1 ಕೊರಿಂಥದವರಿಗೆ 7 : 1 (OCVKN)
ವಿವಾಹ ನೀವು ಬರೆದ ಸಂಗತಿಗಳನ್ನು ಕುರಿತಾಗಿ ಹೇಳುವುದೇನೆಂದರೆ, “ಸ್ತ್ರೀಸಂಪರ್ಕವಿಲ್ಲದೆ ಇರುವುದು ಮನುಷ್ಯನಿಗೆ ಒಳ್ಳೆಯದು.”
1 ಕೊರಿಂಥದವರಿಗೆ 7 : 2 (OCVKN)
ಆದರೆ ಲೈಂಗಿಕ ಅನೈತಿಕತೆ ಹೆಚ್ಚಾಗಿರುವುದರಿಂದ, ಪ್ರತಿಯೊಬ್ಬನಿಗೆ ಸ್ವಂತ ಹೆಂಡತಿ ಇರಲಿ, ಪ್ರತಿಯೊಬ್ಬಳಿಗೆ ಸ್ವಂತ ಗಂಡನಿರಲಿ.
1 ಕೊರಿಂಥದವರಿಗೆ 7 : 3 (OCVKN)
ಗಂಡನು ಹೆಂಡತಿಗೆ, ಹೆಂಡತಿಯು ಗಂಡನಿಗೆ ದಾಂಪತ್ಯ ಧರ್ಮ ಪೂರೈಸಲಿ.
1 ಕೊರಿಂಥದವರಿಗೆ 7 : 4 (OCVKN)
ಹೆಂಡತಿಯ ಸ್ವಂತ ದೇಹದ ಮೇಲೆ ಆಕೆಗೆ ಅಧಿಕಾರವಿಲ್ಲ, ಅದು ಗಂಡನಿಗಿದೆ. ಹಾಗೆಯೇ, ಗಂಡನ ಸ್ವಂತ ದೇಹದ ಮೇಲೆ ಅವನಿಗೆ ಅಧಿಕಾರವಿಲ್ಲ, ಅದು ಅವನ ಹೆಂಡತಿಗಿದೆ.
1 ಕೊರಿಂಥದವರಿಗೆ 7 : 5 (OCVKN)
ಗಂಡ ಹೆಂಡತಿ ಪರಸ್ಪರ ಸಮ್ಮತಿಯಿಂದ ಸ್ವಲ್ಪಕಾಲ ಪ್ರಾರ್ಥನೆಗಾಗಿ ಅಗಲಿರಬಹುದಷ್ಟೇ. ಇಲ್ಲದಿದ್ದರೆ, ಸೈತಾನನು ನಿಮ್ಮ ಸಂಯಮ ಇಲ್ಲದಿರುವುದನ್ನು ನೋಡಿ ನಿಮ್ಮನ್ನು ಶೋಧಿಸದಂತೆ ಒಂದುಗೂಡಬೇಕು.
1 ಕೊರಿಂಥದವರಿಗೆ 7 : 6 (OCVKN)
ಹೀಗೆ ನಾನು ಹೇಳುವುದು ಸಲಹೆಯೇ ಹೊರತು ಆಜ್ಞೆಯಲ್ಲ.
1 ಕೊರಿಂಥದವರಿಗೆ 7 : 7 (OCVKN)
ನಾನಿರುವಂತೆಯೇ ಎಲ್ಲಾ ಮನುಷ್ಯರು ಇರಬೇಕೆಂಬುದು ನನ್ನ ಇಷ್ಟ. ಆದರೆ ಒಬ್ಬರು ಒಂದು ವಿಧವಾಗಿಯೂ ಮತ್ತೊಬ್ಬರು ಇನ್ನೊಂದು ವಿಧವಾಗಿಯೂ ಸ್ವಂತ ವರವನ್ನು ದೇವರಿಂದ ಪಡೆದುಕೊಂಡಿರುತ್ತಾರೆ.
1 ಕೊರಿಂಥದವರಿಗೆ 7 : 8 (OCVKN)
ಮದುವೆಯಾಗದವರಿಗೂ ವಿಧವೆಯರಿಗೂ ನಾನು ಹೇಳುವುದೇನೆಂದರೆ: ನಾನಿರುವಂತೆಯೇ ಮದುವೆಯಾಗದೇ ಇರುವುದು ಅವರಿಗೆ ಒಳ್ಳೆಯದು.
