1 ಪೂರ್ವಕಾಲವೃತ್ತಾ 4 : 1 (OCVKN)
ಯೆಹೂದನ ಇತರ ಗೋತ್ರಗಳು ಯೆಹೂದನ ವಂಶಜರು: ಪೆರೆಚನು, ಹೆಚ್ರೋನನು, ಕರ್ಮೀ, ಹೂರನು, ಶೋಬಾಲನು.
1 ಪೂರ್ವಕಾಲವೃತ್ತಾ 4 : 2 (OCVKN)
ಶೋಬಾಲನ ಮಗನಾದ ರೆವಾಯನು ಯಹತನ ತಂದೆ. ಯಹತನು ಅಹೂಮೈ ಮತ್ತು ಲಹದ್ ಎಂಬವರ ತಂದೆ. ಇವರೇ ಚೊರ್‍ರದ ಕುಟುಂಬದವರು.
1 ಪೂರ್ವಕಾಲವೃತ್ತಾ 4 : 3 (OCVKN)
ಏಟಾಮನ ಪುತ್ರರು: ಇಜ್ರೆಯೇಲ್, ಇಷ್ಮ ಮತ್ತು ಇಬ್ಬಾಷ್ ಮತ್ತು ಇವರ ತಂಗಿ ಹಚೆಲೆಲ್‌ಪೋನೀ ಎಂಬವರು.
1 ಪೂರ್ವಕಾಲವೃತ್ತಾ 4 : 4 (OCVKN)
ಪೆನೂಯೇಲ್, ಗೆದೋರ್ ವಂಶದವರಿಗೆ ಮೂಲಪುರುಷನಾಗಿದ್ದನು. ಏಜೆರ್ ಹೂಷಾಹರ ಮೂಲಪುರುಷನಾಗಿದ್ದನು. ಇವರು ಎಫ್ರಾತಾಹ ಎಂಬಾಕೆಯ ಚೊಚ್ಚಲಮಗನಾದ ಹೂರನ ಮಕ್ಕಳು; ಈ ಹೂರನೇ ಬೇತ್ಲೆಹೇಮ್ ವಂಶದವರಿಗೆ ಮೂಲಪುರುಷನು.
1 ಪೂರ್ವಕಾಲವೃತ್ತಾ 4 : 5 (OCVKN)
ತೆಕೋವದ ತಂದೆ ಅಷ್ಹೂರನಿಗೆ ಹೆಲಾಹ, ನಾರ ಎಂಬ ಇಬ್ಬರು ಪತ್ನಿಯರಿದ್ದರು.
1 ಪೂರ್ವಕಾಲವೃತ್ತಾ 4 : 6 (OCVKN)
ನಾರಳು ಅವನಿಗೆ ಅಹುಜ್ಜಾಮ್, ಹೇಫೆರ್, ತೇಮಾನಿ, ಅಹಷ್ಟಾರ್ಯನನ್ನು ಹೆತ್ತಳು. ಇವರೇ ನಾರಳ ಮಕ್ಕಳು.
1 ಪೂರ್ವಕಾಲವೃತ್ತಾ 4 : 7 (OCVKN)
ಹೆಲಾಹಳ ಪುತ್ರರು: ಚೆರೆತ್, ಇಚ್ಹಾರ್* ಇಚ್ಹಾರ್ ಹೀಬ್ರೂ ಭಾಷೆಯಲ್ಲಿ ಚೋಹರ್ , ಎತ್ನಾನ್.
1 ಪೂರ್ವಕಾಲವೃತ್ತಾ 4 : 8 (OCVKN)
ಕೋಚನು ಅನೂಬ್‌ನನ್ನೂ, ಚೊಬೇಬನನ್ನೂ, ಹಾರುಮನ ಮಗನಾದ ಅಹರ‍್ಹೇಲನ ಸಂತತಿಗಳನ್ನೂ ಪಡೆದನು.
