1 ಕೊರಿಂಥದವರಿಗೆ 14 : 1 (OCVKN)
ಪ್ರವಾದಿಸುವ ಮತ್ತು ಅನ್ಯಭಾಷೆಗಳನ್ನಾಡುವ ವರಗಳು ಪ್ರೀತಿಯ ಮಾರ್ಗ ಅನುಸರಿಸಿರಿ, ಆತ್ಮಿಕ ವರಗಳನ್ನು, ವಿಶೇಷವಾಗಿ ಪ್ರವಾದಿಸುವ ವರವನ್ನು ಆಸಕ್ತಿಯಿಂದ ಅಪೇಕ್ಷಿಸಿರಿ.
1 ಕೊರಿಂಥದವರಿಗೆ 14 : 2 (OCVKN)
ಅನ್ಯಭಾಷೆಗಳನ್ನು ಆಡುವವನು ಮನುಷ್ಯರ ಸಂಗಡವಲ್ಲ, ದೇವರೊಂದಿಗೆ ಮಾತನಾಡುತ್ತಾನೆ. ಅವನು ಮಾತನಾಡುವುದನ್ನು ಯಾರೂ ಅರ್ಥಮಾಡಿಕೊಳ್ಳುವುದಿಲ್ಲ. ಏಕೆಂದರೆ ಅವನು ಆತ್ಮದಲ್ಲಿ ರಹಸ್ಯಗಳನ್ನು ಮಾತನಾಡುವವನಾಗಿದ್ದಾನೆ.
1 ಕೊರಿಂಥದವರಿಗೆ 14 : 3 (OCVKN)
ಪ್ರವಾದಿಸುವವನಾದರೋ, ಜನರ ಭಕ್ತಿವೃದ್ಧಿಗಾಗಿ, ಪ್ರೋತ್ಸಾಹಕ್ಕಾಗಿ, ಸಂತೈಸುವಿಕೆಗಾಗಿ ಮಾತನಾಡುತ್ತಾನೆ.
1 ಕೊರಿಂಥದವರಿಗೆ 14 : 4 (OCVKN)
ಅನ್ಯಭಾಷೆಗಳನ್ನಾಡುವವನು ತನಗೆ ಭಕ್ತಿವೃದ್ಧಿಯನ್ನುಂಟುಮಾಡಿಕೊಳ್ಳುವನು. ಆದರೆ ಪ್ರವಾದಿಸುವವನು ಸಭೆಗೆ ಭಕ್ತಿವೃದ್ಧಿಯನ್ನುಂಟುಮಾಡಿಕೊಳ್ಳುತ್ತಾನೆ.
1 ಕೊರಿಂಥದವರಿಗೆ 14 : 5 (OCVKN)
ನೀವೆಲ್ಲರೂ ಅನ್ಯಭಾಷೆಗಳನ್ನಾಡಬೇಕೆಂದು ಈಗ ನಾನು ಅಪೇಕ್ಷಿಸಿದರೂ, ಅದಕ್ಕಿಂತ ಹೆಚ್ಚಾಗಿ ನೀವು ಪ್ರವಾದಿಸಬೇಕೆಂದು ಅಪೇಕ್ಷಿಸುತ್ತೇನೆ. ಅನ್ಯಭಾಷೆಗಳನ್ನಾಡುವವನು ಸಭೆಗೆ ಭಕ್ತಿವೃದ್ಧಿಯಾಗುವಂತೆ ಅದರ ಅರ್ಥವನ್ನು ಹೇಳದೆ ಹೋದರೆ, ಅವನಿಗಿಂತ ಪ್ರವಾದಿಸುವವನೇ ಶ್ರೇಷ್ಠನು.
