1 ಪೂರ್ವಕಾಲವೃತ್ತಾ 17 : 1 (OCVKN)
ದಾವೀದನಿಗೆ ದೇವರ ವಾಗ್ದಾನ
1 ಪೂರ್ವಕಾಲವೃತ್ತಾ 17 : 2 (OCVKN)
ದಾವೀದನು ತನ್ನ ಅರಮನೆಯಲ್ಲಿ ವಾಸಿಸುತ್ತಿದ್ದಾಗ, ಒಂದು ದಿನ ದಾವೀದನು ಪ್ರವಾದಿಯಾದ ನಾತಾನನಿಗೆ, “ನೋಡು, ನಾನು ದೇವದಾರು ಮರದ ಅರಮನೆಯಲ್ಲಿ ವಾಸವಾಗಿದ್ದೇನೆ. ಆದರೆ ಯೆಹೋವ ದೇವರ ಒಡಂಬಡಿಕೆಯ ಮಂಜೂಷವು ಗುಡಾರದಲ್ಲಿರುತ್ತದೆ,” ಎಂದನು.
1 ಪೂರ್ವಕಾಲವೃತ್ತಾ 17 : 3 (OCVKN)
ಆಗ ನಾತಾನನು ದಾವೀದನಿಗೆ, “ನಿನ್ನ ಹೃದಯದಲ್ಲಿ ಏನು ಇದೆಯೋ ಅದನ್ನು ಮಾಡು; ಏಕೆಂದರೆ ದೇವರು ನಿನ್ನ ಸಂಗಡ ಇದ್ದಾರೆ,” ಎಂದನು.
1 ಪೂರ್ವಕಾಲವೃತ್ತಾ 17 : 4 (OCVKN)
ಅದೇ ರಾತ್ರಿಯಲ್ಲಿ ಯೆಹೋವ ದೇವರ ವಾಕ್ಯವು ನಾತಾನನಿಗೆ ಉಂಟಾಗಿ ಹೇಳಿದ್ದೇನೆಂದರೆ: “ನೀನು ಹೋಗಿ ನನ್ನ ಸೇವಕನಾದ ದಾವೀದನಿಗೆ, ‘ಯೆಹೋವ ದೇವರು ಹೇಳುವುದೇನೆಂದರೆ: ನಾನು ವಾಸವಾಗಿರುವುದಕ್ಕೆ ನೀನು ನನಗೆ ಆಲಯವನ್ನು ಕಟ್ಟಿಸಬೇಡ.
1 ಪೂರ್ವಕಾಲವೃತ್ತಾ 17 : 5 (OCVKN)
ಏಕೆಂದರೆ ನಾನು ಈಜಿಪ್ಟಿನಿಂದ ಇಸ್ರಾಯೇಲರನ್ನು ಬರಮಾಡಿದ ದಿವಸ ಮೊದಲುಗೊಂಡು, ಇಂದಿನವರೆಗೂ ಆಲಯದಲ್ಲಿ ವಾಸಮಾಡದೆ ಒಂದು ಗುಡಾರದ ಸ್ಥಳದಿಂದ ಇನ್ನೊಂದು ಗುಡಾರದ ಸ್ಥಳಕ್ಕೂ, ಒಂದು ತಂಗುವ ಸ್ಥಳದಿಂದ ಇನ್ನೊಂದು ತಂಗುವ ಸ್ಥಳಕ್ಕೂ ಹೋಗುತ್ತಿದ್ದೆನು.
1 ಪೂರ್ವಕಾಲವೃತ್ತಾ 17 : 6 (OCVKN)
ನಾನು ನನ್ನ ಜನರಾದ ಇಸ್ರಾಯೇಲರನ್ನು ಪರಿಪಾಲಿಸಲು ಆಜ್ಞಾಪಿಸಿದ ಇಸ್ರಾಯೇಲಿನ ಅಧಿಪತಿಗಳಲ್ಲಿ ಒಬ್ಬನ ಜೊತೆಯಾದರೂ, “ನೀವು ನನಗೆ ದೇವದಾರು ಮನೆಯನ್ನು ಏಕೆ ಕಟ್ಟಲಿಲ್ಲ,” ಎಂದು ನಾನು ಸಮಸ್ತ ಇಸ್ರಾಯೇಲಿನ ಸಂಗಡ ಸಂಚರಿಸಿದ ಯಾವ ಸ್ಥಳದಲ್ಲಾದರೂ, ಯಾವಾಗಲಾದರೂ ಕೇಳಿದೆನೋ?’
