1 ಕೊರಿಂಥದವರಿಗೆ 3 : 1 (OCVKN)
ಸಭೆಯೊಳಗಿದ್ದ ಪಕ್ಷಭೇದಗಳು ಪ್ರಿಯರೇ, ನೀವು ದೇವರಾತ್ಮರಿಗೆ ತಕ್ಕಂತೆ ಬಾಳುವವರಾಗಿ ನಾನು ನಿಮ್ಮ ಸಂಗಡ ಮಾತನಾಡುತ್ತಾ ಇಲ್ಲ. ನೀವು ಇನ್ನೂ ಕ್ರಿಸ್ತ ಯೇಸುವಿನಲ್ಲಿ ಕೂಸುಗಳೂ ಪ್ರಾಪಂಚಿಕರೂ* ಮೂಲಭಾಷೆಯಲ್ಲಿ ದೈಹಿಕರು ಆಗಿರುವಿರೆಂದು ಭಾವಿಸಿ ನಿಮ್ಮ ಸಂಗಡ ಮಾತನಾಡಬೇಕಾಯಿತು.
1 ಕೊರಿಂಥದವರಿಗೆ 3 : 2 (OCVKN)
ನಾನು ನಿಮಗೆ ಹಾಲು ಕೊಟ್ಟೆನು. ಗಟ್ಟಿ ಆಹಾರವನ್ನು ಕೊಡಲಿಲ್ಲ, ಏಕೆಂದರೆ ನಿಮಗೆ ಶಕ್ತಿ ಇರಲಿಲ್ಲ, ಈಗಲಾದರೂ ನಿಮಗೆ ಶಕ್ತಿಯಿಲ್ಲ.
1 ಕೊರಿಂಥದವರಿಗೆ 3 : 3 (OCVKN)
ಏಕೆಂದರೆ ನೀವು ಇನ್ನೂ ಪ್ರಾಪಂಚಿಕರಾಗಿದ್ದೀರಿ. ಹೇಗೆಂದರೆ, ನಿಮ್ಮೊಳಗೆ ಅಸೂಯೆ, ಜಗಳಗಳು ಇರುವಲ್ಲಿ ನೀವು ಪ್ರಾಪಂಚಿಕರಾಗಿದ್ದೀರಲ್ಲದೆ ಕೇವಲ ಮಾನವರಂತೆ ನಡೆಯುತ್ತೀರಲ್ಲವೇ?
1 ಕೊರಿಂಥದವರಿಗೆ 3 : 4 (OCVKN)
ಒಬ್ಬನು, “ನಾನು ಪೌಲನವನು,” ಎಂದು ಮತ್ತೊಬ್ಬನು, “ನಾನು ಅಪೊಲ್ಲೋಸನವನು,” ಎಂದೂ ಹೇಳುತ್ತಿರುವಾಗ, ನೀವು ಕೇವಲ ಮಾನವರಂತೆ ಆಗಿದ್ದೀರಲ್ಲವೇ?
1 ಕೊರಿಂಥದವರಿಗೆ 3 : 5 (OCVKN)
ಹಾಗಾದರೆ, ಅಪೊಲ್ಲೋಸನು ಯಾರು? ಪೌಲನು ಯಾರು? ಅವನವನಿಗೆ ಕರ್ತದೇವರು ನೇಮಿಸಿದ ಕಾರ್ಯದ ಪ್ರಕಾರ ಅವರವರ ಮುಖಾಂತರ ನೀವು ನಂಬಿದ್ದೀರಿ. ಅವರು ಕೇವಲ ಸೇವಕರಾಗಿದ್ದಾರೆ.
1 ಕೊರಿಂಥದವರಿಗೆ 3 : 6 (OCVKN)
ನಾನು ಬೀಜವನ್ನು ಬಿತ್ತಿದೆನು, ಅಪೊಲ್ಲೋಸನು ನೀರು ಹಾಕಿದನು, ಆದರೆ ಬೆಳೆಸಿದವರು ದೇವರೇ.
1 ಕೊರಿಂಥದವರಿಗೆ 3 : 7 (OCVKN)
ಹೀಗಿರಲಾಗಿ ನೆಡುವವನಾಗಲಿ, ನೀರು ಹಾಕುವವನಾಗಲಿ ಪ್ರಾಮುಖ್ಯರಾಗಿರದೆ, ಬೆಳೆಸುವ ದೇವರೇ ಬಹು ಪ್ರಾಮುಖ್ಯವಾದವರು.
