1 ಕೊರಿಂಥದವರಿಗೆ 9 : 1 (OCVKN)
ಅಪೊಸ್ತಲರ ಹಕ್ಕುಗಳು ನಾನು ಸ್ವತಂತ್ರನಲ್ಲವೇ? ನಾನೂ ಅಪೊಸ್ತಲನಲ್ಲವೇ? ನಾನು ನಮ್ಮ ಕರ್ತ ಆಗಿರುವ ಯೇಸುವನ್ನು ಕಂಡವನಲ್ಲವೇ? ನಾನು ಕರ್ತ ದೇವರಲ್ಲಿ ಮಾಡಿದ ಕೆಲಸದ ಫಲವು ನೀವಲ್ಲವೇ?
1 ಕೊರಿಂಥದವರಿಗೆ 9 : 2 (OCVKN)
ಇತರರಿಗೆ ನಾನು ಅಪೊಸ್ತಲನಲ್ಲದಿದ್ದರೂ ನಿಮಗೆ ನಾನು ಅಪೊಸ್ತಲನಾಗಿದ್ದೇನೆ! ನನ್ನ ಅಪೊಸ್ತಲ ಸೇವೆಯ ಮುದ್ರೆಯು ಕರ್ತ ದೇವರಲ್ಲಿ ನೀವೇ ಆಗಿದ್ದೀರಷ್ಟೇ.
1 ಕೊರಿಂಥದವರಿಗೆ 9 : 3 (OCVKN)
ನನ್ನ ಮೇಲೆ ತಪ್ಪು ಹೊರಿಸುವವರಿಗೆ ಇದೇ ನನ್ನ ಪ್ರತಿವಾದ:
1 ಕೊರಿಂಥದವರಿಗೆ 9 : 4 (OCVKN)
ಅನ್ನಪಾನಗಳಿಗಾಗಿ ನಮಗೆ ಹಕ್ಕಿಲ್ಲವೇ?
1 ಕೊರಿಂಥದವರಿಗೆ 9 : 5 (OCVKN)
ಮಿಕ್ಕ ಅಪೊಸ್ತಲರಂತೆಯೂ ಕರ್ತದೇವರ ತಮ್ಮಂದಿರಂತೆಯೂ ಕೇಫನಂತೆಯೂ ವಿಶ್ವಾಸಿಯಾದ ಒಬ್ಬಳನ್ನು ಮದುವೆಮಾಡಿಕೊಳ್ಳಲು ನಮಗೆ ಹಕ್ಕಿಲ್ಲವೇ?
1 ಕೊರಿಂಥದವರಿಗೆ 9 : 6 (OCVKN)
ಇಲ್ಲವೆ ಉಪಜೀವನಕ್ಕಾಗಿ ನಾನೂ ಮತ್ತು ಬಾರ್ನಬನೂ ಮಾತ್ರವೇ ಕೆಲಸಮಾಡಬೇಕೋ?
1 ಕೊರಿಂಥದವರಿಗೆ 9 : 7 (OCVKN)
ಸೈನಿಕ ಸೇವೆಯನ್ನು ಯಾವನಾದರೂ ಸ್ವಂತ ಖರ್ಚಿನಿಂದ ಮಾಡುವುದುಂಟೋ? ದ್ರಾಕ್ಷಿಯ ತೋಟವನ್ನು ಮಾಡಿ ಅದರ ಫಲವನ್ನು ತಿನ್ನದೇ ಇರುವವರುಂಟೋ? ಮಂದೆಯನ್ನು ಮೇಯಿಸುವವನು ಹಾಲನ್ನು ಕುಡಿಯದೇ ಇರುವುದುಂಟೋ?
1 ಕೊರಿಂಥದವರಿಗೆ 9 : 8 (OCVKN)
ನಾನು ಕೇವಲ ಮಾನವೀಯ ನೋಟದಲ್ಲಿ ಮಾತನಾಡುತ್ತಿದ್ದೇನೋ? ನಿಯಮವು ಸಹ ಇದನ್ನು ಹೇಳುವುದಿಲ್ಲವೋ?
1 ಕೊರಿಂಥದವರಿಗೆ 9 : 9 (OCVKN)
“ಕಣ ತುಳಿಯುವ ಎತ್ತಿನ ಬಾಯನ್ನು ಕಟ್ಟಬಾರದು,”* ಧರ್ಮೋ 25:4 ಎಂದು ಮೋಶೆಯ ನಿಯಮದಲ್ಲಿ ಬರೆದಿದೆ. ಇಲ್ಲಿ ದೇವರಿಗೆ ಎತ್ತಿನ ಬಗ್ಗೆ ಮಾತ್ರ ಚಿಂತೆಯಿದೆಯೋ?