1 ಪೂರ್ವಕಾಲವೃತ್ತಾ 17 : 7 (OCVKN)
“ಈಗ ನೀನು ನನ್ನ ಸೇವಕನಾದ ದಾವೀದನಿಗೆ ಹೇಳಬೇಕಾದದ್ದೇನೆಂದರೆ, ‘ಸೇನಾಧೀಶ್ವರ ಯೆಹೋವ ದೇವರು ನಿನಗೆ ತಿಳಿಸುವುದೇನೆಂದರೆ: ಕುರಿಗಳ ಹಿಂದೆ ಹೋಗುತ್ತಿದ್ದ ನಿನ್ನನ್ನು ನಾನು ಕುರಿಯ ಹಟ್ಟಿಯಿಂದ ತೆಗೆದುಕೊಂಡು, ನನ್ನ ಜನರಾದ ಇಸ್ರಾಯೇಲರ ಮೇಲೆ ನಾಯಕನಾಗಿರುವಂತೆ ನೇಮಿಸಿದೆನು.
1 ಪೂರ್ವಕಾಲವೃತ್ತಾ 17 : 8 (OCVKN)
ನೀನು ಎಲ್ಲಿ ಹೋದರೂ ಅಲ್ಲಿ ನಿನ್ನ ಸಂಗಡ ಇದ್ದು, ನಿನ್ನ ಶತ್ರುಗಳನ್ನೆಲ್ಲಾ ನಿನ್ನ ಮುಂದೆಯೇ ಸಂಹರಿಸಿದೆನು. ಭೂಮಿಯಲ್ಲಿರುವ ಮಹಾಪುರುಷರ ಹೆಸರಿನ ಹಾಗೆ ನಿನ್ನ ಹೆಸರನ್ನೂ ಪ್ರಸಿದ್ಧಪಡಿಸುವೆನು.
1 ಪೂರ್ವಕಾಲವೃತ್ತಾ 17 : 9 (OCVKN)
ಇದಲ್ಲದೆ ನಾನು ನನ್ನ ಜನರಾದ ಇಸ್ರಾಯೇಲರಿಗೆ ಒಂದು ಸ್ಥಳವನ್ನು ಏರ್ಪಡಿಸಿ, ಅವರು ಇನ್ನು ಮೇಲೆ ಯಾವ ಭಯವೂ ಇಲ್ಲದೆ ಸ್ವಸ್ಥಳದಲ್ಲಿ ವಾಸವಾಗಿರುವ ಹಾಗೆ ಅವರನ್ನು ನೆಲೆಗೊಳಿಸುವೆನು.
1 ಪೂರ್ವಕಾಲವೃತ್ತಾ 17 : 10 (OCVKN)
ಪೂರ್ವಕಾಲದಲ್ಲಿ ನಾನು ನನ್ನ ಜನರಾದ ಇಸ್ರಾಯೇಲರ ಮೇಲೆ ನ್ಯಾಯಾಧಿಪತಿಗಳನ್ನು ನೇಮಿಸಿದೆ. ಆ ದಿವಸದಿಂದ ಈಚೆಗೆ, ದುಷ್ಟರು ಇನ್ನು ಮೇಲೆ ಇಸ್ರಾಯೇಲರನ್ನು ಕುಗ್ಗಿಸದೆ ಇರುವರು. ನಾನು ನಿನ್ನ ಸಮಸ್ತ ಶತ್ರುಗಳನ್ನು ತಗ್ಗಿಸಿದ್ದೇನೆ. “ ‘ಯೆಹೋವ ದೇವರಾದ ನಾನು ನಿನಗೆ ಮನೆಯನ್ನು ಕಟ್ಟುವೆನು, ಎಂದು ನಿನಗೆ ತಿಳಿಸುತ್ತೇನೆ.
