ಜೆಕರ್ಯ 7 : 1 (KNV)
ಅರಸನಾದ ದಾರ್ಯಾವೆಷನ ನಾಲ್ಕನೇ ವರುಷದಲ್ಲಿ ಆದದ್ದೇನಂದರೆ--ಒಂಭ ತ್ತನೇ ತಿಂಗಳಾದ ಕಿಸ್ಲೇವಿನ ನಾಲ್ಕನೇ ದಿವಸದಲ್ಲಿ ಕರ್ತನ ವಾಕ್ಯವು ಜೆಕರ್ಯನಿಗೆ ಉಂಟಾಯಿತು.
ಜೆಕರ್ಯ 7 : 2 (KNV)
ಯಾವಾಗಂದರೆ, ಕರ್ತನ ಮುಖದ ಮುಂದೆ ಬೇಡಿ ಕೊಳ್ಳುವದಕ್ಕೂ
ಜೆಕರ್ಯ 7 : 3 (KNV)
ಸೈನ್ಯಗಳ ಕರ್ತನ ಮನೆಯಲ್ಲಿದ್ದ ಯಾಜಕರ ಸಂಗಡಲೂ ಪ್ರವಾದಿಗಳ ಸಂಗಡಲೂ ನಾನು ಮಾತನಾಡಿ--ಇಷ್ಟು ವರುಷ ಮಾಡಿದ ಪ್ರಕಾರ ಐದನೇ ತಿಂಗಳಲ್ಲಿ ನನ್ನನ್ನು ಪ್ರತ್ಯೇಕಿಸಿಕೊಂಡು ಅಳಲೋ ಎಂದು ಹೇಳುವದಕ್ಕೂ ಅವರು ಸರೆಚರ ನನ್ನೂ ರೆಗೆಮ್ ಮೆಲೆಕನನ್ನೂ ಅವರ ಮನುಷ್ಯ ರನ್ನೂ ದೇವರ ಆಲಯಕ್ಕೆ ಕಳುಹಿಸಿದಾಗಲೇ ಅಂದನು.
ಜೆಕರ್ಯ 7 : 4 (KNV)
ಆಗ ಸೈನ್ಯಗಳ ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ--
ಜೆಕರ್ಯ 7 : 5 (KNV)
ದೇಶದ ಜನರೆಲ್ಲರಿಗೂ ಯಾಜಕ ರಿಗೂ ಹೀಗೆ ಹೇಳು--ನೀವು ಈ ಎಪ್ಪತ್ತು ವರುಷಗಳು ಐದನೇ ಮತ್ತು ಏಳನೇ ತಿಂಗಳುಗಳಲ್ಲಿ ಉಪವಾಸ ಮಾಡಿ ದುಃಖಿಸಿದಾಗ ನನಗೆ ಏನಾದರೂ ಉಪವಾಸ ಮಾಡಿದ್ದೀರೋ?
ಜೆಕರ್ಯ 7 : 6 (KNV)
ನೀವು ಉಂಡು ಕುಡಿದಾಗ ನಿಮಗೆ ನೀವೇ ಉಂಡು ಕುಡಿದಿರಲ್ಲಾ?
ಜೆಕರ್ಯ 7 : 7 (KNV)
ಯೆರೂಸಲೇಮೂ ಅದರ ಸುತ್ತಲಿನ ಪಟ್ಟಣಗಳೂ ನಿವಾಸಿಗಳುಳ್ಳ ವುಗಳಾಗಿಯೂ ಸುಖವಾಗಿಯೂ ದಕ್ಷಿಣವೂ ಬೈಲೂ ನಿವಾಸಿಗಳುಳ್ಳವುಗಳಾಗಿಯೂ ಇದ್ದಾಗ ಕರ್ತನು ಪೂರ್ವದ ಪ್ರವಾದಿಗಳ ಕೈಯಿಂದ ಕೂಗಿದ ಮಾತುಗಳು ಅವು ಅಲ್ಲವೊ? ಎಂಬದು.
