1 ಕೊರಿಂಥದವರಿಗೆ 11 : 1 (OCVKN)
ನಾನು ಕ್ರಿಸ್ತ ಯೇಸುವನ್ನು ಅನುಸರಿಸುವಂತೆಯೇ, ನೀವೂ ನನ್ನನ್ನು ಅನುಸರಿಸಿರಿ.
1 ಕೊರಿಂಥದವರಿಗೆ 11 : 2 (OCVKN)
ಆರಾಧನೆಯಲ್ಲಿ ಸರಿಯಾದ ನಡವಳಿಕೆ ನೀವು ಎಲ್ಲದರಲ್ಲಿಯೂ ನನ್ನನ್ನು ಜ್ಞಾಪಕಮಾಡಿಕೊಂಡು, ನಾನು ನಿಮಗೆ ಒಪ್ಪಿಸಿಕೊಟ್ಟ ಉಪದೇಶಗಳನ್ನು ಬಿಗಿಯಾಗಿ ಅನುಸರಿಸುತ್ತಿರೆಂದು ನಿಮ್ಮನ್ನು ಹೊಗಳುತ್ತೇನೆ.
1 ಕೊರಿಂಥದವರಿಗೆ 11 : 3 (OCVKN)
ಪ್ರತಿ ಪುರುಷನಿಗೂ ಕ್ರಿಸ್ತನು ಶಿರಸ್ಸು, ಸ್ತ್ರೀಗೆ ಪುರುಷನು ಶಿರಸ್ಸು ಮತ್ತು ಕ್ರಿಸ್ತನಿಗೆ ದೇವರು ಶಿರಸ್ಸಾಗಿದ್ದಾರೆ, ಎಂಬುದನ್ನು ನೀವು ತಿಳಿಯಬೇಕೆಂಬುದು ನನ್ನ ಅಪೇಕ್ಷೆ.
1 ಕೊರಿಂಥದವರಿಗೆ 11 : 4 (OCVKN)
ತನ್ನ ತಲೆಯನ್ನು ಮುಚ್ಚಿಕೊಂಡು ಪ್ರಾರ್ಥನೆ ಮಾಡುವ ಇಲ್ಲವೆ, ಪ್ರವಾದನೆ ಹೇಳುವ ಪ್ರತಿ ಪುರುಷನೂ ತನ್ನ ತಲೆಯನ್ನು ಅವಮಾನಪಡಿಸುತ್ತಾನೆ.
1 ಕೊರಿಂಥದವರಿಗೆ 11 : 5 (OCVKN)
ಆದರೆ ತಲೆಯ ಮೇಲೆ ಮುಸುಕು ಹಾಕಿಕೊಳ್ಳದೆ ಪ್ರಾರ್ಥನೆ ಮಾಡುವ ಇಲ್ಲವೆ ಪ್ರವಾದನೆ ಹೇಳುವ ಪ್ರತಿ ಸ್ತ್ರೀಯು ತನ್ನ ತಲೆಯನ್ನು ಅವಮಾನ ಪಡಿಸುತ್ತಾಳೆ. ಹೀಗೆ ಮಾಡುವ ಸ್ತ್ರೀಯು ತನ್ನ ತಲೆ ಬೋಳಿಸಿಕೊಳ್ಳುವುದಕ್ಕೆ ಸಮಾನವಾಗಿದೆ.
1 ಕೊರಿಂಥದವರಿಗೆ 11 : 6 (OCVKN)
ಸ್ತ್ರೀಯು ಮುಸುಕು ಹಾಕಿಕೊಳ್ಳದೆ ಇದ್ದರೆ, ಆಕೆಯು ಕೂದಲನ್ನು ಕತ್ತರಿಸಿಕೊಳ್ಳಲಿ. ಕೂದಲನ್ನು ಕತ್ತರಿಸಿಕೊಳ್ಳುವುದಾಗಲಿ, ತಲೆ ಬೋಳಿಸಿಕೊಳ್ಳವುದಾಗಲಿ ಸ್ತ್ರೀಗೆ ಅವಮಾನಕರವಾಗಿದ್ದರೆ, ಆಕೆಯು ಮುಸುಕನ್ನು ಹಾಕಿಕೊಳ್ಳಬೇಕು.