1 ಕೊರಿಂಥದವರಿಗೆ 14 : 6 (OCVKN)
ಹೀಗಿರುವುದರಿಂದ ಪ್ರಿಯರೇ, ನಾನು ನಿಮ್ಮ ಬಳಿಗೆ ಬಂದು ಪ್ರಕಟನೆಯಿಂದಾಗಲಿ, ವಿದ್ಯೆಯಿಂದಾಗಲಿ, ಪ್ರವಾದನೆಯಿಂದಾಗಲಿ, ಉಪದೇಶದಿಂದಾಗಲಿ ಮಾತನಾಡದೆ, ಅನ್ಯಭಾಷೆಗಳಿಂದ ಮಾತನಾಡುವವನಾಗಿದ್ದರೆ, ನನ್ನಿಂದ ನಿಮಗೇನು ಪ್ರಯೋಜನ?
1 ಕೊರಿಂಥದವರಿಗೆ 14 : 7 (OCVKN)
ಕೊಳಲು, ವೀಣೆ ಮೊದಲಾದ ನಿರ್ಜೀವ ವಾದ್ಯಗಳ ಸ್ವರಗಳ ಹಾಗೆ, ವಿವಿಧ ಶೃತಿಗಳು ಕಂಡುಬರದಿದ್ದರೆ, ಊದಿದ್ದು ಕೊಳಲೋ ಅಥವಾ ಬಾರಿಸಿದ್ದು ವೀಣೆಯೋ ಎಂದು ತಿಳಿಯುವುದು ಹೇಗೆ?
1 ಕೊರಿಂಥದವರಿಗೆ 14 : 8 (OCVKN)
ತುತೂರಿಯನ್ನು ಸ್ಪಷ್ಟವಾಗಿ ಊದದಿದ್ದರೆ, ಯಾರು ತಾನೇ ಯುದ್ಧಕ್ಕೆ ಸನ್ನದ್ಧರಾಗುವರು?
1 ಕೊರಿಂಥದವರಿಗೆ 14 : 9 (OCVKN)
ಅದರಂತೆಯೇ, ನೀವೂ ಸ್ಪಷ್ಟವಾದ ಭಾಷೆಯಿಂದ ಮಾತನಾಡದೆ ಹೋದರೆ, ಮಾತನಾಡಿದ್ದು ಏನೆಂದು ತಿಳಿಯುವುದು ಹೇಗೆ? ನೀವು ಗಾಳಿಯ ಸಂಗಡ ಮಾತನಾಡಿದ ಹಾಗಿರುವುದಷ್ಟೆ.
1 ಕೊರಿಂಥದವರಿಗೆ 14 : 10 (OCVKN)
ಲೋಕದಲ್ಲಿ ಎಷ್ಟು ವಿಧವಾದ ಭಾಷೆಗಳಿದ್ದರೂ, ಅವುಗಳಲ್ಲಿ ಒಂದಾದರೂ ಅರ್ಥರಹಿತವಾದುದಲ್ಲ.
1 ಕೊರಿಂಥದವರಿಗೆ 14 : 11 (OCVKN)
ನಾನು ಭಾಷೆಯ ಅರ್ಥವನ್ನು ಗ್ರಹಿಸದಿದ್ದರೆ, ಮಾತಾಡುವವನಿಗೆ ನಾನು ಅನ್ಯದೇಶದವನಂತಿರುವೆನು, ಮಾತನಾಡುವವನು ನನಗೆ ಅನ್ಯದೇಶದವನಂತಿರುವನು.
1 ಕೊರಿಂಥದವರಿಗೆ 14 : 12 (OCVKN)
ಅದರಂತೆಯೇ, ನೀವು ಸಹ ಆತ್ಮಿಕ ವರಗಳನ್ನು ಬಯಸುವುದರಿಂದ, ಸಭೆಗೆ ಭಕ್ತಿವೃದ್ಧಿ ಉಂಟುಮಾಡುವ ವರಗಳನ್ನೇ ಸಮೃದ್ಧವಾಗಿ ಪ್ರಯತ್ನಿಸಿರಿ.