1 ಕೊರಿಂಥದವರಿಗೆ 7 : 9 (OCVKN)
ಅವರಿಗೆ ಸ್ವಯಂನಿಯಂತ್ರಣ ಇಲ್ಲದಿದ್ದರೆ, ಮದುವೆಮಾಡಿಕೊಳ್ಳಲಿ, ಕಾಮದಾಶೆ ಪಡುವುದಕ್ಕಿಂತ ಮದುವೆ ಮಾಡಿಕೊಳ್ಳುವುದು ಉತ್ತಮ.
1 ಕೊರಿಂಥದವರಿಗೆ 7 : 10 (OCVKN)
ಮದುವೆ ಮಾಡಿಕೊಂಡಿರುವವರಿಗೆ ನನ್ನ ಅಪ್ಪಣೆ ಅಲ್ಲ, ನಿಜವಾಗಿ ಕರ್ತದೇವರ ಅಪ್ಪಣೆಯಾಗಿದೆ: ಏನೆಂದರೆ, ಹೆಂಡತಿಯು ಗಂಡನನ್ನು ಬಿಟ್ಟು ಅಗಲಬಾರದು.
1 ಕೊರಿಂಥದವರಿಗೆ 7 : 11 (OCVKN)
ಒಂದು ವೇಳೆ ಅಗಲಿದರೆ ಆಕೆಯು ಮದುವೆಯಿಲ್ಲದೆ ಇರಬೇಕು. ಇಲ್ಲವೆ ಗಂಡನ ಸಂಗಡ ಸಂಧಾನವಾಗಬೇಕು ಮತ್ತು ಗಂಡನು ಹೆಂಡತಿಯನ್ನು ಬಿಟ್ಟುಬಿಡಬಾರದು.
1 ಕೊರಿಂಥದವರಿಗೆ 7 : 12 (OCVKN)
ಉಳಿದವರಿಗೆ ಕರ್ತ ದೇವರಿಂದ ಮಾತು ಇಲ್ಲವಾದರೂ ನಾನು ಹೇಳುವುದೇನೆಂದರೆ: ಒಬ್ಬ ಸಹೋದರನಿಗೆ ಕ್ರೈಸ್ತ ವಿಶ್ವಾಸಿಯಲ್ಲದ ಹೆಂಡತಿಯಿರಲಾಗಿ, ಆಕೆ ಅವನೊಂದಿಗೆ ಬಾಳುವುದಕ್ಕೆ ಸಮ್ಮತಿಸಿದರೆ, ಅವನು ಆಕೆಯನ್ನು ಬಿಡದಿರಲಿ.
1 ಕೊರಿಂಥದವರಿಗೆ 7 : 13 (OCVKN)
ಒಬ್ಬ ಸ್ತ್ರೀಗೆ ಅವಿಶ್ವಾಸಿಯಾದ ಗಂಡನಿರಲಾಗಿ ಅವನು ಆಕೆಯೊಂದಿಗೆ ಬಾಳುವುದಕ್ಕೆ ಸಮ್ಮತಿಸಿದರೆ, ಆಕೆಯು ಅವನನ್ನು ಬಿಡದಿರಲಿ.
1 ಕೊರಿಂಥದವರಿಗೆ 7 : 14 (OCVKN)
ಏಕೆಂದರೆ, ಅವಿಶ್ವಾಸಿಯಾದ ಗಂಡನು ವಿಶ್ವಾಸಿಯಾದ ತನ್ನ ಹೆಂಡತಿಯಿಂದ ಮತ್ತು ಅವಿಶ್ವಾಸಿಯಾದ ಹೆಂಡತಿಯು ವಿಶ್ವಾಸಿಯಾದ ತನ್ನ ಗಂಡನಿಂದ ದೇವಜನರೊಂದಿಗೆ ಸಂಬಂಧವುಳ್ಳವರಾಗಿದ್ದಾರೆ. ಹಾಗಲ್ಲದಿದ್ದರೆ, ನಿಮ್ಮ ಮಕ್ಕಳು ಅಪವಿತ್ರರಾಗುತ್ತಿದ್ದರು. ಈಗಲಾದರೋ ಅವರು ದೇವರಿಗಾಗಿ ಪವಿತ್ರರಾಗಿದ್ದಾರೆ.
