1 ಕೊರಿಂಥದವರಿಗೆ 15 : 1 (OCVKN)
ಕ್ರಿಸ್ತನ ಪುನರುತ್ಥಾನ ಪ್ರಿಯರೇ, ನಾನು ನಿಮಗೆ ಸಾರಿದ ಸುವಾರ್ತೆಯನ್ನೂ, ನೀವು ಅದನ್ನು ಸ್ವೀಕರಿಸಿದ್ದನ್ನೂ, ಅದರಲ್ಲಿ ನಿಂತಿರುವುದನ್ನೂ, ಈಗ ನಿಮಗೆ ನೆನಪಿಸುತ್ತೇನೆ.
1 ಕೊರಿಂಥದವರಿಗೆ 15 : 2 (OCVKN)
ನಾನು ಸಾರಿದ ಈ ಸುವಾರ್ತೆಯ ವಾಕ್ಯವನ್ನು ನೀವು ಬಿಗಿಯಾಗಿ ಹಿಡಿದುಕೊಂಡರೆ, ನಿಮಗೆ ರಕ್ಷಣೆಯಾಗುತ್ತದೆ. ಇಲ್ಲದಿದ್ದರೆ, ನಿಮ್ಮ ನಂಬಿಕೆ ವ್ಯರ್ಥವಾಗಿ ಹೋಗುತ್ತದೆ.
1 ಕೊರಿಂಥದವರಿಗೆ 15 : 3 (OCVKN)
ಏಕೆಂದರೆ ನಾನು ಪಡೆದುಕೊಂಡಿದ್ದರಲ್ಲಿ ಬಹು ಪ್ರಾಮುಖ್ಯವಾದದ್ದನ್ನೇ ನಿಮಗೆ ಕೊಟ್ಟಿದ್ದೇನೆ. ಅದೇನೆಂದರೆ, ಪವಿತ್ರ ವೇದದ ಪ್ರಕಾರ ಕ್ರಿಸ್ತನು ನಮ್ಮ ಪಾಪಗಳಿಗಾಗಿ ಸತ್ತರು,
1 ಕೊರಿಂಥದವರಿಗೆ 15 : 4 (OCVKN)
ಹೂಣಿಡಲಾದರು, ಪವಿತ್ರ ವೇದದ ಪ್ರಕಾರವೇ ಮೂರನೆಯ ದಿನದಲ್ಲಿ ಎದ್ದು ಬಂದರು.
1 ಕೊರಿಂಥದವರಿಗೆ 15 : 5 (OCVKN)
ಕೇಫನಿಗೂ* ಅಥವಾ ಪೇತ್ರ ಆಮೇಲೆ ಹನ್ನೆರಡು ಮಂದಿಗೂ ಕಾಣಿಸಿಕೊಂಡರು.
1 ಕೊರಿಂಥದವರಿಗೆ 15 : 6 (OCVKN)
ತರುವಾಯ ಒಂದೇ ಸಮಯದಲ್ಲಿ ಐನೂರಕ್ಕೂ ಹೆಚ್ಚು ಮಂದಿ ಹಿಂಬಾಲಕರಿಗೆ ಕ್ರಿಸ್ತ ಯೇಸು ಕಾಣಿಸಿಕೊಂಡರು. ಅವರಲ್ಲಿ ಕೆಲವರು ಸತ್ತು ಹೋಗಿದ್ದರೂ ಬಹುಜನರು ಇಂದಿಗೂ ಬದುಕಿದ್ದಾರೆ.
1 ಕೊರಿಂಥದವರಿಗೆ 15 : 7 (OCVKN)
ತರುವಾಯ ಕ್ರಿಸ್ತ ಯೇಸು ಯಾಕೋಬನಿಗೂ ಆಮೇಲೆ ಅಪೊಸ್ತಲರೆಲ್ಲರಿಗೂ ಕಾಣಿಸಿಕೊಂಡರು.
1 ಕೊರಿಂಥದವರಿಗೆ 15 : 8 (OCVKN)
ಕಟ್ಟಕಡೆಗೆ, ದಿನತುಂಬುವ ಮೊದಲೇ ಹುಟ್ಟಿದವನಂತಿರುವ ನನಗೂ ಕಾಣಿಸಿಕೊಂಡರು.
