1 ಪೂರ್ವಕಾಲವೃತ್ತಾ 16 : 1 (OCVKN)
ಯೆಹೋವ ದೇವರ ಮಂಜೂಷದ ಮುಂದೆ ಸೇವೆಮಾಡುವುದು ಅವರು ದೇವರ ಮಂಜೂಷವನ್ನು ಒಳಗೆ ತಂದು, ದಾವೀದನು ಅದಕ್ಕೋಸ್ಕರ ಹಾಕಿದ ಗುಡಾರದೊಳಗೆ ಅದರ ನಿಯಮಿತ ಸ್ಥಳದಲ್ಲಿ ಅದನ್ನು ಇಟ್ಟ ತರುವಾಯ, ಅವರು ದೇವರ ಸನ್ನಿಧಿಯಲ್ಲಿ ದಹನಬಲಿಗಳನ್ನೂ, ಸಮಾಧಾನದ ಬಲಿಗಳನ್ನೂ ಅರ್ಪಿಸಿದರು.
1 ಪೂರ್ವಕಾಲವೃತ್ತಾ 16 : 2 (OCVKN)
ದಾವೀದನು ದಹನಬಲಿಗಳನ್ನೂ, ಸಮಾಧಾನದ ಬಲಿಗಳನ್ನೂ ಅರ್ಪಿಸಿದ ತರುವಾಯ, ಅವನು ಯೆಹೋವ ದೇವರ ಹೆಸರಿನಲ್ಲಿ ಜನರನ್ನು ಆಶೀರ್ವದಿಸಿ,
1 ಪೂರ್ವಕಾಲವೃತ್ತಾ 16 : 3 (OCVKN)
ಇಸ್ರಾಯೇಲಿನ ಪ್ರತಿಯೊಬ್ಬ ಪುರುಷನಿಗೂ ಸ್ತ್ರೀಗೂ, ಒಂದು ರೊಟ್ಟಿಯನ್ನೂ, ಖರ್ಜೂರದ ಉಂಡೆಯನ್ನೂ, ದ್ರಾಕ್ಷಿ ಹಣ್ಣಿನ ಉಂಡೆಯನ್ನೂ ಹಂಚಿದನು.
1 ಪೂರ್ವಕಾಲವೃತ್ತಾ 16 : 4 (OCVKN)
ಇದಲ್ಲದೆ ಯೆಹೋವ ದೇವರ ಮಂಜೂಷದ ಮುಂದೆ ಸೇವೆಮಾಡಲೂ, ಇಸ್ರಾಯೇಲಿನ ದೇವರಾದ ಯೆಹೋವ ದೇವರನ್ನು ಸ್ಮರಿಸುವುದಕ್ಕೂ, ಕೊಂಡಾಡುವುದಕ್ಕೂ, ಹೊಗಳುವುದಕ್ಕೂ ಲೇವಿಯರಲ್ಲಿ ಕೆಲವರನ್ನು ನೇಮಿಸಿದನು.
1 ಪೂರ್ವಕಾಲವೃತ್ತಾ 16 : 5 (OCVKN)
ಅವರು ಯಾರೆಂದರೆ: ಮುಖ್ಯಸ್ಥನಾದ ಆಸಾಫನೂ, ಅವನ ತರುವಾಯ ಜೆಕರ್ಯನೂ, ಯೆಜೀಯೇಲನೂ, ಶೆಮೀರಾಮೋತನೂ, ಯೆಹೀಯೇಲನೂ, ಮತ್ತಿತ್ಯನೂ, ಎಲೀಯಾಬನೂ, ಬೆನಾಯನೂ, ಓಬೇದ್ ಏದೋಮನೂ, ಯೆಹಿಯೇಲನೂ ಇವರು ವೀಣೆಗಳನ್ನೂ, ಕಿನ್ನರಿಗಳನ್ನೂ ಬಾರಿಸುತ್ತಿದ್ದರು. ಆದರೆ ಆಸಾಫನು ತಾಳಗಳನ್ನು ಬಾರಿಸುತ್ತಿದ್ದನು.