1 ಕೊರಿಂಥದವರಿಗೆ 11 : 7 (OCVKN)
ಪುರುಷನು ದೇವರ ಸ್ವರೂಪವೂ ಮಹಿಮೆಯೂ ಆಗಿರುವುದರಿಂದ, ತನ್ನ ತಲೆಗೆ ಮುಸುಕು ಹಾಕಬೇಕಾಗಿಲ್ಲ. ಆದರೆ ಸ್ತ್ರೀಯು ಪುರುಷನ ಮಹಿಮೆಯಾಗಿದ್ದಾಳೆ.
1 ಕೊರಿಂಥದವರಿಗೆ 11 : 8 (OCVKN)
ಏಕೆಂದರೆ, ಪುರುಷನು ಸ್ತ್ರೀಯಿಂದಲ್ಲ, ಆದರೆ ಸ್ತ್ರೀಯು ಪುರುಷನಿಂದ ಉತ್ಪತ್ತಿಯಾದಳು.
1 ಕೊರಿಂಥದವರಿಗೆ 11 : 9 (OCVKN)
ಪುರುಷನು ಸ್ತ್ರೀಗಾಗಿ ಸೃಷ್ಟಿಯಾಗಲಿಲ್ಲ, ಸ್ತ್ರೀಯು ಪುರುಷನಿಗಾಗಿ ಸೃಷ್ಟಿಯಾದಳು.
1 ಕೊರಿಂಥದವರಿಗೆ 11 : 10 (OCVKN)
ಈ ಕಾರಣದಿಂದಲೂ ದೇವದೂತರ ನಿಮಿತ್ತವಾಗಿಯೂ ಸ್ತ್ರೀಯ ತಲೆಯ ಮೇಲೆ ಅಧಿಕಾರದ ಮುಸುಕನ್ನು ಹಾಕಿರಬೇಕು.
1 ಕೊರಿಂಥದವರಿಗೆ 11 : 11 (OCVKN)
ಆದರೂ, ಕರ್ತ ದೇವರಲ್ಲಿ ಪುರುಷನಿಲ್ಲದೆ ಸ್ತ್ರೀಯು ಇಲ್ಲ; ಸ್ತ್ರೀಯಿಲ್ಲದ ಪುರುಷನೂ ಇಲ್ಲ.
1 ಕೊರಿಂಥದವರಿಗೆ 11 : 12 (OCVKN)
ಏಕೆಂದರೆ ಸ್ತ್ರೀಯು ಪುರುಷನಿಂದ ಉತ್ಪತ್ತಿಯಾದಂತೆ, ಪುರುಷನು ಸ್ತ್ರೀಯಿಂದ ಜನಿಸುತ್ತಾನೆ. ಆದರೆ ಸಮಸ್ತವೂ ದೇವರಿಂದಲೇ ಆಗಿರುತ್ತದೆ.
1 ಕೊರಿಂಥದವರಿಗೆ 11 : 13 (OCVKN)
ಇದನ್ನು ನೀವೇ ತೀರ್ಮಾನ ಮಾಡಿಕೊಳ್ಳಿರಿ: ಸ್ತ್ರೀಯು ಮುಸುಕಿಲ್ಲದೆ ದೇವರಿಗೆ ಪ್ರಾರ್ಥಿಸುವುದು ಯುಕ್ತವೋ?
