1 ಕೊರಿಂಥದವರಿಗೆ 16 : 1 (OCVKN)
ದೇವಜನರಿಗಾಗಿ ಹಣ ಕೂಡಿಸುವುದು ಈಗ ದೇವಜನರಿಗೋಸ್ಕರ ಹಣ ಕೂಡಿಸಿಡುವುದನ್ನು ಕುರಿತು: ನಾನು ಗಲಾತ್ಯದ ಸಭೆಗಳಿಗೆ ಹೇಳಿದ್ದನ್ನೇ ನೀವೂ ಮಾಡಿರಿ.
1 ಕೊರಿಂಥದವರಿಗೆ 16 : 2 (OCVKN)
ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ಆದಾಯಕ್ಕೆ ತಕ್ಕಂತೆ ವಾರದ ಮೊದಲನೆಯ ದಿನದಲ್ಲಿ ಕೂಡಿಟ್ಟುಕೊಂಡಿರಲಿ. ಹೀಗೆ ಮಾಡಿದರೆ, ನಾನು ಬಂದಾಗ ನೀವು ಹಣ ಕೂಡಿಸುವ ಅವಶ್ಯವಿರುವುದಿಲ್ಲ.
1 ಕೊರಿಂಥದವರಿಗೆ 16 : 3 (OCVKN)
ನಾನು ನಿಮ್ಮಲ್ಲಿಗೆ ಬಂದಾಗ, ನೀವು ಯಾರನ್ನು ಅನುಮೋದಿಸುವಿರೋ, ಅವರಿಗೆ ಪತ್ರ ಕೊಟ್ಟು ನಿಮ್ಮ ಕೊಡುಗೆಯನ್ನು ತೆಗೆದುಕೊಂಡು ಯೆರೂಸಲೇಮಿಗೆ ಹೋಗುವಂತೆ ಕಳುಹಿಸುವೆನು.
1 ಕೊರಿಂಥದವರಿಗೆ 16 : 4 (OCVKN)
ನಾನು ಸಹ ಹೋಗುವುದು ಯುಕ್ತವಾಗಿದ್ದರೆ, ಅವರು ನನ್ನೊಂದಿಗೆ ಬರಲಿ.
1 ಕೊರಿಂಥದವರಿಗೆ 16 : 5 (OCVKN)
ವೈಯಕ್ತಿಕ ಬೇಡಿಕೆ ಮಕೆದೋನ್ಯವನ್ನು ದಾಟಿದ ಮೇಲೆ, ಅದೇ ಮಾರ್ಗವಾಗಿ ನಾನು ಪುನಃ ನಿಮ್ಮ ಬಳಿಗೆ ಬರುವೆನು.
1 ಕೊರಿಂಥದವರಿಗೆ 16 : 6 (OCVKN)
ಬಹುಶಃ ನಾನು ಸ್ವಲ್ಪ ಸಮಯ ನಿಮ್ಮೊಂದಿಗೆ ಇದ್ದ ಮೇಲೆ ಅಥವಾ ಚಳಿಗಾಲವನ್ನು ಪೂರ್ತಿಯಾಗಿ ನಿಮ್ಮೊಂದಿಗೆ ಕಳೆಯಲು ಬಯಸುತ್ತೇನೆ. ಹೀಗೆ ನಾನು ಹೋಗಬೇಕಾದ ಸ್ಥಳಗಳಲ್ಲಿ ನೀವು ನನಗೆ ಸಹಾಯ ಮಾಡಬಹುದು.
1 ಕೊರಿಂಥದವರಿಗೆ 16 : 7 (OCVKN)
ನಾನು ಹಾದುಹೋಗುವಾಗ, ನಿಮ್ಮನ್ನು ಸ್ವಲ್ಪ ಸಮಯ ಮಾತ್ರ ಸಂದರ್ಶಿಸುವುದಕ್ಕೆ ನನಗೆ ಇಷ್ಟವಿಲ್ಲ. ಕರ್ತನು ಅನುಮತಿಸಿದರೆ, ನಿಮ್ಮ ಬಳಿಯಲ್ಲಿ ಬಂದು ಹೆಚ್ಚುಕಾಲ ಇರುವೆನೆಂದು ನಿರೀಕ್ಷಿಸುತ್ತೇನೆ.