1 ಕೊರಿಂಥದವರಿಗೆ 9 : 10 (OCVKN)
ನಿಶ್ಚಯವಾಗಿಯೂ, ದೇವರು ನಮಗೋಸ್ಕರ ಇವೆಲ್ಲವನ್ನು ಹೇಳುತ್ತಾರೆ ಅಲ್ಲವೇ? ಹೌದು, ಪವಿತ್ರ ವೇದವು ನಮಗೋಸ್ಕರವಾಗಿಯೇ ಬರೆಯಲಾಗಿದೆ. ಉಳುವವನು ಉಳುವಾಗ, ಒಕ್ಕುವವನು ಒಕ್ಕುವಾಗ ಸುಗ್ಗಿಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿಂದ ಹಾಗೆ ಮಾಡಬೇಕು.
1 ಕೊರಿಂಥದವರಿಗೆ 9 : 11 (OCVKN)
ನಾವು ನಿಮ್ಮಲ್ಲಿ ಆತ್ಮಿಕ ಸಂಗತಿಗಳನ್ನು ಬಿತ್ತಿದ ಮೇಲೆ, ನಿಮ್ಮಿಂದ ಭೌತಿಕ ಸುಗ್ಗಿಯನ್ನು ಕೊಯ್ಯುವುದು ದೊಡ್ಡದೋ?
1 ಕೊರಿಂಥದವರಿಗೆ 9 : 12 (OCVKN)
ಇತರರಿಗೆ ನಿಮ್ಮ ಸಹಾಯದಲ್ಲಿ ಪಾಲು ಇದ್ದರೆ, ಅದರಲ್ಲಿ ನಮಗೂ ಹೆಚ್ಚು ಪಾಲು ಇರಬೇಕಲ್ಲಾ?
1 ಕೊರಿಂಥದವರಿಗೆ 9 : 13 (OCVKN)
ಆದರೆ ನಾವು ಈ ಅಧಿಕಾರವನ್ನು ಚಲಾಯಿಸಿಲ್ಲ. ಕ್ರಿಸ್ತ ಯೇಸುವಿಗೆ ಸೇರಿದ ಸುವಾರ್ತೆಗೆ ಅಡ್ಡಿಯಾಗಬಾರದೆಂದು ಎಲ್ಲವನ್ನೂ ಸಹಿಸಿಕೊಂಡೆವು. ದೇವಾಲಯದಲ್ಲಿ ಸೇವೆಮಾಡುವವರು, ದೇವಾಲಯದಲ್ಲಿ ಊಟ ಪಡೆಯುತ್ತಾರೆಂಬುದೂ; ಬಲಿಪೀಠದ ಬಳಿಯಲ್ಲಿ ಸೇವೆಮಾಡುವವರು, ಆ ಬಲಿಪೀಠದ ಮೇಲೆ ಸಮರ್ಪಿಸಿದ್ದರಲ್ಲಿ ಪಾಲು ಹೊಂದುತ್ತಾರೆಂಬುದೂ ನಿಮಗೆ ತಿಳಿಯದೋ?
1 ಕೊರಿಂಥದವರಿಗೆ 9 : 14 (OCVKN)
ಅದೇ ರೀತಿಯಾಗಿ ಸುವಾರ್ತೆಯನ್ನು ಸಾರುವವರು, ಸುವಾರ್ತೆಯಿಂದಲೇ ಜೀವನ ಮಾಡಬೇಕೆಂದು ಕರ್ತದೇವರು ಸಹ ಆಜ್ಞಾಪಿಸಿದ್ದಾರೆ.
1 ಕೊರಿಂಥದವರಿಗೆ 9 : 15 (OCVKN)
ಆದರೆ ನಾನಂತೂ ಇವುಗಳಲ್ಲಿ ಒಂದು ಹಕ್ಕನ್ನೂ ಉಪಯೋಗಿಸಿಕೊಂಡಿಲ್ಲ. ಅಂಥವುಗಳನ್ನು ನನಗೆ ನೀವು ಮಾಡಬೇಕೆಂಬ ಅಪೇಕ್ಷೆಯಿಂದ ಈ ಸಂಗತಿಗಳನ್ನು ನಾನು ಬರೆಯಲಿಲ್ಲ. ಯಾರಾದರೂ ಈ ಹೆಮ್ಮೆಯನ್ನು ನನ್ನಿಂದ ಅಪಹರಿಸುವುದಕ್ಕಿಂತಲೂ ಸಾಯುವುದೇ ಲೇಸು.