1 ಕೊರಿಂಥದವರಿಗೆ 11 : 14 (OCVKN)
ಪುರುಷನು ಕೂದಲನ್ನು ಬೆಳೆಸಿಕೊಂಡರೆ, ಅದು ಅವನಿಗೆ ಅವಮಾನಕರವಾಗಿದೆಯೆಂದೂ
1 ಕೊರಿಂಥದವರಿಗೆ 11 : 15 (OCVKN)
ಸ್ತ್ರೀಯು ಕೂದಲು ಬೆಳೆಸಿಕೊಂಡರೆ, ಅದು ಅವಳಿಗೆ ಮಹಿಮೆಯಾಗಿದೆಯೆಂದೂ ಪ್ರಕೃತಿಯೇ ಸ್ಪಷ್ಟಪಡಿಸುತ್ತದೆ ಅಲ್ಲವೇ? ಏಕೆಂದರೆ, ಅವಳಿಗೆ ಉದ್ದ ಕೂದಲು ಮುಸುಕಿನಂತೆ ಕೊಡಲಾಗಿದೆ.
1 ಕೊರಿಂಥದವರಿಗೆ 11 : 16 (OCVKN)
ಇದರ ಬಗ್ಗೆ ಯಾರಿಗಾದರೂ ವಾಗ್ವಾದ ಮಾಡಬಯಸಿದರೆ, ಇಂಥ ಪದ್ಧತಿ ನಮ್ಮಲ್ಲಿಲ್ಲ, ದೇವರ ಸಭೆಗಳಲ್ಲಿಯೂ ಇಲ್ಲ.
1 ಕೊರಿಂಥದವರಿಗೆ 11 : 17 (OCVKN)
ಪ್ರಭುವಿನ ಭೋಜನ ನಿಮ್ಮನ್ನು ಹೊಗಳುವುದಕ್ಕಾಗಿ ಈ ಮಾರ್ಗದರ್ಶನಗಳನ್ನು ನಾನು ನಿಮಗೆ ತಿಳಿಸುತ್ತಾಯಿಲ್ಲ. ಏಕೆಂದರೆ, ನಿಮ್ಮ ಕೂಟಗಳಿಂದ ಮೇಲಾಗುವುದಕ್ಕಿಂತ ಹೆಚ್ಚು ಕೇಡಾಗುತ್ತಲಿದೆ.
1 ಕೊರಿಂಥದವರಿಗೆ 11 : 18 (OCVKN)
ಹೇಗೆಂದರೆ, ಮೊದಲನೆಯದು: ನೀವು ಸಭೆಯಾಗಿ ಕೂಡಿಬರುವಾಗ ನಿಮ್ಮೊಳಗೆ ಭೇದಗಳಿವೆ ಎಂದು ಕೇಳುತ್ತೇನೆ. ಇದನ್ನು ಸ್ವಲ್ಪಮಟ್ಟಿಗೆ ನಂಬುತ್ತೇನೆ.
1 ಕೊರಿಂಥದವರಿಗೆ 11 : 19 (OCVKN)
ದೇವರ ಮೆಚ್ಚುಗೆ ನಿಮ್ಮಲ್ಲಿ ಯಾರ ಮೇಲೆ ಇದೆ ಎಂಬುದು ಕಂಡುಬರುವಂತೆ ಭಿನ್ನಾಭಿಪ್ರಾಯಗಳು ಇರುವುದು ಅವಶ್ಯವೇ.
1 ಕೊರಿಂಥದವರಿಗೆ 11 : 20 (OCVKN)
ನೀವು ಒಟ್ಟಾಗಿ ಕೂಡಿಬರುವಾಗ, ನೀವು ಮಾಡುವ ಭೋಜನವು ಕರ್ತದೇವರ ಭೋಜನವಲ್ಲ.
1 ಕೊರಿಂಥದವರಿಗೆ 11 : 21 (OCVKN)
ಏಕೆಂದರೆ, ಭೋಜನ ಮಾಡುವಾಗ, ಪ್ರತಿಯೊಬ್ಬನು ಇತರರಿಗಾಗಿ ಕಾಯದೇ, ತನ್ನ ಭೋಜನವನ್ನು ಮುಂಚಿತವಾಗಿ ಆರಂಭಿಸುತ್ತಾನೆ. ಒಬ್ಬನು ಹಸಿದಿರುತ್ತಾನೆ, ಮತ್ತೊಬ್ಬನು ಕುಡಿದಿರುತ್ತಾನೆ.