1 ಕೊರಿಂಥದವರಿಗೆ 15 : 9 (OCVKN)
ನಾನಾದರೋ ಅಪೊಸ್ತಲರಲ್ಲಿ ಕನಿಷ್ಠನು, ಅಪೊಸ್ತಲನೆನಿಸಿಕೊಳ್ಳುವುದಕ್ಕೆ ನಾನು ಯೋಗ್ಯನಲ್ಲ, ಏಕೆಂದರೆ ನಾನು ದೇವರ ಸಭೆಯನ್ನು ಹಿಂಸೆಪಡಿಸಿದೆನು.
1 ಕೊರಿಂಥದವರಿಗೆ 15 : 10 (OCVKN)
ಆದರೆ ನಾನು ಎಂಥವನಾಗಿದ್ದೇನೋ, ಅದು ದೇವರ ಕೃಪೆಯಿಂದಲೇ ಆಗಿರುತ್ತದೆ. ನನಗುಂಟಾದ ದೇವರ ಕೃಪೆಯು ನಿಷ್ಫಲವಾಗಲಿಲ್ಲ. ನಾನು ಅವರೆಲ್ಲರಿಗಿಂತಲೂ ಎಷ್ಟೋ ಹೆಚ್ಚಾಗಿ ಪ್ರಯಾಸಪಟ್ಟೆನು. ಆದರೆ ಪ್ರಯಾಸಪಟ್ಟವನು ನಾನಲ್ಲ, ನನ್ನೊಂದಿಗಿದ್ದ ದೇವರ ಕೃಪೆಯೇ.
1 ಕೊರಿಂಥದವರಿಗೆ 15 : 11 (OCVKN)
ಆದ್ದರಿಂದ ನಾನಾದರೇನು, ಅವರಾದರೇನು ಇದನ್ನೇ ನಾವು ಸಾರುವುದು, ಇದನ್ನೇ ನೀವು ನಂಬಿದ್ದೀರಿ.
1 ಕೊರಿಂಥದವರಿಗೆ 15 : 12 (OCVKN)
ಸತ್ತವರ ಪುನರುತ್ಥಾನ ಆದರೆ ಕ್ರಿಸ್ತ ಯೇಸು ಸತ್ತವರೊಳಗಿಂದ ಎದ್ದು ಬಂದಿರುತ್ತಾರೆಂದು ಸಾರುತ್ತಿರುವಲ್ಲಿ ನಿಮ್ಮೊಳಗೆ ಕೆಲವರು ಸತ್ತವರಿಗೆ ಪುನರುತ್ಥಾನ ಇಲ್ಲ ಎಂದು ಹೇಳುವುದು ಹೇಗೆ?
1 ಕೊರಿಂಥದವರಿಗೆ 15 : 13 (OCVKN)
ಈಗ ಸತ್ತವರಿಗೆ ಪುನರುತ್ಥಾನವಿಲ್ಲವಾದರೆ, ಕ್ರಿಸ್ತಯೇಸುವಾದರೂ ಎದ್ದು ಬರಲಿಲ್ಲ.
1 ಕೊರಿಂಥದವರಿಗೆ 15 : 14 (OCVKN)
ಕ್ರಿಸ್ತ ಯೇಸು ಎದ್ದು ಬರಲಿಲ್ಲವಾದರೆ, ನಮ್ಮ ಪ್ರಸಂಗವೂ ನಿಮ್ಮ ವಿಶ್ವಾಸವೂ ನಿಷ್ಪ್ರಯೋಜನವಾದದ್ದು.