1 ಪೂರ್ವಕಾಲವೃತ್ತಾ 4 : 9 (OCVKN)
ಯಾಬೇಚನು ತನ್ನ ಸಹೋದರರಿಗಿಂತ ಘನವುಳ್ಳವನಾಗಿದ್ದನು. ಅವನ ತಾಯಿ, “ನಾನು ಇವನನ್ನು ವ್ಯಥೆಯಿಂದ ಹೆತ್ತೆನು,” ಎಂದು ಅವನಿಗೆ ಯಾಬೇಚನೆಂಬ ಹೆಸರಿಟ್ಟಳು.
1 ಪೂರ್ವಕಾಲವೃತ್ತಾ 4 : 10 (OCVKN)
ಆದರೆ ಯಾಬೇಚನು ಇಸ್ರಾಯೇಲಿನ ದೇವರಿಗೆ, “ನೀವು ನನ್ನನ್ನು ನಿಜವಾಗಿ ಆಶೀರ್ವದಿಸಬೇಕು; ನನ್ನ ಮೇರೆಯನ್ನು ವಿಸ್ತರಿಸಬೇಕು; ನಿಮ್ಮ ಹಸ್ತವು ನನ್ನ ಸಂಗಡ ಇರಲಿ; ನನ್ನನ್ನು ವ್ಯಥೆಪಡಿಸದ ಹಾಗೆ ನನ್ನನ್ನು ಕೇಡಿನಿಂದ ತಪ್ಪಿಸಿರಿ,” ಎಂದು ಮೊರೆಯಿಟ್ಟನು. ದೇವರು ಅವನು ಬೇಡಿಕೊಂಡದ್ದನ್ನು ಅನುಗ್ರಹಿಸಿದರು.
1 ಪೂರ್ವಕಾಲವೃತ್ತಾ 4 : 11 (OCVKN)
ಶೂಹನ ಸಹೋದರ ಕೆಲೂಬನು ಎಷ್ಟೋನನ ತಂದೆ ಮೆಹೀರನನ್ನು ಪಡೆದನು.
1 ಪೂರ್ವಕಾಲವೃತ್ತಾ 4 : 12 (OCVKN)
ಎಷ್ಟೋನನಿಂದ ಬೇತ್ ರಾಫಾ, ಪಾಸೇಹ, ತೆಹಿನ್ನ ಎಂಬ ಮೂವರು ಮಕ್ಕಳು ಇದ್ದರು. ತೆಹಿನ್ನ ನಾಹಷ್ ಪಟ್ಟಣದ ಸ್ಥಾಪಕ. ಈ ಜನರ ವಂಶಜರು ರೇಕಾ ಎಂಬಲ್ಲಿ ವಾಸಿಸಿದ್ದರು.
1 ಪೂರ್ವಕಾಲವೃತ್ತಾ 4 : 13 (OCVKN)
ಕೆನಾಜನ ಪುತ್ರರು: ಒತ್ನಿಯೇಲನು ಸೆರಾಯನು. ಒತ್ನಿಯೇಲನ ಪುತ್ರರು: ಹತತ್ ಹಾಗು ಮೆಯೋನೋತೈ.
1 ಪೂರ್ವಕಾಲವೃತ್ತಾ 4 : 14 (OCVKN)
ಮೆಯೋನೋತೈ ಒಫ್ರಾಹನನ್ನು ಪಡೆದನು. ಸೆರಾಯನು ಶಿಲ್ಪಿಗರಾಗಿರುವ ಗೇಹರಾಷೀಮರ ಗೇಹರಾಷೀಮ ಅಂದರೆ ನುರಿತ ಕಾರ್ಮಿಕರ ಕಣಿವೆ ಸ್ಥಾಪಕನಾದ ಯೋವಾಬನ ತಂದೆ. ಈ ಜನರು ಕೈಕೆಲಸದವರಾದ್ದರಿಂದ ಗೇಹರಾಷೀಮರು ಎಂಬ ಹೆಸರು ಬಂತು.