1 ಕೊರಿಂಥದವರಿಗೆ 9 : 16 (OCVKN)
ನಾನು ಸುವಾರ್ತೆಯನ್ನು ಸಾರಿದರೂ ಹೊಗಳಿಸಿಕೊಳ್ಳುವ ಯಾವ ಆಸೆಯೂ ನನಗೆ ಇಲ್ಲ. ಸಾರಲೇಬೇಕೆಂಬ ಕರ್ತವ್ಯಕ್ಕೆ ನಾನು ಸಾಲಗಾರನಾಗಿದ್ದೇನೆ. ಸುವಾರ್ತೆಯನ್ನು ಸಾರದಿದ್ದರೆ, ನನ್ನ ಗತಿ ಏನೆಂದು ಹೇಳಲಿ!
1 ಕೊರಿಂಥದವರಿಗೆ 9 : 17 (OCVKN)
ನಾನು ಇಷ್ಟಪೂರ್ವಕವಾಗಿ ಸುವಾರ್ತೆ ಸಾರಿದರೆ, ನನಗೆ ಬಹುಮಾನವಿರುವುದು. ಇಷ್ಟವಿಲ್ಲದೆ ಮಾಡಿದರೆ, ನನ್ನ ವಶಕ್ಕೆ ಒಪ್ಪಿಸಲಾದ ಕಾರ್ಯಭಾರವನ್ನು ನಾನು ನೆರವೇರಿಸಿದಂತಾಗುತ್ತದೆ.
1 ಕೊರಿಂಥದವರಿಗೆ 9 : 18 (OCVKN)
ಹಾಗಾದರೆ ನನಗೆ ದೊರೆಯುವ ಬಹುಮಾನವೇನು? ನಾನು ಸುವಾರ್ತೆಯನ್ನು ಸಾರುವಾಗ, ಅದನ್ನು ಉಚಿತವಾಗಿ ಸಾರುತ್ತಾ, ಸುವಾರ್ತೆಯ ಪ್ರಸಂಗಿಯಾಗಿ ನನ್ನ ಪೂರ್ಣ ಹಕ್ಕನ್ನು ಉಪಯೋಗಿಸದಿರುವುದೇ ನನ್ನ ಬಹುಮಾನ.
1 ಕೊರಿಂಥದವರಿಗೆ 9 : 19 (OCVKN)
ಪೌಲನ ಸ್ವತಂತ್ರ ನಾನು ಸ್ವತಂತ್ರನಾಗಿದ್ದರೂ, ಯಾರಿಗೂ ಸೇರಿದವನಾಗಿರದಿದ್ದರೂ, ಹೆಚ್ಚು ಜನರನ್ನು ಸಂಪಾದಿಸಿಕೊಳ್ಳಬೇಕೆಂಬ ಉದ್ದೇಶದಿಂದ ನನ್ನನ್ನು ಎಲ್ಲರಿಗೂ ಗುಲಾಮನನ್ನಾಗಿ ಮಾಡಿಕೊಂಡೆನು.
1 ಕೊರಿಂಥದವರಿಗೆ 9 : 20 (OCVKN)
ಯೆಹೂದ್ಯರನ್ನು ಸಂಪಾದಿಸಿಕೊಳ್ಳುವಂತೆ ಯೆಹೂದ್ಯರಿಗೆ ಯೆಹೂದ್ಯನಂತಾದೆನು. ನಾನು ನಿಯಮಕ್ಕೆ ಅಧೀನನಲ್ಲದಿದ್ದರೂ ನಿಯಮಕ್ಕೆ ಅಧೀನರಾದವರನ್ನು ಸಂಪಾದಿಸಿಕೊಳ್ಳುವಂತೆ ಅವರಿಗಾಗಿ ನಿಯಮಕ್ಕೆ ಅಧೀನನಂತಾದೆನು.