1 ಕೊರಿಂಥದವರಿಗೆ 15 : 15 (OCVKN)
ಅದು ಮಾತ್ರವಲ್ಲ, ದೇವರು ಕ್ರಿಸ್ತ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದರೆಂದು ದೇವರ ಬಗ್ಗೆ ಸಾಕ್ಷಿಕೊಟ್ಟ ನಾವೂ ಸುಳ್ಳುಸಾಕ್ಷಿಗಳಾಗಿ ಕಂಡುಬರುವೆವು. ದೇವರು ಕ್ರಿಸ್ತನನ್ನು ಎಬ್ಬಿಸದಿದ್ದರೆ ಸತ್ತವರನ್ನೂ ದೇವರು ಎಬ್ಬಿಸುವುದಿಲ್ಲ.
1 ಕೊರಿಂಥದವರಿಗೆ 15 : 16 (OCVKN)
ಸತ್ತವರು ಎದ್ದುಬರುವುದಿಲ್ಲವಾದರೆ, ಕ್ರಿಸ್ತ ಯೇಸುವೂ ಎದ್ದುಬಂದಿಲ್ಲ.
1 ಕೊರಿಂಥದವರಿಗೆ 15 : 17 (OCVKN)
ಕ್ರಿಸ್ತ ಯೇಸುವು ಎದ್ದುಬಂದಿಲ್ಲವಾದರೆ, ನಿಮ್ಮ ವಿಶ್ವಾಸವೂ ವ್ಯರ್ಥವಾಗಿದೆ, ನೀವು ಇನ್ನೂ ನಿಮ್ಮ ಪಾಪಗಳಲ್ಲಿಯೇ ಇದ್ದೀರಿ.
1 ಕೊರಿಂಥದವರಿಗೆ 15 : 18 (OCVKN)
ಅಲ್ಲದೆ, ಕ್ರಿಸ್ತ ಯೇಸುವಿನಲ್ಲಿ ವಿಶ್ವಾಸವಿಟ್ಟು ನಿದ್ರೆ ಹೋದವರು ಸಹ ನಾಶವಾದರು.
1 ಕೊರಿಂಥದವರಿಗೆ 15 : 19 (OCVKN)
ನಾವು ಈ ಜೀವನದಲ್ಲಿ ಮಾತ್ರ ಕ್ರಿಸ್ತ ಯೇಸುವಿನಲ್ಲಿ ನಿರೀಕ್ಷೆಯಿಟ್ಟು ಕೊಂಡಿರುವವರಾಗಿದ್ದರೆ, ನಾವು ಎಲ್ಲಾ ಮನುಷ್ಯರಲ್ಲಿಯೂ ಕನಿಕರಪಡತಕ್ಕವರೇ ಆಗುತ್ತೇವೆ.
1 ಕೊರಿಂಥದವರಿಗೆ 15 : 20 (OCVKN)
ಆದರೆ ಈಗ ಕ್ರಿಸ್ತ ಯೇಸು ಸತ್ತವರೊಳಗಿಂದ ಎದ್ದು ಬಂದೇ ಇದ್ದಾರೆ. ನಿದ್ರೆ ಹೋದವರಲ್ಲಿ ಪ್ರಥಮಫಲವಾಗಿದ್ದಾರೆ.
1 ಕೊರಿಂಥದವರಿಗೆ 15 : 21 (OCVKN)
ಏಕೆಂದರೆ ಒಬ್ಬ ಮನುಷ್ಯನ ಮೂಲಕ ಮರಣವು ಬಂದಂತೆಯೇ, ಒಬ್ಬ ಮನುಷ್ಯನ ಮೂಲಕ ಸತ್ತವರಿಗೆ ಪುನರುತ್ಥಾನವು ಸಹ ಬರುವುದು.
1 ಕೊರಿಂಥದವರಿಗೆ 15 : 22 (OCVKN)
ಏಕೆಂದರೆ, ಆದಾಮನಲ್ಲಿ ಎಲ್ಲರೂ ಸತ್ತಂತೆಯೇ, ಕ್ರಿಸ್ತನಲ್ಲಿ ಎಲ್ಲರೂ ಜೀವಂತರಾಗುವರು.
