಳ ಮೇಲೆ ನೆಗೆಯುತ್ತಾ ಬರುತ್ತಾನೆ.
ಪರಮ ಗೀತ 2 : 9 (KNV)
ನನ್ನ ಪ್ರಿಯನು ಜಿಂಕೆಯ ಹಾಗೆ ಇಲ್ಲವೆ ದುಪ್ಪಿಯ ಮರಿಯ ಹಾಗೆ ಇದ್ದಾನೆ. ಇಗೋ, ಅವನು ನಮ್ಮ ಗೋಡೆಯ ಹಿಂದೆ ನಿಂತು ಜಲಾಂತರಗಳಿಂದ ತನ್ನನ್ನು ತೋರಿಸಿ ಕಿಟಕಿಗಳಿಂದ ನೋಡುತ್ತಾನೆ.
ಪರಮ ಗೀತ 2 : 10 (KNV)
ನನ್ನ ಪ್ರಿಯನು ಮಾತಾಡಿ--ಏಳು, ನನ್ನ ಪ್ರಿಯಳೇ, ನನ್ನ ಸುಂದರಿಯೇ, ಹೊರಟು ಬಾ.
ಪರಮ ಗೀತ 2 : 11 (KNV)
ಇಗೋ, ಚಳಿ ಗಾಲವು ಗತಿಸಿತು; ಮಳೆಯು ನಿಂತುಹೋಯಿತು;
ಪರಮ ಗೀತ 2 : 12 (KNV)
ಪುಷ್ಪಗಳು ಭೂಮಿಯ ಮೇಲೆ ಕಾಣಿಸುತ್ತವೆ; ಪಕ್ಷಿಗಳು ಹಾಡುವ ಕಾಲ ಬಂತು; ಬೆಳವಕ್ಕಿಯ ಸ್ವರವು ನಮ್ಮ ದೇಶದಲ್ಲಿ ಕೇಳಲ್ಪಡುತ್ತದೆ.
ಪರಮ ಗೀತ 2 : 13 (KNV)
ಅಂಜೂರದ ಗಿಡವು ಅದರ ಹೀಚುಗಳನ್ನು ಬಿಡುತ್ತದೆ. ದ್ರಾಕ್ಷೇ ಬಳ್ಳಿಗಳ ಹೂವು ಅದರ ಸುವಾಸನೆಯನ್ನು ಕೊಡು ತ್ತದೆ. ಏಳು, ನನ್ನ ಪ್ರಿಯಳೇ, ನನ್ನ ಸುಂದರಿಯೇ, ಹೊರಟು ಬಾ ಎಂಬದು.
ಪರಮ ಗೀತ 2 : 14 (KNV)
ಗುಪ್ತವಾದ ಹಂತಗ ಳಲ್ಲಿಯೂ ಕಲ್ಲು ಸಂದುಗಳ ಮರೆಯಲ್ಲಿಯೂ ಇರುವ ಓ ನನ್ನ ಪಾರಿವಾಳವೇ, ನಿನ್ನ ಮುಖವನ್ನು ನನಗೆ ತೋರ ಮಾಡು. ನಿನ್ನ ಸ್ವರವನ್ನು ಕೇಳಿಸು. ನಿನ್ನ ಸ್ವರವು ರಮ್ಯವಾಗಿಯೂ ನಿನ್ನ ಮುಖವು ಸೌಂದರ್ಯ ವಾಗಿಯೂ ಅದೆ.
ಪರಮ ಗೀತ 2 : 15 (KNV)
ನರಿಗಳನ್ನೂ ದ್ರಾಕ್ಷೇ ಗಿಡಗಳನ್ನು ಕೆಡಿಸುವ ಚಿಕ್ಕ ನರಿಗಳನ್ನೂ ನಮಗಾಗಿ ಹಿಡಿಯಿರಿ; ನಮ್ಮ ದ್ರಾಕ್ಷೇಗಿಡಗಳಲ್ಲಿ ಎಳೆಗಾಯಿಗಳಾಗಿವೆ.
ಪರಮ ಗೀತ 2 : 16 (KNV)
ನನ್ನ ಪ್ರಿಯನು ನನ್ನವನು, ನಾನು ಅವನವಳು.ಅವನು ತಾವರೆ ಹೂವುಗಳ ಮಧ್ಯದಲ್ಲಿ ಮೇಯಿಸು ತ್ತಾನೆ.ನನ್ನ ಪ್ರಿಯನೇ, ತಿರುಗಿಕೊಂಡು ಬೆಳಗಾಗು ವವರೆಗೂ ನೆರಳುಗಳು ಓಡಿಹೋಗುವ ವರೆಗೂ, ಬತೇರ್‌ ಪರ್ವತಗಳ ಮೇಲಿರುವ ಜಿಂಕೆಯ ಹಾಗೆ ಇಲ್ಲವೆ ದುಪ್ಪಿಯ ಮರಿಯ ಹಾಗೆ ಇರು.
ಪರಮ ಗೀತ 2 : 17 (KNV)
ನನ್ನ ಪ್ರಿಯನೇ, ತಿರುಗಿಕೊಂಡು ಬೆಳಗಾಗು ವವರೆಗೂ ನೆರಳುಗಳು ಓಡಿಹೋಗುವ ವರೆಗೂ, ಬತೇರ್‌ ಪರ್ವತಗಳ ಮೇಲಿರುವ ಜಿಂಕೆಯ ಹಾಗೆ ಇಲ್ಲವೆ ದುಪ್ಪಿಯ ಮರಿಯ ಹಾಗೆ ಇರು.

1 2 3 4 5 6 7 8 9 10 11 12 13 14 15 16 17

BG:

Opacity:

Color:


Size:


Font: