1 ಕೊರಿಂಥದವರಿಗೆ 10 : 1 (OCVKN)
ಇಸ್ರಾಯೇಲರ ಚರಿತ್ರೆಯಿಂದ ನಮಗೆ ಸಿಗುವ ಎಚ್ಚರಿಕೆ ಪ್ರಿಯರೇ, ನಮ್ಮ ಪಿತೃಗಳೆಲ್ಲರೂ ಮೇಘದ ನೆರಳಿನಲ್ಲಿದ್ದರು, ಅವರೆಲ್ಲರೂ ಸಮುದ್ರವನ್ನು ಹಾದುಹೋದರು ಎಂಬ ವಿಷಯದಲ್ಲಿ ನೀವು ಅಜ್ಞಾನಿಗಳಾಗಿರಬಾರದೆಂದು ಅಪೇಕ್ಷಿಸುತ್ತೇನೆ.
1 ಕೊರಿಂಥದವರಿಗೆ 10 : 2 (OCVKN)
ಅವರೆಲ್ಲರೂ ಮೋಶೆಯಲ್ಲಿ ಮೇಘದಲ್ಲಿಯೂ ಸಮುದ್ರದಲ್ಲಿಯೂ ಸ್ನಾನವನ್ನು ಹೊಂದಿದರು.
1 ಕೊರಿಂಥದವರಿಗೆ 10 : 3 (OCVKN)
ಅವರೆಲ್ಲರೂ ಒಂದೇ ಆತ್ಮಿಕವಾದ ಆಹಾರವನ್ನು ಉಂಡರು.
1 ಕೊರಿಂಥದವರಿಗೆ 10 : 4 (OCVKN)
ಅವರೆಲ್ಲರೂ ಒಂದೇ ಆತ್ಮಿಕವಾದ ಪಾನವನ್ನು ಕುಡಿದರು. ಅವರು ತಮ್ಮೊಂದಿಗೆ ಬಂದ ದೈವಿಕವಾದ ಬಂಡೆಯೊಳಗಿಂದ ಬಂದ ನೀರನ್ನು ಕುಡಿದರು. ಕ್ರಿಸ್ತ ಯೇಸುವೇ ಆ ಬಂಡೆ.
1 ಕೊರಿಂಥದವರಿಗೆ 10 : 5 (OCVKN)
ಆದರೆ ಅವರೊಳಗೆ ಬಹುಮಂದಿಯನ್ನು ದೇವರು ಮೆಚ್ಚಲಿಲ್ಲ. ಆದ್ದರಿಂದ ಅವರು ಅರಣ್ಯದಲ್ಲಿ ಸಂಹಾರವಾದರು.
1 ಕೊರಿಂಥದವರಿಗೆ 10 : 6 (OCVKN)
ಅವರು ಕೆಟ್ಟ ವಿಷಯಗಳನ್ನು ಆಶಿಸಿದಂತೆ ನಾವೂ ಆಶಿಸುವವರಾಗಬಾರದೆಂಬುದಕ್ಕಾಗಿ ಈ ಸಂಗತಿಗಳು ಈಗ ನಮಗೆ ನಿದರ್ಶನಗಳಾಗಿವೆ.
1 ಕೊರಿಂಥದವರಿಗೆ 10 : 7 (OCVKN)
“ಅವರಲ್ಲಿ ಕೆಲವರು ವಿಗ್ರಹಾರಾಧಕರಾಗಿ ಉಣ್ಣುವುದಕ್ಕೂ, ಕುಡಿಯುವುದಕ್ಕೂ ಕುಳಿತುಕೊಂಡರು, ಕುಣಿದಾಡುವುದಕ್ಕೆ ಎದ್ದರು,”* ವಿಮೋ 32:6 ಎಂದು ಬರೆದಿರುವಂತೆ ನೀವೂ ವಿಗ್ರಹಾರಾಧಕರಾಗಬೇಡಿರಿ.
1 ಕೊರಿಂಥದವರಿಗೆ 10 : 8 (OCVKN)
ಅವರಲ್ಲಿ ಕೆಲವರು ಜಾರತ್ವ ಮಾಡಿ, ಒಂದೇ ದಿನದಲ್ಲಿ ಇಪ್ಪತ್ಮೂರು ಸಾವಿರ ಮಂದಿ ಸತ್ತರು. ನಾವು ಜಾರತ್ವ ಮಾಡದೆ ಇರೋಣ.
1 ಕೊರಿಂಥದವರಿಗೆ 10 : 9 (OCVKN)
ಅವರಲ್ಲಿ ಕೆಲವರು ಕರ್ತದೇವರನ್ನು ಪರೀಕ್ಷಿಸಿ ಸರ್ಪಗಳಿಂದ ನಾಶವಾದಂತೆ, ನಾವೂ ಪರೀಕ್ಷಿಸದೆ ಇರೋಣ.