1 ಪೂರ್ವಕಾಲವೃತ್ತಾ 17 : 11 (OCVKN)
ನಿನ್ನ ಆಯುಷ್ಕಾಲವು ಮುಗಿದ ಮೇಲೆ, ನೀನು ನಿನ್ನ ಪಿತೃಗಳ ಬಳಿಗೆ ಹೋಗಿ ವಿಶ್ರಮಿಸುವಾಗ, ನಾನು ನಿನ್ನ ಸಂತತಿಯಲ್ಲಿ ಒಬ್ಬನನ್ನು ನಿನ್ನ ಉತ್ತರಾಧಿಕಾರಿಯನ್ನಾಗಿ ನೇಮಿಸಿ, ಅವನ ರಾಜ್ಯವನ್ನು ಸ್ಥಿರಮಾಡುವೆನು.
1 ಪೂರ್ವಕಾಲವೃತ್ತಾ 17 : 12 (OCVKN)
ಅವನೇ ನನಗೆ ದೇವಾಲಯವನ್ನು ಕಟ್ಟುವನು. ನಾನು ಅವನ ರಾಜಸಿಂಹಾಸನವನ್ನು ಸದಾಕಾಲಕ್ಕೂ ಸ್ಥಿರಮಾಡುವೆನು.
1 ಪೂರ್ವಕಾಲವೃತ್ತಾ 17 : 13 (OCVKN)
ನಾನು ಅವನ ತಂದೆಯಾಗಿರುವೆನು. ಅವನು ನನಗೆ ಮಗನಾಗಿರುವನು. ನಿನಗಿಂತ ಮುಂಚೆ ಇದ್ದವನ ಮೇಲಿಂದ ನನ್ನ ಪ್ರೀತಿಯನ್ನು ಹಿಂತೆಗೆದುಕೊಂಡ ಹಾಗೆ ಎಂದಿಗೂ ಅವನಿಂದ ಹಿಂತೆಗೆಯುವುದಿಲ್ಲ.
1 ಪೂರ್ವಕಾಲವೃತ್ತಾ 17 : 14 (OCVKN)
ಅವನನ್ನು ನನ್ನ ಮನೆಯಲ್ಲಿಯೂ, ನನ್ನ ರಾಜ್ಯದಲ್ಲಿಯೂ ಸದಾಕಾಲಕ್ಕೂ ಸ್ಥಿರಗೊಳಿಸುವೆನು. ಅವನ ಸಿಂಹಾಸನವು ಯುಗಯುಗಾಂತರಕ್ಕೂ ಶಾಶ್ವತವಾಗಿರುವುದು,’ ” ಎಂದು ಹೇಳಿದರು.
1 ಪೂರ್ವಕಾಲವೃತ್ತಾ 17 : 15 (OCVKN)
1 ಪೂರ್ವಕಾಲವೃತ್ತಾ 17 : 16 (OCVKN)
ನಾತಾನನು ಈ ಸಮಸ್ತ ಪ್ರಕಟಣೆಯ ಮಾತುಗಳನ್ನು ದಾವೀದನಿಗೆ ತಿಳಿಸಿದನು. ದಾವೀದನ ಪ್ರಾರ್ಥನೆ ಅನಂತರ ಅರಸನಾದ ದಾವೀದನು ಒಳಗೆ ಪ್ರವೇಶಿಸಿ, ಯೆಹೋವ ದೇವರ ಸನ್ನಿಧಿಯಲ್ಲಿ ಕುಳಿತುಕೊಂಡು, “ದೇವರೇ, ಯೆಹೋವ ದೇವರೇ, ನನ್ನಂಥವನಿಗೆ ನೀವು ಈ ಪದವಿಯನ್ನು ಅನುಗ್ರಹಿಸಿ, ಇಷ್ಟು ಮುಂದಕ್ಕೆ ತರಲು ನಾನೆಷ್ಟರವನು? ನನ್ನ ಕುಟುಂಬ ಎಷ್ಟರದು?