1 ಪೂರ್ವಕಾಲವೃತ್ತಾ 4 : 15 (OCVKN)
ಯೆಫುನ್ನೆಯ ಮಗನಾದ ಕಾಲೇಬನ ಪುತ್ರರು: ಈರು, ಏಲ, ನಾಮ್ ಎಂಬವರು; ಏಲನ ಮಗನು ಕೆನಜ್.
1 ಪೂರ್ವಕಾಲವೃತ್ತಾ 4 : 16 (OCVKN)
ಯೆಹಲ್ಲೆಲೇಲನ ಪುತ್ರರು: ಜೀಫನು, ಜಿಫಾಹನು, ತೀರ್ಯನು, ಅಸರೇಲನು.
1 ಪೂರ್ವಕಾಲವೃತ್ತಾ 4 : 17 (OCVKN)
ಎಜ್ರನ ಪುತ್ರರು: ಯೆತೆರ್, ಮೆರೆದ್, ಏಫೆರ್, ಯಾಲೋನ್ ಎಂಬವರು. ಮೇರದನ ಹೆಂಡತಿಯು ಅವನಿಗೆ ಮಿರ್ಯಾಮ್, ಶಮ್ಮಾಯ, ಎಷ್ಟೆಮೋವನ ತಂದೆ ಇಷ್ಬಾಹನನ್ನೂ ಹೆತ್ತಳು.
1 ಪೂರ್ವಕಾಲವೃತ್ತಾ 4 : 18 (OCVKN)
ಇವರು ಮೆರೆದನು ಮದುವೆಯಾದ ಫರೋಹನ ಮಗಳು ಬಿತ್ಯಳ ಮಕ್ಕಳು. ಇದಲ್ಲದೆ ಯೆಹೂದ್ಯಳಾದ ಅವನ ಇನ್ನೊಬ್ಬ ಹೆಂಡತಿ, ಗೆದೋರ್ಯನ ತಂದೆ ಯೆರೆದನನ್ನೂ, ಸೋಕೋವಿನ ತಂದೆ ಹೆಬೆರನನ್ನೂ, ಜಾನೋಹನ ತಂದೆ ಯೆಕೂತೀಯೇಲನನ್ನೂ ಹೆತ್ತಳು.
1 ಪೂರ್ವಕಾಲವೃತ್ತಾ 4 : 19 (OCVKN)
ಹೋದೀಯನು ನಹಮನ ಸಹೋದರಿಯನ್ನು ಮದುವೆಯಾದನು. ಇವರ ಸಂತತಿಯವರು ಕೆಯೀಲದಲ್ಲಿ ವಾಸಿಸಿದ ಗರ್ಮ್ಯ ಗೋತ್ರದ ಮತ್ತು ಎಷ್ಟೆಮೋವಾಬದಲ್ಲಿ ವಾಸಿಸಿದ ಮಾಕಾತ್ ಗೋತ್ರದ ಪೂರ್ವಜರು.
1 ಪೂರ್ವಕಾಲವೃತ್ತಾ 4 : 20 (OCVKN)
ಶೀಮೋನನ ಪುತ್ರರು: ಅಮ್ನೋನನು, ರಿನ್ನನು, ಬೆನ್ಹನಾನನು, ತಿಲೋನನು. ಇಷ್ಷೀಯನ ಸಂತತಿ: ಜೋಹೆತನು, ಬೆನ್ ಜೋಹೆತನು.