1 ಕೊರಿಂಥದವರಿಗೆ 7 : 15 (OCVKN)
ಆದರೆ ಅವಿಶ್ವಾಸಿಯಾದವರು ಅಗಲಬೇಕೆಂದಿದ್ದರೆ ಅಗಲಿ ಹೋಗಲಿ. ಇಂಥಾ ವಿಷಯಗಳಲ್ಲಿ ವಿಶ್ವಾಸಿಯಾದ ಸಹೋದರನಾಗಲೀ, ಸಹೋದರಿಯಾಗಲೀ ಬದ್ಧರಲ್ಲ. ಸಮಾಧಾನದಲ್ಲಿ ಬಾಳುವುದಕ್ಕೆ ದೇವರು ನಮ್ಮನ್ನು ಕರೆದಿದ್ದಾರೆ.
1 ಕೊರಿಂಥದವರಿಗೆ 7 : 16 (OCVKN)
ಸ್ತ್ರೀಯೇ, ನಿನ್ನ ಗಂಡನನ್ನು ರಕ್ಷಿಸುವಿಯೋ ಏನೋ ನಿನಗೇನು ಗೊತ್ತು? ಪುರುಷನೇ, ನಿನ್ನ ಹೆಂಡತಿಯನ್ನು ರಕ್ಷಿಸುವೆಯೋ ಏನೋ ನಿನಗೇನು ಗೊತ್ತು?
1 ಕೊರಿಂಥದವರಿಗೆ 7 : 17 (OCVKN)
ನಿಮ್ಮ ಕರೆಯುವಿಕೆಯ ಸನ್ನಿವೇಶಗಳು ಆದರೂ ಕರ್ತದೇವರು ಪ್ರತಿಯೊಬ್ಬನಿಗೆ ನೇಮಿಸಿದಂತೆಯೂ ದೇವರು ಪ್ರತಿಯೊಬ್ಬನನ್ನು ಕರೆದಂತೆಯೂ ನಡೆದುಕೊಳ್ಳಲಿ. ಎಲ್ಲಾ ಸಭೆಗಳಲ್ಲಿಯೂ ಇರಬೇಕೆಂದು ನಾನು ಕೊಡುವ ನಿಯಮವು ಇದೇ.
1 ಕೊರಿಂಥದವರಿಗೆ 7 : 18 (OCVKN)
ಸುನ್ನತಿ ಮಾಡಿಸಿಕೊಂಡವನು ದೇವರ ಕರೆಹೊಂದಿದ್ದರೆ, ಅವನು ಸುನ್ನತಿಯಿಲ್ಲದವನಂತೆ ಇರಬಾರದು. ಸುನ್ನತಿ ಮಾಡಿಸಿಕೊಳ್ಳದವನು ದೇವರ ಕರೆಹೊಂದಿದ್ದರೆ, ಅವನು ಸುನ್ನತಿ ಮಾಡಿಸಿಕೊಳ್ಳಬೇಕಾಗಿಲ್ಲ.
1 ಕೊರಿಂಥದವರಿಗೆ 7 : 19 (OCVKN)
ಸುನ್ನತಿಯಿದ್ದರೂ ಪ್ರಯೋಜನವಿಲ್ಲ, ಸುನ್ನತಿಯಿಲ್ಲದಿದ್ದರೂ ಪ್ರಯೋಜನವಿಲ್ಲ. ದೇವರ ಆಜ್ಞೆಗಳನ್ನು ಕೈಗೊಳ್ಳುವುದೇ ಪ್ರಯೋಜನಕರ.
1 ಕೊರಿಂಥದವರಿಗೆ 7 : 20 (OCVKN)
ಪ್ರತಿಯೊಬ್ಬನು ದೇವರು ಕರೆದಾಗ, ಯಾವ ಸ್ಥಿತಿಯಲ್ಲಿದ್ದನೋ ಆ ಸ್ಥಿತಿಯಲ್ಲಿಯೇ ಇರಲಿ.
1 ಕೊರಿಂಥದವರಿಗೆ 7 : 21 (OCVKN)
ದೇವರು ಕರೆದಾಗ ನೀನು ಮತ್ತೊಬ್ಬನ ದಾಸನಾಗಿದ್ದೀಯೋ? ಅದಕ್ಕೆ ಚಿಂತೆ ಮಾಡಬೇಡ. ಆದರೆ ಬಿಡುಗಡೆಯಾಗುವುದಕ್ಕೆ ನೀನು ಶಕ್ತನಾದರೆ ಅದನ್ನೇ ಮಾಡು.