1 ಕೊರಿಂಥದವರಿಗೆ 11 : 22 (OCVKN)
ಉಣ್ಣುವುದಕ್ಕೂ, ಕುಡಿಯುವುದಕ್ಕೂ ನಿಮಗೆ ಮನೆಗಳಿಲ್ಲವೇ? ಅಥವಾ ದೇವರ ಸಭೆಯನ್ನು ಹೀನೈಸಿ ಏನೂ ಇಲ್ಲದವರನ್ನು ನಾಚಿಕೆಪಡಿಸುತ್ತೀರಾ? ನಾನು ನಿಮಗೇನು ಹೇಳಲಿ? ಇದಕ್ಕಾಗಿ ನಾನು ನಿಮ್ಮನ್ನು ಹೊಗಳಬೇಕೆ? ಖಂಡಿತ ಇಲ್ಲ.
1 ಕೊರಿಂಥದವರಿಗೆ 11 : 23 (OCVKN)
ನಾನು ಕರ್ತ ದೇವರಿಂದಲೇ ಪಡೆದದ್ದನ್ನು ನಿಮಗೆ ಒಪ್ಪಿಸಿಕೊಟ್ಟಿದ್ದೇನೆ: ಕರ್ತ ಆಗಿರುವ ಯೇಸು ತಮ್ಮನ್ನು ಹಿಡಿದುಕೊಡಲಾದ ರಾತ್ರಿಯಲ್ಲಿ ರೊಟ್ಟಿಯನ್ನು ತೆಗೆದುಕೊಂಡು,
1 ಕೊರಿಂಥದವರಿಗೆ 11 : 24 (OCVKN)
ಸ್ತೋತ್ರಮಾಡಿ ಮುರಿದು, “ಇದು ನಿಮಗೋಸ್ಕರವಾಗಿರುವ ನನ್ನ ದೇಹ, ನನ್ನ ನೆನಪಿಗಾಗಿ ನೀವು ಇದನ್ನು ಮಾಡಿರಿ,” ಎಂದರು.
1 ಕೊರಿಂಥದವರಿಗೆ 11 : 25 (OCVKN)
ಅದೇ ಪ್ರಕಾರ, ಭೋಜನವಾದ ಮೇಲೆ ಪಾನಪಾತ್ರೆಯನ್ನು ತೆಗೆದುಕೊಂಡು, “ಈ ಪಾತ್ರೆಯು ನಿಮಗೋಸ್ಕರ ಸುರಿಸಲಾಗುವ, ನನ್ನ ರಕ್ತದಿಂದಾದ ಹೊಸ ಒಡಂಬಡಿಕೆಯಾಗಿದೆ. ನೀವು ಇದರಲ್ಲಿ ಪಾನಮಾಡುವಾಗೆಲ್ಲಾ ನನ್ನನ್ನು ಜ್ಞಾಪಿಸಿಕೊಳ್ಳುವದಕ್ಕೋಸ್ಕರ ಪಾನಮಾಡಿರಿ,” ಎಂದರು.
1 ಕೊರಿಂಥದವರಿಗೆ 11 : 26 (OCVKN)
ನೀವು ಈ ರೊಟ್ಟಿಯನ್ನು ತಿಂದು, ಈ ಪಾತ್ರೆಯಲ್ಲಿ ಪಾನಮಾಡುವಷ್ಟು ಸಾರಿ, ಕರ್ತದೇವರ ಮರಣವನ್ನು ಅವರು ಬರುವ ತನಕ ಪ್ರಸಿದ್ಧಿಪಡಿಸುತ್ತೀರಿ.
1 ಕೊರಿಂಥದವರಿಗೆ 11 : 27 (OCVKN)
ಹೀಗಿರುವುದರಿಂದ, ಯಾರಾದರೂ ಅಯೋಗ್ಯವಾಗಿ ಕರ್ತದೇವರ ರೊಟ್ಟಿಯನ್ನು ತಿಂದರೆ, ಇಲ್ಲವೆ ಅವರ ಪಾತ್ರೆಯಲ್ಲಿ ಪಾನ ಮಾಡಿದರೆ, ಅಂಥವರು ಕರ್ತದೇವರ ದೇಹಕ್ಕೂ, ರಕ್ತಕ್ಕೂ ದ್ರೋಹ ಮಾಡಿದವರಾಗಿರುವರು.