1 ಕೊರಿಂಥದವರಿಗೆ 3 : 8 (OCVKN)
ನೆಡುವವನೂ ನೀರು ಹಾಕುವವನೂ ಒಂದೇ ಉದ್ದೇಶವುಳ್ಳವರಾಗಿರುತ್ತಾರೆ. ಪ್ರತಿಯೊಬ್ಬನಿಗೆ ಅವನವನ ಶ್ರಮಕ್ಕೆ ತಕ್ಕಂತೆ ಪ್ರತಿಫಲ ದೊರೆಯುವುದು.
1 ಕೊರಿಂಥದವರಿಗೆ 3 : 9 (OCVKN)
ನಾವು ದೇವರ ಜೊತೆಕೆಲಸದವರು. ನೀವು ದೇವರ ಹೊಲವೂ ದೇವರ ಕಟ್ಟಡವೂ ಆಗಿದ್ದೀರಿ.
1 ಕೊರಿಂಥದವರಿಗೆ 3 : 10 (OCVKN)
ದೇವರು ನನಗೆ ಕೊಟ್ಟ ಕೃಪೆಗೆ ಅನುಸಾರವಾಗಿ, ನಾನು ಜ್ಞಾನಿಯಾದ ಶಿಲ್ಪಿಯಂತೆ ಅಸ್ತಿವಾರ ಹಾಕಿದೆನು. ಮತ್ತೊಬ್ಬನು ಅದರ ಮೇಲೆ ಕಟ್ಟುತ್ತಾನೆ. ಆದರೆ ಪ್ರತಿಯೊಬ್ಬನೂ ತಾನು ಅದರ ಮೇಲೆ ಎಷ್ಟು ಶ್ರದ್ಧೆಯಿಂದ ಕಟ್ಟುತ್ತಾನೆಂದು ನೋಡಿಕೊಳ್ಳಬೇಕು.
1 ಕೊರಿಂಥದವರಿಗೆ 3 : 11 (OCVKN)
ಕ್ರಿಸ್ತ ಯೇಸುವೆಂಬ ಆ ಅಸ್ತಿವಾರವನ್ನಲ್ಲದೆ ಮತ್ತೊಂದು ಅಸ್ತಿವಾರವನ್ನು ಯಾರೂ ಹಾಕಲಾರರಷ್ಟೆ.
1 ಕೊರಿಂಥದವರಿಗೆ 3 : 12 (OCVKN)
ಯಾವನಾದರೂ ಆ ಅಸ್ತಿವಾರದ ಮೇಲೆ ಚಿನ್ನ, ಬೆಳ್ಳಿ, ರತ್ನ, ಕಟ್ಟಿಗೆ, ಹುಲ್ಲು ಅಥವಾ ಜೊಂಡು ಮುಂತಾದವುಗಳಿಂದ ಕಟ್ಟಿದರೆ,
1 ಕೊರಿಂಥದವರಿಗೆ 3 : 13 (OCVKN)
ಕ್ರಿಸ್ತ ಯೇಸುವಿನ ದಿನವು ಇದನ್ನು ಬಹಿರಂಗಕ್ಕೆ ತರುವಾಗ, ಅವನವನ ಕೆಲಸವು ಏನಾಗಿರುವುದೆಂಬುದು ವ್ಯಕ್ತವಾಗುವುದು. ಏಕೆಂದರೆ ಅದು ಬೆಂಕಿಯಿಂದ ಪ್ರಕಟವಾಗುವುದು. ಪ್ರತಿಯೊಬ್ಬನ ಕೆಲಸದ ಯೋಗ್ಯತೆಯನ್ನು ಬೆಂಕಿಯೇ ಪರೀಕ್ಷಿಸುವುದು.
1 ಕೊರಿಂಥದವರಿಗೆ 3 : 14 (OCVKN)
ಒಬ್ಬನು ಆ ಅಸ್ತಿವಾರದ ಮೇಲೆ ಕಟ್ಟಿದ್ದು ಬೆಂಕಿಯಿಂದ ತಪ್ಪಿಸಿಕೊಂಡು ಉಳಿದರೆ, ಅವನಿಗೆ ಪ್ರತಿಫಲ ಸಿಕ್ಕುವುದು.
1 ಕೊರಿಂಥದವರಿಗೆ 3 : 15 (OCVKN)
ಒಬ್ಬನು ಕಟ್ಟಿದ್ದು ಸುಟ್ಟು ಹೋದರೆ, ಅವನಿಗೆ ನಷ್ಟವಾಗುವುದು, ಅವನಾದರೋ ರಕ್ಷಣೆಹೊಂದುವನು. ಆದರೆ ಬೆಂಕಿಯ ಜ್ವಾಲೆಗಳಿಂದ ತಪ್ಪಿಸಿಕೊಂಡವನ ಹಾಗಿರುವನು.