1 ಕೊರಿಂಥದವರಿಗೆ 9 : 21 (OCVKN)
ನಾನು ನಿಯಮ ಇಲ್ಲದವರನ್ನು ಸಂಪಾದಿಸಿಕೊಳ್ಳುವುದಕ್ಕಾಗಿ ಅವರಿಗೆ ನಿಯಮವಿಲ್ಲದವನಂತಾದೆನು. ನಾನು ಕ್ರಿಸ್ತ ಯೇಸುವಿನ ನಿಯಮಕ್ಕೆ ಒಳಗಾದವನಾಗಿದ್ದರೂ ನಾನು ದೇವರ ನಿಯಮದಿಂದ ಸ್ವತಂತ್ರವಾದವನಲ್ಲ.
1 ಕೊರಿಂಥದವರಿಗೆ 9 : 22 (OCVKN)
ಬಲವಿಲ್ಲದವರನ್ನು ಸಂಪಾದಿಸುವುದಕ್ಕಾಗಿ ಬಲವಿಲ್ಲದವರಿಗೆ ಬಲವಿಲ್ಲದವನಾದೆನು. ಯಾವ ವಿಧದಲ್ಲಿಯಾದರೂ ಕೆಲವರನ್ನು ರಕ್ಷಿಸಬೇಕೆಂದು ಎಲ್ಲರಿಗೂ ಎಲ್ಲವೂ ಆದೆನು.
1 ಕೊರಿಂಥದವರಿಗೆ 9 : 23 (OCVKN)
ನಾನು ಸುವಾರ್ತೆಯ ಆಶೀರ್ವಾದಗಳಲ್ಲಿ ಪಾಲುಗಾರನಾಗಬೇಕೆಂದು ಇದೆಲ್ಲವನ್ನು ಸುವಾರ್ತೆಗೋಸ್ಕರವೇ ಮಾಡುತ್ತೇನೆ.
1 ಕೊರಿಂಥದವರಿಗೆ 9 : 24 (OCVKN)
ಶಿಸ್ತಿನ ಜೀವನದ ಅವಶ್ಯಕತೆ ಪಂದ್ಯಗಳಲ್ಲಿ ಎಲ್ಲರೂ ಓಡುತ್ತಾರೆ. ಆದರೆ ಒಬ್ಬನಿಗೆ ಮಾತ್ರ ಬಹುಮಾನ ದೊರೆಯುತ್ತದೆ ಎಂಬುದು ನಿಮಗೆ ತಿಳಿಯದೋ? ಬಹುಮಾನವನ್ನು ಪಡಕೊಳ್ಳಬೇಕೆಂದು ನೀವೂ ಓಡಿರಿ.
1 ಕೊರಿಂಥದವರಿಗೆ 9 : 25 (OCVKN)
ಆಟಗಳಲ್ಲಿ ಪಂದ್ಯಕ್ಕೆ ಭಾಗವಹಿಸುವವರೆಲ್ಲರೂ, ಕಠಿಣವಾದ ತರಬೇತಿಯನ್ನು ಹೊಂದುತ್ತಾರೆ. ಅವರು ಬಹುದಿನ ಉಳಿಯದೇ ಇರುವ ಕಿರೀಟವನ್ನು ಪಡೆಯುವುದಕ್ಕೆ ಇದನ್ನು ಮಾಡುತ್ತಾರೆ. ಆದರೆ ನಾವು ಎಂದೆಂದಿಗೂ ಉಳಿಯುವ ಕಿರೀಟ ಹೊಂದಲು ಹೋರಾಡುವವರಾಗಿದ್ದೇವೆ.
1 ಕೊರಿಂಥದವರಿಗೆ 9 : 26 (OCVKN)
ಗೊತ್ತುಗುರಿ ಇಲ್ಲದವನ ಹಾಗೆ ನಾನು ಓಡುವುದಿಲ್ಲ, ಗಾಳಿಯನ್ನು ಗುದ್ದುವವನ ಹಾಗೆ ನಾನು ಹೋರಾಡುವುದಿಲ್ಲ.
1 ಕೊರಿಂಥದವರಿಗೆ 9 : 27 (OCVKN)
ನಾನು ಇತರರಿಗೆ ಸುವಾರ್ತೆ ಸಾರಿದ ಮೇಲೆ, ನಾನೇ ಬಹುಮಾನ ಹೊಂದಲು ಅಯೋಗ್ಯನಾಗದಂತೆ ನನ್ನ ದೇಹವನ್ನು ದಂಡಿಸಿ, ನನ್ನ ಸ್ವಾಧೀನದಲ್ಲಿಟ್ಟುಕೊಳ್ಳುತ್ತೇನೆ.
❮
❯