1 ಕೊರಿಂಥದವರಿಗೆ 15 : 23 (OCVKN)
ಆದರೆ ಒಬ್ಬೊಬ್ಬರು ತಮ್ಮ ತಮ್ಮ ಕ್ರಮದ ಅನುಸಾರವಾಗಿ ಎದ್ದು ಬರುವರು. ಪ್ರಥಮಫಲವಾಗಿ ಕ್ರಿಸ್ತನು, ತರುವಾಯ ಕ್ರಿಸ್ತನ ಪುನರಾಗಮನದಲ್ಲಿ ಕ್ರಿಸ್ತನಿಗೆ ಸೇರಿದವರು ಎದ್ದು ಬರುವರು.
1 ಕೊರಿಂಥದವರಿಗೆ 15 : 24 (OCVKN)
ಆಮೇಲೆ ಕ್ರಿಸ್ತನು ಎಲ್ಲಾ ಆಧಿಪತ್ಯವನ್ನೂ ಎಲ್ಲಾ ಅಧಿಕಾರವನ್ನೂ ಎಲ್ಲಾ ಶಕ್ತಿಯನ್ನೂ ತೆಗೆದುಹಾಕಿ, ರಾಜ್ಯವನ್ನು ತಂದೆ ದೇವರಿಗೆ ಒಪ್ಪಿಸಿಕೊಡುವಾಗ ಸಮಾಪ್ತಿಯಾಗುವುದು.
1 ಕೊರಿಂಥದವರಿಗೆ 15 : 25 (OCVKN)
ಏಕೆಂದರೆ, ಕ್ರಿಸ್ತನು ಎಲ್ಲಾ ಶತ್ರುಗಳನ್ನು ತನ್ನ ಪಾದಗಳ ಕೆಳಗೆ ಹಾಕಿಕೊಳ್ಳುವ ತನಕ ಆಳುವುದು ಅವಶ್ಯ.
1 ಕೊರಿಂಥದವರಿಗೆ 15 : 26 (OCVKN)
ಕೊನೆಯದಾಗಿ, ನಿರ್ಮೂಲವಾಗುವ ವೈರಿ ಮರಣವೇ.
1 ಕೊರಿಂಥದವರಿಗೆ 15 : 27 (OCVKN)
ದೇವರು ಸಮಸ್ತವನ್ನೂ ಕ್ರಿಸ್ತನ ಪಾದಗಳ ಕೆಳಗೆ ಹಾಕಿ ಅವರಿಗೆ ಅಧೀನಮಾಡಿದ್ದಾರೆ. “ಸಮಸ್ತವೂ ಅವರಿಗೆ ಅಧೀನ ಮಾಡಲಾಗಿದೆ” ಕೀರ್ತನೆ 8:6 ಎಂದು ಹೇಳುವಾಗ, ಸಮಸ್ತವನ್ನೂ ಕ್ರಿಸ್ತನಿಗೆ ಅಧೀನಮಾಡಿಕೊಟ್ಟ ದೇವರು ಇದರಲ್ಲಿ ಒಳಪಡಲಿಲ್ಲ ಎಂಬುದು ಸ್ಪಷ್ಟವಾಗಿದೆ.
1 ಕೊರಿಂಥದವರಿಗೆ 15 : 28 (OCVKN)
ಸಮಸ್ತವೂ ಅವರಿಗೆ ಅಧೀನವಾದ ಮೇಲೆ, ಮಗನೂ ಸಹ ಸಮಸ್ತವನ್ನೂ ತನಗೆ ಅಧೀನಮಾಡಿಕೊಟ್ಟ ದೇವರಿಗೆ ತಾವೇ ಅಧೀನರಾಗುವರು. ಹೀಗೆ ದೇವರು ಸಮಸ್ತರಲ್ಲಿಯೂ ಸಮಸ್ತವೂ ಆಗಿದ್ದಾರೆ.
1 ಕೊರಿಂಥದವರಿಗೆ 15 : 29 (OCVKN)
ಸತ್ತವರಿಗೆ ಪುನರುತ್ಥಾನವಿಲ್ಲದಿದ್ದರೆ, ಸತ್ತವರಿಗೋಸ್ಕರ ದೀಕ್ಷಾಸ್ನಾನ ಮಾಡಿಸಿಕೊಳ್ಳುವವರು ಏನು ಮಾಡುವರು? ಸತ್ತವರು ನಿಜವಾಗಿಯೂ ಎದ್ದುಬರುವುದಿಲ್ಲವಾದರೆ, ಅವರಿಗೋಸ್ಕರ ದೀಕ್ಷಾಸ್ನಾನ ಮಾಡಿಸಿಕೊಳ್ಳುವುದು ಏಕೆ?
