1 ಪೂರ್ವಕಾಲವೃತ್ತಾ 18 : 1 (OCVKN)
1 ಪೂರ್ವಕಾಲವೃತ್ತಾ 18 : 2 (OCVKN)
ಇದರ ತರುವಾಯ ದಾವೀದನು ಫಿಲಿಷ್ಟಿಯರ ಮೇಲೆ ದಾಳಿಮಾಡಿ ಅವರನ್ನು ಸೋಲಿಸಿ, ಅವರಿಂದ ಗತ್ ಪಟ್ಟಣವನ್ನೂ ಅದರ ಸುತ್ತಲಿನ ಗ್ರಾಮಗಳನ್ನೂ ತೆಗೆದುಕೊಂಡು, ಆಡಳಿತವನ್ನು ತನ್ನ ಸ್ವಾಧೀನದಲ್ಲಿಟ್ಟುಕೊಂಡನು.
1 ಪೂರ್ವಕಾಲವೃತ್ತಾ 18 : 3 (OCVKN)
ಹಾಗೆಯೇ ಅವನು ಮೋವಾಬ್ಯರನ್ನು ಸಹ ಸೋಲಿಸಿದನು, ಮೋವಾಬ್ಯರು ದಾವೀದನಿಗೆ ಅಧೀನರಾಗಿ ಕಪ್ಪಕೊಡುವವರಾದರು. ಇದಲ್ಲದೆ ದಾವೀದನು ಯೂಫ್ರೇಟೀಸ್ ನದಿಯ ಬಳಿಯಲ್ಲಿ ತನ್ನ ಅಧಿಕಾರವನ್ನು ಸ್ಥಾಪಿಸುವದಕ್ಕೆ ಹೋಗುತ್ತಿರುವಾಗ, ಹಮಾತಿನ ಬಳಿಯಲ್ಲಿ ಚೋಬದ ಅರಸನಾದ ಹದದೆಜೆರನನ್ನು ಸೋಲಿಸಿದನು.
1 ಪೂರ್ವಕಾಲವೃತ್ತಾ 18 : 4 (OCVKN)
ದಾವೀದನು ಅವನಿಂದ ಸಾವಿರ ರಥಗಳನ್ನೂ, ಏಳು ಸಾವಿರ ರಾಹುತರನ್ನೂ, ಇಪ್ಪತ್ತು ಸಾವಿರ ಕಾಲಾಳುಗಳನ್ನೂ ವಶಪಡಿಸಿಕೊಂಡನು. ನೂರು ರಥಗಳಿಗೆ ಕುದುರೆಗಳನ್ನು ಉಳಿಸಿ, ಇತರ ಕುದುರೆಗಳ ಕಾಲಿನ ನರಗಳನ್ನು ಕೊಯ್ಯಿಸಿಬಿಟ್ಟನು.
1 ಪೂರ್ವಕಾಲವೃತ್ತಾ 18 : 5 (OCVKN)
ದಮಸ್ಕದ ಅರಾಮ್ಯರು ಚೋಬದ ಅರಸ ಹದದೆಜೆರನಿಗೆ ಸಹಾಯಮಾಡಲು ಬಂದಾಗ, ದಾವೀದನು ಅರಾಮ್ಯರಲ್ಲಿ ಇಪ್ಪತ್ತೆರಡು ಸಾವಿರ ಜನರನ್ನು ಸಂಹರಿಸಿಬಿಟ್ಟನು.
1 ಪೂರ್ವಕಾಲವೃತ್ತಾ 18 : 6 (OCVKN)
ತರುವಾಯ ದಾವೀದನು ದಮಸ್ಕದ ಅರಾಮಿನಲ್ಲಿ ಕಾವಲುದಂಡುಗಳನ್ನು ಇಟ್ಟನು. ಹೀಗೆ ಅರಾಮ್ಯರು ದಾವೀದನಿಗೆ ಅಧೀನರಾಗಿ, ಕಪ್ಪವನ್ನು ಕೊಡುವವರಾದರು. ದಾವೀದನು ಹೋದ ಸ್ಥಳಗಳಲ್ಲೆಲ್ಲಾ ಯೆಹೋವ ದೇವರು ಅವನಿಗೆ ಜಯಕೊಟ್ಟರು.