1 ಕೊರಿಂಥದವರಿಗೆ 11 : 28 (OCVKN)
ಆದರೆ ಪ್ರತಿಯೊಬ್ಬರೂ ತಮ್ಮನ್ನು ಪರೀಕ್ಷಿಸಿಕೊಂಡವರಾಗಿ, ಆ ರೊಟ್ಟಿಯನ್ನು ತೆಗೆದುಕೊಂಡು ತಿನ್ನಲಿ, ಆ ಪಾತ್ರೆಯಲ್ಲಿ ಕುಡಿಯಲಿ.
1 ಕೊರಿಂಥದವರಿಗೆ 11 : 29 (OCVKN)
ಏಕೆಂದರೆ, ಯಾರಾದರು ಕ್ರಿಸ್ತನ ದೇಹವೆಂದು ವಿವೇಚಿಸದೆ ತಿಂದು ಕುಡಿದರೆ, ಹಾಗೆ ತಿಂದು ಕುಡಿಯುವುದರಿಂದ ನ್ಯಾಯತೀರ್ಪಿಗೊಳಗಾಗುವರು.
1 ಕೊರಿಂಥದವರಿಗೆ 11 : 30 (OCVKN)
ಇದರಿಂದ ನಿಮ್ಮಲ್ಲಿ ಬಹುಮಂದಿ ಬಲಹೀನರೂ, ರೋಗಿಗಳೂ ಆಗಿದ್ದಾರೆ, ಕೆಲವರು ನಿದ್ರೆ ಹೋಗಿದ್ದಾರೆ.
1 ಕೊರಿಂಥದವರಿಗೆ 11 : 31 (OCVKN)
ನಮ್ಮನ್ನು ನಾವೇ ತೀರ್ಪುಮಾಡಿಕೊಂಡರೆ, ನಾವು ನ್ಯಾಯವಿಚಾರಣೆಗೆ ಒಳಗಾಗುವುದಿಲ್ಲ.
1 ಕೊರಿಂಥದವರಿಗೆ 11 : 32 (OCVKN)
ನಾವು ಲೋಕದವರ ಸಂಗಡ ದಂಡನೆಗೆ ಗುರಿಯಾಗಬಾರದೆಂದು, ದೇವರು ನಮ್ಮನ್ನು ಈಗ ಈ ರೀತಿಯಾಗಿ ಶಿಸ್ತಿನ ನ್ಯಾಯವಿಚಾರಣೆಗೆ ಒಳಪಡಿಸುತ್ತಾರೆ.
1 ಕೊರಿಂಥದವರಿಗೆ 11 : 33 (OCVKN)
ಹೀಗಿರುವುದರಿಂದ ನನ್ನ ಪ್ರಿಯರೇ, ನೀವು ಭೋಜನಕ್ಕಾಗಿ ಕೂಡಿಬರುವಾಗ ಎಲ್ಲರಿಗಾಗಿ ಕಾದುಕೊಂಡಿರಿ.
1 ಕೊರಿಂಥದವರಿಗೆ 11 : 34 (OCVKN)
ನೀವು ಒಟ್ಟಾಗಿ ಕೂಟಕ್ಕೆ ಸೇರಿಬರುವಾಗ, ನ್ಯಾಯತೀರ್ಪಿಗೆ ಒಳಗಾದಂತೆ, ಹಸಿದವರು ಮನೆಯಲ್ಲೇ ಊಟಮಾಡಲಿ. ಇನ್ನುಳಿದ ವಿಷಯಗಳನ್ನು ನಾನು ಬಂದಾಗ ಕ್ರಮಪಡಿಸುತ್ತೇನೆ.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34