ಜೆಕರ್ಯ 7 : 8 (KNV)
ಇದಲ್ಲದೆ ಕರ್ತನ ವಾಕ್ಯವು ಜೆಕರ್ಯನಿಗೆ ಉಂಟಾಗಿ ಹೇಳಿದ್ದೇನಂದರೆ--ಸೈನ್ಯಗಳ ಕರ್ತನು ಹೀಗೆ ಮಾತನಾಡಿ ಹೇಳುತ್ತಾನೆ--
ಜೆಕರ್ಯ 7 : 9 (KNV)
ನಿಜವಾದ ನ್ಯಾಯವನ್ನು ತೀರಿಸಿರಿ; ಒಬ್ಬರಿಗೊಬ್ಬರು ಕೃಪೆಯನ್ನೂ ಕನಿಕರವನ್ನೂ ತೋರಿಸಿರಿ;
ಜೆಕರ್ಯ 7 : 10 (KNV)
ವಿಧವೆಗೂ ದಿಕ್ಕಿಲ್ಲದವನಿಗೂ ಅನ್ಯ ನಿಗೂ ಬಡವನಿಗೂ ಬಲಾತ್ಕಾರ ಮಾಡಬೇಡಿರಿ; ಯಾರೂ ತನ್ನ ಹೃದಯದಲ್ಲಿ ತನ್ನ ಸಹೋದರನ ಮೇಲೆ ಕೆಟ್ಟದ್ದನ್ನು ಕಲ್ಪಿಸದೆ ಇರಲಿ ಎಂಬದು.
ಜೆಕರ್ಯ 7 : 11 (KNV)
ಆದರೆ ಅವರು ಕೇಳುವದಕ್ಕೆ ನಿರಾಕರಿಸಿದರು. ಅವರು ಹೆಗಲನ್ನು ಹಿಂದೆ ಳೆದು ಕೇಳದ ಹಾಗೆ ತಮ್ಮ ಕಿವಿಗಳನ್ನು ಮಂದಮಾಡಿ ಕೊಂಡರು.
ಜೆಕರ್ಯ 7 : 12 (KNV)
ಹೌದು, ಅವರು ನ್ಯಾಯಪ್ರಮಾಣ ವನ್ನೂ ಸೈನ್ಯಗಳ ಕರ್ತನು ತನ್ನ ಆತ್ಮದ ಮುಖಾಂತರ ಪೂರ್ವದ ಪ್ರವಾದಿಗಳ ಕೈಯಿಂದ ಕಳುಹಿಸಿದ ವಾಕ್ಯ ಗಳನ್ನೂ ಕೇಳದ ಹಾಗೆ ತಮ್ಮ ಹೃದಯಗಳನ್ನು ವಜ್ರದ ಕಲ್ಲಿನಂತೆ ಮಾಡಿಕೊಂಡರು. ಆದದರಿಂದ ಸೈನ್ಯಗಳ ಕರ್ತನಿಂದ ಮಹಾರೋಷವು ಬಂತು.
ಜೆಕರ್ಯ 7 : 13 (KNV)
ಆಗ ಆದದ್ದೇ ನಂದರೆ--ಅವನು ಕೂಗಲು ಅವರು ಕೇಳದೆ ಇದ್ದ ಪ್ರಕಾರ ಅವರು ಕೂಗಲು ನಾನು ಕೇಳದೆ ಇದ್ದೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
ಜೆಕರ್ಯ 7 : 14 (KNV)
ಇದಲ್ಲದೆ ಅವರು ಅರಿಯದ ಎಲ್ಲಾ ಜನಾಂಗಗಳೊಳಗೆ ಅವರನ್ನು ಸುಂಟರ ಗಾಳಿಯಿಂದ ಚದರಿಸಿಬಿಟ್ಟೆನು. ಹೀಗೆ ಅವರ ಹಿಂದೆ ದೇಶವು ನಾಶವಾಯಿತು; ಹಾದುಹೋಗುವವನೂ ತಿರುಗಿಕೊಳ್ಳುವವನೂ ಇಲ್ಲದೆ ಹೋದರು. ರಮ್ಯವಾದ ದೇಶವನ್ನು ಹಾಳಾಗಿ ಮಾಡಿದರು.

1 2 3 4 5 6 7 8 9 10 11 12 13 14