1 ಪೂರ್ವಕಾಲವೃತ್ತಾ 17 : 17 (OCVKN)
ಯೆಹೋವ ದೇವರೇ, ಇದು ನಿಮ್ಮ ದೃಷ್ಟಿಯಲ್ಲಿ ಅಲ್ಪವೆಂದು ಕಾಣಿಸಿದರೂ ನೀವು ನಿಮ್ಮ ಸೇವಕನ ಸಂತಾನದ ಭವಿಷ್ಯದ ಕುರಿತೂ ವಾಗ್ದಾನಮಾಡಿರುವಿರಿ. ಯೆಹೋವ ದೇವರೇ, ನೀವು ನನ್ನನ್ನು ಮನುಷ್ಯರಲ್ಲಿ ಅತ್ಯುನ್ನತ ವ್ಯಕ್ತಿಯಂತೆ ನೋಡಿರುವಿರಿ.
1 ಪೂರ್ವಕಾಲವೃತ್ತಾ 17 : 18 (OCVKN)
“ನಿಮ್ಮ ಸೇವಕನ ಘನತೆಯ ನಿಮಿತ್ತ, ದಾವೀದನು ಇನ್ನೂ ಹೆಚ್ಚಾಗಿ ಹೇಳಿಕೊಳ್ಳುವುದೇನಿದೆ? ಏಕೆಂದರೆ ನೀವು ನಿಮ್ಮ ಸೇವಕನನ್ನು ಚೆನ್ನಾಗಿ ಬಲ್ಲಿರಿ.
1 ಪೂರ್ವಕಾಲವೃತ್ತಾ 17 : 19 (OCVKN)
ಯೆಹೋವ ದೇವರೇ, ನಿಮ್ಮ ಸೇವಕನ ನಿಮಿತ್ತವಾಗಿಯೂ, ನಿಮ್ಮ ಚಿತ್ತಾನುಸಾರವಾಗಿಯೂ ಈ ಮಹಾಕಾರ್ಯಗಳನ್ನೆಲ್ಲಾ ನಡೆಸಿ, ಎಲ್ಲ ವಾಗ್ದಾನಗಳನ್ನು ತಿಳಿಯಪಡಿಸಿರುವಿರಿ.
1 ಪೂರ್ವಕಾಲವೃತ್ತಾ 17 : 20 (OCVKN)
“ಯೆಹೋವ ದೇವರೇ, ನಮ್ಮ ಕಿವಿಗಳಿಂದ ನಾವು ಕೇಳಿದವುಗಳನ್ನೆಲ್ಲಾ ಆಲೋಚಿಸಿ ನೋಡಿದರೆ ನಿಮ್ಮ ಹಾಗೆ ಯಾರೂ ಇಲ್ಲ; ನಿಮ್ಮ ಹೊರತು ದೇವರು ಯಾರೂ ಇಲ್ಲ.
1 ಪೂರ್ವಕಾಲವೃತ್ತಾ 17 : 21 (OCVKN)
ಭೂಲೋಕದಲ್ಲಿ ನಿಮ್ಮ ಜನರಾದ ಇಸ್ರಾಯೇಲರಿಗೆ ಸಮಾನವಾದ ಜನಾಂಗ ಯಾವುದು? ದೇವರಾದ ನೀವೇ ಹೋಗಿ ಅವರನ್ನು ಸ್ವಜನರಾಗಿ ವಿಮೋಚಿಸಿ ನಿಮ್ಮ ಹೆಸರನ್ನು ಪ್ರಸಿದ್ಧಿಪಡಿಸಿದ್ದೀರಿ. ಈಜಿಪ್ಟಿನಿಂದ ವಿಮೋಚಿಸಿ ತಂದ ನಿಮ್ಮ ಪ್ರಜೆಗಳ ಎದುರಿನಿಂದ ಜನಾಂಗಗಳನ್ನು ಓಡಿಸುವ ಮೂಲಕ ವಿಸ್ಮಯಕರವಾದ ಮಹಾ ಅದ್ಭುತಗಳನ್ನು ಮಾಡಿದ್ದೀರಲ್ಲವೇ?