1 ಕೊರಿಂಥದವರಿಗೆ 15 : 30 (OCVKN)
ನಾವು ಸಹ ಪ್ರತಿ ಗಳಿಗೆಯಲ್ಲಿಯೂ ಅಪಾಯದಲ್ಲಿರುವುದೇಕೆ?
1 ಕೊರಿಂಥದವರಿಗೆ 15 : 31 (OCVKN)
ಸಹೋದರರೇ ನಮ್ಮ ಕರ್ತ ಆಗಿರುವ ಕ್ರಿಸ್ತ ಯೇಸುವಿನಲ್ಲಿ ನನಗೆ ನಿಮ್ಮ ಬಗ್ಗೆ ನಿಶ್ಚಯವಾಗಿರುವ ಹೆಮ್ಮೆಯಿಂದ ನಾನು ದಿನದಿನವು ಸಾಯುತ್ತಲಿದ್ದೇನೆ.
1 ಕೊರಿಂಥದವರಿಗೆ 15 : 32 (OCVKN)
ನಾನು ಎಫೆಸದಲ್ಲಿ ಕಾಡು ಮೃಗಗಳೊಂದಿಗೆ ಹೋರಾಟ ಮಾಡಿದ್ದು ಕೇವಲ ಮಾನವ ಕಾರಣಗಳಿಂದ ಮಾತ್ರವಾಗಿದ್ದರೆ, ಅದರಿಂದ ನನಗೇನು ಪ್ರಯೋಜನ? ಸತ್ತವರು ಎದ್ದುಬರುವುದಿಲ್ಲವಾದರೆ, “ತಿನ್ನೋಣ, ಕುಡಿಯೋಣ, ನಾಳೆ ಮರಣ ಹೊಂದೋಣ.” ಯೆಶಾಯ 22:13
1 ಕೊರಿಂಥದವರಿಗೆ 15 : 33 (OCVKN)
33 ಮೋಸಹೋಗಬೇಡಿರಿ. ಏಕೆಂದರೆ, “ದುಸ್ಸಹವಾಸವು ಸದಾಚಾರವನ್ನು ಕೆಡಿಸುತ್ತದೆ.”
1 ಕೊರಿಂಥದವರಿಗೆ 15 : 34 (OCVKN)
ಸ್ವಸ್ಥಚಿತ್ತರಾಗಿರಿ, ಪಾಪಮಾಡುವುದನ್ನು ನಿಲ್ಲಿಸಿರಿ. ಕೆಲವರಂತೂ ದೇವರನ್ನೇ ಅಲಕ್ಷ್ಯಮಾಡುವವರಾಗಿದ್ದಾರೆ. ನಿಮಗೆ ನಾಚಿಕೆಯಾಗಬೇಕೆಂದು ನಾನು ಇದನ್ನು ಹೇಳುತ್ತೇನೆ.
1 ಕೊರಿಂಥದವರಿಗೆ 15 : 35 (OCVKN)
ಪುನರುತ್ಥಾನ ಹೊಂದಿದ ಶರೀರ “ಸತ್ತವರು ಎದ್ದೇಳುವುದು ಹೇಗೆ? ಎಂಥ ದೇಹದಿಂದ ಎದ್ದು ಬರುತ್ತಾರೆ?” ಎಂದು ಯಾರಾದರೂ ಕೇಳಬಹುದು.
1 ಕೊರಿಂಥದವರಿಗೆ 15 : 36 (OCVKN)
ಮತಿಹೀನ ಮನುಷ್ಯನೇ! ನೀನು ಬಿತ್ತುವ ಬೀಜವು ಸಾಯದಿದ್ದರೆ, ಅದು ಜೀವಂತವಾಗುವುದಿಲ್ಲ.