1 ಕೊರಿಂಥದವರಿಗೆ 14 : 13 (OCVKN)
ಆದ್ದರಿಂದ, ಅನ್ಯಭಾಷೆಗಳನ್ನಾಡುವವನು ತಾನಾಡುವ ಮಾತಿನ ಅರ್ಥವನ್ನು ಹೇಳುವುದಕ್ಕೆ ದೇವರನ್ನು ಪ್ರಾರ್ಥಿಸಲಿ.
1 ಕೊರಿಂಥದವರಿಗೆ 14 : 14 (OCVKN)
ಏಕೆಂದರೆ ನಾನು ಅನ್ಯಭಾಷೆಗಳಲ್ಲಿ ಪ್ರಾರ್ಥಿಸಿದರೆ, ನನ್ನ ಆತ್ಮವು ಪ್ರಾರ್ಥಿಸುವುದು. ಆದರೆ ನನ್ನ ಬುದ್ಧಿ ನಿಷ್ಫಲವಾಗಿರುವುದು.
1 ಕೊರಿಂಥದವರಿಗೆ 14 : 15 (OCVKN)
ಹಾಗಾದರೇನು? ನಾನು ಆತ್ಮದಿಂದ ಪ್ರಾರ್ಥಿಸುವೆನು, ಬುದ್ಧಿಯಿಂದಲೂ ಪ್ರಾರ್ಥಿಸುವೆನು. ಆತ್ಮದಿಂದ ಹಾಡುವೆನು, ಬುದ್ಧಿಯಿಂದಲೂ ಹಾಡುವೆನು.
1 ಕೊರಿಂಥದವರಿಗೆ 14 : 16 (OCVKN)
ನೀನು ಆತ್ಮದಲ್ಲಿ ಮಾತ್ರ ಸ್ತೋತ್ರ ಮಾಡಿದರೆ, ತಿಳುವಳಿಕೆ ಇಲ್ಲದೆ ಕುಳಿತಿರುವವನು ನಿನ್ನ ಕೃತಜ್ಞತಾಸ್ತುತಿಗೆ, “ಆಮೆನ್” ಎಂದು ಹೇಳುವುದು ಹೇಗೆ?
1 ಕೊರಿಂಥದವರಿಗೆ 14 : 17 (OCVKN)
ನೀನು ಚೆನ್ನಾಗಿ ಕೃತಜ್ಞತಾಸ್ತುತಿ ಮಾಡುತ್ತೀ ನಿಜವೇ. ಆದರೆ, ಮತ್ತೊಬ್ಬನಿಗೆ ಭಕ್ತಿವೃದ್ಧಿಯಾಗಲಿಲ್ಲ.
1 ಕೊರಿಂಥದವರಿಗೆ 14 : 18 (OCVKN)
ನಾನು ನಿಮ್ಮೆಲ್ಲರಿಗಿಂತಲೂ ಹೆಚ್ಚಾಗಿ ಅನ್ಯಭಾಷೆಗಳನ್ನಾಡುತ್ತೇನೆಂದು ದೇವರಿಗೆ ಕೃತಜ್ಞತೆ ಮಾಡುತ್ತೇನೆ.
1 ಕೊರಿಂಥದವರಿಗೆ 14 : 19 (OCVKN)
ಆದರೂ ಸಭೆಯಲ್ಲಿ ಅನ್ಯಭಾಷೆಗಳಿಂದ ಹತ್ತು ಸಾವಿರ ಮಾತುಗಳನ್ನಾಡುವುದಕ್ಕಿಂತ, ನನ್ನ ಬುದ್ಧಿಯಿಂದ ಐದೇ ಮಾತುಗಳನ್ನಾಡಿ, ಇತರರಿಗೆ ಉಪದೇಶ ಮಾಡುವುದನ್ನೇ ನಾನು ಇಷ್ಟಪಡುತ್ತೇನೆ.