1 ಕೊರಿಂಥದವರಿಗೆ 16 : 8 (OCVKN)
ಆದರೆ ಐವತ್ತು ದಿನಗಳ ಹಬ್ಬದ* ಪಸ್ಕಹಬ್ಬ ಆಚರಿಸಿದ ಐವತ್ತು ದಿನಗಳ ನಂತರ ಬರುತ್ತಿದ್ದ ಯೆಹೂದ್ಯರ ಹಬ್ಬ ತನಕ ಎಫೆಸದಲ್ಲಿರುವೆನು.
1 ಕೊರಿಂಥದವರಿಗೆ 16 : 9 (OCVKN)
ಏಕೆಂದರೆ, ಪರಿಣಾಮಕಾರಿಯಾದ ಸೇವೆಗೆ ದೊಡ್ಡದಾಗಿ ಬಾಗಿಲು ನನಗೆ ತೆರೆದಿದೆ, ಬಹಳ ಜನ ವಿರೋಧಿಗಳೂ ಇದ್ದಾರೆ.
1 ಕೊರಿಂಥದವರಿಗೆ 16 : 10 (OCVKN)
ನನ್ನ ಹಾಗೆಯೇ ತಿಮೊಥೆ ಕರ್ತನ ಸೇವೆ ಮಾಡುತ್ತಿದ್ದಾನೆ. ಅವನು ಬಂದರೆ, ಅವನು ನಿಮ್ಮೊಂದಿಗಿರುವಾಗ ಅವನಿಗೆ ಯಾವ ಭಯವೂ ಇಲ್ಲದಂತೆ ನೋಡಿಕೊಳ್ಳಿರಿ.
1 ಕೊರಿಂಥದವರಿಗೆ 16 : 11 (OCVKN)
ಯಾರೂ ಅವನನ್ನು ಹೀನಾಯವಾಗಿ ಕಾಣಬಾರದು. ಆದರೆ ಅವನು ನನ್ನ ಬಳಿಗೆ ಬರುವಂತೆ ಅವನನ್ನು ಸಮಾಧಾನದಿಂದ ಕಳುಹಿಸಿಕೊಡಿರಿ. ಅವನು ಸಹೋದರರೊಂದಿಗೆ ಬರುವುದನ್ನು ಎದುರು ನೋಡುತ್ತಿದ್ದೇನೆ.
1 ಕೊರಿಂಥದವರಿಗೆ 16 : 12 (OCVKN)
1 ಕೊರಿಂಥದವರಿಗೆ 16 : 13 (OCVKN)
ಈಗ ನಮ್ಮ ಸಹೋದರನಾದ ಅಪೊಲ್ಲೋಸನ ವಿಷಯವೇನೆಂದರೆ, ಅವನು ಇತರ ಸಹೋದರರೊಂದಿಗೆ ನಿಮ್ಮ ಬಳಿಗೆ ಬರಬೇಕೆಂದು ಅವನಿಗೆ ಬಹಳವಾಗಿ ಕೇಳಿಕೊಂಡೆನು. ಆದರೆ ಈಗ ಬರುವುದಕ್ಕೆ ಅವನಿಗೆ ಸ್ವಲ್ಪವೂ ಮನಸ್ಸಿಲ್ಲ. ಅವನು ತನಗೆ ಸಂದರ್ಭ ಸಿಕ್ಕಿದಾಗ ಬರುವನು. ಎಚ್ಚರವಾಗಿರಿ, ವಿಶ್ವಾಸದಲ್ಲಿ ಸ್ಥಿರವಾಗಿ ನಿಲ್ಲಿರಿ, ಧೈರ್ಯವಾಗಿರಿ, ಬಲಗೊಳ್ಳಿರಿ.
1 ಕೊರಿಂಥದವರಿಗೆ 16 : 14 (OCVKN)
ನೀವು ಮಾಡುವುದನ್ನೆಲ್ಲಾ ಪ್ರೀತಿಯಿಂದ ಮಾಡಿರಿ.
1 ಕೊರಿಂಥದವರಿಗೆ 16 : 15 (OCVKN)
ಸ್ತೆಫನನ ಕುಟುಂಬದವರು ಅಖಾಯದಲ್ಲಿ ಪ್ರಥಮವಾಗಿ ವಿಶ್ವಾಸಿಗಳಾದವರು† ಮೂಲ, ಪ್ರಥಮವಾಗಿ ಫಲವಾದವರು ಎಂಬುದನ್ನು ನೀವು ಬಲ್ಲಿರಿ. ಅವರು ದೇವಜನರಿಗೆ ಸೇವೆ ಮಾಡುವುದಕ್ಕಾಗಿ ತಮ್ಮನ್ನೇ ಸಮರ್ಪಿಸಿಕೊಂಡವರಾಗಿದ್ದಾರೆ.