1 ಪೂರ್ವಕಾಲವೃತ್ತಾ 16 : 6 (OCVKN)
ಇದಲ್ಲದೆ ಯಾಜಕರಾದ ಬೆನಾಯನೂ, ಯಹಜಿಯೇಲನೂ ದೇವರ ಒಡಂಬಡಿಕೆಯ ಮಂಜೂಷದ ಮುಂದೆ ಯಾವಾಗಲೂ ತುತೂರಿಗಳನ್ನು ಊದುವವರಾಗಿದ್ದರು.
1 ಪೂರ್ವಕಾಲವೃತ್ತಾ 16 : 7 (OCVKN)
1 ಪೂರ್ವಕಾಲವೃತ್ತಾ 16 : 8 (OCVKN)
ಆಸಾಫನಿಗೂ, ಅವನ ಜೊತೆ ಲೇವಿಯರಿಗೂ ಯೆಹೋವ ದೇವರ ಸ್ತೋತ್ರಗೀತೆ ಹಾಡಲು ದಾವೀದನು ಪ್ರಥಮವಾಗಿ ಆ ದಿನದಲ್ಲೇ ನೇಮಿಸಿದನು. ಅವರು ಹೀಗೆಂದು ಹಾಡಿದರು: ಯೆಹೋವ ದೇವರಿಗೆ ಉಪಕಾರಸ್ತುತಿ ಮಾಡಿರಿ, ಅವರ ಹೆಸರನ್ನು ಸಾರಿ ಹೇಳಿರಿ, ಜನರಲ್ಲಿ ದೇವರ ಕ್ರಿಯೆಗಳನ್ನು ತಿಳಿಯಪಡಿಸಿರಿ.
1 ಪೂರ್ವಕಾಲವೃತ್ತಾ 16 : 9 (OCVKN)
ದೇವರಿಗೆ ಹಾಡಿರಿ, ದೇವರಿಗೆ ಕೀರ್ತನೆ ಹಾಡಿರಿ, ದೇವರ ಅದ್ಭುತ ಕ್ರಿಯೆಗಳ ವಿಷಯವಾಗಿ ಮಾತನಾಡಿರಿ.
1 ಪೂರ್ವಕಾಲವೃತ್ತಾ 16 : 10 (OCVKN)
ದೇವರ ಪರಿಶುದ್ಧ ನಾಮವನ್ನು ಹೊಗಳಿರಿ, ಯೆಹೋವ ದೇವರನ್ನು ಹುಡುಕುವವರ ಹೃದಯವು ಸಂತೋಷಿಸಲಿ.
1 ಪೂರ್ವಕಾಲವೃತ್ತಾ 16 : 11 (OCVKN)
ಯೆಹೋವ ದೇವರನ್ನೂ, ಅವರ ಬಲವನ್ನೂ ಆಶ್ರಯಿಸಿರಿ, ಅವರ ಮುಖವನ್ನು ಯಾವಾಗಲೂ ಹುಡುಕಿರಿ.
1 ಪೂರ್ವಕಾಲವೃತ್ತಾ 16 : 12 (OCVKN)
ದೇವರು ಮಾಡಿದ ಆಶ್ಚರ್ಯಕಾರ್ಯಗಳನ್ನೂ, ಅವರ ಅದ್ಭುತಗಳನ್ನೂ, ಅವರ ಬಾಯಿಂದ ಹೊರಟ ನ್ಯಾಯ ನಿರ್ಣಯಗಳನ್ನೂ ಜ್ಞಾಪಕಮಾಡಿಕೊಳ್ಳಿರಿ.
1 ಪೂರ್ವಕಾಲವೃತ್ತಾ 16 : 13 (OCVKN)
ಅವರ ಸೇವಕನಾದ ಇಸ್ರಾಯೇಲಿನ ಸಂತತಿಯೇ, ಅವರು ಆಯ್ದುಕೊಂಡ ಯಾಕೋಬನ ಮಕ್ಕಳೇ,
1 ಪೂರ್ವಕಾಲವೃತ್ತಾ 16 : 14 (OCVKN)
ಅವರೇ ನಮ್ಮ ದೇವರಾದ ಯೆಹೋವ ಆಗಿದ್ದಾರೆ. ಅವರ ನ್ಯಾಯಗಳು ಸಮಸ್ತ ಭೂಮಿಯಲ್ಲಿ ಇವೆ.