1 ಕೊರಿಂಥದವರಿಗೆ 14 : 20 (OCVKN)
1 ಕೊರಿಂಥದವರಿಗೆ 14 : 21 (OCVKN)
ಸಹೋದರರೇ, ಮಕ್ಕಳಂತೆ ಯೋಚಿಸುವುದನ್ನು ಬಿಟ್ಟುಬಿಡಿರಿ. ಕೇಡಿನ ವಿಷಯದಲ್ಲಿ ಶಿಶುಗಳಂತೆ ಇದ್ದರೂ, ನಿಮ್ಮ ಯೋಚನೆಯಲ್ಲಿ ಪ್ರಾಯಸ್ಥರಾಗಿರಿ. “ಬೇರೆಭಾಷೆಯವರ ಮೂಲಕವಾಗಿಯೂ ವಿದೇಶದವರ ತುಟಿಗಳಿಂದಲೂ ನಾನು ಈ ಜನರೊಡನೆ ಮಾತಾಡುವೆನು, ಆದರೂ ಅವರು ನನಗೆ ಕಿವಿಗೊಡುವುದಿಲ್ಲವೆಂದು ಕರ್ತದೇವರು ಹೇಳುತ್ತಾರೆ,”* ಯೆಶಾಯ 28:11,12 ಎಂದು ನಿಯಮದಲ್ಲಿ ಬರೆದಿದೆ.
1 ಕೊರಿಂಥದವರಿಗೆ 14 : 22 (OCVKN)
ಆದ್ದರಿಂದ, ಅನ್ಯಭಾಷೆಗಳನ್ನಾಡುವುದು ವಿಶ್ವಾಸಿಗಳಿಗೆ ಅಲ್ಲ, ಅವಿಶ್ವಾಸಿಗಳಿಗೆ ಸೂಚನೆಯಾಗಿದೆ. ಆದರೆ ಪ್ರವಾದಿಸುವುದು ಅವಿಶ್ವಾಸಿಗಳಿಗಲ್ಲ, ವಿಶ್ವಾಸಿಗಳಿಗೆ ಸೂಚನೆಯಾಗಿದೆ.
1 ಕೊರಿಂಥದವರಿಗೆ 14 : 23 (OCVKN)
ಆದಕಾರಣ ಸಭೆಯೆಲ್ಲವೂ ಕೂಡಿಬಂದಾಗ ಎಲ್ಲರೂ ಅನ್ಯಭಾಷೆಗಳನ್ನಾಡಿದರೆ, ಅಜ್ಞಾನಿಗಳು ಇಲ್ಲವೆ ಅವಿಶ್ವಾಸಿಗಳು ಒಳಗೆ ಬಂದು, ನೀವು ಹುಚ್ಚರೆಂದು ಹೇಳುವುದಿಲ್ಲವೇ?
1 ಕೊರಿಂಥದವರಿಗೆ 14 : 24 (OCVKN)
ಆದರೆ ನೀವೆಲ್ಲರೂ ಪ್ರವಾದಿಸುತ್ತಿರಲು, ಅವಿಶ್ವಾಸಿಯಾಗಲಿ, ಅನ್ವೇಷಕನಾಗಲಿ ಒಳಗೆ ಬಂದರೆ, ಅವನು ತಾನು ಪಾಪಿಯೆಂಬ ಮನವರಿಕೆಯನ್ನು ಹೊಂದುವನು. ಅವನು ಎಲ್ಲರ ಮಾತಿನಿಂದ ಪರಿಶೋಧಿತನಾಗುವನು.
1 ಕೊರಿಂಥದವರಿಗೆ 14 : 25 (OCVKN)
ಅವನ ಹೃದಯದ ರಹಸ್ಯಗಳು ಬಯಲಾಗುವುವು. ಅವನು ಅಡ್ಡಬಿದ್ದು ದೇವರನ್ನು ಆರಾಧಿಸಿ, “ದೇವರು ನಿಜವಾಗಿಯೂ ನಿಮ್ಮ ಮಧ್ಯದಲ್ಲಿ ಇದ್ದಾರೆ!” ಎಂದು ಪ್ರಕಟಪಡಿಸುವನು.