1 ಪೂರ್ವಕಾಲವೃತ್ತಾ 4 : 21 (OCVKN)
ಯೆಹೂದನ ಮಗ ಶೇಲಹನ ಪುತ್ರರು: ಲೇಕಾಹ್ಯನ ತಂದೆ ಏರನು, ಮಾರೇಷನ ತಂದೆ ಲದ್ದ; ಬೇತ್ ಅಷ್ಬೇಯ ಪಟ್ಟಣದಲ್ಲಿ ವಾಸಿಸಿದ ನೇಕಾರರ ಕುಟುಂಬಗಳವರು,
1 ಪೂರ್ವಕಾಲವೃತ್ತಾ 4 : 22 (OCVKN)
ಕೋಜೇಬದವರಾದ ಯೊಕೀಮ್ಯರೂ, ಯೋವಾಷನು, ಸಾರಾಫ ಮೋವಾಬ್ ಮತ್ತು ಯೆಷೂಬಿ ಲೆಹೇಮಿನಲ್ಲಿ ಅಧಿಕಾರವುಳ್ಳವರಾಗಿದ್ದರು. ಈ ದಾಖಲೆಗಳು ಪ್ರಾಚೀನ ಕಾಲದಿಂದ ಬಂದವು.
1 ಪೂರ್ವಕಾಲವೃತ್ತಾ 4 : 23 (OCVKN)
ಇವರೇ ನೆಟಾಯಿಮ್, ಗೆದೇರ ಎಂಬ ಸ್ಥಳಗಳಲ್ಲಿ ವಾಸವಾಗಿದ್ದ ಕುಂಬಾರರು. ಅವರು ಅಲ್ಲಿಯೇ ಇದ್ದು ಅರಸನಿಗೋಸ್ಕರ ಕೆಲಸ ಮಾಡುತ್ತಿದ್ದರು.
1 ಪೂರ್ವಕಾಲವೃತ್ತಾ 4 : 24 (OCVKN)
ಸಿಮೆಯೋನನು ಸಿಮೆಯೋನನ ವಂಶಜರು: ನೆಮೂಯೇಲನು, ಯಾಮೀನನು, ಯಾರೀಬನು, ಜೆರಹನು ಮತ್ತು ಸೌಲನು.
1 ಪೂರ್ವಕಾಲವೃತ್ತಾ 4 : 25 (OCVKN)
ಅವನ ಮಗನಾದ ಶಲ್ಲೂಮನು, ಅವನ ಮಗನಾದ ಮಿಬ್ಸಾಮನು, ಅವನ ಮಗನಾದ ಮಿಷ್ಮಾವನು.
1 ಪೂರ್ವಕಾಲವೃತ್ತಾ 4 : 26 (OCVKN)
ಮಿಷ್ಮಾವನ ವಂಶಜರು: ಅವನ ಮಗ ಹಮ್ಮೂಯೇಲನು, ಅವನ ಮಗ ಜಕ್ಕೂರನು, ಅವನ ಮಗನಾದ ಶಿಮ್ಮಿಯಿ.
1 ಪೂರ್ವಕಾಲವೃತ್ತಾ 4 : 27 (OCVKN)
ಶಿಮ್ಮಿಯಿಗೆ ಹದಿನಾರು ಮಂದಿ ಪುತ್ರರೂ, ಆರು ಮಂದಿ ಪುತ್ರಿಯರೂ ಇದ್ದರು. ಆದರೆ ಅವನ ಸಹೋದರರಿಗೆ ಬಹಳ ಮಕ್ಕಳಿರಲಿಲ್ಲ. ಅವರ ಸಮಸ್ತ ಸಂತತಿಯು ಯೆಹೂದದ ಮಕ್ಕಳ ಹಾಗೆ ಹೆಚ್ಚಾಗಿರಲಿಲ್ಲ.