1 ಪೂರ್ವಕಾಲವೃತ್ತಾ 17 : 22 (OCVKN)
ನೀವು ಇಸ್ರಾಯೇಲ್ ಜನರನ್ನು ಶಾಶ್ವತವಾಗಿ ನಿಮ್ಮ ಸ್ವಂತ ಜನರಾಗಿ ಮಾಡಿದಿರಿ; ಯೆಹೋವ ದೇವರೇ, ನೀವೇ ಅವರಿಗೆ ದೇವರಾದಿರಿ.
1 ಪೂರ್ವಕಾಲವೃತ್ತಾ 17 : 23 (OCVKN)
“ಈಗ ಯೆಹೋವ ದೇವರೇ, ನೀವು ನಿಮ್ಮ ಸೇವಕನನ್ನು ಕುರಿತೂ, ಅವನ ಕುಟುಂಬವನ್ನು ಕುರಿತೂ ಮಾಡಿದ ವಾಗ್ದಾನವನ್ನು ನೆರವೇರಿಸಿ ಅದನ್ನು ಶಾಶ್ವತವಾಗಿ ಸ್ಥಿರಪಡಿಸಿರಿ.
1 ಪೂರ್ವಕಾಲವೃತ್ತಾ 17 : 24 (OCVKN)
‘ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಇಸ್ರಾಯೇಲ್ ದೇವರಾಗಿದ್ದಾರೆಂದು ನಿಮ್ಮ ನಾಮವು ಶಾಶ್ವತವಾಗಿ ಘನಪಡಲಿ,’ ಎಂದು ಜನರು ಹೇಳಲಿ. ನಿಮ್ಮ ಸೇವಕನಾದ ದಾವೀದನ ಮನೆಯು ನಿಮ್ಮ ಮುಂದೆ ಸ್ಥಿರವಾಗಿರಲಿ.
1 ಪೂರ್ವಕಾಲವೃತ್ತಾ 17 : 25 (OCVKN)
“ಏಕೆಂದರೆ ನನ್ನ ದೇವರೇ, ನೀವು ನಿಮ್ಮ ಸೇವಕನಿಗೆ ಮನೆಯನ್ನು ಕಟ್ಟುವೆನೆಂದು ಪ್ರಕಟ ಮಾಡಿದ್ದರಿಂದ ನಿಮ್ಮನ್ನು ಪ್ರಾರ್ಥಿಸುವುದಕ್ಕೆ ನಿಮ್ಮ ಸೇವಕನ ಹೃದಯದಲ್ಲಿ ಧೈರ್ಯ ಉಂಟಾಯಿತು.
1 ಪೂರ್ವಕಾಲವೃತ್ತಾ 17 : 26 (OCVKN)
ಯೆಹೋವ ದೇವರೇ, ನಿಮ್ಮ ಸೇವಕನಿಗೆ ಈ ಒಳ್ಳೆಯ ಸಂಗತಿಗಳನ್ನು ವಾಗ್ದಾನಮಾಡಿದ ನೀವು ದೇವರಾಗಿದ್ದೀರಿ.
1 ಪೂರ್ವಕಾಲವೃತ್ತಾ 17 : 27 (OCVKN)
ಈಗ ನಿಮ್ಮ ಸೇವಕನ ಮನೆಯು ನಿಮ್ಮ ಮುಂದೆ ಶಾಶ್ವತವಾಗಿ ಇರುವ ಹಾಗೆ, ಅದನ್ನು ಆಶೀರ್ವದಿಸಲು ಸಂತೋಷಪಡಿರಿ; ಯೆಹೋವ ದೇವರೇ, ನೀವು ಆಶೀರ್ವದಿಸಿದ್ದೀರಿ, ಅದು ನಿತ್ಯ ಆಶೀರ್ವಾದ ಹೊಂದಿರುವುದು.”

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27