1 ಪೂರ್ವಕಾಲವೃತ್ತಾ 18 : 7 (OCVKN)
ಆಗ ದಾವೀದನು ಹದದೆಜೆರನ ಸೇವಕರಿಗಿದ್ದ ಬಂಗಾರದ ಗುರಾಣಿಗಳನ್ನು ತೆಗೆದುಕೊಂಡು, ಅವುಗಳನ್ನು ಯೆರೂಸಲೇಮಿಗೆ ತಂದನು.
1 ಪೂರ್ವಕಾಲವೃತ್ತಾ 18 : 8 (OCVKN)
ಇದಲ್ಲದೆ ಹದದೆಜೆರನ ಪಟ್ಟಣಗಳಾದ ಟಿಭತಿನಿಂದಲೂ, ಕೂನ್ದಿಂದಲೂ ದಾವೀದನು ಅತ್ಯಧಿಕವಾಗಿ ಕಂಚನ್ನು ತೆಗೆದುಕೊಂಡು ಬಂದನು. ಅದರಿಂದ ಸೊಲೊಮೋನನು ಕಂಚಿನ ಕೊಳವನ್ನೂ, ಸ್ತಂಭಗಳನ್ನೂ, ವಿವಿಧ ಪಾತ್ರೆಗಳನ್ನೂ ಮಾಡಿಸಿದನು.
1 ಪೂರ್ವಕಾಲವೃತ್ತಾ 18 : 9 (OCVKN)
ದಾವೀದನು ಚೋಬದ ಅರಸನಾದ ಹದದೆಜೆರನ ಸಮಸ್ತ ಸೈನ್ಯವನ್ನು ಸೋಲಿಸಿದನೆಂಬ ವರ್ತಮಾನವನ್ನು ಹಮಾತಿನ ಅರಸನಾದ ತೋವು ಕೇಳಿದಾಗ,
1 ಪೂರ್ವಕಾಲವೃತ್ತಾ 18 : 10 (OCVKN)
ಅರಸನಾದ ದಾವೀದನ ಕ್ಷೇಮಸಮಾಚಾರವನ್ನು ವಿಚಾರಿಸಲೂ, ಹದದೆಜೆರನ ವಿರುದ್ಧ ಯುದ್ಧಮಾಡಿ ಅವನನ್ನು ಸೋಲಿಸಿದ್ದಕ್ಕಾಗಿ ಅವನನ್ನು ಅಭಿನಂದಿಸಿ, ಹರಸುವಂತೆ, ತೋವು ತನ್ನ ಪುತ್ರನಾದ ಹದೋರಾಮನನ್ನು ಎಲ್ಲಾ ತರವಾದ ಬೆಳ್ಳಿ, ಬಂಗಾರ, ಕಂಚಿನ ಪಾತ್ರೆಗಳ ಸಹಿತವಾಗಿ ದಾವೀದನ ಬಳಿಗೆ ಕಳುಹಿಸಿದನು; ಏಕೆಂದರೆ ಹದದೆಜೆರನಿಗೆ ತೋವಿಯ ಸಂಗಡ ಯುದ್ಧಗಳಿದ್ದವು.