1 ಕೊರಿಂಥದವರಿಗೆ 10 : 10 (OCVKN)
ಅವರಲ್ಲಿ ಕೆಲವರು ಗೊಣಗುಟ್ಟಿ ಸಂಹಾರಕನ ಕೈಯಿಂದ ಸಂಹಾರವಾದಂತೆ ನೀವೂ ಗೊಣಗುಟ್ಟಬೇಡಿರಿ.
1 ಕೊರಿಂಥದವರಿಗೆ 10 : 11 (OCVKN)
ಆ ಮನುಷ್ಯರಿಗೆ ಸಂಭವಿಸಿದ ಈ ಸಂಗತಿಗಳು ನಿದರ್ಶನಗಳಾಗಿವೆ, ಯುಗಾಂತ್ಯಕ್ಕೆ ಬಂದಿರುವ ನಮಗೆ ಎಚ್ಚರಿಕೆಯ ಮಾತುಗಳಾಗಿವೆ.
1 ಕೊರಿಂಥದವರಿಗೆ 10 : 12 (OCVKN)
ಆದಕಾರಣ ದೃಢವಾಗಿ ನಿಂತಿದ್ದೇವೆಂದು ಭಾವಿಸುವ ನೀವು ಬೀಳದಿರುವಂತೆ ನೋಡಿಕೊಳ್ಳಿರಿ.
1 ಕೊರಿಂಥದವರಿಗೆ 10 : 13 (OCVKN)
ಮನುಷ್ಯರಿಗಾಗುವ ಶೋಧನೆಯೇ ಹೊರತು, ಬೇರೆ ಯಾವುದೂ ನಿಮಗೆ ಸಂಭವಿಸಲಿಲ್ಲ. ಆದರೆ ದೇವರು ನಂಬಿಗಸ್ತರು. ನಿಮ್ಮ ಶಕ್ತಿಗೆ ಮೀರಿದ ಶೋಧನೆಗಳನ್ನು ಅವರು ನಿಮ್ಮ ಮೇಲೆ ಬರುವಂತೆ ಮಾಡುವುದಿಲ್ಲ. ಆದರೆ ನಿಮಗೆ ಶೋಧನೆಗಳು ಬಂದಾಗ, ಅವುಗಳನ್ನು ಜಯಿಸುವುದಕ್ಕೆ ಶಕ್ತರಾಗುವಂತೆ, ಅವುಗಳಿಂದ ತಪ್ಪಿಸಿಕೊಳ್ಳುವ ಮಾರ್ಗವನ್ನು ಮಾಡುವರು.
1 ಕೊರಿಂಥದವರಿಗೆ 10 : 14 (OCVKN)
ಪ್ರಭುವಿನ ಭೋಜನ ಆದ್ದರಿಂದ ನನ್ನ ಪ್ರಿಯ ಸ್ನೇಹಿತರೇ, ವಿಗ್ರಹಾರಾಧನೆಯನ್ನು ಬಿಟ್ಟು ಓಡಿಹೋಗಿರಿ.
1 ಕೊರಿಂಥದವರಿಗೆ 10 : 15 (OCVKN)
ವಿವೇಕಿಗಳಿಗೆ ಹೇಳಿದಂತೆ, ನಾನು ಹೇಳುವುದನ್ನು ನೀವು ವಿವೇಚಿಸಿರಿ.
1 ಕೊರಿಂಥದವರಿಗೆ 10 : 16 (OCVKN)
ನಾವು ಸ್ತೋತ್ರಮಾಡಿ ಕುಡಿಯುವ ಸ್ತೋತ್ರದ ಪಾತ್ರೆಯು ಕ್ರಿಸ್ತ ಯೇಸುವಿನ ರಕ್ತದ ಅನ್ಯೋನ್ಯತೆಯಲ್ಲವೇ? ನಾವು ಮುರಿಯುವ ರೊಟ್ಟಿಯು ಕ್ರಿಸ್ತನ ದೇಹದಲ್ಲಿಯ ಅನ್ಯೋನ್ಯತೆಯಲ್ಲವೇ?
1 ಕೊರಿಂಥದವರಿಗೆ 10 : 17 (OCVKN)
ರೊಟ್ಟಿ ಒಂದೇ, ಆದ್ದರಿಂದ ನಾವು ಅನೇಕರಿದ್ದರೂ, ಒಂದೇ ದೇಹವಾಗುತ್ತೇವೆ. ಏಕೆಂದರೆ ನಾವೆಲ್ಲರೂ ಆ ಒಂದೇ ರೊಟ್ಟಿಯಲ್ಲಿ ಭಾಗಿಗಳಾಗುತ್ತೇವೆ.
