ಚೆಫನ್ಯ 1 : 1 (KNV)
ಯೆಹೂದದ ಅರಸನಾದ ಅಮೋನನ ಮಗನಾದ ಯೋಷೀಯನ ದಿವಸಗಳಲ್ಲಿ ಹಿಜ್ಕೀಯನ ಮಗನಾದ ಅಮರ್ಯನ ಮಗನಾದ ಗೆದಲೀಯನ ಮಗನಾದ ಕೂಶೀಯನ ಮಗನಾದ ಚೆಫನ್ಯನಿಗೆ ಉಂಟಾದ ಕರ್ತನ ದೈವೋಕ್ತಿ
ಚೆಫನ್ಯ 1 : 2 (KNV)
ಕರ್ತನು ಹೇಳುವದೇನಂದರೆ--ನಾನು ದೇಶ ದೊಳಗಿಂದ ಎಲ್ಲವುಗಳನ್ನು ಸಂಪೂರ್ಣವಾಗಿ ನಾಶ ಮಾಡುವೆನು.
ಚೆಫನ್ಯ 1 : 3 (KNV)
ಮನುಷ್ಯರನ್ನೂ ಮೃಗಗಳನ್ನೂ ನಾಶ ಮಾಡುವೆನು. ಆಕಾಶದ ಪಕ್ಷಿಗಳನ್ನೂ ಸಮುದ್ರದ ವಿಾನುಗಳನ್ನೂ ದುಷ್ಟರ ಸಂಗಡ ಅಭ್ಯಂತರ ಮಾಡುವ ವುಗಳನ್ನೂ ಹಾಳುಮಾಡುವೆನು: ಮನುಷ್ಯರನ್ನು ದೇಶದೊಳಗಿಂದ ಕಡಿದುಬಿಡುವೆನು ಎಂದು ಕರ್ತನು ಅನ್ನುತ್ತಾನೆ.
ಚೆಫನ್ಯ 1 : 4 (KNV)
ಯೆಹೂದದ ಮೇಲೆಯೂ ಯೆರೂಸಲೇಮಿನ ಎಲ್ಲಾ ನಿವಾಸಿಗಳ ಮೇಲೆಯೂ ನನ್ನ ಕೈಚಾಚಿ ಈ ಸ್ಥಳದಿಂದ ಬಾಳನ ಉಳಿದವುಗಳನ್ನೂ ಯಾಜಕರ ಸಂಗಡ ಕೆಮಾರ್ಯರ ಹೆಸರನ್ನೂ
ಚೆಫನ್ಯ 1 : 5 (KNV)
ಮಾಳಿಗೆಗಳ ಮೇಲೆ ಆಕಾಶದ ಸೈನ್ಯವನ್ನು ಆರಾಧಿಸುವವರನ್ನೂ ಕರ್ತನ ಮೇಲೆಯೂ ಮಲ್ಕಾಮನ ಮೇಲೆಯೂ ಆಣೆ ಇಟ್ಟುಕೊಳ್ಳುವವರನ್ನೂ
ಚೆಫನ್ಯ 1 : 6 (KNV)
ಕರ್ತನ ಕಡೆಯಿಂದ ಹಿಂತಿ ರುಗಿದವರನ್ನೂ ಕರ್ತನನ್ನು ಹುಡುಕದೆಯೂ ವಿಚಾರಿಸ ದೆಯೂ ಇರುವವರನ್ನೂ ಕಡಿದುಬಿಡುವೆನು.
ಚೆಫನ್ಯ 1 : 7 (KNV)
ಕರ್ತ ನಾದ ದೇವರ ಮುಂದೆ ಮೌನವಾಗಿರ್ರಿ: ಕರ್ತನ ದಿನವು ಸವಿಾಪವಾಗಿದೆ; ಕರ್ತನು ಬಲಿಯನ್ನು ಸಿದ್ಧ ಮಾಡಿದ್ದಾನೆ; ತನ್ನ ಅತಿಥಿಗಳನ್ನು ಆಹ್ವಾನಿಸಿದ್ದಾನೆ.
ಚೆಫನ್ಯ 1 : 8 (KNV)
ಕರ್ತನ ಬಲಿಯ ದಿನದಲ್ಲಿ ಆಗುವದೇನಂದರೆ--ನಾನು ಪ್ರಧಾನರನ್ನೂ ಅರಸನ ಕುಮಾರರ ಮಕ್ಕಳನ್ನೂ ಅನ್ಯರ ಉಡುಪನ್ನು ತೊಟ್ಟುಕೊಳ್ಳುವವರೆಲ್ಲರನ್ನೂ ದಂಡಿಸುವೆನು.
ಚೆಫನ್ಯ 1 : 9 (KNV)
ಆ ದಿನದಲ್ಲಿ ಹೊಸ್ತಿಲನ್ನು ಹಾರಿ ದಾಟುವವರೆಲ್ಲರನ್ನೂ ತಮ್ಮ ಯಜಮಾನರ ಮನೆ ಗಳನ್ನು ಬಲಾತ್ಕಾರ ಮೋಸಗಳಿಂದ ತುಂಬಿಸುವವರನ್ನೂ ದಂಡಿಸುವೆನು.