1 ಪೂರ್ವಕಾಲವೃತ್ತಾ 18 : 11 (OCVKN)
1 ಪೂರ್ವಕಾಲವೃತ್ತಾ 18 : 12 (OCVKN)
ಇವುಗಳನ್ನು ಅರಸನಾದ ದಾವೀದನು ಎದೋಮ್ಯರು, ಮೋವಾಬ್ಯರು, ಅಮ್ಮೋನ್ಯರು, ಫಿಲಿಷ್ಟಿಯರು, ಅಮಾಲೇಕ್ಯರು ಎಂಬ ಸಕಲ ಜನಾಂಗಗಳ ಬಳಿಯಿಂದ ತೆಗೆದುಕೊಂಡು ಬಂದ ಬೆಳ್ಳಿಬಂಗಾರವನ್ನು ಯೆಹೋವ ದೇವರಿಗೆ ಪ್ರತಿಷ್ಠೆ ಮಾಡಿದನು. ಇದಲ್ಲದೆ ಚೆರೂಯಳ ಮಗ ಅಬೀಷೈಯನು ಉಪ್ಪಿನ ತಗ್ಗಿನಲ್ಲಿ ಹದಿನೆಂಟು ಸಾವಿರ ಎದೋಮ್ಯರ ಸೈನಿಕರನ್ನು ಕೊಂದನು.
1 ಪೂರ್ವಕಾಲವೃತ್ತಾ 18 : 13 (OCVKN)
ಎದೋಮಿನಲ್ಲಿ ಕಾವಲುದಂಡುಗಳನ್ನು ಇಟ್ಟನು. ಇದರಿಂದ, ಎದೋಮ್ಯರೆಲ್ಲರು ದಾವೀದನಿಗೆ ಅಧೀನರಾದರು. ದಾವೀದನು ಹೋದಲ್ಲೆಲ್ಲಾ ಯೆಹೋವ ದೇವರು ಅವನಿಗೆ ಜಯಕೊಟ್ಟರು.
1 ಪೂರ್ವಕಾಲವೃತ್ತಾ 18 : 14 (OCVKN)
ದಾವೀದನ ಸರದಾರರು ಹೀಗೆಯೇ ದಾವೀದನು ಸಮಸ್ತ ಇಸ್ರಾಯೇಲಿನ ಮೇಲೆ ಆಳುತ್ತಾ ತನ್ನ ಸಮಸ್ತ ಜನರಿಗೂ ನೀತಿ ನ್ಯಾಯಗಳಿಂದ ನಡೆಸುತ್ತಿದ್ದನು.
1 ಪೂರ್ವಕಾಲವೃತ್ತಾ 18 : 15 (OCVKN)
ಚೆರೂಯಳ ಮಗ ಯೋವಾಬನು ಸೈನ್ಯದ ಅಧಿಪತಿಯಾಗಿದ್ದನು. ಅಹೀಲೂದನ ಮಗ ಯೆಹೋಷಾಫಾಟನು ಆಸ್ಥಾನದ ಆಗುಹೋಗುಗಳನ್ನು ದಾಖಲಿಸುವವನಾಗಿದ್ದನು.
1 ಪೂರ್ವಕಾಲವೃತ್ತಾ 18 : 16 (OCVKN)
ಅಹೀಟೂಬನ ಮಗ ಚಾದೋಕನೂ, ಅಬಿಯಾತರನ ಮಗ ಅಹೀಮೆಲೆಕನೂ ಯಾಜಕರಾಗಿದ್ದರು. ಶವ್ಷನು ಕಾರ್ಯದರ್ಶಿಯಾಗಿದ್ದನು.
1 ಪೂರ್ವಕಾಲವೃತ್ತಾ 18 : 17 (OCVKN)
ಯೆಹೋಯಾದಾವನ ಮಗ ಬೆನಾಯನು ಕೆರೇತ್ಯರ ಮೇಲೆಯೂ, ಪೆಲೇತ್ಯರ ಮೇಲೆಯೂ ಮುಖ್ಯಸ್ಥನಾಗಿದ್ದನು. ದಾವೀದನ ಪುತ್ರರು ಅರಸನ ಬಳಿಯಲ್ಲಿ ಪ್ರಧಾನರಾಗಿದ್ದರು.
❮
❯
1
2
3
4
5
6
7
8
9
10
11
12
13
14
15
16
17