1 ಪೂರ್ವಕಾಲವೃತ್ತಾ 16 : 15 (OCVKN)
ದೇವರು ತಮ್ಮ ಒಡಂಬಡಿಕೆಯನ್ನೂ, ಸಾವಿರ ತಲಾಂತರಗಳಿಗೆ ಆಜ್ಞಾಪಿಸಿದ ತಮ್ಮ ಮಾತನ್ನೂ,
1 ಪೂರ್ವಕಾಲವೃತ್ತಾ 16 : 16 (OCVKN)
ಅಬ್ರಹಾಮನ ಸಂಗಡ ಮಾಡಿದ ಒಡಂಬಡಿಕೆಯನ್ನೂ, ಇಸಾಕನಿಗೆ ಇಟ್ಟ ಆಣೆಯನ್ನೂ ಯುಗಯುಗಕ್ಕೂ ಜ್ಞಾಪಕಮಾಡಿಕೊಳ್ಳಿರಿ.
1 ಪೂರ್ವಕಾಲವೃತ್ತಾ 16 : 17 (OCVKN)
ದೇವರು ಅದನ್ನು ಯಾಕೋಬನಿಗೆ ತೀರ್ಪನ್ನಾಗಿ ದೃಢಪಡಿಸಿದರು, ಅವರು ಇಸ್ರಾಯೇಲರಿಗೆ ನಿತ್ಯ ಒಡಂಬಡಿಕೆಯಾಗಿ ಸ್ಥಾಪಿಸಿ ಹೇಳಿದ್ದೇನೆಂದರೆ:
1 ಪೂರ್ವಕಾಲವೃತ್ತಾ 16 : 18 (OCVKN)
“ನಾನು ನಿಮಗೆ ಕಾನಾನ್ ದೇಶವನ್ನು ನಿಮ್ಮ ಬಾಧ್ಯತೆಯ ಪಾಲಾಗಿ ಕೊಡುವೆನು.”
1 ಪೂರ್ವಕಾಲವೃತ್ತಾ 16 : 19 (OCVKN)
ಆಗ ಅವರು ಅಲ್ಪಸಂಖ್ಯಾತರೂ, ಬಹು ಸ್ವಲ್ಪ ಮಂದಿಯಾಗಿಯೂ, ಪರದೇಶಸ್ಥರಾಗಿಯೂ ನಾಡಿನಲ್ಲಿ ಇದ್ದರು.
1 ಪೂರ್ವಕಾಲವೃತ್ತಾ 16 : 20 (OCVKN)
ಅವರು ಜನಾಂಗದಿಂದ ಜನಾಂಗಕ್ಕೂ, ಒಂದು ರಾಜ್ಯದಿಂದ ಬೇರೊಂದು ರಾಜ್ಯಕ್ಕೂ ಹೋಗುತ್ತಿದ್ದರು.
1 ಪೂರ್ವಕಾಲವೃತ್ತಾ 16 : 21 (OCVKN)
ಜನರು ಅವರಿಗೆ ಕೇಡು ಮಾಡದಂತೆ ದೇವರು ತಡೆದರು. ಹೌದು, ಅವರಿಗೋಸ್ಕರ ದೇವರು ಅರಸರನ್ನು ಗದರಿಸಿ:
1 ಪೂರ್ವಕಾಲವೃತ್ತಾ 16 : 22 (OCVKN)
ನನ್ನ ಅಭಿಷಿಕ್ತರನ್ನು ಮುಟ್ಟಬೇಡಿರಿ. ನನ್ನ ಪ್ರವಾದಿಗಳಿಗೆ ಕೇಡು ಮಾಡಬೇಡಿರಿ.