1 ಕೊರಿಂಥದವರಿಗೆ 16 : 16 (OCVKN)
ಪ್ರಿಯರೇ, ನೀವು ಇಂಥವರಿಗೂ ಈ ಸೇವೆಯಲ್ಲಿ ಅವರೊಂದಿಗೆ ಪ್ರಯಾಸಪಡುವವರಿಗೂ ವಿಧೇಯರಾಗಿರಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.
1 ಕೊರಿಂಥದವರಿಗೆ 16 : 17 (OCVKN)
ಸ್ತೆಫನನೂ ಫೊರ್ತುನಾತನೂ ಅಖಾಯಿಕನೂ ಬಂದುದರಿಂದ ನನಗೆ ಸಂತೋಷವಾಯಿತು. ನೀವಿಲ್ಲದ್ದ ಕೊರತೆಯನ್ನು ಅವರು ನನಗೆ ಒದಗಿಸಿದ್ದಾರೆ.
1 ಕೊರಿಂಥದವರಿಗೆ 16 : 18 (OCVKN)
ಅವರು ನನ್ನ ಆತ್ಮವನ್ನೂ, ನಿಮ್ಮ ಆತ್ಮಗಳನ್ನೂ ಉಪಶಮನ ಮಾಡಿದರು. ನೀವು ಇಂಥವರನ್ನು ಸನ್ಮಾನಿಸಿರಿ.
1 ಕೊರಿಂಥದವರಿಗೆ 16 : 19 (OCVKN)
1 ಕೊರಿಂಥದವರಿಗೆ 16 : 20 (OCVKN)
ಏಷ್ಯಾದ ಸೀಮೆಯ‡ ನವೀನ ಕಾಲದ ಪಶ್ಚಿಮ ತುರ್ಕಿ ಸಭೆಗಳವರು ನಿಮ್ಮನ್ನು ವಂದಿಸುತ್ತಾರೆ. ಅಕ್ವಿಲನೂ ಮತ್ತು ಪ್ರಿಸ್ಕಳೂ ತಮ್ಮ ಮನೆಯಲ್ಲಿ ಕೂಡುವ ಸಭೆಯವರೊಂದಿಗೆ ಕರ್ತನ ಹೆಸರಿನಲ್ಲಿ ನಿಮ್ಮನ್ನು ಹೃದಯಪೂರ್ವಕವಾಗಿ ವಂದಿಸುತ್ತಾರೆ. ಸಹೋದರರೆಲ್ಲರೂ ನಿಮ್ಮನ್ನು ವಂದಿಸುತ್ತಾರೆ. ಪವಿತ್ರವಾದ ಮುದ್ದಿಟ್ಟು, ಒಬ್ಬರನ್ನೊಬ್ಬರು ವಂದಿಸಿರಿ.
1 ಕೊರಿಂಥದವರಿಗೆ 16 : 21 (OCVKN)
ಪೌಲನೆಂಬ ನಾನು, ಸ್ವಂತ ಕೈಯಿಂದ ಈ ವಂದನೆಯನ್ನು ಬರೆದಿದ್ದೇನೆ.
1 ಕೊರಿಂಥದವರಿಗೆ 16 : 22 (OCVKN)
ಯಾವನಾದರೂ ಕರ್ತನನ್ನು ಪ್ರೀತಿಸದಿದ್ದರೆ, ಅವನು ಶಾಪಗ್ರಸ್ತನಾಗಲಿ! ಕರ್ತನೇ, ಬಾ!
1 ಕೊರಿಂಥದವರಿಗೆ 16 : 23 (OCVKN)
ಕರ್ತ ಆಗಿರುವ ಯೇಸುಕ್ರಿಸ್ತರ ಕೃಪೆಯು ನಿಮ್ಮೊಂದಿಗಿರಲಿ.
1 ಕೊರಿಂಥದವರಿಗೆ 16 : 24 (OCVKN)
ಕ್ರಿಸ್ತ ಯೇಸುವಿನಲ್ಲಿ ನನ್ನ ಪ್ರೀತಿಯು ನಿಮ್ಮೆಲ್ಲರೊಂದಿಗೆ ಇದೆ. ಆಮೆನ್.
❮
❯
1
2
3
4
5
6
7
8
9
10
11
12
13
14
15
16
17
18
19
20
21
22
23
24