1 ಕೊರಿಂಥದವರಿಗೆ 7 : 22 (OCVKN)
ದೇವರು ಕರೆದಾಗ ಒಬ್ಬನು ದಾಸನಾಗಿದ್ದರೂ, ಅವನು ಕರ್ತ ದೇವರಲ್ಲಿ ಸ್ವತಂತ್ರನು. ಅದೇ ಪ್ರಕಾರ, ಒಬ್ಬನು ಸ್ವತಂತ್ರನಾಗಿದ್ದಾಗ ಕರ್ತದೇವರ ಕರೆಹೊಂದಿದ್ದರೆ, ಅವನು ಕ್ರಿಸ್ತನಿಗೆ ದಾಸನು.
1 ಕೊರಿಂಥದವರಿಗೆ 7 : 23 (OCVKN)
ನಿಮ್ಮನ್ನು ಕ್ರಯಕ್ಕೆ ಕೊಳ್ಳಲಾಗಿದೆ. ಆದ್ದರಿಂದ ಮನುಷ್ಯರಿಗೆ ಗುಲಾಮರಾಗಬೇಡಿರಿ.
1 ಕೊರಿಂಥದವರಿಗೆ 7 : 24 (OCVKN)
ಪ್ರಿಯರೇ, ದೇವರು ಕರೆದಾಗ ಒಬ್ಬನು ಯಾವ ಸ್ಥಿತಿಯಲ್ಲಿ ಇದ್ದನೋ ಅದೇ ಸ್ಥಿತಿಯಲ್ಲಿ ದೇವರೊಂದಿಗೆ ನೆಲೆಸಿರಲಿ.
1 ಕೊರಿಂಥದವರಿಗೆ 7 : 25 (OCVKN)
ಮದುವೆಯಾಗದವರನ್ನು ಕುರಿತು ಕನ್ಯೆಯರನ್ನು ಕುರಿತು ಕರ್ತ ಯೇಸುವಿನಿಂದ ನನಗೆ ಯಾವ ಆಜ್ಞೆಯೂ ಇಲ್ಲ. ಆದರೂ ಕರ್ತ ಯೇಸುವಿನಿಂದ ಕರುಣೆಯನ್ನು ಪಡೆದು ನಂಬಿಗಸ್ತನಾಗಿರುವ ನಾನು ನನ್ನ ಅಭಿಪ್ರಾಯವನ್ನು ಕೊಡುತ್ತೇನೆ.
1 ಕೊರಿಂಥದವರಿಗೆ 7 : 26 (OCVKN)
ಇಂದಿನ ಕಷ್ಟಕಾಲದ ಪರಿಸ್ಥಿತಿಯಲ್ಲಿ ನೀವು ಇದ್ದ ಹಾಗೇ ಇರುವುದು ನಿಮಗೆ ಒಳ್ಳೆಯದೆಂದು ನಾನು ಭಾವಿಸುತ್ತೇನೆ.
1 ಕೊರಿಂಥದವರಿಗೆ 7 : 27 (OCVKN)
ನಿನಗೆ ಹೆಂಡತಿಯಿದ್ದರೆ? ವಿಚ್ಛೇದನಕ್ಕೆ ಯತ್ನಿಸಬೇಡ. ನೀನು ಹೆಂಡತಿಯಿಂದ ಬಿಡುಗಡೆಯಾಗಿದ್ದರೆ? ಹೆಂಡತಿಗಾಗಿ ಹುಡುಕಬೇಡ.
1 ಕೊರಿಂಥದವರಿಗೆ 7 : 28 (OCVKN)
ಒಂದು ವೇಳೆ ನೀನು ಮದುವೆ ಮಾಡಿಕೊಂಡರೆ, ಅದು ಪಾಪವಲ್ಲ. ಕನ್ಯೆಯು ಮದುವೆ ಮಾಡಿಕೊಂಡರೆ, ಅದು ಸಹ ಪಾಪವಲ್ಲ. ಆದರೆ ಮದುವೆ ಮಾಡಿಕೊಳ್ಳುವವರು ಈ ಜೀವನದಲ್ಲಿ ಅನೇಕ ತೊಂದರೆಗಳನ್ನು ಅನುಭವಿಸುವರು. ನಾನು ನಿಮ್ಮನ್ನು ಇದರಿಂದ ತಪ್ಪಿಸಬೇಕೆಂದು ಅಪೇಕ್ಷಿಸುತ್ತೇನೆ.
