1 ಕೊರಿಂಥದವರಿಗೆ 12 : 1 (OCVKN)
ಆತ್ಮಿಕ ವರಗಳು ಪ್ರಿಯರೇ, ಈಗ ಆತ್ಮಿಕ ವರಗಳನ್ನು ಕುರಿತು ನೀವು ಅಜ್ಞಾನಿಗಳಾಗಿರಬಾರದೆಂದು ಅಪೇಕ್ಷಿಸುತ್ತೇನೆ.
1 ಕೊರಿಂಥದವರಿಗೆ 12 : 2 (OCVKN)
ನೀವು ಕ್ರಿಸ್ತನನ್ನು ನಂಬದಿದ್ದಾಗ, ಹೇಗೆ ಮೂಕ ವಿಗ್ರಹಗಳ ಕಡೆಗೆ ಪ್ರಭಾವಗೊಂಡು ದಾರಿತಪ್ಪಿ ಹೋಗಿದ್ದಿರಿ ಎಂಬುದನ್ನು ಬಲ್ಲಿರಿ.
1 ಕೊರಿಂಥದವರಿಗೆ 12 : 3 (OCVKN)
ಹೀಗಿರುವುದರಿಂದ ನಾನು ನಿಮಗೆ ತಿಳಿಸುವುದನ್ನು ಕೇಳಿರಿ: ದೇವರಾತ್ಮರಿಂದ ಮಾತನಾಡುವ ಯಾವನೂ, “ಯೇಸು ಶಾಪಗ್ರಸ್ತನು,” ಎಂದು ಹೇಳುವುದಿಲ್ಲ. ಪವಿತ್ರಾತ್ಮರಿಂದಲೇ ಹೊರತು, ಯಾವನೂ, “ಯೇಸು ಕರ್ತದೇವರು,” ಎಂದು ಹೇಳಲಾರನು.
1 ಕೊರಿಂಥದವರಿಗೆ 12 : 4 (OCVKN)
ಆತ್ಮಿಕ ವರಗಳಲ್ಲಿ ಬೇರೆ ಬೇರೆ ವಿಧಗಳಿವೆ, ಆದರೆ ಪವಿತ್ರಾತ್ಮರು ಒಬ್ಬರೇ.
1 ಕೊರಿಂಥದವರಿಗೆ 12 : 5 (OCVKN)
ಸೇವೆಗಳಲ್ಲಿ ಬೇರೆ ಬೇರೆ ವಿಧಗಳಿವೆ, ಆದರೆ ಕರ್ತ ಆಗಿರುವವರು ಒಬ್ಬರೇ.
1 ಕೊರಿಂಥದವರಿಗೆ 12 : 6 (OCVKN)
ಕಾರ್ಯರೀತಿಗಳಲ್ಲಿ ಬೇರೆ ಬೇರೆ ವಿಧಗಳಿವೆ, ಎಲ್ಲರಲ್ಲಿಯೂ ಎಲ್ಲಾ ಕಾರ್ಯಗಳನ್ನು ಸಾಧಿಸುವ ದೇವರು ಒಬ್ಬರೇ.
1 ಕೊರಿಂಥದವರಿಗೆ 12 : 7 (OCVKN)
ಸರ್ವರ ಪ್ರಯೋಜನಕ್ಕಾಗಿ ಪವಿತ್ರಾತ್ಮರ ವರಗಳನ್ನು ಪ್ರತಿಯೊಬ್ಬರಿಗೆ ಕೊಡಲಾಗಿದೆ.
1 ಕೊರಿಂಥದವರಿಗೆ 12 : 8 (OCVKN)
ಹೇಗೆಂದರೆ, ಪವಿತ್ರಾತ್ಮ ದೇವರ ಮೂಲಕ ಒಬ್ಬನಿಗೆ ಜ್ಞಾನ ವಾಕ್ಯವು, ಒಬ್ಬನಿಗೆ ಆ ಆತ್ಮರ ಅನುಸಾರವಾಗಿ ವಿದ್ಯಾವಾಕ್ಯವು,
1 ಕೊರಿಂಥದವರಿಗೆ 12 : 9 (OCVKN)
ಒಬ್ಬನಿಗೆ ಅದೇ ಆತ್ಮನಿಂದ ನಂಬಿಕೆಯು, ಮತ್ತೊಬ್ಬನಿಗೆ ಅದೇ ಆತ್ಮನಿಂದ ರೋಗ ವಾಸಿಮಾಡುವ ವರಗಳು ಕೊಡಲಾಗಿವೆ.