1 ಕೊರಿಂಥದವರಿಗೆ 15 : 37 (OCVKN)
ನೀನು ಒಂದು ವೇಳೆ ಗೋಧಿಯನ್ನಾಗಲಿ, ಬೇರೆ ಯಾವುದೇ ಬೀಜವನ್ನಾಗಲಿ ಬಿತ್ತುವಾಗ, ಬರೀ ಕಾಳನ್ನೇ ಹೊರತು ಮುಂದೆ ಆಗಬೇಕಾದ ದೇಹವನ್ನು ಬಿತ್ತುವುದಿಲ್ಲ.
1 ಕೊರಿಂಥದವರಿಗೆ 15 : 38 (OCVKN)
ಆದರೆ ದೇವರು ತಾನು ನಿರ್ಣಯಿಸಿದಂತೆ ಅದಕ್ಕೆ ದೇಹವನ್ನು ಕೊಡುತ್ತಾರೆ ಮತ್ತು ಒಂದೊಂದು ಬೀಜಕ್ಕೂ ಅದರದರ ದೇಹವನ್ನು ಕೊಡುತ್ತಾರೆ.
1 ಕೊರಿಂಥದವರಿಗೆ 15 : 39 (OCVKN)
ಎಲ್ಲಾ ದೇಹಗಳು ಒಂದೇ ವಿಧವಾಗಿಲ್ಲ. ಮನುಷ್ಯನ ದೇಹ ಬೇರೆ, ಪಶುಗಳ ದೇಹ ಬೇರೆ, ಪಕ್ಷಿಗಳ ದೇಹ ಬೇರೆ, ಮೀನುಗಳದೇ ಬೇರೆ.
1 ಕೊರಿಂಥದವರಿಗೆ 15 : 40 (OCVKN)
ಪರಲೋಕದ ದೇಹಗಳಿವೆ, ಭೂಲೋಕದ ದೇಹಗಳಿವೆ. ಆದರೆ ಪರಲೋಕದ ದೇಹಗಳ ಮಹಿಮೆಯೇ ಬೇರೆ, ಭೂಲೋಕದ ದೇಹಗಳ ಮಹಿಮೆಯೇ ಬೇರೆ.
1 ಕೊರಿಂಥದವರಿಗೆ 15 : 41 (OCVKN)
ಸೂರ್ಯನ ಮಹಿಮೆ ಬೇರೆ, ಚಂದ್ರನ ಮಹಿಮೆಯೇ ಬೇರೆ ವಿಧ, ನಕ್ಷತ್ರಗಳ ಮಹಿಮೆ ಇನ್ನೊಂದು ವಿಧ. ಏಕೆಂದರೆ, ನಕ್ಷತ್ರ ನಕ್ಷತ್ರಕ್ಕೆ ಮಹಿಮೆಯಲ್ಲಿ ವ್ಯತ್ಯಾಸವಾಗಿರುವುದು.
1 ಕೊರಿಂಥದವರಿಗೆ 15 : 42 (OCVKN)
ಸತ್ತವರಿಗಾಗುವ ಪುನರುತ್ಥಾನವು ಸಹ ಹಾಗೆಯೇ ಇರುವುದು. ದೇಹವು ಅಳಿಯುವ ಅವಸ್ಥೆಯಲ್ಲಿ ಬಿತ್ತಲಾಗುತ್ತದೆ. ಅಮರತ್ವ ಅವಸ್ಥೆಯಲ್ಲಿ ಎದ್ದು ಬರುವುದು.
1 ಕೊರಿಂಥದವರಿಗೆ 15 : 43 (OCVKN)
ದೇಹವು ಹೀನಾವಸ್ಥೆಯಲ್ಲಿ ಬಿತ್ತಲಾಗುತ್ತದೆ. ಮಹಿಮೆಯಲ್ಲಿ ಎದ್ದು ಬರುವುದು. ಬಲಹೀನತೆಯಲ್ಲಿ ಬಿತ್ತಲಾಗುತ್ತದೆ, ಶಕ್ತಿಯಲ್ಲಿ ಎದ್ದು ಬರುವುದು.