1 ಕೊರಿಂಥದವರಿಗೆ 14 : 26 (OCVKN)
ಆರಾಧನೆಯ ಕ್ರಮ ಹಾಗಾದರೇನು ಪ್ರಿಯರೇ? ನೀವು ಸಭೆಯಾಗಿ ಕೂಡಿಬರುವಾಗ ಪ್ರತಿಯೊಬ್ಬನಿಗೆ ಕೀರ್ತನೆಯಾಗಲಿ, ಸಂದೇಶವಾಗಲಿ, ಪ್ರಕಟನೆಯಾಗಲಿ, ಅನ್ಯಭಾಷೆಯನ್ನಾಡುವುದಾಗಲಿ, ಅನ್ಯಭಾಷೆಗಳ ಅರ್ಥವನ್ನು ಹೇಳುವ ವರವಾಗಲಿ ಇರುತ್ತದಷ್ಟೆ. ಇವೆಲ್ಲವೂ ಸಭೆಗೆ ಭಕ್ತಿವೃದ್ಧಿಗಾಗಿಯೇ ಇರಲಿ.
1 ಕೊರಿಂಥದವರಿಗೆ 14 : 27 (OCVKN)
ಯಾವನಾದರೂ ಅನ್ಯಭಾಷೆಗಳನ್ನಾಡುವುದಾದರೆ, ಇಬ್ಬರು ಅಥವಾ ಹೆಚ್ಚೆಂದರೆ ಮೂವರು ಒಬ್ಬೊಬ್ಬರಾಗಿ ಮಾತನಾಡಬೇಕು, ಒಬ್ಬನು ಅರ್ಥವನ್ನು ಹೇಳಲಿ.
1 ಕೊರಿಂಥದವರಿಗೆ 14 : 28 (OCVKN)
ಅರ್ಥವನ್ನು ಹೇಳುವವನಿಲ್ಲದಿದ್ದರೆ, ಅನ್ಯಭಾಷೆಗಳನ್ನಾಡುವವನು ಸಭೆಯಲ್ಲಿ ಮೌನವಾಗಿರಲಿ. ಅವನು ತನ್ನೊಂದಿಗೂ ದೇವರೊಂದಿಗೂ ಮಾತನಾಡಿಕೊಳ್ಳಲಿ.
1 ಕೊರಿಂಥದವರಿಗೆ 14 : 29 (OCVKN)
ಪ್ರವಾದಿಗಳು ಇಬ್ಬರಾಗಲಿ, ಮೂವರಾಗಲಿ ಮಾತಾಡಲಿ, ಇತರರರು ವಿವೇಚನೆ ಮಾಡಲಿ.
1 ಕೊರಿಂಥದವರಿಗೆ 14 : 30 (OCVKN)
ಕುಳಿತಿರುವ ಮತ್ತೊಬ್ಬನಿಗೆ ಏನಾದರೂ ಪ್ರಕಟನೆಯಾದರೆ, ಮೊದಲಿನವನು ಮೌನವಾಗಿರಲಿ.
1 ಕೊರಿಂಥದವರಿಗೆ 14 : 31 (OCVKN)
ಎಲ್ಲರೂ ಕಲಿತುಕೊಳ್ಳುವಂತೆಯೂ, ಎಲ್ಲರೂ ಪ್ರೋತ್ಸಾಹ ಹೊಂದುವಂತೆಯೂ, ನೀವೆಲ್ಲರು ಒಬ್ಬೊಬ್ಬರಾಗಿ ಪ್ರವಾದಿಸಿರಿ.
1 ಕೊರಿಂಥದವರಿಗೆ 14 : 32 (OCVKN)
ಪ್ರವಾದಿಗಳ ಆತ್ಮಗಳು ಪ್ರವಾದಿಗಳ ಸ್ವಾಧೀನದಲ್ಲಿವೆ.