1 ಕೊರಿಂಥದವರಿಗೆ 10 : 18 (OCVKN)
ನೀವು ಇಸ್ರಾಯೇಲ್ ಜನರ ಕುರಿತು ಆಲೋಚಿಸಿರಿ: ಯಜ್ಞಾರ್ಪಿತವಾದದ್ದನ್ನು ತಿನ್ನುವವರು ಬಲಿಪೀಠದೊಡನೆ ಭಾಗಿಗಳಾಗಿದ್ದಾರಲ್ಲವೇ?
1 ಕೊರಿಂಥದವರಿಗೆ 10 : 19 (OCVKN)
ಹಾಗಾದರೆ ನಾನು ಹೇಳುವುದೇನು? ವಿಗ್ರಹಕ್ಕೆ ಅರ್ಪಿಸಿದ್ದು ಅಥವಾ ವಿಗ್ರಹಕ್ಕೆ ಏನಾದರೂ ಮಹತ್ವವಿರುತ್ತದೆಯೋ? ನಿಶ್ಚಯವಾಗಿಯೂ ಇಲ್ಲ.
1 ಕೊರಿಂಥದವರಿಗೆ 10 : 20 (OCVKN)
ಆದರೆ ಯೆಹೂದ್ಯರಲ್ಲದವರು ಅರ್ಪಿಸುವ ಯಜ್ಞ ದೇವರಿಗಲ್ಲ, ದೆವ್ವಗಳಿಗೆ ಅರ್ಪಿಸುವಂತದ್ದಾಗಿದೆ. ನೀವು ದೆವ್ವಗಳೊಂದಿಗೆ ಭಾಗಿಗಳಾಗಿರಬೇಕೆಂಬುದು ನನ್ನ ಇಷ್ಟವಲ್ಲ.
1 ಕೊರಿಂಥದವರಿಗೆ 10 : 21 (OCVKN)
ನೀವು ಕರ್ತದೇವರ ಪಾತ್ರೆಯಲ್ಲಿಯೂ ದೆವ್ವಗಳ ಪಾತ್ರೆಯಲ್ಲಿಯೂ ಕುಡಿಯಲಾರಿರಿ. ನೀವು ಕರ್ತದೇವರ ಪಂಕ್ತಿಯಲ್ಲಿಯೂ ದೆವ್ವಗಳ ಪಂಕ್ತಿಯಲ್ಲಿಯೂ ಭಾಗಿಗಳಾಗಿರಲಾರಿರಿ.
1 ಕೊರಿಂಥದವರಿಗೆ 10 : 22 (OCVKN)
ನಾವು ಹೀಗೆ ದೇವರನ್ನು ಅಸೂಯೆಗೆಬ್ಬಿಸಬಹುದೇ? ನಾವು ದೇವರಿಗಿಂತಲೂ ಬಲಿಷ್ಠರಾಗಿದ್ದೇವೆಯೋ?
1 ಕೊರಿಂಥದವರಿಗೆ 10 : 23 (OCVKN)
ವಿಶ್ವಾಸಿಗಳ ಸ್ವಾತಂತ್ರ್ಯ ಎಲ್ಲಾ ಕಾರ್ಯಗಳನ್ನು ಮಾಡಲು ಸ್ವಾತಂತ್ರ್ಯವಿದೆ. ಆದರೆ ಎಲ್ಲಾ ಕಾರ್ಯಗಳೂ ಪ್ರಯೋಜನಕರವಾಗಿರುವುದಿಲ್ಲ. ಎಲ್ಲಾ ಕಾರ್ಯಗಳನ್ನು ಮಾಡಲು ಸ್ವಾತಂತ್ರ್ಯವಿದೆ ಆದರೆ, ಎಲ್ಲಾ ಕಾರ್ಯಗಳೂ ಭಕ್ತಿವೃದ್ಧಿಯನ್ನುಂಟುಮಾಡುವುದಿಲ್ಲ.
1 ಕೊರಿಂಥದವರಿಗೆ 10 : 24 (OCVKN)
ಪ್ರತಿಯೊಬ್ಬನೂ ತನ್ನ ಹಿತವನ್ನು ಮಾತ್ರ ನೋಡಿಕೊಳ್ಳದೆ, ಪರಹಿತವನ್ನೂ ನೋಡಲಿ.
1 ಕೊರಿಂಥದವರಿಗೆ 10 : 25 (OCVKN)
ಮಾಂಸದ ಅಂಗಡಿಯಲ್ಲಿ ಮಾರುವುದು ಏನಿದ್ದರೂ ಮನಸ್ಸಾಕ್ಷಿಯನ್ನು ಪ್ರಶ್ನಿಸದೇ ತಿನ್ನಿರಿ.