1 ಕೊರಿಂಥದವರಿಗೆ 3 : 16 (OCVKN)
ನೀವು ದೇವರ ಆಲಯವಾಗಿದ್ದೀರೆಂಬುದೂ ದೇವರ ಆತ್ಮ ನಿಮ್ಮಲ್ಲಿ ವಾಸ ಮಾಡುತ್ತಾರೆಂಬುದೂ ನಿಮಗೆ ಗೊತ್ತಿಲ್ಲವೋ?
1 ಕೊರಿಂಥದವರಿಗೆ 3 : 17 (OCVKN)
ಯಾರಾದರೂ ದೇವರ ಆಲಯವನ್ನು ನಾಶಪಡಿಸಿದರೆ, ದೇವರು ಅವರನ್ನು ನಾಶಪಡಿಸುವರು. ಏಕೆಂದರೆ ದೇವರ ಆಲಯವು ಪವಿತ್ರವಾದದ್ದು, ಆ ಆಲಯವು ನೀವೇ.
1 ಕೊರಿಂಥದವರಿಗೆ 3 : 18 (OCVKN)
ನಿಮ್ಮನ್ನು ನೀವೇ ಮೋಸಪಡಿಸಿಕೊಳ್ಳಬೇಡಿರಿ. ನಿಮ್ಮಲ್ಲಿ ಯಾರಾದರೂ ಇಹಲೋಕ ದೃಷ್ಟಿಯಲ್ಲಿ ತಾನು ಜಾಣನೆಂದು ಭಾವಿಸಿಕೊಂಡರೆ, ಅಂಥವನು ಜ್ಞಾನಿಯಾಗುವಂತೆ ಮೂರ್ಖನಾಗಲಿ.
1 ಕೊರಿಂಥದವರಿಗೆ 3 : 19 (OCVKN)
ಏಕೆಂದರೆ ಇಹಲೋಕ ಜ್ಞಾನವು ದೇವರ ದೃಷ್ಟಿಯಲ್ಲಿ ಮೂರ್ಖತನವಾಗಿದೆ, ಪವಿತ್ರ ವೇದದಲ್ಲಿ ಬರೆದಿರುವ ಪ್ರಕಾರ, “ದೇವರು ಜ್ಞಾನಿಗಳನ್ನು ಅವರ ಯುಕ್ತಿಯಲ್ಲಿಯೇ ಹಿಡಿಯುವರು,” ಯೋಬ 5:13 ಎಂದೂ
1 ಕೊರಿಂಥದವರಿಗೆ 3 : 20 (OCVKN)
“ಜ್ಞಾನಿಗಳ ಯೋಚನೆಗಳು ವ್ಯರ್ಥವಾದವುಗಳೆಂದು ಕರ್ತದೇವರು ತಿಳಿದುಕೊಳ್ಳುತ್ತಾರೆ,” ಕೀರ್ತನೆ 94:11 ಎಂದೂ ಬರೆದಿದೆಯಲ್ಲಾ.
1 ಕೊರಿಂಥದವರಿಗೆ 3 : 21 (OCVKN)
ಆದಕಾರಣ ಇನ್ನು ಮೇಲೆ ನಾಯಕರ ಬಗ್ಗೆ ಯಾರೂ ಹೊಗಳುವುದು ಬೇಡ! ಏಕೆಂದರೆ ಸಮಸ್ತವೂ ನಿಮ್ಮದು.
1 ಕೊರಿಂಥದವರಿಗೆ 3 : 22 (OCVKN)
ಪೌಲನಾಗಲಿ, ಅಪೊಲ್ಲೋಸನಾಗಲಿ, ಕೇಫನಾಗಲಿ,§ ಅರಾಮಿಕ್ ಭಾಷೆಯಲ್ಲಿ ಪೇತ್ರನ ಹೆಸರು ಲೋಕವಾಗಲಿ, ಜೀವವಾಗಲಿ, ಮರಣವಾಗಲಿ, ವರ್ತಮಾನದ ಸಂಗತಿಗಳಾಗಲಿ, ಭವಿಷ್ಯತ್ಕಾಲದ ಸಂಗತಿಗಳಾಗಲಿ ಸಮಸ್ತವೂ ನಿಮ್ಮವೇ.
1 ಕೊರಿಂಥದವರಿಗೆ 3 : 23 (OCVKN)
ನೀವು ಕ್ರಿಸ್ತ ಯೇಸುವಿನವರು, ಕ್ರಿಸ್ತ ಯೇಸು ದೇವರವರು.

1 2 3 4 5 6 7 8 9 10 11 12 13 14 15 16 17 18 19 20 21 22 23