1 ಪೂರ್ವಕಾಲವೃತ್ತಾ 16 : 23 (OCVKN)
ಸಮಸ್ತ ಭೂನಿವಾಸಿಗಳೇ, ಯೆಹೋವ ದೇವರಿಗೆ ಹಾಡಿರಿ. ಅವರ ರಕ್ಷಣೆಯನ್ನು ದಿನಂಪ್ರತಿ ಸಾರಿ ಹೇಳಿರಿ.
1 ಪೂರ್ವಕಾಲವೃತ್ತಾ 16 : 24 (OCVKN)
ಜನಾಂಗಗಳಲ್ಲಿ ಅವರ ಘನತೆಯನ್ನೂ, ಎಲ್ಲಾ ಜನಾಂಗಗಳಲ್ಲಿ ಅವರ ಅದ್ಭುತಗಳನ್ನೂ ವಿವರಿಸಿರಿ.
1 ಪೂರ್ವಕಾಲವೃತ್ತಾ 16 : 25 (OCVKN)
ಯೆಹೋವ ದೇವರು ಮಹೋನ್ನತರಾಗಿದ್ದಾರೆ, ಬಹು ಸ್ತುತಿಗೆ ಪಾತ್ರರೂ ಆಗಿದ್ದಾರೆ; ಅವರು ಎಲ್ಲಾ ದೇವರುಗಳಿಗಿಂತ ಬಹುಭಯಭಕ್ತಿಗೆ ಪಾತ್ರರಾಗಿದ್ದಾರೆ.
1 ಪೂರ್ವಕಾಲವೃತ್ತಾ 16 : 26 (OCVKN)
ಏಕೆಂದರೆ ಜನಾಂಗಗಳ ದೇವರುಗಳೆಲ್ಲಾ ವಿಗ್ರಹಗಳಾಗಿವೆ; ಆದರೆ ಯೆಹೋವ ದೇವರು ಆಕಾಶಮಂಡಲವನ್ನು ನಿರ್ಮಿಸಿದವರು.
1 ಪೂರ್ವಕಾಲವೃತ್ತಾ 16 : 27 (OCVKN)
ಅವರ ಸನ್ನಿಧಿಯಲ್ಲಿ ಘನತೆಯೂ ಪ್ರಭೆಯೂ; ಅವರ ಪರಿಶುದ್ಧ ಸ್ಥಳದಲ್ಲಿ ಬಲವೂ ಸಂತೋಷವೂ ಇವೆ.
1 ಪೂರ್ವಕಾಲವೃತ್ತಾ 16 : 28 (OCVKN)
ಜನಾಂಗದ ಕುಟುಂಬಗಳೇ, ಯೆಹೋವ ದೇವರ ಮುಂದೆ, ನೀವು ಮಹಿಮೆಯನ್ನೂ ಬಲವನ್ನೂ ಅರ್ಪಿಸಿರಿ.
1 ಪೂರ್ವಕಾಲವೃತ್ತಾ 16 : 29 (OCVKN)
ಯೆಹೋವ ದೇವರ ಹೆಸರಿಗೆ ಸಲ್ಲತಕ್ಕ ಗೌರವವನ್ನು ಸಲ್ಲಿಸಿರಿ; ಕಾಣಿಕೆಯನ್ನು ತೆಗೆದುಕೊಂಡು ದೇವರ ಸನ್ನಿಧಿಗೆ ಬನ್ನಿರಿ. ಪರಿಶುದ್ಧತೆ ಎಂಬ ಭೂಷಣದೊಡನೆ ಯೆಹೋವ ದೇವರನ್ನು ಆರಾಧಿಸಿರಿ.
1 ಪೂರ್ವಕಾಲವೃತ್ತಾ 16 : 30 (OCVKN)
ಸಮಸ್ತ ಭೂನಿವಾಸಿಗಳೇ, ಅವರ ಮುಂದೆ ಭಯಪಡಿರಿ. ಲೋಕವು ಸ್ಥಿರವಾಗಿರುವುದು, ಕದಲುವುದಿಲ್ಲ.