1 ಪೂರ್ವಕಾಲವೃತ್ತಾ 4 : 28 (OCVKN)
ಇವರು ಬೇರ್ಷೆಬದಲ್ಲಿಯೂ; ಮೋಲಾದದಲ್ಲಿಯೂ; ಹಚರ್ ಷೂವಾಲ್ ಎಂಬಲ್ಲಿಯೂ;
1 ಪೂರ್ವಕಾಲವೃತ್ತಾ 4 : 29 (OCVKN)
ಬಿಲ್ಹದಲ್ಲಿಯೂ ಎಚೆಮಿನಲ್ಲಿಯೂ, ತೋಲಾದ್,
1 ಪೂರ್ವಕಾಲವೃತ್ತಾ 4 : 30 (OCVKN)
ಬೆತೂಯೇಲ್, ಹೊರ್ಮದಲ್ಲಿಯೂ; ಚಿಕ್ಲಗಿನಲ್ಲಿಯೂ;
1 ಪೂರ್ವಕಾಲವೃತ್ತಾ 4 : 31 (OCVKN)
ಬೇತ್ ಮರ್ಕಾಬೋತ್, ಹಚರ್ ಸೂಸೀಮ್, ಬೇತ್ ಬಿರೀ ಮತ್ತು ಶಾರಯಿಮ್‌ನಲ್ಲಿಯೂ ವಾಸವಾಗಿದ್ದರು. ದಾವೀದನ ಆಳ್ವಿಕೆಯವರೆಗೂ ಇವು ಅವರ ಪಟ್ಟಣಗಳಾಗಿದ್ದವು.
1 ಪೂರ್ವಕಾಲವೃತ್ತಾ 4 : 32 (OCVKN)
ಅವರ ಸುತ್ತಲಿನ ಗ್ರಾಮಗಳು ಯಾವುವೆಂದರೆ: ಏಟಾಮ್, ಆಯಿನ್, ರಿಮ್ಮೋನ್, ತೋಕೆನ್, ಆಷಾನ್ ಎಂಬ ಐದು ಪಟ್ಟಣಗಳು.
1 ಪೂರ್ವಕಾಲವೃತ್ತಾ 4 : 33 (OCVKN)
ಇದಲ್ಲದೆ ಆ ಪಟ್ಟಣಗಳ ಸುತ್ತಲಿದ್ದ ಊರುಗಳು ಬಾಳ್ ಪಟ್ಟಣದವರೆಗೆ ವಾಸವಾಗಿದ್ದರು. ಇವೇ ಅವರು ವಾಸವಾಗಿರುವ ಸ್ಥಳಗಳೂ, ಅವರ ವಂಶಾವಳಿಗಳೂ:
1 ಪೂರ್ವಕಾಲವೃತ್ತಾ 4 : 34 (OCVKN)
ಮೆಷೋಬಾಬನು, ಯಮ್ಲೇಕನು, ಅಮಚ್ಯನ ಮಗನಾದ ಯೋಷನು,
1 ಪೂರ್ವಕಾಲವೃತ್ತಾ 4 : 35 (OCVKN)
ಯೋಯೇಲನು, ಅಸಿಯೇಲನ ಮಗನಾದ ಸೆರಾಯನ ಮಗ ಯೊಷಿಬ್ಯನ ಮಗ ಯೇಹೂವು.
1 ಪೂರ್ವಕಾಲವೃತ್ತಾ 4 : 36 (OCVKN)
ಎಲ್ಯೋವೇನೈ, ಯಾಕೋಬ, ಯೆಷೋಹಾಯ, ಅಸಾಯ, ಅದೀಯೇಲ್, ಯೆಸೀಮಿಯೇಲ್, ಬೆನಾಯಾ.
1 ಪೂರ್ವಕಾಲವೃತ್ತಾ 4 : 37 (OCVKN)
ಶೆಮಾಯನ ಮಗ ಶಿಮ್ರಿಯ ಮಗ ಯೆದಾಯನ ಮಗ ಅಲ್ಲೋನನ ಮಗ ಶಿಪ್ಫಿಯ ಮಗ ಜೀಜನು.