1 ಕೊರಿಂಥದವರಿಗೆ 12 : 10 (OCVKN)
ಒಬ್ಬನಿಗೆ ಅದ್ಭುತಕಾರ್ಯಗಳ ಶಕ್ತಿಯೂ ಒಬ್ಬನಿಗೆ ಪ್ರವಾದನೆಯೂ ಒಬ್ಬನಿಗೆ ಆತ್ಮಗಳನ್ನು ವಿವೇಚಿಸುವ ವರವೂ ಒಬ್ಬನಿಗೆ ವಿವಿಧ ಭಾಷೆಗಳನ್ನಾಡುವ ಶಕ್ತಿಯೂ ಮತ್ತೊಬ್ಬನಿಗೆ ಅನ್ಯಭಾಷೆಗಳ ಅರ್ಥವನ್ನು ಹೇಳುವ ವರವೂ ಕೊಡಲಾಗುತ್ತದೆ.
1 ಕೊರಿಂಥದವರಿಗೆ 12 : 11 (OCVKN)
ಈ ವರಗಳನ್ನೆಲ್ಲ ಆ ಪವಿತ್ರಾತ್ಮ ಒಬ್ಬರೇ ತಮ್ಮ ಚಿತ್ತಾನುಸಾರ ಪ್ರತಿಯೊಬ್ಬನಿಗೂ ಹಂಚಿಕೊಡುತ್ತಾರೆ.
1 ಕೊರಿಂಥದವರಿಗೆ 12 : 12 (OCVKN)
ಒಂದೇ ದೇಹ ಅನೇಕ ಅಂಗಗಳು ದೇಹವು ಅನೇಕ ಅಂಗಗಳುಳ್ಳದ್ದಾಗಿದ್ದರೂ ಒಂದಾಗಿರುವಂತೆಯೂ, ಅನೇಕ ಅಂಗಗಳೆಲ್ಲವು ಒಂದೇ ದೇಹವನ್ನು ರೂಪಿಸುವಂತೆಯೂ, ಕ್ರಿಸ್ತನ ದೇಹವು ಸಹ ಇರುತ್ತದೆ.
1 ಕೊರಿಂಥದವರಿಗೆ 12 : 13 (OCVKN)
ಯೆಹೂದ್ಯರಾಗಲಿ, ಗ್ರೀಕರಾಗಲಿ, ದಾಸರಾಗಲಿ, ಸ್ವತಂತ್ರರಾಗಲಿ ಒಂದೇ ದೇಹವಾಗುವಂತೆ, ನಾವೆಲ್ಲರೂ ಒಬ್ಬರೇ ಆತ್ಮದಿಂದ ಸ್ನಾನ ಮಾಡಿಸಿಕೊಂಡೆವು. ನಮ್ಮೆಲ್ಲರಿಗೂ ಒಬ್ಬ ಆತ್ಮವನ್ನು ಪಾನವಾಗಿ ಕೊಡಲಾಗಿದೆ.
1 ಕೊರಿಂಥದವರಿಗೆ 12 : 14 (OCVKN)
ದೇಹವು ಒಂದೇ ಅಂಗವಾಗಿರದೆ, ಅನೇಕ ಅಂಗಗಳುಳ್ಳದ್ದಾಗಿದೆ.
1 ಕೊರಿಂಥದವರಿಗೆ 12 : 15 (OCVKN)
ಒಂದು ವೇಳೆ ಕಾಲು, “ನಾನು ಕೈಯಲ್ಲದ ಕಾರಣ, ದೇಹಕ್ಕೆ ಸೇರಿಲ್ಲ,” ಎಂದು ಹೇಳಿದರೂ, ಅದು ದೇಹಕ್ಕೆ ಅಂಗವಾಗಿ ಸೇರದಿರುವುದೇ?
1 ಕೊರಿಂಥದವರಿಗೆ 12 : 16 (OCVKN)
ಒಂದು ವೇಳೆ ಕಿವಿ, “ನಾನು ಕಣ್ಣಲ್ಲದ ಕಾರಣ, ದೇಹಕ್ಕೆ ಸೇರಿಲ್ಲ,” ಎಂದು ಹೇಳಿದರೂ ಅದು ದೇಹಕ್ಕೆ ಅಂಗವಾಗಿ ಸೇರದಿರುವುದೇ?
