1 ಕೊರಿಂಥದವರಿಗೆ 13 : 1 (OCVKN)
ನಾನು ಮನುಷ್ಯರ ಭಾಷೆಗಳನ್ನೂ, ದೇವದೂತರ ಭಾಷೆಗಳನ್ನೂ ಮಾತನಾಡುವವನಾದರೂ ನನಗೆ ಪ್ರೀತಿಯಿಲ್ಲದಿದ್ದರೆ, ನಾದ ಕೊಡುವ ಕಂಚೂ ಗಣಗಣಿಸುವ ತಾಳವೂ ಆಗಿದ್ದೇನೆ.
1 ಕೊರಿಂಥದವರಿಗೆ 13 : 2 (OCVKN)
ನನಗೆ ಪ್ರವಾದನ ವರವಿದ್ದರೂ ನಾನು ಎಲ್ಲಾ ರಹಸ್ಯಗಳನ್ನೂ, ಸಕಲ ವಿದ್ಯೆಯನ್ನು ತಿಳಿದಿದ್ದರೂ ಬೆಟ್ಟಗಳನ್ನು ಕದಲಿಸುವಷ್ಟು ನಂಬಿಕೆಯಿದ್ದರೂ ನನಗೆ ಪ್ರೀತಿಯಿಲ್ಲದಿದ್ದರೆ, ಶೂನ್ಯನಾಗಿದ್ದೇನೆ.
1 ಕೊರಿಂಥದವರಿಗೆ 13 : 3 (OCVKN)
ನಾನು ನನ್ನ ಎಲ್ಲಾ ಆಸ್ತಿಯನ್ನು ದಾನಮಾಡಿದರೂ, ನಾನು ಹೊಗಳಿಕೊಳ್ಳುವಂತೆ ನನ್ನ ದೇಹವನ್ನು ಸುಡುವುದಕ್ಕಾಗಿ ಒಪ್ಪಿಸಿಕೊಟ್ಟರೂ ಪ್ರೀತಿಯು ನನಗಿಲ್ಲದಿದ್ದರೆ, ನನಗೇನೂ ಪ್ರಯೋಜನವಾಗುವುದಿಲ್ಲ.
1 ಕೊರಿಂಥದವರಿಗೆ 13 : 4 (OCVKN)
ಪ್ರೀತಿ ತಾಳ್ಮೆಯುಳ್ಳದ್ದು, ಪ್ರೀತಿ ದಯೆಯುಳ್ಳದ್ದು, ಪ್ರೀತಿ ಅಸೂಯೆಪಡುವುದಿಲ್ಲ, ಪ್ರೀತಿ ಹೊಗಳಿಕೊಳ್ಳುವುದಿಲ್ಲ, ಗರ್ವಪಡುವುದಿಲ್ಲ,
1 ಕೊರಿಂಥದವರಿಗೆ 13 : 5 (OCVKN)
ಪ್ರೀತಿಯು ಇತರರನ್ನು ಅವಮಾನಪಡಿಸುವುದಿಲ್ಲ, ಸ್ವಹಿತವನ್ನೇ ಹುಡುಕುವುದಿಲ್ಲ, ಸುಲಭವಾಗಿ ಸಿಟ್ಟುಗೊಳ್ಳುವುದಿಲ್ಲ, ಅಪಕಾರವನ್ನು ಎಣಿಸುವುದಿಲ್ಲ,
1 ಕೊರಿಂಥದವರಿಗೆ 13 : 6 (OCVKN)
ಪ್ರೀತಿ ಕೆಟ್ಟದ್ದರಲ್ಲಿ ಸಂತೋಷಪಡುವುದಿಲ್ಲ, ಸತ್ಯದೊಂದಿಗೆ ಸಂತೋಷ ಪಡುತ್ತದೆ.
1 ಕೊರಿಂಥದವರಿಗೆ 13 : 7 (OCVKN)
ಯಾವಾಗಲೂ ಸಂರಕ್ಷಿಸುತ್ತದೆ, ಯಾವಾಗಲೂ ನಂಬುತ್ತದೆ, ಯಾವಾಗಲೂ ನಿರೀಕ್ಷಿಸುತ್ತದೆ, ಯಾವಾಗಲೂ ಸಹಿಸಿಕೊಳ್ಳುತ್ತದೆ.
1 ಕೊರಿಂಥದವರಿಗೆ 13 : 8 (OCVKN)
ಪ್ರೀತಿಯು ಎಂದಿಗೂ ಅಳಿದುಹೋಗುವುದಿಲ್ಲ, ಪ್ರವಾದನೆಗಳಾದರೋ ಇಲ್ಲದಂತಾಗುವುವು, ಅನ್ಯ ಭಾಷೆಗಳು ಗತಿಸಿ ಹೋಗುವುವು, ವಿದ್ಯೆಯೋ ಇಲ್ಲದಂತಾಗುವುವು.
1 ಕೊರಿಂಥದವರಿಗೆ 13 : 9 (OCVKN)
ನಾವು ಅಪೂರ್ಣವಾಗಿ ತಿಳಿದುಕೊಂಡಿದ್ದೇವೆ, ಅಪೂರ್ಣವಾಗಿ ಪ್ರವಾದಿಸುತ್ತೇವೆ.
1 ಕೊರಿಂಥದವರಿಗೆ 13 : 10 (OCVKN)
ಆದರೆ ಸಂಪೂರ್ಣವಾದದ್ದು ಬಂದಾಗ, ಭಾಗವಾದದ್ದು ಅಳಿದುಹೋಗುವುದು.
1 ಕೊರಿಂಥದವರಿಗೆ 13 : 11 (OCVKN)
ನಾನು ಬಾಲಕನಾಗಿದ್ದಾಗ, ಬಾಲಕನ ಮಾತುಗಳನ್ನಾಡಿದೆನು, ಬಾಲಕನಂತೆ ಯೋಚಿಸಿದೆನು, ಬಾಲಕನಂತೆಯೇ ತರ್ಕಿಸಿದೆನು. ಪ್ರೌಢನಾದಾಗ ಬಾಲ್ಯದವುಗಳನ್ನು ಬಿಟ್ಟುಬಿಟ್ಟೆನು.
1 ಕೊರಿಂಥದವರಿಗೆ 13 : 12 (OCVKN)
ಈಗ ನಾವು ಕನ್ನಡಿಯಲ್ಲಿ ಮೊಬ್ಬಾಗಿ ನೋಡುತ್ತೇವೆ. ಆಗ ಮುಖಾಮುಖಿಯಾಗಿ ನೋಡುವೆವು. ಈಗ ಸ್ವಲ್ಪ ಮಾತ್ರ ನನಗೆ ತಿಳಿದಿದೆ. ಆಗ ದೇವರು ನನ್ನನ್ನು ಸಂಪೂರ್ಣವಾಗಿ ತಿಳಿದುಕೊಂಡಂತೆ, ನಾನು ಸಂಪೂರ್ಣವಾಗಿ ತಿಳಿದುಕೊಳ್ಳುವೆನು.
1 ಕೊರಿಂಥದವರಿಗೆ 13 : 13 (OCVKN)
ಆದರೆ ಈಗ ನಂಬಿಕೆ, ನಿರೀಕ್ಷೆ, ಪ್ರೀತಿ, ಈ ಮೂರೇ ಉಳಿದಿರುತ್ತವೆ. ಇವುಗಳಲ್ಲಿ ಮಹತ್ತಾದದ್ದು ಪ್ರೀತಿಯೇ.
❮
❯
1
2
3
4
5
6
7
8
9
10
11
12
13