1 ಪೂರ್ವಕಾಲವೃತ್ತಾ 4 : 38 (OCVKN)
ಹೆಸರು ಹೆಸರಾಗಿ ಬರೆಯಲಾದ ಇವರು ತಮ್ಮ ಕುಟುಂಬಗಳಲ್ಲಿ ನಾಯಕರಾಗಿದ್ದರು. ಅವರ ಪಿತೃಗಳ ಮನೆ ಬಹಳ ಅಭಿವೃದ್ಧಿಯಾಯಿತು.
1 ಪೂರ್ವಕಾಲವೃತ್ತಾ 4 : 39 (OCVKN)
ತಮ್ಮ ಮಂದೆಗಳಿಗೆ ಮೇವನ್ನು ಹುಡುಕಲು ತಗ್ಗಿನ ಪೂರ್ವದಿಕ್ಕಿನಲ್ಲಿರುವ ಗೆದೋರು ಎಂಬ ಸ್ಥಳದ ಪ್ರವೇಶದವರೆಗೂ ಹೋದರು.
1 ಪೂರ್ವಕಾಲವೃತ್ತಾ 4 : 40 (OCVKN)
ಅವರು ರಸವತ್ತಾದ ಒಳ್ಳೆಯ ಮೇವನ್ನು ಕಂಡುಕೊಂಡರು. ಆ ದೇಶವು ವಿಸ್ತಾರವಾಗಿಯೂ, ಶಾಂತವಾಗಿಯೂ, ಸಮಾಧಾನವಾಗಿಯೂ ಇತ್ತು. ಪೂರ್ವದಲ್ಲಿ ಹಾಮನ ವಂಶದವರು ಅಲ್ಲಿ ವಾಸವಾಗಿದ್ದರು.
1 ಪೂರ್ವಕಾಲವೃತ್ತಾ 4 : 41 (OCVKN)
ಹೆಸರು ಹೆಸರಾಗಿ ಬರೆದಿರುವವರಾದ ಇವರು ಯೆಹೂದದ ಅರಸನಾದ ಹಿಜ್ಕೀಯನ ದಿವಸಗಳಲ್ಲಿ ಅಲ್ಲಿಗೆ ಹೋಗಿ ಹಾಮ್ಯರ ಡೇರೆಗಳನ್ನೂ ಅಲ್ಲಿ ಸಿಕ್ಕಿದ ಮೆಗೂನ್ಯರನ್ನೂ ಸಂಪೂರ್ಣವಾಗಿ ನಾಶಮಾಡಿದರು. ಅಲ್ಲಿ ತಮ್ಮ ಮಂದೆಗಳಿಗೆ ಮೇವು ಇರುವುದರಿಂದ ಇಂದಿನವರೆಗೂ ಅವರ ಸ್ಥಳದಲ್ಲಿ ವಾಸಿಸಿದರು.
1 ಪೂರ್ವಕಾಲವೃತ್ತಾ 4 : 42 (OCVKN)
ಇದಲ್ಲದೆ ಅವರಲ್ಲಿ ಸಿಮೆಯೋನನ ಪುತ್ರರಲ್ಲಿ ಐನೂರು ಮಂದಿ ಇಷ್ಷೀಯ ಪುತ್ರರಾದ ಪೆಲಟ್ಯ, ನೆಯರ್ಯ, ರೆಫಾಯ, ಉಜ್ಜೀಯೇಲ್ ಎಂಬವರನ್ನು ತಮ್ಮ ಅಧಿಪತಿಗಳಾಗಿ ಮಾಡಿಕೊಂಡು. ಸೇಯೀರ್ ಎಂಬ ಪರ್ವತ ದೇಶಕ್ಕೆ ಹೋದರು.
1 ಪೂರ್ವಕಾಲವೃತ್ತಾ 4 : 43 (OCVKN)
ಅವರು ತಪ್ಪಿಸಿಕೊಂಡ ಉಳಿದ ಅಮಾಲೇಕ್ಯರನ್ನು ಕೊಂದು, ಅಲ್ಲಿ ಇಂದಿನವರೆಗೂ ವಾಸವಾಗಿದ್ದಾರೆ.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42 43