1 ಕೊರಿಂಥದವರಿಗೆ 10 : 26 (OCVKN)
ಏಕೆಂದರೆ, “ಭೂಮಿಯೂ ಅದರಲ್ಲಿರುವ ಸಮಸ್ತವೂ ಕರ್ತ ದೇವರದಾಗಿದೆ.”† ಕೀರ್ತನೆ 24:1
1 ಕೊರಿಂಥದವರಿಗೆ 10 : 27 (OCVKN)
ಅವಿಶ್ವಾಸಿಗಳಲ್ಲಿ ಯಾವನಾದರೂ ನಿಮ್ಮನ್ನು ಊಟಕ್ಕೆ ಕರೆದಾಗ ನೀವು ಹೋಗಬಯಸಿದರೆ, ನಿಮ್ಮ ಮುಂದೆ ಬಡಿಸಿದ ಪ್ರತಿಯೊಂದನ್ನು ಮನಸ್ಸಾಕ್ಷಿ ನಿಮಿತ್ತ ಏನನ್ನೂ ಪ್ರಶ್ನಿಸದೆ ತಿನ್ನಿರಿ.
1 ಕೊರಿಂಥದವರಿಗೆ 10 : 28 (OCVKN)
ಆದರೆ ಯಾರಾದರೂ ನಿಮಗೆ, “ಇದು ನೈವೇದ್ಯ ಮಾಡಿದ್ದು,” ಎಂದು ಹೇಳಿದರೆ, ತಿಳಿಸಿದ ವ್ಯಕ್ತಿಯ ನಿಮಿತ್ತವೂ ಆ ವ್ಯಕ್ತಿಯ ಮನಸ್ಸಾಕ್ಷಿಯ ನಿಮಿತ್ತವೂ ತಿನ್ನಬೇಡಿರಿ.
1 ಕೊರಿಂಥದವರಿಗೆ 10 : 29 (OCVKN)
ನಾನು ನಿಮ್ಮ ಮನಸ್ಸಾಕ್ಷಿಯ ಬಗ್ಗೆ ಅಲ್ಲ, ಇತರರ ಮನಸ್ಸಾಕ್ಷಿಯ ಬಗ್ಗೆ ಸೂಚಿಸುತ್ತಿದ್ದೇನೆ. ಆ ವ್ಯಕ್ತಿಯ ಮನಸ್ಸಾಕ್ಷಿಯ ನಿಮಿತ್ತ ನನ್ನ ಸ್ವಾತಂತ್ರ್ಯಕ್ಕೆ ಏಕೆ ಅಡ್ಡಿಯಾಗಬೇಕು?
1 ಕೊರಿಂಥದವರಿಗೆ 10 : 30 (OCVKN)
ನಾನು ಕೃತಜ್ಞತೆ ಸಲ್ಲಿಸಿ ಆ ಊಟವನ್ನು ಮಾಡಿದರೆ, ಹಾಗೆ ದೇವರಿಗೆ ಕೃತಜ್ಞತೆ ಸಲ್ಲಿಸಿ ಮಾಡಿದ ಊಟಕ್ಕಾಗಿ ನನ್ನ ಮೇಲೆ ತಪ್ಪುಹೊರಿಸುವುದೇಕೆ?
1 ಕೊರಿಂಥದವರಿಗೆ 10 : 31 (OCVKN)
ಆದ್ದರಿಂದ ನೀವು ಊಟಮಾಡಿದರೂ ಪಾನೀಯ ಸೇವಿಸಿದರೂ ಯಾವುದನ್ನೇ ಮಾಡಿದರೂ ಎಲ್ಲವನ್ನೂ ದೇವರ ಮಹಿಮೆಗಾಗಿ ಮಾಡಿರಿ.
1 ಕೊರಿಂಥದವರಿಗೆ 10 : 32 (OCVKN)
ಯೆಹೂದ್ಯರಿಗಾಗಲಿ, ಗ್ರೀಕರಿಗಾಗಲಿ, ದೇವರ ಸಭೆಗಾಗಲಿ ವಿಘ್ನವಾಗಬೇಡಿರಿ.
1 ಕೊರಿಂಥದವರಿಗೆ 10 : 33 (OCVKN)
ನಾನಂತೂ ಎಲ್ಲರನ್ನೂ, ಎಲ್ಲದರಲ್ಲೂ ಮೆಚ್ಚಿಸಲು ಶ್ರಮಿಸುವವನಾಗಿದ್ದೇನೆ. ಏಕೆಂದರೆ, ನಾನು ನನ್ನ ಸ್ವಂತ ಹಿತವನ್ನೇ ಹುಡುಕದೆ, ಅನೇಕರು ರಕ್ಷಣೆ ಹೊಂದಬೇಕೆಂದು ಇತರರ ಹಿತಕ್ಕಾಗಿ ಶ್ರಮಿಸುವವನಾಗಿದ್ದೇನೆ.
❮
❯