1 ಕೊರಿಂಥದವರಿಗೆ 7 : 29 (OCVKN)
ಪ್ರಿಯರೇ, ಸಮಯವು ಕೊಂಚವಾಗಿರುವುದರಿಂದ ಇನ್ನು ಮೇಲೆ, ಮದುವೆಯಾದವರು ಮದುವೆಯಾಗದವರಂತೆಯೂ
1 ಕೊರಿಂಥದವರಿಗೆ 7 : 30 (OCVKN)
ದುಃಖಪಡುವವರು ದುಃಖಪಡದವರಂತೆಯೂ ಆನಂದ ಪಡುವವರು ಆನಂದಪಡದವರಂತೆಯೂ ವಸ್ತುಗಳ್ನು ಕೊಂಡುಕೊಳ್ಳುವವರು ತಾವು ಕೊಂಡುಕೊಂಡದ್ದು ತಮ್ಮದಲ್ಲ ಎಂಬಂತೆಯೂ
1 ಕೊರಿಂಥದವರಿಗೆ 7 : 31 (OCVKN)
ಲೋಕದ ವಸ್ತುಗಳನ್ನು ಉಪಯೋಗಿಸುವವರು ಅದರಲ್ಲಿಯೇ ಮಗ್ನರಾಗದಿರಲಿ. ಏಕೆಂದರೆ ಈಗಿರುವ ಪ್ರಪಂಚ ಗತಿಸಿಹೋಗುತ್ತಿದೆ.
1 ಕೊರಿಂಥದವರಿಗೆ 7 : 32 (OCVKN)
ನೀವು ಚಿಂತೆ ಇಲ್ಲದೆ ಇರಬೇಕೆಂಬುದು ನನ್ನ ಇಷ್ಟ. ಮದುವೆ ಆಗದವನು ಕರ್ತ ಯೇಸುವನ್ನು ಹೇಗೆ ಮೆಚ್ಚಿಸಬೇಕೆಂದು ಕರ್ತ ಯೇಸುವಿನ ಕಾರ್ಯಗಳನ್ನು ಕುರಿತು ಚಿಂತಿಸುತ್ತಾನೆ.
1 ಕೊರಿಂಥದವರಿಗೆ 7 : 33 (OCVKN)
ಮದುವೆಯಾದವನು ತನ್ನ ಹೆಂಡತಿಯನ್ನು ಹೇಗೆ ಮೆಚ್ಚಿಸಬೇಕೆಂದು ಪ್ರಪಂಚದ ಕಾರ್ಯಗಳನ್ನು ಕುರಿತು ಮಗ್ನನಾಗಿರುತ್ತಾನೆ.
1 ಕೊರಿಂಥದವರಿಗೆ 7 : 34 (OCVKN)
ಇದರಿಂದ ಅವನ ಆಸಕ್ತಿಗಳಲ್ಲಿ ಭಿನ್ನತೆಯಿರುತ್ತದೆ. ಮದುವೆಯಾಗದ ಮಹಿಳೆ ಅಥವಾ ಕನ್ಯೆ ದೇಹಾತ್ಮಗಳಲ್ಲಿ ಕರ್ತ ಯೇಸುವಿಗೆ ಸಮರ್ಪಿತರಾಗಿರುವ ಉದ್ದೇಶ ಹೊಂದಿದವರಾಗಿ, ಕರ್ತ ಯೇಸುವಿನ ಕಾರ್ಯಗಳಲ್ಲಿ ಆಸಕ್ತಳಾಗಿರುತ್ತಾರೆ. ಆದರೆ ಮದುವೆಯಾದವಳು, ತನ್ನ ಗಂಡನನ್ನು ಹೇಗೆ ಮೆಚ್ಚಿಸಬೇಕೆಂದು ಪ್ರಪಂಚದ ಕಾರ್ಯಗಳನ್ನು ಕುರಿತು ಚಿಂತಿಸುತ್ತಾಳೆ.