1 ಕೊರಿಂಥದವರಿಗೆ 14 : 33 (OCVKN)
ದೇವಜನರ ಎಲ್ಲಾ ಸಭೆಗಳಲ್ಲಿರುವಂತೆ, ದೇವರು ಗಲಿಬಿಲಿಯ ದೇವರಲ್ಲ, ಸಮಾಧಾನದ ದೇವರಾಗಿದ್ದಾರೆ.
1 ಕೊರಿಂಥದವರಿಗೆ 14 : 34 (OCVKN)
ದೇವಜನರ ಎಲ್ಲಾ ಸಭೆಗಳಲ್ಲಿರುವಂತೆ ಸ್ತ್ರೀಯರು ಸಭೆಯ ಕೂಟಗಳಲ್ಲಿ ಮೌನವಾಗಿರಲಿ. ಏಕೆಂದರೆ ಮಾತನಾಡಲು ಅವರಿಗೆ ಅನುಮತಿಯಿಲ್ಲ, ನಿಯಮವು ಸಹ ಹೇಳಿರುವಂತೆ ಅವರು ಅಧೀನರಾಗಿರಬೇಕು.
1 ಕೊರಿಂಥದವರಿಗೆ 14 : 35 (OCVKN)
ಅವರು ಏನಾದರೂ ಕಲಿಯಬಯಸಿದರೆ, ಮನೆಯಲ್ಲಿ ಗಂಡಂದಿರನ್ನು ಕೇಳಲಿ. ಸ್ತ್ರೀಯರು ಸಭೆಯಲ್ಲಿ ಮಾತನಾಡುವುದು ನಾಚಿಕೆಪಡುವಂಥದಾಗಿದೆ.
1 ಕೊರಿಂಥದವರಿಗೆ 14 : 36 (OCVKN)
ದೇವರ ವಾಕ್ಯವು ನಿಮ್ಮಿಂದ ಹೊರಟಿತೋ? ಅಥವಾ ಅದು ತಲುಪಿದ್ದು ನಿಮಗೆ ಮಾತ್ರವೋ?
1 ಕೊರಿಂಥದವರಿಗೆ 14 : 37 (OCVKN)
ಯಾವನಾದರೂ ತನ್ನನ್ನು ಪ್ರವಾದಿಯೆಂದಾಗಲಿ, ಆತ್ಮನ ವರಗಳನ್ನು ಹೊದಿದವನೆಂದಾಗಲಿ ಭಾವಿಸುವುದಾದರೆ, ನಾನು ನಿಮಗೆ ಬರೆದಿರುವ ಸಂಗತಿಗಳು ಕರ್ತದೇವರ ಆಜ್ಞೆಗಳೆಂದು ಸ್ಪಷ್ಟವಾಗಿ ತಿಳಿದುಕೊಳ್ಳಲಿ.
1 ಕೊರಿಂಥದವರಿಗೆ 14 : 38 (OCVKN)
ಆದರೆ ಯಾರಾದರೂ ಇದನ್ನು ತಿರಸ್ಕಸಿದರೆ, ಅವರೂ ತಿರಸ್ಕಾರಕ್ಕೆ ಗುರಿಯಾಗುವರು.
1 ಕೊರಿಂಥದವರಿಗೆ 14 : 39 (OCVKN)
ಆದಕಾರಣ ನನ್ನ ಪ್ರಿಯರೇ, ಪ್ರವಾದಿಸುವ ವರಕ್ಕಾಗಿ ಆಸಕ್ತರಾಗಿರಿ. ಅನ್ಯಭಾಷೆಯನ್ನಾಡುವುದಕ್ಕೆ ಅಡ್ಡಿಮಾಡಬೇಡಿರಿ.
1 ಕೊರಿಂಥದವರಿಗೆ 14 : 40 (OCVKN)
ಆದರೆ ಎಲ್ಲವನ್ನೂ ಯೋಗ್ಯವಾಗಿಯೂ ಕ್ರಮವಾಗಿಯೂ ಮಾಡಿರಿ.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40