1 ಕೊರಿಂಥದವರಿಗೆ 12 : 17 (OCVKN)
ದೇಹವೆಲ್ಲಾ ಕಣ್ಣಾದರೆ ನಾವು ಕೇಳುವುದೆಲ್ಲಿ? ಅಥವಾ ಅದೆಲ್ಲಾ ಕಿವಿಯಾದರೆ, ಮೂಸಿ ನೋಡುವುದೆಲ್ಲಿ?
1 ಕೊರಿಂಥದವರಿಗೆ 12 : 18 (OCVKN)
ಆದರೆ ದೇವರು ಆ ಅಂಗಗಳಲ್ಲಿ ಪ್ರತಿಯೊಂದನ್ನು ತಮ್ಮ ಇಷ್ಟದ ಪ್ರಕಾರ ದೇಹದಲ್ಲಿ ಇಟ್ಟಿದ್ದಾರೆ.
1 ಕೊರಿಂಥದವರಿಗೆ 12 : 19 (OCVKN)
ಅವೆಲ್ಲವೂ ಒಂದೇ ಅಂಗವಾಗಿದ್ದರೆ, ಆಗ ದೇಹವೆಲ್ಲಿ?
1 ಕೊರಿಂಥದವರಿಗೆ 12 : 20 (OCVKN)
ಹೀಗೆ ಅಂಗಗಳು ಅನೇಕವಾಗಿದ್ದರೂ, ದೇಹ ಮಾತ್ರ ಒಂದೇ.
1 ಕೊರಿಂಥದವರಿಗೆ 12 : 21 (OCVKN)
ಕಣ್ಣು ಕೈಗೆ, “ನೀನು ನನಗೆ ಅವಶ್ಯವಿಲ್ಲ!” ಎಂದು ಹೇಳಲಾಗದು. ತಲೆಯು ಕಾಲುಗಳಿಗೆ, “ನೀನು ನನಗೆ ಅವಶ್ಯವಿಲ್ಲ!” ಎಂದು ಹೇಳಲಾಗದು.
1 ಕೊರಿಂಥದವರಿಗೆ 12 : 22 (OCVKN)
ಆದರೆ ದೇಹದಲ್ಲಿ ಬಲಹೀನವಾದವುಗಳೆಂದು ತೋರುವ ಅಂಗಗಳೇ ನಮಗೆ ಎಷ್ಟೋ ಹೆಚ್ಚಾಗಿ ಅವಶ್ಯವಾಗಿವೆ.
1 ಕೊರಿಂಥದವರಿಗೆ 12 : 23 (OCVKN)
ಕಡಿಮೆ ಗೌರವವುಳ್ಳವುಗಳೆಂದು ಯೋಚಿಸುವವುಗಳನ್ನು ವಿಶೇಷ ಗೌರವದಿಂದ ನೋಡುತ್ತೇವೆ. ಬಹಿರಂಗಪಡಿಸದ ಅಂಗಗಳನ್ನು ವಿಶೇಷ ಮರ್ಯಾದೆಯಿಂದ ಸಂರಕ್ಷಿಸುತ್ತೇವೆ.
1 ಕೊರಿಂಥದವರಿಗೆ 12 : 24 (OCVKN)
ನಾವು ಬಾಹ್ಯ ಅಂಗಗಳಿಗೆ ಹೆಚ್ಚಿನ ವಿಶೇಷತೆಯನ್ನು ಕೊಡುವುದಿಲ್ಲ. ಆದರೆ ಗೌರವ ಕಡಿಮೆಯಿರುವ ಅಂಗಗಳಿಗೆ, ದೇವರು ಹೆಚ್ಚು ಗೌರವವನ್ನು ಕೊಡುವಂತೆ, ಎಲ್ಲಾ ಅಂಗಗಳನ್ನು ಒಟ್ಟಾಗಿ ದೇಹದಲ್ಲಿಟ್ಟಿದ್ದಾರೆ.
1 ಕೊರಿಂಥದವರಿಗೆ 12 : 25 (OCVKN)
ಹೀಗೆ ದೇವರು ದೇಹದಲ್ಲಿ ಭಿನ್ನಭೇದವಿಲ್ಲದೇ, ಎಲ್ಲವೂ ಒಂದಕ್ಕೊಂದು ಪರಸ್ಪರ ಚಿಂತಿಸುವುದಾಗಿ ಕೂಡಿ ಹೋಗುವಂತೆ ಸಮಾನವಾಗಿ ಮಾಡಿದ್ದಾರೆ.