1 ಕೊರಿಂಥದವರಿಗೆ 15 : 44 (OCVKN)
ಪ್ರಾಕೃತ ದೇಹವಾಗಿ ಬಿತ್ತಲಾಗುತ್ತದೆ, ಆತ್ಮಿಕ ದೇಹವಾಗಿ ಎದ್ದು ಬರುವುದು. ಪ್ರಾಕೃತ ದೇಹವಿರುವುದಾದರೆ, ಆತ್ಮಿಕ ದೇಹವೂ ಇರುವುದು.
1 ಕೊರಿಂಥದವರಿಗೆ 15 : 45 (OCVKN)
“ಮೊದಲನೆಯ ಮನುಷ್ಯನಾದ ಆದಾಮನು ಜೀವಿಸುವ ವ್ಯಕ್ತಿಯಾದನು,”§ ಆದಿ 2:7 ಎಂದು ಬರೆದಿದೆಯಲ್ಲವೇ? ಕಡೇ ಆದಾಮನು ಜೀವಕೊಡುವ ಆತ್ಮನಾದನು.
1 ಕೊರಿಂಥದವರಿಗೆ 15 : 46 (OCVKN)
ಆತ್ಮಿಕವಾದದ್ದು ಮೊದಲು ಬರಲಿಲ್ಲ, ಪ್ರಾಕೃತವಾದದ್ದೇ ಮೊದಲನೆಯದು, ಅನಂತರ ಆತ್ಮಿಕವಾದದ್ದು.
1 ಕೊರಿಂಥದವರಿಗೆ 15 : 47 (OCVKN)
ಮೊದಲನೆಯ ಮನುಷ್ಯ, ಭೂಮಿಯ ಮಣ್ಣಿನವನಾಗಿದ್ದಾನೆ, ಎರಡನೆಯ ಮನುಷ್ಯನು ಪರಲೋಕದಿಂದ ಬಂದವನು.
1 ಕೊರಿಂಥದವರಿಗೆ 15 : 48 (OCVKN)
ಮಣ್ಣಿನ ಮನುಷ್ಯನು ಎಂಥವನೋ, ಮಣ್ಣಿಗೆ ಸೇರಿದವರೂ ಅಂಥವರೇ. ಪರಲೋಕದ ಮನುಷ್ಯನು ಎಂಥವನೋ, ಪರಲೋಕಕ್ಕೆ ಸಂಬಂಧಿಸಿದವರೂ ಅಂಥವರಾಗಿರುವರು.
1 ಕೊರಿಂಥದವರಿಗೆ 15 : 49 (OCVKN)
ನಾವು ಮಣ್ಣಿನ ಮನುಷ್ಯನ ಸಾರೂಪ್ಯವನ್ನು ಧರಿಸಿಕೊಂಡಿರುವ ಪ್ರಕಾರ, ಪರಲೋಕದ ಮನುಷ್ಯನ ಸಾರೂಪ್ಯವನ್ನೂ ಧರಿಸಿಕೊಳ್ಳುವೆವು.
1 ಕೊರಿಂಥದವರಿಗೆ 15 : 50 (OCVKN)
ಪ್ರಿಯರೇ, ನಾನು ಹೇಳುವುದೇನೆಂದರೆ, ರಕ್ತಮಾಂಸವು ದೇವರ ರಾಜ್ಯಕ್ಕೆ ಬಾಧ್ಯವಾಗಲಾರವು. ಅಳಿಯುವಂಥದ್ದು ಅಮರತ್ವಕ್ಕೆ ಬಾಧ್ಯವಾಗಲಾರದು.
1 ಕೊರಿಂಥದವರಿಗೆ 15 : 51 (OCVKN)
ನಾನು ರಹಸ್ಯವಾಗಿದ್ದ ಸಂಗತಿಯನ್ನು ನಿಮಗೆ ಹೇಳುತ್ತೇನೆ ಕೇಳಿರಿ: ನಾವೆಲ್ಲರೂ ನಿದ್ರೆ ಹೋಗುವುದಿಲ್ಲ, ನಾವೆಲ್ಲರೂ ರೂಪಾಂತರವಾಗುವೆವು.