1 ಪೂರ್ವಕಾಲವೃತ್ತಾ 16 : 31 (OCVKN)
ಆಕಾಶವು ಸಂತೋಷಿಸಲಿ, ಭೂಮಿಯು ಉಲ್ಲಾಸಪಡಲಿ. ಯೆಹೋವ ದೇವರು ಆಳುತ್ತಾರೆಂದು ಜನಾಂಗಗಳಲ್ಲಿ ಹೇಳಲಿ.
1 ಪೂರ್ವಕಾಲವೃತ್ತಾ 16 : 32 (OCVKN)
ಸಮುದ್ರವೂ ಅದರಲ್ಲಿರುವುದೆಲ್ಲವೂ ಘೋಷಿಸಲಿ. ಹೊಲಗಳೂ ಅವುಗಳಲ್ಲಿರುವ ಸಮಸ್ತವೂ ಉತ್ಸಾಹಪಡಲಿ.
1 ಪೂರ್ವಕಾಲವೃತ್ತಾ 16 : 33 (OCVKN)
ಆಗ ಅಡವಿಯ ಮರಗಳೆಲ್ಲಾ ಯೆಹೋವ ದೇವರ ಮುಂದೆಯೇ ಉತ್ಸಾಹಧ್ವನಿ ಮಾಡಲಿ. ದೇವರು ಭೂಮಿಗೆ ನ್ಯಾಯತೀರಿಸಲು ಬರುತ್ತಾರೆ.
1 ಪೂರ್ವಕಾಲವೃತ್ತಾ 16 : 34 (OCVKN)
ಯೆಹೋವ ದೇವರಿಗೆ ಕೃತಜ್ಞತಾ ಸ್ತುತಿಮಾಡಿರಿ. ಅವರು ಒಳ್ಳೆಯವರು; ಅವರ ಪ್ರೀತಿ ಶಾಶ್ವತವಾಗಿರುವುದು.
1 ಪೂರ್ವಕಾಲವೃತ್ತಾ 16 : 35 (OCVKN)
ನಮ್ಮ ರಕ್ಷಣೆಯ ದೇವರೇ, “ನಾವು ನಿಮ್ಮ ಪರಿಶುದ್ಧ ಹೆಸರಿಗೆ ಉಪಕಾರಸ್ತುತಿ ಮಾಡಿ, ನಿಮ್ಮ ಸ್ತೋತ್ರದಲ್ಲಿ ಜಯಘೋಷ ಮಾಡುವ ಹಾಗೆ ನಮ್ಮನ್ನು ರಕ್ಷಿಸಿರಿ, ಜನಾಂಗಗಳೊಳಗಿಂದ ನಮ್ಮನ್ನು ಬಿಡುಗಡೆ ಮಾಡಿ ಒಂದುಗೂಡಿಸಿರಿ.”
1 ಪೂರ್ವಕಾಲವೃತ್ತಾ 16 : 36 (OCVKN)
ಇಸ್ರಾಯೇಲ್ ದೇವರಾದ ಯೆಹೋವ ದೇವರಿಗೆ ಯುಗಯುಗಕ್ಕೂ ಸ್ತುತಿಯುಂಟಾಗಲಿ, ಜನರೆಲ್ಲರೂ, “ಆಮೆನ್,” ಎಂದು ಹೇಳಲಿ. ನೀವು, “ಯೆಹೋವ ದೇವರನ್ನು ಸ್ತುತಿಸಿರಿ,” ಎಂದು ಹೇಳಿದರು.
1 ಪೂರ್ವಕಾಲವೃತ್ತಾ 16 : 37 (OCVKN)
ಪ್ರತಿದಿನದ ಅವಶ್ಯಕತೆಗಳಿಗೆ ಅನುಗುಣವಾಗಿ ನಿಯಮಿತವಾಗಿ ಯೆಹೋವ ದೇವರ ಒಡಂಬಡಿಕೆಯ ಮಂಜೂಷದ ಮುಂದೆ ಸೇವೆ ಸಲ್ಲಿಸಲು ದಾವೀದನು ಆಸಾಫ್ ಮತ್ತು ಅವನ ಸಹಚರರನ್ನು ನೇಮಿಸಿದನು.