1 ಕೊರಿಂಥದವರಿಗೆ 7 : 35 (OCVKN)
ನಾನು ನಿಮಗೆ ಬಂಧನ ಹಾಕಬೇಕೆಂದು ಇದನ್ನು ಹೇಳದೆ, ಗಮನ ಸೆಳೆಯದ ಭಕ್ತಿಯಿಂದ ಕರ್ತ ಯೇಸುವಿನ ಸೇವೆಯನ್ನು ಮಾಡುವವರಾಗಿ ನೀವು ಜೀವಿಸಬೇಕೆಂದು ನಿಮ್ಮ ಒಳ್ಳೆಯದಕ್ಕಾಗಿಯೇ ಹೇಳುತ್ತಿದ್ದೇನೆ.
1 ಕೊರಿಂಥದವರಿಗೆ 7 : 36 (OCVKN)
ಒಬ್ಬನು ತನ್ನ ಮಗಳಿಗೆ ಮದುವೆಯಿಲ್ಲದಿರುವುದು ಮರ್ಯಾದೆಯಿಲ್ಲವೆಂದು ಭಾವಿಸಿದರೆ, ಆಕೆಗೆ ಪ್ರಾಯ ಕಳೆದು ಹೋಗುತ್ತಿದ್ದರೆ, ಮದುವೆಯಾಗುವುದು ಅವಶ್ಯವೆಂದು ಅವನಿಗೆ ಕಂಡರೆ, ತನ್ನಿಷ್ಟದಂತೆ ಮಾಡಲಿ. ಇದರಿಂದ ಅವನು ಪಾಪಮಾಡುವುದಿಲ್ಲ, ಮದುವೆ ಮಾಡಿಕೊಡಲಿ.
1 ಕೊರಿಂಥದವರಿಗೆ 7 : 37 (OCVKN)
ಆದರೆ ಒಬ್ಬನು ದೃಢಚಿತ್ತನಾಗಿದ್ದು ಬಲವಂತವೇನೂ ಇಲ್ಲದೆ, ತನ್ನಿಷ್ಟವನ್ನು ನಡೆಸುವುದಕ್ಕೆ ಹಕ್ಕುಳ್ಳವನಾಗಿ ತನ್ನ ಮಗಳನ್ನು ಮದುವೆ ಮಾಡಿಕೊಡುವುದಿಲ್ಲವೆಂದು ತನ್ನೊಳಗೆ ನಿರ್ಣಯಿಸಿಕೊಂಡರೆ, ಅವನು ಹಾಗೆ ಮಾಡುವುದು ಒಳ್ಳೆಯದು.
1 ಕೊರಿಂಥದವರಿಗೆ 7 : 38 (OCVKN)
ಹಾಗಾದರೆ, ತನ್ನ ಮಗಳನ್ನು ಮದುವೆ ಮಾಡಿಕೊಡುವವನು ಒಳ್ಳೆಯದನ್ನು ಮಾಡುತ್ತಾನೆ. ಮದುವೆ ಮಾಡಿಕೊಡದೆ ಇರುವವನು ಉತ್ತಮವಾದುದನ್ನು ಮಾಡುತ್ತಾನೆ.
1 ಕೊರಿಂಥದವರಿಗೆ 7 : 39 (OCVKN)
ಹೆಂಡತಿಯು ತನ್ನ ಗಂಡನು ಜೀವದಿಂದಿರುವ ತನಕ ಅವನಿಗೆ ಬದ್ಧಳಾಗಿದ್ದಾಳೆ. ಗಂಡನು ಸತ್ತಿದ್ದರೆ, ಆಕೆಯು ತನಗೆ ಬೇಕಾದವನನ್ನು ಮದುವೆ ಮಾಡಿಕೊಳ್ಳುವುದಕ್ಕೆ ಸ್ವತಂತ್ರಳಾಗಿದ್ದಾಳೆ. ಆದರೆ ಆ ವ್ಯಕ್ತಿಯು ಕರ್ತ ದೇವರಲ್ಲಿ ವಿಶ್ವಾಸಿಯಾಗಿರಬೇಕು.
1 ಕೊರಿಂಥದವರಿಗೆ 7 : 40 (OCVKN)
ಆಕೆ ಮದುವೆ ಮಾಡಿಕೊಳ್ಳದೆ ಇರುವುದು ಬಹಳ ಸಂತೋಷಕರವಾದದ್ದೆಂದು ನನ್ನ ಅಭಿಪ್ರಾಯ. ನನಗೂ ದೇವರಾತ್ಮ ಇರುವುದಾಗಿ ಭಾವಿಸುತ್ತೇನೆ.
❮
❯