1 ಕೊರಿಂಥದವರಿಗೆ 15 : 52 (OCVKN)
ಆದರೆ ಒಂದು ಕ್ಷಣದಲ್ಲೇ, ರೆಪ್ಪೆ ಬಡಿಯುವಷ್ಟರಲ್ಲಿ, ಕಡೇ ತುತೂರಿಯು ಊದಲಾಗುವುದು. ತುತೂರಿ ಧ್ವನಿಯಾಗುವಾಗ, ಸತ್ತವರು ಅಮರತ್ವಪಡೆದು ಎಬ್ಬಿಸಲಾಗುವರು, ನಾವು ರೂಪಾಂತರವಾಗುವೆವು.
1 ಕೊರಿಂಥದವರಿಗೆ 15 : 53 (OCVKN)
ಅಳಿಯುವ ಈ ದೇಹವು ಅಮರತ್ವವನ್ನು ಧರಿಸಿಕೊಳ್ಳುವುದು, ಮರಣಾಧೀನವಾಗಿರುವ ಈ ದೇಹವು ಅಮರತ್ವವನ್ನು ಧರಿಸಿಕೊಳ್ಳುವುದು.
1 ಕೊರಿಂಥದವರಿಗೆ 15 : 54 (OCVKN)
ನಶಿಸಿಹೋಗುವಂಥದ್ದು ನಶಿಸಿಹೋಗದಂಥದ್ದನ್ನೂ, ಮರಣಾಧೀನವಾದ ಈ ದೇಹವು ಅಮರತ್ವವನ್ನೂ ಧರಿಸಿಕೊಳ್ಳುವಾಗ, ಬರೆದಿರುವ ಈ ಮಾತುಗಳು ನೆರವೇರುವುದು: “ಮರಣವು ನುಂಗಿಯೇ ಹೋಯಿತು, ಜಯವಾಯಿತು.”* ಯೆಶಾಯ 25:8
1 ಕೊರಿಂಥದವರಿಗೆ 15 : 55 (OCVKN)
“ಓ ಮರಣವೇ, ನಿನ್ನ ಜಯವು ಎಲ್ಲಿ? ಓ ಮರಣವೇ, ನಿನ್ನ ವಿಷದ ಕೊಂಡಿ ಎಲ್ಲಿ?” ಹೋಶೇ 13:14
1 ಕೊರಿಂಥದವರಿಗೆ 15 : 56 (OCVKN)
56 ಮರಣದ ಕೊಂಡಿ ಪಾಪವೇ ಮತ್ತು ಪಾಪದ ಶಕ್ತಿಯು ನಿಯಮವೇ.
1 ಕೊರಿಂಥದವರಿಗೆ 15 : 57 (OCVKN)
ಆದರೆ ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಮೂಲಕ ನಮಗೆ ಜಯವನ್ನು ಕೊಡುವ ದೇವರಿಗೆ ಸ್ತೋತ್ರ.
1 ಕೊರಿಂಥದವರಿಗೆ 15 : 58 (OCVKN)
ಆದ್ದರಿಂದ, ನನ್ನ ಪ್ರಿಯ ಸಹೋದರರೇ, ಸ್ಥಿರವಾಗಿ ನಿಲ್ಲಿರಿ. ಯಾವುದೂ ನಿಮ್ಮನ್ನು ಕದಲಿಸದಿರಲಿ. ಕರ್ತನಲ್ಲಿ ನಿಮ್ಮ ಪ್ರಯಾಸವು ನಿಷ್ಫಲವಾಗುವುದಿಲ್ಲವೆಂದು ತಿಳಿದು, ಕರ್ತನ ಕೆಲಸಕ್ಕೆ ಯಾವಾಗಲೂ ನಿಮ್ಮನ್ನು ಸಂಪೂರ್ಣವಾಗಿ ಒಪ್ಪಿಸಿಕೊಡಿರಿ.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42 43 44 45 46 47 48 49 50 51 52 53 54 55 56 57 58