1 ಪೂರ್ವಕಾಲವೃತ್ತಾ 16 : 38 (OCVKN)
ಓಬೇದ್ ಏದೋಮ್ ಮತ್ತು ಅವನ ಸಹಚರರಾದ ಅರವತ್ತೆಂಟು ಮಂದಿಯೂ, ದ್ವಾರಪಾಲಕರಾದ ಯೆದುತೂನನ ಮಗ ಓಬೇದ್ ಎದೋಮ್ ಮತ್ತು ಹೋಸ ನೇಮಕವಾಗಿದ್ದರು.
1 ಪೂರ್ವಕಾಲವೃತ್ತಾ 16 : 39 (OCVKN)
ಗಿಬ್ಯೋನಿನಲ್ಲಿರುವ ಉನ್ನತ ಸ್ಥಳದಲ್ಲಿ ಯೆಹೋವ ದೇವರ ಗುಡಾರದ ಮುಂದೆ ಸೇವೆಮಾಡುವದಕ್ಕೆ ದಾವೀದನು ಯಾಜಕನಾದ ಚಾದೋಕನನ್ನೂ ಮತ್ತು ಅವನ ಸಹೋದರರನ್ನು ನೇಮಿಸಿದನು.
1 ಪೂರ್ವಕಾಲವೃತ್ತಾ 16 : 40 (OCVKN)
ಯೆಹೋವ ದೇವರು ಇಸ್ರಾಯೇಲಿಗೆ ಆಜ್ಞಾಪಿಸಿದ ಮೋಶೆಯ ನಿಯಮದಲ್ಲಿ ಬರೆದಿದ್ದ ಎಲ್ಲಾದರ ಪ್ರಕಾರ ಮಾಡಲೂ ಅವರು ಪ್ರತಿದಿನವೂ ಉದಯಕಾಲದಲ್ಲಿ ಮತ್ತು ಸಾಯಂಕಾಲದಲ್ಲಿ ದಹನಬಲಿಪೀಠದ ಮೇಲೆ ಯೆಹೋವ ದೇವರಿಗೆ ದಹನಬಲಿಗಳನ್ನು ಅರ್ಪಿಸುತ್ತಿದ್ದರು.
1 ಪೂರ್ವಕಾಲವೃತ್ತಾ 16 : 41 (OCVKN)
“ದೇವರ ಪ್ರೀತಿ ನಿತ್ಯವಾಗಿ ನೆಲೆಗೊಂಡಿರುವುದು,” ಎಂದು ಯೆಹೋವ ದೇವರನ್ನು ಕೊಂಡಾಡುವುದಕ್ಕೆ ಹೇಮಾನನೂ, ಯೆದುತೂನನೂ ಹೆಸರು ಹೆಸರಾಗಿ ಆಯ್ಕೆಗೊಂಡು, ನೇಮಕರಾಗಿದ್ದರು.
1 ಪೂರ್ವಕಾಲವೃತ್ತಾ 16 : 42 (OCVKN)
ಅದರ ಸಂಗಡ ತುತೂರಿ ಊದಲು, ತಾಳ ಬಾರಿಸಲು, ದೇವರ ಗೀತವಾದ್ಯಗಳೂ ಸಹಿತವಾಗಿ ಹೇಮಾನನೂ, ಯೆದುತೂನನೂ ಮೇಲ್ವಿಚಾರಕರಾಗಿದ್ದರು. ಯೆದುತೂನನ ಪುತ್ರರು ದ್ವಾರಪಾಲಕರಾಗಿದ್ದರು.
1 ಪೂರ್ವಕಾಲವೃತ್ತಾ 16 : 43 (OCVKN)
ತರುವಾಯ ಜನರೆಲ್ಲರು ತಮ್ಮ ತಮ್ಮ ಮನೆಗೆ ಹೋದರು. ದಾವೀದನು ತನ್ನ ಕುಟುಂಬವನ್ನು ಆಶೀರ್ವದಿಸುವುದಕ್ಕೆ ಹೋದನು.
❮
❯