ಚೆಫನ್ಯ 1 : 10 (KNV)
ಆ ದಿನದಲ್ಲಿ ಆಗುವದೇನಂದರೆ--ವಿಾನುಬಾಗಲಿಂದ ಕೂಗಿನ ಶಬ್ದವೂ ಮತ್ತೊಂದ ರಿಂದ ಗೋಳಾಟವೂ ಗುಡ್ಡಗಳ ಕಡೆಯಿಂದ ದೊಡ್ಡ ಮುರಿಯೋಣವೂ ಇರುವದು.
ಚೆಫನ್ಯ 1 : 11 (KNV)
ಮಕ್ತೇಷಿನ ನಿವಾಸಿ ಗಳೇ, ಗೋಳಾಡಿರಿ; ವರ್ತಕರ ಜನರೆಲ್ಲಾ ಸಂಹಾರ ವಾದರು; ಬೆಳ್ಳಿ ಹೊತ್ತವರೆಲ್ಲರೂ ಕಡಿದುಬಿಡಲ್ಪಟ್ಟಿ ದ್ದಾರೆ.
ಚೆಫನ್ಯ 1 : 12 (KNV)
ಆ ಕಾಲದಲ್ಲಿ ಆಗುವದೇನಂದರೆ--ನಾನು ಯೆರೂಸಲೇಮನ್ನು ದೀಪಗಳಿಂದ ಶೋಧಿಸುವೆನು; ಕರ್ತನು ಒಳ್ಳೇದನ್ನಾದರೂ ಕೆಟ್ಟದ್ದನ್ನಾದರೂ ಮಾಡು ವದಿಲ್ಲವೆಂದು ತಮ್ಮ ಹೃದಯಗಳಲ್ಲಿ ಅನ್ನುವವರಾಗಿ ಮರೆಯಾದವುಗಳ ಮೇಲೆ ಕಟ್ಟಿಕೊಂಡಿರುವ ಮನುಷ್ಯ ರನ್ನು ದಂಡಿಸುವೆನು.
ಚೆಫನ್ಯ 1 : 13 (KNV)
ಆದದರಿಂದ ಅವರ ಸಂಪತ್ತು ಕೊಳ್ಳೆಯಾಗುವದು, ಅವರ ಮನೆಗಳು ಹಾಳಾಗು ವವು; ಅವರು ಮನೆಗಳನ್ನು ಕಟ್ಟಿ ವಾಸಮಾಡರು; ದ್ರಾಕ್ಷೇ ತೋಟಗಳನ್ನು ನೆಟ್ಟು ಅವುಗಳ ರಸವನ್ನು ಕುಡಿಯರು.
ಚೆಫನ್ಯ 1 : 14 (KNV)
ಕರ್ತನ ಮಹಾದಿನವು ಸವಿಾಪವಾಗಿದೆ, ಅದು ಬಹು ತ್ವರೆಪಡುತ್ತದೆ; ಕರ್ತನ ದಿನದ ಶಬ್ದವು ತ್ವರೆ ಪಡುತ್ತದೆ; ಶೂರನು ಅಲ್ಲಿ ಘೋರವಾಗಿ ಗೋಳಿಡು ವನು.
ಚೆಫನ್ಯ 1 : 15 (KNV)
ಆ ದಿನವು ರೌದ್ರದ ದಿನವು, ಇಕ್ಕಟ್ಟು ಸಂಕಟಗಳ ದಿನವು, ಹಾಳು ಪಾಳುಗಳ ದಿನವು, ಕತ್ತಲೆ ಮೊಬ್ಬುಗಳ ದಿನವು, ಮೇಘ ಮೋಡಗಳ ದಿನವು.
ಚೆಫನ್ಯ 1 : 16 (KNV)
ಅದರ ಕೋಟೆಯುಳ್ಳ ಪಟ್ಟಣಗಳಿಗೆ ವಿರೋಧವಾಗಿಯೂ ಉನ್ನತವಾದ ಗೋಪುರಗಳಿಗೆ ವಿರೋಧವಾಗಿಯೂ ತುತೂರಿ ಅರ್ಭಟಗಳ ದಿನವು.
ಚೆಫನ್ಯ 1 : 17 (KNV)
ಆಗ ನಾನು ಮನುಷ್ಯರ ಮೇಲೆ ಇಕ್ಕಟ್ಟು ತರಿಸುವೆನು; ಅವರು ಕುರುಡರ ಹಾಗೆ ನಡೆಯುವರು; ಕರ್ತನಿಗೆ ವಿರೋಧವಾಗಿ ಅವರು ಪಾಪಮಾಡಿದ್ದಾರೆ; ಅವರ ರಕ್ತವು ದೂಳಿನಂತೆಯೂ ಅವರ ಮಾಂಸವು ಗೊಬ್ಬರ ದಂತೆಯೂ ಸುರಿಯಲ್ಪಡುವದು.
ಚೆಫನ್ಯ 1 : 18 (KNV)
ಕರ್ತನ ರೌದ್ರದ ದಿನದಲ್ಲಿ ಅವರ ಬೆಳ್ಳಿಯಾದರೂ ಅವರ ಬಂಗಾರ ವಾದರೂ ಅವರನ್ನು ತಪ್ಪಿಸಲಾರವು; ಆತನ ಕೋಪದ ಬೆಂಕಿಯು ದೇಶವನ್ನೆಲ್ಲಾ ನುಂಗುವದು.

1 2 3 4 5 6 7 8 9 10 11 12 13 14 15 16 17 18