1 ಕೊರಿಂಥದವರಿಗೆ 12 : 26 (OCVKN)
ದೇಹದ ಒಂದು ಅಂಗ ಬಾಧೆಪಟ್ಟರೆ, ಎಲ್ಲಾ ಅಂಗಗಳು ಬಾಧೆಪಡುತ್ತದೆ. ಒಂದು ಅಂಗಕ್ಕೆ ಗೌರವ ದೊರೆತರೆ, ಅದರೊಂದಿಗೆ ಪ್ರತಿಯೊಂದು ಅಂಗವೂ ಆನಂದಪಡುತ್ತವೆ.
1 ಕೊರಿಂಥದವರಿಗೆ 12 : 27 (OCVKN)
ಈಗ ನೀವು ಕ್ರಿಸ್ತನ ದೇಹವಾಗಿದ್ದೀರಿ. ನಿಮ್ಮಲ್ಲಿ ಪ್ರತಿಯೊಬ್ಬರೂ ಆ ದೇಹದ ಅಂಗಗಳಾಗಿದ್ದೀರಿ.
1 ಕೊರಿಂಥದವರಿಗೆ 12 : 28 (OCVKN)
ದೇವರು ತಮ್ಮ ಸಭೆಯಲ್ಲಿ ಮೊದಲನೆಯದಾಗಿ ಅಪೊಸ್ತಲರನ್ನು, ಎರಡನೆಯದಾಗಿ ಪ್ರವಾದಿಗಳನ್ನು, ಮೂರನೆಯದಾಗಿ ಬೋಧಕರನ್ನು ನೇಮಿಸಿದ್ದಾರೆ. ಅನಂತರ ಅದ್ಭುತಕಾರ್ಯಗಳನ್ನು ಮಾಡುವವರನ್ನು, ರೋಗಗಳನ್ನು ಗುಣಪಡಿಸುವ ವರವನ್ನು, ಪರೋಪಕಾರಿಗಳನ್ನು, ಆಡಳಿತಗಾರರನ್ನು, ವಿವಿಧ ವಾಣಿಗಳನ್ನಾಡುವವರನ್ನು ನೇಮಿಸಿದ್ದಾರೆ.
1 ಕೊರಿಂಥದವರಿಗೆ 12 : 29 (OCVKN)
ಎಲ್ಲರೂ ಅಪೊಸ್ತಲರೋ? ಎಲ್ಲರೂ ಪ್ರವಾದಿಗಳೋ? ಎಲ್ಲರೂ ಬೋಧಕರೋ? ಎಲ್ಲರೂ ಅದ್ಭುತ ಮಾಡುವವರೋ?
1 ಕೊರಿಂಥದವರಿಗೆ 12 : 30 (OCVKN)
ಎಲ್ಲರೂ ರೋಗಗಳನ್ನು ಗುಣಪಡಿಸುವ ವರವನ್ನು ಹೊಂದಿದವರೋ? ಎಲ್ಲರೂ ಪರೋಪಕಾರಿಗಳೋ? ಎಲ್ಲರೂ ಆಡಳಿತಗಾರರೋ? ಎಲ್ಲರೂ ಅನ್ಯಭಾಷೆಗಳನ್ನಾಡುವವರೋ? ಅಥವಾ ಅನ್ಯಭಾಷೆಗಳ ವ್ಯಾಖ್ಯಾನ ಮಾಡುವವರೋ?
1 ಕೊರಿಂಥದವರಿಗೆ 12 : 31 (OCVKN)
ಆದರೆ ನೀವು ಆಸಕ್ತಿಯಿಂದ ಶ್ರೇಷ್ಠ ವರಗಳನ್ನು ಅಪೇಕ್ಷಿಸಿರಿ. ಪ್ರೀತಿಯೇ ಪರಮಶ್ರೇಷ್ಠವಾದದ್ದು ನಾನು ನಿಮಗೆ ಇನ್ನೂ ಸರ್ವೋತ್ತಮವಾದ ಮಾರ್ಗವನ್ನು ತೋರಿಸುತ್ತೇನೆ.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31